ವೈದ್ಯಾಧಿಕಾರಿಯನ್ನು ತರಾಟೆಗೆ ತೆಗೆದುಕೊಳ್ಳುವ ಭರದಲ್ಲಿ ಬೇಲೂರು ಶಾಸಕ ಸುರೇಶ್ರಿಂದ ಆಕ್ಷೇಪಾರ್ಹ ಪದ ಬಳಕೆ ಆರೋಪ, ಜನರ ಆಕ್ರೋಶ
ಬೇಲೂರು ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯ ದಿಂದ ಗ್ರಾಮದ ಶಿವಣ್ಣ ಎಂಬಾತ ಮೃತಪಟ್ಟಿದ್ದಾರೆ ಎಂದು ಆರೋಪಿಸಿ, ಹೆಬ್ಬಾಳು ಗ್ರಾಮಸ್ಥರು ಪ್ರತಿಭಟನೆ ನಡೆಸಿದ್ದರು. ಸ್ಥಳಕ್ಕೆ ಬಂದ ಬೇಲೂರು ಬಿಜೆಪಿ ಶಾಸಕ ಎಚ್.ಕೆ. ಸುರೇಶ್ ಅವರು ವೈದ್ಯರ ನಿರ್ಲಕ್ಷ್ಯ ದ ಬಗ್ಗೆ ಅಸಮಾಧಾನ ವ್ಯಕ್ತಪಡಿಸುತ್ತಾ, ಆಕ್ಷೇಪಾರ್ಹ ಪದ ಬಳಕೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ
ಹಾಸನ, ಸೆಪ್ಟೆಂಬರ್ 21: ಬೇಲೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಎಚ್.ಕೆ.ಸುರೇಶ್ ವಿರುದ್ಧ (Belur BJP MLA HK Suresh) ಆಕ್ಷೇಪಾರ್ಹ ಪದ ಬಳಕೆ (Abusive Language) ಆರೋಪ ಕೇಳಿಬಂದಿದೆ. ಅಧಿಕಾರಿಗಳನ್ನ ತರಾಟೆಗೆ ತೆಗೆದುಕೊಳ್ಳೋ ಭರದಲ್ಲಿ ಸವಿತಾ ಸಮಾಜದ ಬಗ್ಗೆ ಆಕ್ಷೇಪಾರ್ಹ ಪದ ಬಳಕೆ ಮಾಡಿರುವ ಆರೋಪ ಇದಾಗಿದೆ. ಶಾಸಕ ಸುರೇಶ್ ಹಾಸನ ಜಿಲ್ಲಾ ವೈದ್ಯಾಧಿಕಾರಿ (ಡಿಎಚ್ಓ -DHO) ಜೊತೆ ಮಾತನಾಡುವಾಗ ಬಳಸಿದ ಆಕ್ಷೇಪಾರ್ಹ ಪದ ಬಳಕೆಯ ವೀಡಿಯೋ ಇದೀಗ ವೈರಲ್ ಆಗಿದೆ.
ಸೆಪ್ಟೆಂಬರ್ 18 ರ ಸೋಮವಾರ ಬೇಲೂರು ಆಸ್ಪತ್ರೆ ಎದುರು ಹೆಬ್ಬಾಳು ಗ್ರಾಮಸ್ಥರು ಪ್ರತಿಭಟನೆ ನಡೆಸುತ್ತಿದ್ದರು. ವೈದ್ಯರ ನಿರ್ಲಕ್ಷ್ಯ ದಿಂದ ಹೆಬ್ಬಾಳು ಗ್ರಾಮದ ಶಿವಣ್ಣ(63) ಮೃತಪಟ್ಟಿದ್ದಾರೆ ಎಂದು ಆರೋಪಿಸಿ, ಆ ಪ್ರತಿಭಟನೆ ನಡೆದಿತ್ತು.
ಪ್ರತಿಭಟನೆ ವೇಳೆ ಸ್ಥಳಕ್ಕೆ ಬಂದ ಬೇಲೂರು ಬಿಜೆಪಿ ಶಾಸಕ ಎಚ್.ಕೆ. ಸುರೇಶ್ ಅವರು ವೈದ್ಯರ ನಿರ್ಲಕ್ಷ್ಯ ದ ಬಗ್ಗೆ ಅಸಮಾಧಾನ ವ್ಯಕ್ತಪಡಿಸುತ್ತಾ, ಆಕ್ಷೇಪಾರ್ಹ ಪದ ಬಳಕೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಶಾಸಕ ಸುರೇಶ್ ಮಾತಿನ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಜವಾಬ್ದಾರಿಯುತ ಶಾಸಕರ ಮಾತಿನ ಬಗ್ಗೆ ಸಮುದಾಯದವರು ಅಸಮಾಧಾನ ಹೊರ ಹಾಕಿದ್ದಾರೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ