ಶಿರಾಡಿಘಾಟ್​ನಲ್ಲಿ ಮತ್ತೆ ಗುಡ್ಡ ಕುಸಿತ; ಸಂಚಾರ ಸ್ಥಗಿತ

| Updated By: ಕಿರಣ್ ಹನುಮಂತ್​ ಮಾದಾರ್

Updated on: Jul 27, 2024 | 2:51 PM

ಕರ್ನಾಟಕದ ಹಲವೆಡೆ ಭಾರೀ ಮಳೆಯಾಗುತ್ತಿದ್ದು, ಅವಾಂತರವನ್ನೇ ಸೃಷ್ಟಿಸಿದೆ. ಅದರಂತೆ ಇದೀಗ ಹಾಸನ ಜಿಲ್ಲೆಯ ಸಕಲೇಶಪುರ (Sakleshpur) ತಾಲೂಕಿನ ಎತ್ತಿನಹಳ್ಳದ ಬಳಿ ಏಕಾಏಕಿ ಗುಡ್ಡ ಕುಸಿದಿದ್ದು, ಮತ್ತೆ ಶಿರಾಡಿ ಘಾಟ್​(shiradi ghat)ನ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಸಂಚಾರ ಸ್ಥಗಿತವಾಗಿದೆ.

ಶಿರಾಡಿಘಾಟ್​ನಲ್ಲಿ ಮತ್ತೆ ಗುಡ್ಡ ಕುಸಿತ; ಸಂಚಾರ ಸ್ಥಗಿತ
ಶಿರಾಡಿಘಾಟ್​ನಲ್ಲಿ ಸಂಚಾರ ಸ್ಥಗಿತ
Follow us on

ಹಾಸನ, ಜು;.27:  ಭಾರೀ ಮಳೆಗೆ ಹಾಸನ ಜಿಲ್ಲೆಯ ಸಕಲೇಶಪುರ(Sakleshpur) ತಾಲೂಕಿನ ಎತ್ತಿನಹಳ್ಳದ ಬಳಿ ಏಕಾಏಕಿ ಗುಡ್ಡ ಕುಸಿದಿದ್ದು, ಮತ್ತೆ ಶಿರಾಡಿ ಘಾಟ್​(shiradi ghat)ನ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಸಂಚಾರ ಸ್ಥಗಿತವಾಗಿದೆ. ಪರಿಣಾಮ ಒಂದು ಗಂಟೆಯಿಂದಲೂ ಕಿಲೋಮೀಟರ್​ಗಟ್ಟಲೆ ವಾಹನಗಳು ಸಾಲುಗಟ್ಟಿ ನಿಂತಿದೆ. ಇನ್ನು ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕಾಗಮಿಸಿದ ಸಿಬ್ಬಂದಿಗಳು ಮಣ್ಣು ತೆರವು ಮಾಡುವ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ.

ಇದೇ ಜು.18 ರಂದು ಸಕಲೇಶಪುರ ತಾಲೂಕಿನ ದೊಡ್ಡತಪ್ಲು ಬಳಿಯ ಶಿರಾಡಿಘಾಟ್ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಚಲಿಸುತ್ತಿದ್ದ ಕಾರಿನ ಮೇಲೆ ಗುಡ್ಡ ಕುಸಿದಿತ್ತು, ಅದೃಷ್ಟವಶಾತ್​ ಕಾರಿನಲ್ಲಿದ್ದವರಿಗೆ ಸಣ್ಣ ಪುಟ್ಟ ಗಾಯಗಳಿಂದ ಬಚಾವ್​​ ಆಗಿದ್ದರು. ಬಳಿಕ ಗುಡ್ಡ ಕುಸಿತದಿಂದ ಶಿರಾಡಿಘಾಟ್​ನಲ್ಲಿ ವಾಹನ ಸಂಚಾರ ಸ್ಥಗಿತಗೊಳಿಸಲಾಗಿತ್ತು. ನಂತರ ಮಾರನೇ ದಿನ ಜು.19 ರಂದು ಶಿರಾಡಿ ಘಾಟ್ ಸಂಚಾರ ಬಂದ್ ಆದೇಶವನ್ನು ಜಿಲ್ಲಾಡಳಿತ ಹಿಂಪಡೆದು ಸಂಚಾರಕ್ಕೆ ಅನುವುಮಾಡಿಕೊಟ್ಟಿತ್ತು.

ಇದನ್ನೂ ಓದಿ:ಹಾಸನ: ಧಾರಾಕಾರ ಮಳೆಗೆ ಬಿದ್ದ ಬೃಹತ್ ಗಾತ್ರದ ಮರ, 700 ವರ್ಷ ಹಳೆಯ ಮಠದ ಕಟ್ಟಡ ಹಾನಿ

ಆದರೆ, ಕೆಲವು ಷರತ್ತುಗಳಡಿ ಸಂಚಾರಕ್ಕೆ ಅವಕಾಶ ನೀಡಿತ್ತು. ಅಂದರೆ ಬೆಳಿಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆವರೆಗೆ ವಾಹನ ಸಂಚಾರಕ್ಕೆ ಅನುವು ಮಾಡಿಕೊಟ್ಟಿತ್ತು. ಹೌದು, ಮಂಗಳೂರು-ಬೆಂಗಳೂರು ನಡುವೆ ವಾಹನ ಸಂಚಾರ ಸಂಪೂರ್ಣ ನಿರ್ಬಂಧದಿಂದ ದೊಡ್ಡ ಸಮಸ್ಯೆ ಆದ ಹಿನ್ನೆಲೆಯಲ್ಲಿ ಸಂಚಾರಕ್ಕೆ ಅವಕಾಶ ಕಲ್ಪಿಸಿತ್ತು. ಇದೀಗ ಮತ್ತೆ ಗುಡ್ಡ ಕುಸಿದಿದ್ದು, ಮುನ್ನೆಚ್ಚರಿಕೆಯಾಗಿ ಸಂಚಾರವನ್ನು ನಿಷೇಧಿಸಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:41 pm, Sat, 27 July 24