ಹಾಸನ: ಕಾಲೇಜು ಕಟ್ಟಡದಿಂದ ಜಿಗಿದು ಇಂಜಿನಿಯರಿಂಗ್ ವಿದ್ಯಾರ್ಥಿನಿ ಆತ್ಮಹತ್ಯೆ

| Updated By: ಕಿರಣ್ ಹನುಮಂತ್​ ಮಾದಾರ್

Updated on: Nov 02, 2023 | 7:39 PM

ಆಂತರಿಕ ಪರೀಕ್ಷೆ ಬರೆಯುತ್ತಿದ್ದ ಮಾನ್ಯ, ಪರೀಕ್ಷೆಯಲ್ಲಿ ನಕಲು ಮಾಡಿದ ಆರೋಪ ಕೇಳಿಬಂದಿದೆ. ಈ ಹಿನ್ನಲೆ ಅಪಾಲಜಿ ಬರೆದುಕೊಡುವಂತೆ ಉಪನ್ಯಾಸಕರು ಮಾನ್ಯಗೆ ಹೇಳಿದ್ದಾರೆ. ಪ್ರಾಂಶುಪಾಲರ ಕೊಠಡಿಗೆ ಬಂದು ಹೋದ ಬಳಿಕ ಕಾಲೇಜಿನ 5ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ‌ಮಾಡಿಕೊಂಡಿದ್ದಾರೆ.

ಹಾಸನ: ಕಾಲೇಜು ಕಟ್ಟಡದಿಂದ ಜಿಗಿದು ಇಂಜಿನಿಯರಿಂಗ್ ವಿದ್ಯಾರ್ಥಿನಿ ಆತ್ಮಹತ್ಯೆ
ಮೃತ ವಿದ್ಯಾರ್ಥಿನಿ
Follow us on

ಹಾಸನ, ನ.02: ಕಾಲೇಜು ಕಟ್ಟಡದಿಂದ ಜಿಗಿದು ಇಂಜಿನಿಯರಿಂಗ್ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡ ಹಾಸನ(Hassan) ಹೊರವಲಯದ ರಾಜೀವ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕಾಲೇಜಿನಲ್ಲಿ ನಡೆದಿದೆ. ಮಾನ್ಯ(19) ಮೃತ ವಿದ್ಯಾರ್ಥಿನಿ. ಚನ್ನರಾಯಪಟ್ಟಣ(Channarayapatna) ತಾಲೂಕಿನ ಹೊನ್ನಶೆಟ್ಟಿಹಳ್ಳಿ ಗ್ರಾಮದರಾದ ಮಾನ್ಯ, ಪ್ರಥಮ ವರ್ಷದ ಎಲೆಕ್ಟ್ರಾನಿಕ್& ಕಮ್ಯೂನಿಕೇಷನ್​ ಓದುತ್ತಿದ್ದರು. ಎಲ್ಲವೂ ಸರಿಯಾಗಿತ್ತು ಅನ್ನುವಷ್ಟರಲ್ಲಿ ಈ ದುರ್ಘಟನೆ ನಡೆದಿದೆ.

ಪರೀಕ್ಷೆಯಲ್ಲಿ ನಕಲು ಮಾಡಿದ ಆರೋಪ

ಇಂದು ಮೊದಲ ವರ್ಷದ ಆಂತರಿಕ ಪರೀಕ್ಷೆ ಬರೆಯುತ್ತಿದ್ದ ಮಾನ್ಯ, ಪರೀಕ್ಷೆಯಲ್ಲಿ ನಕಲು ಮಾಡಿದ ಆರೋಪ ಕೇಳಿಬಂದಿದೆ. ಈ ಹಿನ್ನಲೆ ಅಪಾಲಜಿ ಬರೆದುಕೊಡುವಂತೆ ಉಪನ್ಯಾಸಕರು ಮಾನ್ಯಗೆ ಹೇಳಿದ್ದಾರೆ. ಪ್ರಾಂಶುಪಾಲರ ಕೊಠಡಿಗೆ ಬಂದು ಹೋದ ಬಳಿಕ ಕಾಲೇಜಿನ 5ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ‌ಮಾಡಿಕೊಂಡಿದ್ದಾರೆ. ಘಟನಾ ಸ್ಥಳಕ್ಕೆ ಬಡಾವಣೆ ಠಾಣೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಬದುಕಿ ಬಾಳಬೇಕಾದ ಜೀವ, ದುರಂತ ಅಂತ್ಯಗೊಂಡಿದೆ. ಮಗಳ ಕುರಿತು ಕನಸಿನ ಗೋಪುರ ಕಟ್ಟಿಕೊಂಡಿದ್ದ ಪೋಷಕರು, ಕಣ್ಣೀರಿನಲ್ಲಿ ಕೈ ತೊಳೆಯುವಂತೆ ಮಾಡಿದೆ.

ಇದನ್ನೂ ಓದಿ:ಮಂಗಳೂರು: ವಿಜಿ ಸಿದ್ಧಾರ್ಥ ಆತ್ಮಹತ್ಯೆ ಮಾಡಿಕೊಂಡ ಜಾಗದಲ್ಲೇ ನೇತ್ರಾವತಿ ನದಿಗೆ ಹಾರಿದ ವ್ಯಕ್ತಿ, ಶೋಧ ಕಾರ್ಯ ತೀವ್ರ

ಮರಕ್ಕೆ ನೇಣು ಬಿಗಿದುಕೊಂಡು ಬಾಲಕ ಆತ್ಮಹತ್ಯೆ

ಬೆಂಗಳೂರು ಗ್ರಾಮಾಂತರ:  ಜಿಲ್ಲೆಯ ನೆಲಮಂಗಲ ತಾಲೂಕಿನ ದಾಬಸ್​ಪೇಟೆ ವನಕಲ್ಲು ಮಠದ ಹಾಸ್ಟೆಲ್​ನಲ್ಲಿದ್ದ 12 ವರ್ಷದ ಬಾಲಕ ಆತ್ಮಹತ್ಯೆ ಮಠದ ಸಮೀಪದ ಹೊಂಗೆ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ತುಮಕೂರಿನ ಕಾಳೇನಹಳ್ಳಿ ಗ್ರಾಮದ ಬಾಲಕ ಅಜಯ್ ಕುಮಾರ್(12)ಮೃತ ರ್ದುದೈವಿ. ವನಕಲ್ಲು ಮಠ ಶ್ರೀ ಬಸವರಮಾನಂದ ಸ್ವಾಮಿಗಳಿಗೆ ಸೇರಿದ ಮಠ ಇದಾಗಿದ್ದು, ಕಳೆದ 6ವರ್ಷಗಳಿಂದ ಸಮೀಪದ ಸರ್ಕಾರಿ ಶಾಲೆಯಲ್ಲಿ ಓದುತ್ತಿದ್ದ.
ಬಾಲಕ ಆತ್ಮಹತ್ಯೆಗೆ ನಿಖರವಾದ ಮಾಹಿತಿ ಸಿಕ್ಕಿಲ್ಲ. ಮರಣೋತ್ತರ ಪರೀಕ್ಷೆಗಾಗಿ ತುಮಕೂರಿನ ಜಿಲ್ಲಾಸ್ಪತ್ರೆಗೆ ಬಾಲಕನ ಮೃತದೇಹ ರವಾನೆ ಮಾಡಲಾಗಿದೆ.

ರಾಜ್ಯದ ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:28 pm, Thu, 2 November 23