ಕಾಡಾನೆ ದಾಳಿಗೆ ಹಾಸನದಲ್ಲಿ ಮತ್ತೊಂದು ಬಲಿ: ಮೃತದೇಹವಿದ್ದ ಆ್ಯಂಬುಲೆನ್ಸ್​​ ತಡೆದು ಉದ್ರಿಕ್ತರಿಂದ ಪ್ರತಿಭಟನೆ

ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಅರೇಹಳ್ಳಿ ವ್ಯಾಪ್ತಿಯಲ್ಲಿ ಕಾಫಿ ತೋಟಕ್ಕೆ ತೆರಳುತ್ತಿದ್ದ ಹಫೀಜ್ (55) ಕಾಡಾನೆ ದಾಳಿಗೆ ಬಲಿಯಾಗಿದ್ದಾರೆ. ಆಕ್ರೋಶಗೊಂಡ ಜನರು ಬೇಲೂರು ಆಸ್ಪತ್ರೆ ಎದುರು ಮೃತದೇಹವಿದ್ದ ಆ್ಯಂಬುಲೆನ್ಸ್ ತಡೆದು ತೀವ್ರ ಪ್ರತಿಭಟನೆ ನಡೆಸಿದ್ದಾರೆ. ಶನಿವಾರವಷ್ಟೇ ಬೇಲೂರು ತಾಲೂಕಿನ ಕುಶಾವರ ಗ್ರಾಮದ ಬಳಿ ಕಾಡಾನೆ ದಾಳಿಯಿಂದ ಚೌಡನಹಳ್ಳಿಯ ಮಹಿಳೆ ಮೃತಪಟ್ಟಿದ್ದರು. ಘಟನೆಯಿಂದ ಆಕ್ರೋಶಗೊಂಡ ಗ್ರಾಮಸ್ಥರು ನಿನ್ನೆ ಮಧ್ಯಾಹ್ನದವರೆಗೂ ಶವವಿಟ್ಟು ಪ್ರತಿಭಟನೆ ನಡೆಸಿ, ಕಾಡಾನೆ ಹಾವಳಿಗೆ ಶಾಶ್ವತ ಪರಿಹಾರ ಕಲ್ಪಿಸುವಂತೆ ಒತ್ತಾಯಿಸಿದ್ದರು. ಈ ನಡುವೆಯೇ ಆನೆ ದಾಳಿಗೆ ಮತ್ತೊಂದು ಬಲಿಯಾಗಿದೆ.

ಕಾಡಾನೆ ದಾಳಿಗೆ ಹಾಸನದಲ್ಲಿ ಮತ್ತೊಂದು ಬಲಿ: ಮೃತದೇಹವಿದ್ದ ಆ್ಯಂಬುಲೆನ್ಸ್​​ ತಡೆದು ಉದ್ರಿಕ್ತರಿಂದ ಪ್ರತಿಭಟನೆ
ಆನೆ ದಾಳಿಗೆ ಹಾಸನದಲ್ಲಿ ಮತ್ತೊಂದು ಬಲಿ: ಬೇಲೂರು ಆಸ್ಪತ್ರೆ ಬಳಿ ಹೈಡ್ರಾಮಾ
Edited By:

Updated on: Nov 16, 2026 | 12:12 PM

ಹಾಸನ, ನವೆಂಬರ್​​ 16: ಬೇಲೂರು ತಾಲೂಕಿನ ಕುಶಾವರ ಗ್ರಾಮದ ಬಳಿ ಒಂಟಿ ಸಲಗದ ದಾಳಿಗೆ ದನ ಮೇಯಿಸಲು ಹೋಗಿದ್ದ ಮಹಿಳೆ ಮೃತಪಟ್ಟಿದ್ದ ಘಟನೆ ಮಾಸುವ ಮುನ್ನವೇ ಹಾಸನ ಜಿಲ್ಲೆಯಲ್ಲಿ ಕಾಡಾನೆ ದಾಳಿಗೆ ಮತ್ತೊಂದು ಬಲಿಯಾಗಿದೆ. ಕಾಫಿ ತೋಟಕ್ಕೆ ಕೆಲಸಕ್ಕೆ ತೆರಳುತ್ತಿದ್ದ ವ್ಯಕ್ತಿಯನ್ನು ಕಾಲಿನಿಂದ ತುಳಿದು ಆನೆ ಸಾಯಿಸಿದ್ದು, ಮೃತರನ್ನು ಹಫೀಜ್‌(55) ಎಂದು ಗುರುತಿಸಲಾಗಿದೆ. ಹಫೀಜ್‌ ಮೃತದೇಹವನ್ನು ಬೇಲೂರು ತಾಲೂಕು ಆಸ್ಪತ್ರೆಗೆ ಸ್ಥಳಾಂತರಿಸಲಾಗಿದ್ದು, ಅರೇಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಶನಿವಾರ ಬೇಲೂರು ತಾಲೂಕಿನ ಕುಶಾವರ ಗ್ರಾಮದ ಬಳಿ ಕಾಡಾನೆ ದಾಳಿಯಿಂದ ಚೌಡನಹಳ್ಳಿಯ ಜಯಮ್ಮ ಮೃತಪಟ್ಟಿದ್ದರು. ಘಟನೆಯಿಂದ ಆಕ್ರೋಶಗೊಂಡ ಗ್ರಾಮಸ್ಥರು ನಿನ್ನೆ ಮಧ್ಯಾಹ್ನದವರೆಗೂ ಶವವಿಟ್ಟು ಪ್ರತಿಭಟನೆ ನಡೆಸಿ, ಕಾಡಾನೆ ಹಾವಳಿಗೆ ಶಾಶ್ವತ ಪರಿಹಾರ ಕಲ್ಪಿಸುವಂತೆ ಒತ್ತಾಯಿಸಿದ್ದರು. ಪ್ರತಿಭಟನೆ ತೀವ್ರಗೊಂಡ ಹಿನ್ನೆಲೆ ಬೇಲೂರು ಭಾಗದಲ್ಲಿರುವ ಕಾಡಾನೆ ಓಡಿಸುವುದಾಗಿ ಸಿಸಿಎಫ್‌ ಏಡುಕೊಂಡಲ ಭರವಸೆ ನೀಡಿದ್ದರು. ಅದರಂತೆ ಇಂದು ಬೇಲೂರು ಭಾಗಕ್ಕೆ ಕುಮ್ಕಿ ಆನೆಗಳು ಆಗಮಿಸಬೇಕಿತ್ತು. ನಾಳೆಯಿಂದ ಕಾರ್ಯಾಚರಣೆಗೆ ಸಿದ್ಧತೆಯೂ ನಡೆದಿತ್ತು. ಆದರೆ ಈ ನಡುವೆಯೇ ಕಾಡಾನೆ ದಾಳಿಗೆ ಮತ್ತೊಂದು ಬಲಿಯಾಗಿದೆ.

Loading...

ಇದನ್ನೂ ಓದಿ: ಕಾಡಾನೆಗಳ ಕಾಟಕ್ಕೆ ಬೆಚ್ಚಿದ ಬೇಲೂರು ಮಂದಿ: ಒಂಟಿ ಸಲಗದ ದಾಳಿಗೆ ದನ ಮೇಯಿಸಲು ಹೋಗಿದ್ದ ಮಹಿಳೆ ಬಲಿ

ಮೃತದೇಹವಿದ್ದ ಆ್ಯಂಬುಲೆನ್ಸ್‌ ತಡೆದು ಪ್ರತಿಭಟನೆ

ಇನ್ನು ಘಟನೆಯಿಂದ ಆಕ್ರೋಶಗೊಂಡ ನೂರಾರು ಜನರು ಬೇಲೂರುತಾಲೂಕು ಆಸ್ಪತ್ರೆ ಎದುರು ಪ್ರತಿಭಟನೆ ನಡೆಸಿದ್ದಾರೆ. ಹಫೀಜ್​​ ಮೃತದೇಹವಿದ್ದ ಆ್ಯಂಬುಲೆನ್ಸ್‌ ಆಸ್ಪತ್ರೆಯೊಳಗೆ ಹೋಗದಂತೆ ಅಡ್ಡಗಟ್ಟಿ ಆಕ್ರೋಶ ಹೊರಹಾಕಿದ್ದಾರೆ. ಮರಣೋತ್ತರ ಪರೀಕ್ಷೆಗಾಗಿ ಶವ ಆಸ್ಪತ್ರೆಗೆ ತರಲಾಗಿತ್ತಾದರೂ, ಘಟನಾ ಸ್ಥಳಕ್ಕೆ ಮೃತದೇಹ ವಾಪಸ್​​ ತೆಗೆದುಕೊಂಡು ಹೋಗುವಂತೆ ಪ್ರತಿಭಟನಾಕಾರರು ಪಟ್ಟು ಹಿಡಿದಿದ್ದಾರೆ. ಸರ್ಕಾರ, ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪ್ರತಿಭಟನಾಕಾರರನ್ನು ನಿಯಂತ್ರಿಸಲು ಪೊಲೀಸರು ಹರಸಾಹಸ ಪಟ್ಟ ಪ್ರಸಂಗವೂ ನಡೆದಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

 

ಮಂಜುನಾಥ ಕೆಬಿ

ಮಂಜುನಾಥ ಕೆಬಿ ಪತ್ರಿಕೋದ್ಯಮದಲ್ಲಿ ಕಳೆದ 17 ವರ್ಷಗಳಿಂದ ಸೇವೆ ಮಾಡುತ್ತಿದ್ದೇನೆ. ಕರುನಾಡಿನ ಹೆಮ್ಮೆಯ ಸುದ್ದಿ ವಾಹಿನಿ ಟಿವಿ9 ಕನ್ನಡ ಜೊತೆಗೆ 15ನೇ ವರ್ಷದ ಪಯಣ ನನ್ನದು. ಓದಿದ್ದು, ಮೈಸೂರು ವಿವಿಯಲ್ಲಿ ಕಾನೂನು ಪದವಿ, ಎರಡು ವರ್ಷ ವಕೀಲ ವೃತ್ತಿ ಬಳಿಕ ಮಾಧ್ಯಮ ಕ್ಷೇತ್ರಕ್ಕೆ ಆಗಮಿಸಿ ಟಿವಿ9 ವಾಹಿನಿ ಮೂಲಕ ಸಮಸ್ಯೆಗೆ ಧ್ವನಿಯಾಗಿ ಕಾಯಕ. ಕೊಡಗಿನಲ್ಲಿ ಐದುವರೆ ವರ್ಷ ವರದಿಗಾರನಾಗಿ ಕರ್ತವ್ಯ ನಿರ್ವಹಿಸಿದ್ದು, ಇದೀಗ ಹಾಸನದ ಹಿರಿಯ ವರದಿಗಾರನಾಗಿ ಕರ್ತವ್ಯ ನಿರ್ವಹಣೆ ಮಾಡುತ್ತಿದ್ದೇನೆ.

Read More
Loading...
Unable to load recommendations.
Follow Us