ಅಪಘಾತವಾಗಿ 1 ಗಂಟೆ ಕಳೆದರೂ ಬಾರದ ಆಂಬುಲೆನ್ಸ್: ನಡುರಸ್ತೆಯಲ್ಲೇ ಒದ್ದಾಡಿ ಪ್ರಾಣಬಿಟ್ಟ ಯುವಕ

ಅಪಘಾತವಾಗಿ ಒಂದು ಗಂಟೆಯಾದರೂ ಸ್ಥಳಕ್ಕೆ ಆಂಬುಲೆನ್ಸ್ ಬಂದಿಲ್ಲ. ತೀವ್ರ ರಕ್ತಸ್ರಾವವಾಗಿ ಸಕಾಲಕ್ಕೆ ಆಂಬುಲೆನ್ಸ್ ಸಿಗದೆ ಒದ್ದಾಡಿ ನಡುರಸ್ತೆಯಲ್ಲೇ ಯುವಕ ಪ್ರಾಣಬಿಟ್ಟಿದ್ದಾನೆ.

ಅಪಘಾತವಾಗಿ 1 ಗಂಟೆ ಕಳೆದರೂ ಬಾರದ ಆಂಬುಲೆನ್ಸ್: ನಡುರಸ್ತೆಯಲ್ಲೇ ಒದ್ದಾಡಿ ಪ್ರಾಣಬಿಟ್ಟ ಯುವಕ
ಘಟನಾ ಸ್ಥಳ ಹಾಗೂ ಮೃತ ಆನಂದ್
Follow us
ಆಯೇಷಾ ಬಾನು
|

Updated on:May 12, 2023 | 11:22 AM

ಹಾಸನ: ಅಪಘಾತ ಸಂಭವಿಸಿ ಒಂದು ಗಂಟೆ ಕಳೆದರೂ ಆಂಬುಲೆನ್ಸ್ ಬಾರದೆ ನಡುರಸ್ತೆಯಲ್ಲೇ ಒದ್ದಾಡಿ ಯುವಕ ಪ್ರಾಣ ಬಿಟ್ಟ ಮನಕಲಕುವ ಘಟನೆ ಹಾಸನ ತಾಲೂಕಿನ ಬೇಲೂರು ರಸ್ತೆಯ ಕಲ್ಕೆರೆ ಗ್ರಾಮದ ಬಳಿ ತಡ ರಾತ್ರಿ ನಡೆದಿದೆ. ಮೂಲತಃ ಬೇಲೂರು ತಾಲೂಕಿನ ಇಬ್ಬೀಡು ಗ್ರಾಮದ ಆನಂದ್ (30) ಮೃತ ದುರ್ದೈವಿ.

ಆನಂದ್ ಬೇಲೂರು ಕಡೆಯಿಂದ ಹಾಸನದ ಕಡೆಗೆ ಬೈಕ್ ನಲ್ಲಿ ತೆರಳುತ್ತಿದ್ದ. ಈ ವೇಳೆ ಮಾರ್ಗ ಮಧ್ಯೆ ಹಿಂಬದಿಯಿಂದ ಅಪರಿಚಿತ ವಾಹನ ಡಿಕ್ಕಿ ಹೊಡೆದಿದೆ. ಅಪಘಾತವಾಗಿ ಒಂದು ಗಂಟೆಯಾದರೂ ಸ್ಥಳಕ್ಕೆ ಆಂಬುಲೆನ್ಸ್ ಬಂದಿಲ್ಲ. ತೀವ್ರ ರಕ್ತಸ್ರಾವವಾಗಿ ಸಕಾಲಕ್ಕೆ ಆಂಬುಲೆನ್ಸ್ ಸಿಗದೆ ಒದ್ದಾಡಿ ನಡುರಸ್ತೆಯಲ್ಲೇ ಯುವಕ ಪ್ರಾಣಬಿಟ್ಟಿದ್ದಾನೆ. ಘಟನೆಗೆ ಸಾರ್ವಜನಿಕರು ತೀವ್ರ ಆಕ್ರೋಶ ಹೊರ ಹಾಕಿದ್ದಾರೆ. ಹಾಸನ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿ: ನೇಣು ಬಿಗಿದ ಸ್ಥಿತಿಯಲ್ಲಿ ಬಿಜೆಪಿ ಕಾರ್ಯಕರ್ತನ ಶವ ಪತ್ತೆ: ಆತ್ಮಹತ್ಯೆಯಲ್ಲ, ಕೊಲೆ ಎನ್ನುತ್ತಿರುವ ಕುಟುಂಬಸ್ಥರು

ಅಪರಿಚಿತ ವಾಹನ ಡಿಕ್ಕಿಯಾಗಿ ಕೂಲಿಗಾಗಿ ಬಂದಿದ್ದ ಕಾರ್ಮಿಕ ಸಾವು

ಚಿಕ್ಕಮಗಳೂರು ಮೂಡಿಗೆರೆ ತಾಲೂಕಿನ ಹೆಬ್ಬರಿಗೆ ಗ್ರಾಮದ ಬಳಿ ಅಪರಿಚಿತ ವಾಹನ ಡಿಕ್ಕಿಯಾಗಿ ಕೂಲಿಗಾಗಿ ಬಂದಿದ್ದ ಕಾರ್ಮಿಕ‌ ಮೃತಪಟ್ಟ ಘಟನೆ ನಡೆದಿದೆ. ದೇಹದ ಅಂಗಾಂಗಗಳು ರಸ್ತೆ ಮಧ್ಯೆ ಚೆಲ್ಲಾಪಲ್ಲಿಯಾಗಿ ಬಿದ್ದಿದ್ದು ಕರಳುಹಿಂಡುವಂತಿದೆ. ರಾಯಚೂರಿನ ತೋರಣದಿನ್ನಿ ಗ್ರಾಮದ ಮಂಜುನಾಥ್ ಮೃತ ದುರ್ದೈವಿ. ರಾಷ್ಟ್ರೀಯ ಹೆದ್ದಾರಿ 173ರಲ್ಲಿ ಕಳೆದ ರಾತ್ರಿ ಘಟನೆ ನಡೆದಿದೆ. ಅಪಘಾತದಿಂದ ರಸ್ತೆ ತುಂಬಾ ರಕ್ತ ಚೆಲ್ಲಿದ್ದು ಸ್ಥಳೀಯರು ಕ್ಲೀನ್ ಮಾಡಿದ್ದಾರೆ. ಬಣಕಲ್ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಹಾಸನ ಜಿಲ್ಲೆಗೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 11:14 am, Fri, 12 May 23

ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್