
ಹಾಸನ, ಡಿ.21: ಕಾಡಾನೆ(Wild Elephant) ಸೆರೆ ಕಾರ್ಯಾಚರಣೆ ವೇಳೆ ಅಂಬಾರಿ ಅರ್ಜುನ ಹುತಾತ್ಮ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು(ಡಿ.21) ಬೆಂಗಳೂರಿ (Bengaluru)ನಿಂದ ಆಗಮಿಸಿದ ತನಿಖಾತಂಡ ತನಿಖೆ ಆರಂಭಿಸಿದೆ. ಮೊದಲು ತನಿಖಾಧಿಕಾರಿ(Investigator)ಗಳು ಅರ್ಜುನ ಹುತಾತ್ಮನಾದ ಸ್ಥಳಕ್ಕೆ ಭೇಟಿ ನೀಡಿದ್ದಾರೆ. ದಸರಾ ಆನೆ ಅರ್ಜುನ ಸಾವಿನ ಬಗ್ಗೆ ಹಲವು ಅನುಮಾನ ಹಿನ್ನೆಲೆಯಲ್ಲಿ ನಿವೃತ್ತ ಮುಖ್ಯ ವನ್ಯಪಾಲಕರಾದ ಅಜಯ್ ಮಿಶ್ರ ತಂಡದಿಂದ ತನಿಖೆ ಶುರುವಾಗಿದೆ.
ಸಕಲೇಶಪುರ ತಾಲ್ಲೂಕಿನ ಯಸಳೂರು ವಲಯದ ದಬ್ಬಳ್ಳಿ ಕಟ್ಟೆ ಅರಣ್ಯ ಪ್ರದೇಶದಲ್ಲಿ ಡಿಸೆಂಬರ್ 4 ರಂದು ಕಾಡಾನೆ ಸೆರೆ ಕಾರ್ಯಾಚರಣೆ ವೇಳೆ ಅರ್ಜುನ ಆನೆಯ ಕಾಲಿಗೆ ಗುಂಡೇಟು ಬಿದ್ದು ಹುತಾತ್ಮನಾಗಿದ್ದ. ಈ ಬಗ್ಗೆ ಮಾವುತ ಹಾಗೂ ಜನರು ಅನುಮಾನ ವ್ಯಕ್ತಪಡಿಸಿದ್ದರು. ಅರ್ಜುನನ ಕಾಲಿಗೆ ಗುಂಡೇಟು ಬಿದ್ದಿದ್ದರಿಂದ ಶಕ್ತಿ ಕಳೆದುಕೊಂಡಿದ್ದು, ಕಾಡಾನೆ ಕಾರ್ಯಾಚರಣೆ ವೇಳೆ ಅರಣ್ಯ ಇಲಾಖೆ ಸಾಕಷ್ಟು ಲೋಪ ಎಸಗಿತ್ತು. ಮುಂಜಾಗ್ರತಾ ಕ್ರಮ ವಹಿಸಿರಲಿಲ್ಲ ಎಂಬ ಆರೋಪ ಕೇಳಿಬಂದಿತ್ತು. ಬಳಿಕ ಅರಣ್ಯ ಸಚಿವ ಈಶ್ವರ ಖಂಡ್ರೆ ತನಿಖೆಗೆ ಆದೇಶಿಸಿದ್ದರು. ಅದರಂತೆ ತನಿಖಾಧಿಕಾರಿಗಳು ಅರಣ್ಯ ಇಲಾಖೆ ಅಧಿಕಾರಿಗಳು, ಸಿಬ್ಬಂದಿಗಳನ್ನು ವಿಚಾರಿಸಿ ಮಾಹಿತಿ ಸಂಗ್ರಹಿಸಿಸಲಿದ್ದಾರೆ.
ಇದನ್ನೂ ಓದಿ:ಅರ್ಜುನ ಆನೆ ಸಾವು, ಕೊನೆ ಕ್ಷಣದಲ್ಲಿ ಆಗಿದ್ದೇನು?;ಕಾರ್ಯಾಚರಣೆಯ ಕಂಪ್ಲೀಟ್ ಡೀಟೆಲ್ಸ್ ಇಲ್ಲಿದೆ
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ