ಜೀಪ್-ಕಾರು ಮುಖಾಮುಖಿ ಡಿಕ್ಕಿ, ಓರ್ವ ಮಹಿಳೆ ಸ್ಥಳದಲ್ಲೇ ಸಾವು: 6 ಜನರಿಗೆ ಗಂಭೀರ ಗಾಯ
ಕಾರು ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವಂತಹ ಘಟನೆ ಮಂಡ್ಯ ನಗರದ ಕಲ್ಲಹಳ್ಳಿ ಬಳಿಯ ಮೈಸೂರು ಬೆಂಗಳೂರು ಹೆದ್ದಾರಿಯ ಬಿಸಿಲುಮಾರಮ್ಮ ದೇವಸ್ಥಾನದ ಬಳಿ ನಡೆದಿದೆ.
ಹಾಸನ: ಜೀಪ್ ಹಾಗೂ ಕಾರು ಮುಖಾಮುಖಿ ಡಿಕ್ಕಿ (accident) ಹೊಡೆದ ಪರಿಣಾಮ ಕಾರಿನಲ್ಲಿದ್ದ ಮಹಿಳೆ ಸಾವನ್ನಪ್ಪಿದ್ದು, 6 ಜನರಿಗೆ ಗಂಭೀರ ಗಾಯವಾಗಿರುವಂತಹ ಘಟನೆ ಜಿಲ್ಲೆಯ ಬೇಲೂರು ಪಟ್ಟಣದ ಕೊರಟಿಗೆರೆ ಬಳಿ ನಡೆದಿದೆ. ಚಿಕ್ಕಮಗಳೂರು ಮೂಲದ ಕಾವ್ಯಾ(30) ಸ್ಥಳದಲ್ಲೇ ಮೃತಪಟ್ಟ ಮಹಿಳೆ. ಕಾರಿನಲ್ಲಿದ್ದ ಕಾರ್ತಿಕ್, ಲಾವಣ್ಯ, ದೀಪು, ಮುಕುಂದ, ಖುಷಿ, ಲಹರಿಗೆ ಗಾಯಗಳಾಗಿದ್ದು, ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ. ಬೇಲೂರು ಕಡೆಯಿಂದ ಚಿಕ್ಕಮಗಳೂರಿಗೆ ತೆರಳುತ್ತಿದ್ದಾಗ ದುರಂತ ನಡೆದಿದೆ. ಅಪಘಾತದ ರಭಸಕ್ಕೆ ಸ್ಯಾನ್ಟ್ರೊ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಬೇಲೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಕಾರು ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಬೈಕ್ ಸವಾರ ಸ್ಥಳದಲ್ಲೇ ಸಾವು
ಮಂಡ್ಯ: ಕಾರು ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವಂತಹ ಘಟನೆ ಮಂಡ್ಯ ನಗರದ ಕಲ್ಲಹಳ್ಳಿ ಬಳಿಯ ಮೈಸೂರು ಬೆಂಗಳೂರು ಹೆದ್ದಾರಿಯ ಬಿಸಿಲುಮಾರಮ್ಮ ದೇವಸ್ಥಾನದ ಬಳಿ ನಡೆದಿದೆ. ಸಿದ್ದಯ್ಯನಕೊಪ್ಪಲು ಗ್ರಾಮದ ಸತೀಶ್ (40) ಮೃತ ಬೈಕ್ ಸವಾರ. ತೆಂಗಿನ ಕಾಯಿ ವ್ಯಾಪಾರ ಮುಗಿಸಿಕೊಂಡು ತೆರಳುವ ವೇಳೆ ಅಪಘಾತ ಸಂಭವಿಸಿದೆ. ವೇಗವಾಗಿ ಬಂದ ಕಾರು ಬೈಕ್ಗೆ ಡಿಕ್ಕಿ ಹೊಡೆದು ದೇವಾಲಯದ ಕಾಂಪೌಂಡ್ಗೆ ಕಾರು ನುಗ್ಗಿದೆ. ಕಾಂಪೌಂಡ ಡಿಕ್ಕಿಯಾಗಿ ಕಾರು ನಿಂತಿದ್ದರಿಂದ ಅನಾಹುತ ತಪ್ಪಿದೆ. ಸಣ್ಣಪುಟ್ಟ ಗಾಯಗಳೊಂದಿಗೆ ಕಾರಿನಲ್ಲಿದ್ದ ಸವಾರರು ಪಾರಾಗಿದ್ದಾರೆ. ಗಾಯಾಳುಗಳನ್ನು ಮಂಡ್ಯ ಮಿಮ್ಸ್ ಆಸ್ಪತ್ರೆಗೆ ರವಾನೆ ಮಾಡಲಾಗಿದ್ದು, ಮಂಡ್ಯ ಪಶ್ಚಿಮ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಫೋರ್ಡ್ ಕಾರು, ಸರ್ಕಾರಿ ಬಸ್ಗೆ ಕಿಯಾ ಕಾರು ಡಿಕ್ಕಿ-ಇಬ್ಬರ ಸಾವು
ಬಾಗಲಕೋಟೆ: ಫೋರ್ಡ್ ಕಾರು, ಸರ್ಕಾರಿ ಬಸ್ಗೆ ಕಿಯಾ ಕಾರು ಡಿಕ್ಕಿ ಹೊಡೆದಿದ್ದು ಇಬ್ಬರ ಮೃತಪಟ್ಟಿರುವಂತಹ ಘಟನೆ ಜಿಲ್ಲೆಯ ಹುನಗುಂದ ತಾಲೂಕಿನ ಧನ್ನೂರು ಗ್ರಾಮದಲ್ಲಿ ನಡೆದಿದೆ. ಹಾಜಿಸಾಬ್ ಬಾಗವಾನ್(50), ಪರಶುರಾಮ ಕಟ್ಟಿ(45) ಮೃತರು. ಮೃತಪಟ್ಟವರು ವಿಜಯಪುರ ಜಿಲ್ಲೆ ಮುದ್ದೇಬಿಹಾಳ ಮೂಲದವರು ಎನ್ನಲಾಗಿದೆ. ರಾಜು ಚವಾಣ್(45) ಸ್ಥಿತಿ ಗಂಭೀರ, ತಾಲೂಕು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಹುನಗುಂದ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಕೃಷಿ ಹೊಂಡದಲ್ಲಿ ಈಜಲು ಹೋಗಿದ್ದ ಯುವಕ ಸಾವು
ಗದಗ: ನರಗುಂದ ಪಟ್ಟಣದಲ್ಲಿ ಕೃಷಿ ಹೊಂಡದಲ್ಲಿ ಈಜಲು ಹೋಗಿದ್ದ ಯುವಕ ಸಾವನ್ನಪ್ಪಿರುವಂಹ ಘಟನೆ ನಡೆದಿದೆ. ಕಸಬಾ ಓಣಿಯ ನಿವಾಸಿ ಕಾಶಪ್ಪ ಗುಡ್ಡದನವರ(22) ಮೃತ ದುರ್ದೈವಿ. ನರಗುಂದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.
ಮೊಬೈಲ್ ಕಳ್ಳರ ಬಂಧನ
ಬೆಂಗಳೂರು: ಪ್ರಯಾಣಿಕರ ಸೋಗಿನಲ್ಲಿ ಬಿಎಂಟಿಸಿ ಬಸ್ನಲ್ಲಿ ಮೊಬೈಲ್ ಕದಿಯುತ್ತಿದ್ದ ಇಬ್ಬರು ಆರೋಪಿಗಳನ್ನು ಅರೆಸ್ಟ್ ಮಾಡಲಾಗಿದೆ. ರಿಜ್ವಾನ್ ನಾಸೀರ್, ಇಮ್ರಾನ್ನನ್ನು ಗೋವಿಂದರಾಜನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ ಎರಡು ಲಕ್ಷ ಮೌಲ್ಯದ 15 ಮೊಬೈಲ್ಗಳು, ಒಂದು ಆಟೋ, ಒಂದು ಬೈಕ್ ಜಪ್ತಿ ಮಾಡಲಾಗಿದೆ.
ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.