ಅರ್ಜುನ ಆನೆ ಸಾವು: ಅರಣ್ಯ ಇಲಾಖೆಯ ನಿವೃತ್ತ ಹಿರಿಯ ಅಧಿಕಾರಿಗಳ ನೇತೃತ್ವದಲ್ಲಿ ತನಿಖೆ – ಈಶ್ವರ ಖಂಡ್ರೆ

ಕಾಡಾನೆ ಕಾರ್ಯಾಚರಣೆ ವೇಳೆ ಮಾಜಿ ಕ್ಯಾಪ್ಟನ್​​ ಅರ್ಜುನ ಆನೆ ಮೃತಪಟ್ಟಿದ್ದಾನೆ. ಅರ್ಜುನ ಸಾವಿನ ಬಗ್ಗೆ ಅನೇಕರು ಶಂಕೆ ವ್ಯಕ್ತಪಡಿಸಿದ್ದಾರೆ. ಹೀಗಾಗಿ ಅರಣ್ಯ ಇಲಾಖೆಯ ನಿವೃತ್ತ ವನ್ಯಜೀವಿ ಪಾಲಕರ ನೇತೃತ್ವದಲ್ಲಿ ತನಿಖಾ ಸಮಿತಿ ನೇಮಕ ಮಾಡಿದ್ದೇವೆ ಎಂದು ಅರಣ್ಯ ಇಲಾಖೆ ಸಚಿವ ಈಶ್ವರ್​ ಖಂಡ್ರೆ ಹೇಳಿದರು.

ಅರ್ಜುನ ಆನೆ ಸಾವು: ಅರಣ್ಯ ಇಲಾಖೆಯ ನಿವೃತ್ತ ಹಿರಿಯ ಅಧಿಕಾರಿಗಳ ನೇತೃತ್ವದಲ್ಲಿ ತನಿಖೆ - ಈಶ್ವರ ಖಂಡ್ರೆ
ಸಚಿವ ಈಶ್ವರ್​ ಖಂಡ್ರೆ
Follow us
ಮಂಜುನಾಥ ಕೆಬಿ
| Updated By: ವಿವೇಕ ಬಿರಾದಾರ

Updated on: Dec 10, 2023 | 2:13 PM

ಹಾಸನ, ಡಿಸೆಂಬರ್​ 10: ಕಾಡಾನೆ ಕಾರ್ಯಾಚರಣೆ ವೇಳೆ ಮಾಜಿ ಕ್ಯಾಪ್ಟನ್​​ ಅರ್ಜುನ ಆನೆ (Arjun Elephant) ಮೃತಪಟ್ಟಿದ್ದಾನೆ. ಅರ್ಜುನ ಸಾವಿನ ಬಗ್ಗೆ ಅನೇಕರು ಶಂಕೆ ವ್ಯಕ್ತಪಡಿಸಿದ್ದಾರೆ. ಹೀಗಾಗಿ ಅರಣ್ಯ ಇಲಾಖೆಯ (Forest Department) ನಿವೃತ್ತ ವನ್ಯಜೀವಿ ಪಾಲಕರ ನೇತೃತ್ವದಲ್ಲಿ ತನಿಖಾ ಸಮಿತಿ ನೇಮಕ ಮಾಡಿದ್ದೇವೆ. ಅವರು ನಿಷ್ಪಕ್ಷಪಾತವಾಗಿ ತನಿಖೆ ನಡೆಸಿ, 15 ದಿನದ ಒಳಗಾಗಿ ಸರ್ಕಾರಕ್ಕೆ ವರದಿ ಸಲ್ಲಿಸುತ್ತಾರೆ. ವರದಿ ಆಧರಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಅರಣ್ಯ ಇಲಾಖೆ ಸಚಿವ ಈಶ್ವರ್​ ಖಂಡ್ರೆ (Eshwar Khandre) ಹೇಳಿದರು.

ಅರ್ಜುನನ ಸಮಾಧಿ ಸ್ಥಳಕ್ಕೆ ಭೇಟಿ ನೀಡಿ, ಶ್ರದ್ಧಾಂಜಲಿ ಸಲ್ಲಿಸಿ ಬಳಿಕ ಮಾತನಾಡಿದ ಅವರು, ದಸರಾ ಆನೆ ಅರ್ಜುನ‌ನನ್ನು ಕಳೆದುಕೊಂಡಿದ್ದು ದುಃಖಕರ. ಎಂಟು ಬಾರಿ ಅಂಬಾರಿ ಹೊತ್ತಿದ್ದ ಅರ್ಜುನನ ಸಾವು ನೋವು ತಂದಿದೆ. ಅರ್ಜುನನಿಗೆ ನಾವು ಶ್ರದ್ಧಾಂಜಲಿ ಸಲ್ಲಿಸಿದ್ದೇವೆ. ಅರ್ಜುನ ಸಮಾಧಿ ಸ್ಥಳ ಹಾಗೂ ನಾಗರಹೊಳೆ ರಾಷ್ಟ್ರೀಯ ಉದ್ಯಾನವನಲ್ಲಿರುವ ಬಳ್ಳೆ ಆನೆ ಶಿಬಿರದಲ್ಲಿ ಸ್ಮಾರಕ ನಿರ್ಮಾಣ ಮಾಡುತ್ತೇವೆ ಎಂದು ತಿಳಿಸಿದರು.

ಇದನ್ನೂ ಓದಿ: ಮದವೇರಿದ ಕಾಡಾನೆ ಜೊತೆ ಕಾದಾಡಿ ಮಂಡಿ ಊರಿದ ಅರ್ಜುನ; ಕಾರ್ಯಾಚರಣೆ ವಿಡಿಯೋ ಲಭ್ಯ

ಕಾರ್ಯಾಚರಣೆ ಅತ್ಯಂತ ಅಪಾಯದ್ದು. ಈ ಬಾಗದಲ್ಲಿ ಸಾಕಷ್ಟು ಆನೆಗಳು ಬೆಳೆ ನಾಶ ಮಾಡಿವೆ. ಚಿಕ್ಕಮಗಳೂರಿನಲ್ಲಿ ಆನೆ ದಾಳಿಗೆ ಇಬ್ಬರು ಬಲಿಯಾದರು. ಹೀಗಾಗಿ ಆನೆ ಸೆರೆ ಹಿಡಿಯಲು ಸಾಕಷ್ಟು ಒತ್ತಡ ಇತ್ತು. ಈ ಸಂಬಂಧ ನವೆಂಬರ್ 24 ರಿಂದ ಕಾರ್ಯಾಚರಣೆ ಆರಂಭ ಆಗಿತ್ತು. ಕಾರ್ಯಾಚರಣೆಯಲ್ಲಿ ನಮ್ಮ ಅಧಿಕಾರಿಗಳು ಎಲ್ಲ ಮಾನದಂಡ ಅನುಸರಣೆ ಮಾಡಿದ್ದಾರೆ. ಪುಂಡಾನೆ ಏಕಾ ಏಕಿ ದಾಳಿ ಮಾಡಿದೆ. ಹೀಗಾಗಿ ಅವಘಡ ಸಂಭವಿಸಿದೆ ಎಂದು ಮಾಹಿತಿ ನೀಡಿದರು.

ಆದರು ಕೆಲವರು ಘಟನೆ ಬಗ್ಗೆ ಸಾಕಷ್ಟು ಶಂಕೆ ವ್ಯಕ್ತಪಡಿಸಿದ್ದಾರೆ. ಪ್ರಶಾಂತ್​ಗೆ ಅರವಳಿಕೆ ಮದ್ದು ಬಿದ್ದಿದೆ, ಅರ್ಜುನನಿಗೆ ಗುಂಡು ತಗುಲಿದೆ ಎಂಬ ಆರೋಪವಿದೆ. ಬಾಹ್ಯ ಮರಣೋತ್ತರ ಪರೀಕ್ಷೆ ಆಗಿದೆ. ಈ ವರದಿಯಲ್ಲಿ ಗುಂಡು ತಗುಲಿದ ಬಗ್ಗೆ ಮಾಹಿತಿ ಇಲ್ಲ. ಎಸ್​ಓಪಿ ಅಪ್ಡೇಡ್ ಆಗಬೇಕಿದೆ. ಈ ಬಗ್ಗೆ ಕೂಡ ಕ್ರಮ ವಹಿಸುತ್ತೇವೆ. ಹೀಗಾಗಿ ಅರಣ್ಯ ಇಲಾಖೆಯ ನಿವೃತ್ತ ಹಿರಿಯ ಅಧಿಕಾರಿ ನೇತೃತ್ವದಲ್ಲಿ ಸಮಿತಿ ರಚಿಸಲಾಗಿದ್ದು, ನಿಷ್ಪಕ್ಷಪಾತವಾಗಿ ತನಿಖೆ ನಡೆಯಲಿದೆ ಎಂದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ