Hassan News: ಬೈಕ್​ ವೀಲ್ಹಿಂಗ್ ಪುಂಡರ ಹುಚ್ಚಾಟಕ್ಕೆ ಭೀಕರ ಅಪಘಾತ; ಇಬ್ಬರು ಯುವತಿಯರು ಸಾವು ಬದುಕಿನ ನಡುವೆ ಹೋರಾಟ

ಹಾಸನ ನಗರದ ಸಾಲಗಾಮೆ ರಸ್ತೆಯ ಸಹ್ಯಾದ್ರಿ ಚಿತ್ರಮಂದಿರ ಬಳಿ ವೀಲ್ಹಿಂಗ್ ಪುಂಡರ ಹುಚ್ಚಾಟಕ್ಕೆ ಭೀಕರ ಅಪಘಾತವಾಗಿ ಅಮಾಯಕ ಯುವತಿಯರು ಸಾವು ಬದುಕಿನ ನಡುವೆ ಹೋರಾಟ ನಡೆಸುವ ಪರಿಸ್ಥಿತಿ ಎದುರಾಗಿದೆ.

Hassan News: ಬೈಕ್​ ವೀಲ್ಹಿಂಗ್ ಪುಂಡರ ಹುಚ್ಚಾಟಕ್ಕೆ ಭೀಕರ ಅಪಘಾತ; ಇಬ್ಬರು ಯುವತಿಯರು ಸಾವು ಬದುಕಿನ ನಡುವೆ ಹೋರಾಟ
ಹಾಸನದಲ್ಲಿ ಭೀಕರ ಅಪಘಾತ
Follow us
ಮಂಜುನಾಥ ಕೆಬಿ
| Updated By: ಕಿರಣ್ ಹನುಮಂತ್​ ಮಾದಾರ್

Updated on: Jun 29, 2023 | 7:50 AM

ಹಾಸನ: ಇತ್ತೀಚೆಗೆ ಬೆಂಗಳೂರು, ಮೈಸೂರು ಸೇರಿದಂತೆ ರಾಜ್ಯದ ಕೆಲ ಜಿಲ್ಲೆಗಳಲ್ಲಿ ಬೈಕ್ ವೀಲ್ಹಿಂಗ್ (Bike Wheeling) ಪುಂಡರ ಹಾವಳಿ ಜಾಸ್ತಿಯಾಗಿದೆ. ಕೈಯಲ್ಲಿ ಮಚ್ಚು, ಲಾಂಗು ಹಿಡಿದುಕೊಂಡು ಮಧ್ಯರಾತ್ರಿ ನಡು ರಸ್ತೆಯಲ್ಲಿ ವೀಲ್ಹಿಂಗ್ ಮಾಡುವ ಮೂಲಕ ಇತರ ವಾಹನ ಸವಾರರಿಗೂ ತೊಂದರೆ ಕೊಡುತ್ತಿದ್ದಾರೆ. ಅದರಂತೆ ಇದೀಗ ಹಾಸನ(Hassan)ನಗರದ ಸಾಲಗಾಮೆ ರಸ್ತೆಯ ಸಹ್ಯಾದ್ರಿ ಚಿತ್ರಮಂದಿರ ಬಳಿ ವೀಲ್ಹಿಂಗ್ ಪುಂಡರ ಹುಚ್ಚಾಟಕ್ಕೆ ಭೀಕರ ಅಪಘಾತವಾಗಿ ಅಮಾಯಕ ಯುವತಿಯರು ಸಾವು ಬದುಕಿನ ನಡುವೆ ಹೋರಾಟ ನಡೆಸುವ ಪರಿಸ್ಥಿತಿ ಎದುರಾಗಿದೆ. ಹೌದು ಪುಂಡರು ವೀಲ್ಹಿಂಗ್ ಮಾಡುತ್ತಿದ್ದ ಬೈಕ್ ಭೂಮಿಕಾ ಹಾಗೂ ಸಿಂಚನ ಎಂಬಿಬ್ಬರಿಗೆ ಡಿಕ್ಕಿಯಾಗಿ ಗಂಭೀರ ಗಾಯಗಳಾಗಿವೆ.​

ವೀಲ್ಹಿಂಗ್ ಅಟ್ಟಹಾಸಕ್ಕೆ ಇಬ್ಬರು ಯುವತಿಯರಿಗೆ ಗಂಭೀರ ಗಾಯ

ರಾತ್ರಿ ನಗರದ ಸಾಲಗಾಮೆ ರಸ್ತೆಯ ಫುಡ್​ಕೋರ್ಟ್​ನಲ್ಲಿ ಊಟ ಮುಗಿಸಿ ಭೂಮಿಕಾ ಹಾಗೂ ಸಿಂಚನ ಬೈಕ್‌ ಏರಿ ಬರುತ್ತಿದ್ದರು. ಈ ವೇಳೆ ಜನನಿಬಿಡ ಪ್ರದೇಶದಲ್ಲಿ ವೀಲ್ಹಿಂಗ್ ಮಾಡಿಕೊಂಡು ಬಂದು ಭೂಮಿಕಾ ಹಾಗೂ ಸಿಂಚನೆಗೆ ಪುಂಡರು ಡಿಕ್ಕಿ ಹೊಡೆದಿದ್ದಾರೆ. ಈ ಸಂದರ್ಭದಲ್ಲಿ ಭೂಮಿಕಾ ತಲೆಗೆ ಬಲವಾದ ಪೆಟ್ಟು ಬಿದ್ದ ಹಿನ್ನಲೆಯಲ್ಲಿ ಬೆಂಗಳೂರಿಗೆ ನಿಮಾನ್ಸ್ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಮತ್ತೊರ್ವ ಯುವತಿಗೂ ಗಂಭೀರ ಗಾಯಗಳಾಗಿದ್ದು, ಇಬ್ಬರು ಯುವತಿಯರು ಸಾವು ಬದುಕಿನ ನಡುವೆ ಹೋರಾಟ ನಡೆಸಿದ್ದಾರೆ.

ಇದನ್ನೂ ಓದಿ:ಸಿಲಿಕಾನ್ ಸಿಟಿಯಲ್ಲಿ ಡೆಡ್ಲಿ ವ್ಹೀಲಿಂಗ್, ವಿಡಿಯೋ ಶೇರ್ ಮಾಡಿಕೊಂಡು ಸಿಕ್ಕಿಬಿದ್ದ

ವೀಲ್ಹಿಂಗ್ ಪುಂಡರಿಗೆ ಹಿಗ್ಗಾಮುಗ್ಗಾ ಥಳಿಸಿದ ಸಾರ್ವಜನಿಕರು

ಇನ್ನು ವೀಲ್ಹಿಂಗ್ ಮಾಡಿ ಅಪಘಾತಗೊಳಿಸಿದ ಶಾಕೀರ್ ಹಾಗೂ ಮತ್ತೊರ್ವ ಅಪ್ರಾಪ್ತನಿಗೆ ಸಾರ್ವಜನಿಕರು ಬಟ್ಟೆ ಬಚ್ಚಿ ಹಿಗ್ಗಾಮುಗ್ಗಾ ಥಳಿಸಿ, ಪೊಲೀಸರಿಗೆ ಒಪ್ಪಿಸಿದ್ದಾರೆ. ಇಬ್ಬರನ್ನು ವಶಕ್ಕೆ ಪಡೆದ ಪೊಲೀಸರು, ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಹಾಸನ ನಗರದಲ್ಲಿ ವೀಲ್ಹಿಂಗ್ ಪುಂಡರ ಹಾವಳಿ ಮಿತಿಮೀರಿದೆ. ಕೂಡಲೇ ಇದಕ್ಕೆ ಕಡಿವಾಣ ಹಾಕದಿದ್ದರೆ, ಇಂತಹ ಮತ್ತಷ್ಟು ಘಟನೆಗಳು ಸಂಭವಿಸುತ್ತದೆ ಆದಷ್ಟು ಬೇಗ ಇದಕ್ಕೆ ಬ್ರೇಕ್​​ ಹಾಕುವಂತೆ ಸಾರ್ವಜನಿಕರು ಪೊಲೀಸರಿಗೆ ಒತ್ತಾಯಿಸಿದ್ದಾರೆ.

ಇನ್ನಷ್ಟು ರಾಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ