Elephant Attack ಕಾಡಾನೆ ದಾಳಿಗೆ ಮತ್ತೋರ್ವ ವ್ಯಕ್ತಿ ಬಲಿ.. ಹಾಸನದಲ್ಲಿ ಹೆಚ್ಚುತ್ತಿದೆ ಕಾಡಾನೆ ಹಾವಳಿ

| Updated By: ಸಾಧು ಶ್ರೀನಾಥ್​

Updated on: Jan 28, 2021 | 9:41 AM

ಕೆಲಸ ಮುಗಿಸಿಕೊಂಡು ತಡ ರಾತ್ರಿ ಸುಮಾರು 11ಗಂಟೆಯ ಸಮಯದಲ್ಲಿ ರವಿ ತನ್ನ ಸ್ನೇಹಿತನ ಬೈಕ್‌ನಲ್ಲಿ ಮನೆಗೆ ತೆರಳುತ್ತಿದ್ದರು. ಈ ವೇಳೆ ಕಾಡಾನೆ ರಸ್ತೆ ಮಧ್ಯೆ ಅಡ್ಡಬಂದಿದೆ. ಈ ಹಿನ್ನೆಲೆಯಲ್ಲಿ ಗಾಬರಿಯಿಂದ ಬೈಕ್ ಬಿಟ್ಟು ಸವಾರರಿಬ್ಬರೂ ಓಡಿ ತಪ್ಪಿಸಿಕೊಳ್ಳಲು ಪ್ರಯತ್ನಿಸಿದ್ದಾರೆ. ಆದ್ರೆ ಕಾಡಾನೆ ಅಟ್ಟಾಡಿಸಿಕೊಂಡು ಹೋಗಿ ಹಿಂಬದಿ ಸವಾರ ರವಿಯನ್ನ ತುಳಿದು ಸಾಯಿಸಿದೆ.

Elephant Attack ಕಾಡಾನೆ ದಾಳಿಗೆ ಮತ್ತೋರ್ವ ವ್ಯಕ್ತಿ ಬಲಿ.. ಹಾಸನದಲ್ಲಿ ಹೆಚ್ಚುತ್ತಿದೆ ಕಾಡಾನೆ ಹಾವಳಿ
ಪ್ರಾತಿನಿಧಿಕ ಚಿತ್ರ
Follow us on

ಹಾಸನ: ಜಿಲ್ಲೆಯ ಅರಕಲಗೂಡು ತಾಲೂಕಿನ ಬೆಟ್ಟಗಳಲೆ ಗ್ರಾಮದ ಬಳಿ ಕಾಡಾನೆ ದಾಳಿಯಾಗಿ ವ್ಯಕ್ತಿ ಬಲಿಯಾಗಿರುವ ಘಟನೆ ನಡೆದಿದೆ. ಚಿಕ್ಕಬೊಮ್ಮನಹಳ್ಳಿಯ ರವಿ(35) ಮೃತ ದುರ್ದೈವಿ.

ಕೆಲಸ ಮುಗಿಸಿಕೊಂಡು ತಡ ರಾತ್ರಿ ಸುಮಾರು 11ಗಂಟೆಯ ಸಮಯದಲ್ಲಿ ರವಿ ತನ್ನ ಸ್ನೇಹಿತನ ಬೈಕ್‌ನಲ್ಲಿ ಮನೆಗೆ ತೆರಳುತ್ತಿದ್ದರು. ಈ ವೇಳೆ ಕಾಡಾನೆ ರಸ್ತೆ ಮಧ್ಯೆ ಅಡ್ಡಬಂದಿದೆ. ಈ ಹಿನ್ನೆಲೆಯಲ್ಲಿ ಗಾಬರಿಯಿಂದ ಬೈಕ್ ಬಿಟ್ಟು ಸವಾರರಿಬ್ಬರೂ ಓಡಿ ತಪ್ಪಿಸಿಕೊಳ್ಳಲು ಪ್ರಯತ್ನಿಸಿದ್ದಾರೆ. ಆದ್ರೆ ಕಾಡಾನೆ ಅಟ್ಟಾಡಿಸಿಕೊಂಡು ಹೋಗಿ ಹಿಂಬದಿ ಸವಾರ ರವಿಯನ್ನ ತುಳಿದು ಸಾಯಿಸಿದೆ. ಮತ್ತೋರ್ವ ವ್ಯಕ್ತಿ ಸ್ಥಳದಿಂದ ಓಡಿ ಪ್ರಾಣ ಉಳಿಸಿಕೊಂಡಿದ್ದಾನೆ. ಅರಕಲಗೂಡು ತಾಲ್ಲೂಕಿನ ಚಿಕ್ಕಬೊಮ್ಮನಹಳ್ಳಿ ಗ್ರಾಮದ ರವಿ ಆನೆ ತುಳಿತಕ್ಕೆ ಬಲಿಯಾಗಿದ್ದಾರೆ.

ಜಿಲ್ಲೆಯಲ್ಲಿ ಪುಂಡಾನೆ ಹಾವಳಿಗೆ ಮೂರು ತಿಂಗಳ ಅಂತರದಲ್ಲಿ ನಾಲ್ವರು ಬಲಿಯಾಗಿದ್ದಾರೆ. ಕೊಣನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಸ್ಥಳಕ್ಕೆ ಕೊಣನೂರು ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಕಾಫಿ ತೋಟದ ರಸ್ತೆಯಲ್ಲಿ ಧುತ್ತನೆ ಎದುರಾದ ಕಾಡಾನೆ; ಬೈಕ್ ಸವಾರ ಬಚಾವ್!

ಕಾಡಾನೆ ದಾಳಿಗೆ ತೋಟದಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿ ಬಲಿ

Published On - 9:33 am, Thu, 28 January 21