AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಡಾನೆ ಸೆರೆ ಕಾರ್ಯಾಚರಣೆ ವೇಳೆ ಅಂಬಾರಿ ಅರ್ಜುನ ಆನೆ ಹುತಾತ್ಮ ಪ್ರಕರಣ; ತನಿಖೆ ಆರಂಭಿಸಿದ ತನಿಖಾ ತಂಡ

ಸಕಲೇಶಪುರ ತಾಲ್ಲೂಕಿನ ಯಸಳೂರು ವಲಯದ ದಬ್ಬಳ್ಳಿ ಕಟ್ಟೆ ಅರಣ್ಯ ಪ್ರದೇಶದಲ್ಲಿ ಡಿಸೆಂಬರ್ 4 ರಂದು ಕಾಡಾನೆ ಸೆರೆ ಕಾರ್ಯಾಚರಣೆ ವೇಳೆ ಅರ್ಜುನ ಆನೆಯ ಕಾಲಿಗೆ ಗುಂಡೇಟು ಬಿದ್ದು ಹುತಾತ್ಮನಾಗಿದ್ದ. ಈ ಬಗ್ಗೆ ಮಾವುತ ಹಾಗೂ ಜನರು ಅನುಮಾನ ವ್ಯಕ್ತಪಡಿಸಿದ್ದರು. ಈ ಹಿನ್ನಲೆ

ಕಾಡಾನೆ ಸೆರೆ ಕಾರ್ಯಾಚರಣೆ ವೇಳೆ ಅಂಬಾರಿ ಅರ್ಜುನ ಆನೆ ಹುತಾತ್ಮ ಪ್ರಕರಣ; ತನಿಖೆ ಆರಂಭಿಸಿದ ತನಿಖಾ ತಂಡ
ಹುತಾತ್ಮ ಅರ್ಜುನ ಆನೆಯ ಪ್ರಕರಣ
ಮಂಜುನಾಥ ಕೆಬಿ
| Edited By: ಕಿರಣ್ ಹನುಮಂತ್​ ಮಾದಾರ್|

Updated on: Dec 21, 2023 | 3:48 PM

Share

ಹಾಸನ, ಡಿ.21: ಕಾಡಾನೆ(Wild Elephant) ಸೆರೆ ಕಾರ್ಯಾಚರಣೆ ವೇಳೆ ಅಂಬಾರಿ ಅರ್ಜುನ ಹುತಾತ್ಮ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು(ಡಿ.21) ಬೆಂಗಳೂರಿ (Bengaluru)ನಿಂದ ಆಗಮಿಸಿದ ತನಿಖಾತಂಡ ತನಿಖೆ ಆರಂಭಿಸಿದೆ. ಮೊದಲು ತನಿಖಾಧಿಕಾರಿ(Investigator)ಗಳು ಅರ್ಜುನ ಹುತಾತ್ಮನಾದ ಸ್ಥಳಕ್ಕೆ ಭೇಟಿ ನೀಡಿದ್ದಾರೆ. ದಸರಾ ಆನೆ ಅರ್ಜುನ ಸಾವಿನ ಬಗ್ಗೆ ಹಲವು ಅನುಮಾನ ಹಿನ್ನೆಲೆಯಲ್ಲಿ ನಿವೃತ್ತ ಮುಖ್ಯ ವನ್ಯಪಾಲಕರಾದ ಅಜಯ್ ಮಿಶ್ರ ತಂಡದಿಂದ ತನಿಖೆ ಶುರುವಾಗಿದೆ.

ಅರ್ಜುನ ಕಾಲಿಗೆ ಗುಂಡೇಟು ಬಿದ್ದ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದ ಮಾವುತ ಹಾಗೂ ಜನರು

ಸಕಲೇಶಪುರ ತಾಲ್ಲೂಕಿನ ಯಸಳೂರು ವಲಯದ ದಬ್ಬಳ್ಳಿ ಕಟ್ಟೆ ಅರಣ್ಯ ಪ್ರದೇಶದಲ್ಲಿ ಡಿಸೆಂಬರ್ 4 ರಂದು ಕಾಡಾನೆ ಸೆರೆ ಕಾರ್ಯಾಚರಣೆ ವೇಳೆ ಅರ್ಜುನ ಆನೆಯ ಕಾಲಿಗೆ ಗುಂಡೇಟು ಬಿದ್ದು ಹುತಾತ್ಮನಾಗಿದ್ದ. ಈ ಬಗ್ಗೆ ಮಾವುತ ಹಾಗೂ ಜನರು ಅನುಮಾನ ವ್ಯಕ್ತಪಡಿಸಿದ್ದರು. ಅರ್ಜುನನ ಕಾಲಿಗೆ ಗುಂಡೇಟು ಬಿದ್ದಿದ್ದರಿಂದ ಶಕ್ತಿ ಕಳೆದುಕೊಂಡಿದ್ದು, ಕಾಡಾನೆ ಕಾರ್ಯಾಚರಣೆ ವೇಳೆ ಅರಣ್ಯ ಇಲಾಖೆ ಸಾಕಷ್ಟು ಲೋಪ ಎಸಗಿತ್ತು. ಮುಂಜಾಗ್ರತಾ ಕ್ರಮ ವಹಿಸಿರಲಿಲ್ಲ ಎಂಬ ಆರೋಪ ಕೇಳಿಬಂದಿತ್ತು. ಬಳಿಕ ಅರಣ್ಯ ಸಚಿವ ಈಶ್ವರ ಖಂಡ್ರೆ ತನಿಖೆಗೆ ಆದೇಶಿಸಿದ್ದರು. ಅದರಂತೆ ತನಿಖಾಧಿಕಾರಿಗಳು ಅರಣ್ಯ ಇಲಾಖೆ ಅಧಿಕಾರಿಗಳು, ಸಿಬ್ಬಂದಿಗಳನ್ನು ವಿಚಾರಿಸಿ ಮಾಹಿತಿ ಸಂಗ್ರಹಿಸಿಸಲಿದ್ದಾರೆ.

ಇದನ್ನೂ ಓದಿ:ಅರ್ಜುನ ಆನೆ ಸಾವು, ಕೊನೆ ಕ್ಷಣದಲ್ಲಿ ಆಗಿದ್ದೇನು?;ಕಾರ್ಯಾಚರಣೆಯ ಕಂಪ್ಲೀಟ್ ಡೀಟೆಲ್ಸ್​ ಇಲ್ಲಿದೆ

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
‘ಅವರು ಭಯೋತ್ಪಾದಕರಾ?’; ಪ್ರತಿಭಟನಾನಿರತ ವಿದ್ಯಾರ್ಥಿಗಳ ಮೇಲೆ ಗನ್ ದಾಳಿಗೆ ಪ
‘ಅವರು ಭಯೋತ್ಪಾದಕರಾ?’; ಪ್ರತಿಭಟನಾನಿರತ ವಿದ್ಯಾರ್ಥಿಗಳ ಮೇಲೆ ಗನ್ ದಾಳಿಗೆ ಪ
ವಿದ್ಯಾರ್ಥಿ ಪ್ರತಿಭಟನೆ ವೇಳೆ ಹಿಂಸಾಚಾರ; SIT ತನಿಖೆಗೆ ಸುಪ್ರೀಂ ಸೂಚನೆ
ವಿದ್ಯಾರ್ಥಿ ಪ್ರತಿಭಟನೆ ವೇಳೆ ಹಿಂಸಾಚಾರ; SIT ತನಿಖೆಗೆ ಸುಪ್ರೀಂ ಸೂಚನೆ
ಅಲ್ಲು ಅರ್ಜುನ್ ಮಾಡಿದ್ದು ನೋಡಿ ಭೇಷ್ ಎಂದ ಅಭಿಮಾನಿಗಳು: ವಿಡಿಯೋ ನೋಡಿ
ಅಲ್ಲು ಅರ್ಜುನ್ ಮಾಡಿದ್ದು ನೋಡಿ ಭೇಷ್ ಎಂದ ಅಭಿಮಾನಿಗಳು: ವಿಡಿಯೋ ನೋಡಿ
ವೈಮನಸ್ಸು ಮರೆತು ದರ್ಶನ್ ಭೇಟಿ ಮಾಡಲು ಜೈಲಿಗೆ ಬಂದ ನಟ ಧನ್ವೀರ್
ವೈಮನಸ್ಸು ಮರೆತು ದರ್ಶನ್ ಭೇಟಿ ಮಾಡಲು ಜೈಲಿಗೆ ಬಂದ ನಟ ಧನ್ವೀರ್
ತಮಿಳುನಾಡಲ್ಲಿ ವ್ಯರ್ಥವಾಗಿ ಸಮುದ್ರ ಸೇರುತ್ತಿರುವ ಕಾವೇರಿ ನೀರು!
ತಮಿಳುನಾಡಲ್ಲಿ ವ್ಯರ್ಥವಾಗಿ ಸಮುದ್ರ ಸೇರುತ್ತಿರುವ ಕಾವೇರಿ ನೀರು!
ತಮಿಳುನಾಡಿಗೆ ಕಾವೇರು ನೀರು ಬಿಡದಂತೆ ಸರ್ಕಾರಕ್ಕೆ ಎಚ್ಚರಿಕೆ
ತಮಿಳುನಾಡಿಗೆ ಕಾವೇರು ನೀರು ಬಿಡದಂತೆ ಸರ್ಕಾರಕ್ಕೆ ಎಚ್ಚರಿಕೆ
ತಮಿಳುನಾಡಿಗೆ ನೀರು ಹರಿಸುವ ಆದೇಶ ಖಂಡಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ
ತಮಿಳುನಾಡಿಗೆ ನೀರು ಹರಿಸುವ ಆದೇಶ ಖಂಡಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ
ಪ್ರಧಾನ್ ಅವರನ್ನು ತೆಗೆದು ಪ್ರಧಾನಿಯನ್ನು ಉಳಿಸಿಕೊಂಡಿರಿ; ಅಖಿಲೇಶ್ ಯಾದವ್
ಪ್ರಧಾನ್ ಅವರನ್ನು ತೆಗೆದು ಪ್ರಧಾನಿಯನ್ನು ಉಳಿಸಿಕೊಂಡಿರಿ; ಅಖಿಲೇಶ್ ಯಾದವ್
"ಕಳೆದ 2 ವರ್ಷಗಳಲ್ಲಿ 3000ಕ್ಕೂ ಹೆಚ್ಚು ಹುದ್ದೆಗಳ ನೇಮಕಾತಿಯಲ್ಲಿ ಅಕ್ರಮ"
ಕಾವೇರಿ ಸಂಧಾನ ಸೂತ್ರಕ್ಕೆ‌ ದಿನಾಂಕ ಫಿಕ್ಸ್, ಆ.3ರಂದು ಸಿಎಂಗಳ ಸಭೆ ನಿಗದಿ
ಕಾವೇರಿ ಸಂಧಾನ ಸೂತ್ರಕ್ಕೆ‌ ದಿನಾಂಕ ಫಿಕ್ಸ್, ಆ.3ರಂದು ಸಿಎಂಗಳ ಸಭೆ ನಿಗದಿ