AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೇಲೂರು ಬಳಿ ಭೀಕರ ಅಪಘಾತ: ಕೆಎಸ್​ಆರ್​​ಟಿಸಿ ಬಸ್- ಕಾರಿನ ನಡುವೆ ಮುಖಾಮುಖಿ, ಕಾರಿನಲ್ಲಿದ್ದ 5 ವಿದ್ಯಾರ್ಥಿಗಳ ಸಾವು

ಹಾಸನ ಬೇಲೂರು ನಡುವಿನ ರಾಷ್ಟ್ರೀಯ ಹೆದ್ದಾರಿಯಲ್ಲಿ, ಬೇಲೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಪಘಾತ ಸಂಭವಿಸಿದ್ದು, ಸ್ಥಳದಲ್ಲೇ ನಾಲ್ವರು ಮೃತಪಟ್ಟಿದ್ದಾರೆ.

ಬೇಲೂರು ಬಳಿ ಭೀಕರ ಅಪಘಾತ: ಕೆಎಸ್​ಆರ್​​ಟಿಸಿ ಬಸ್- ಕಾರಿನ ನಡುವೆ ಮುಖಾಮುಖಿ, ಕಾರಿನಲ್ಲಿದ್ದ 5 ವಿದ್ಯಾರ್ಥಿಗಳ ಸಾವು
ಕೆಎಸ್​ಆರ್​​ಟಿಸಿ ಬಸ್ ಮತ್ತು ಕಾರಿನ ನಡುವೆ ಮುಖಾಮುಖಿ, ನಾಲ್ವರ ಸಾವು
TV9 Web
| Edited By: |

Updated on:Mar 22, 2022 | 4:48 PM

Share

ಹಾಸನ: ತುಮಕೂರು ಬಳಿ ಮೊನ್ನೆ ನಡೆದ ಭೀಕರ ಅಪಘಾತದ ನೆನಪು ಮಾಸುವ ಮುನ್ನವೇ ಹಾಸನ ಜಿಲ್ಲೆ ಬೇಲೂರು ಸಮೀಪ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಹಾಸನ‌ ಜಿಲ್ಲೆ ಬೇಲೂರು ತಾಲ್ಲೂಕಿನ ಸಂಕೇನಹಳ್ಲಿ ತಿರುವಿನಲ್ಲಿ ಸಾರಿಗೆ ಬಸ್ ಮತ್ತು ಕಾರಿನ ನಡುವೆ ನಡೆದ ಭೀಕರ ಅಪಘಾತದಲ್ಲಿ 4 ವಿದ್ಯಾರ್ಥಿಗಳು ಸ್ಥಳದಲ್ಲಿಯೇ ಕೊನೆಯುಸಿರೆಳೆದಿದ್ದರೆ ಮತ್ತೋರ್ವ ವಿದ್ಯಾರ್ಥಿ ಆಸ್ಪತ್ರೆ ಗೆ ಸಾಗಿಸೋ ಮಾರ್ಗಮಧ್ಯದಲ್ಲಿ ಮೃತಪಟ್ಟಿದ್ದಾನೆ. ಮೃತರು ಬೇಲೂರಿನ ವಿದ್ಯಾ ವಿಕಾಸ ಕಾಲೇಜಿನ ಪಿಯು ಕಾಲೇಜು ವಿದ್ಯಾರ್ಥಿಗಳು. ಇವರು ಬೇಲೂರು ಪಟ್ಟಣದ ನಿವಾಸಿಗಳು. ಇವರೆಲ್ಲ ಕಾಲೇಜು ಮುಗಿಸಿ ಕಾರಿನಲ್ಲಿ ಹಾಸನದತ್ತ ಹೊರಟಿದ್ದ‌ರು. ಈ ವೇಳೆ ಚಿಕ್ಕಮಗಳೂರಿನತ್ತ ಹೊರಟಿದ್ದ ಸಾರಿಗೆ ಬಸ್ಸಿಗೆ ಮುಖಾಮುಖಿ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಮೊಹಮ್ಮದ್ ಜಲಾನಿ, ಅಕ್ಮಲ್ ಖಾನ್, ಕೈಫ್ ಸೇರಿ ಐವರು ಅಸುನೀಗಿದ್ದಾರೆ. ಅಪಘಾತದ ತೀವ್ರತೆಗೆ ಕಾರು ಸಂಪೂರ್ಣ ಜಜ್ಜಿ ಹೋಗಿದೆ. ಇನ್ನು ಬಸ್ ನಲ್ಲಿದ್ದ ಹಲವರಿಗೆ ಗಾಯಗಳಾಗಿವೆ. ಬೇಲೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಪಘಾತ ಸಂಭವಿಸಿದೆ (belur road accident).

ಶಾಲೆ ಬಂಕ್ ಮಾಡಿ, ಮೀನು ಹಿಡಿಯಲು ನಾಲ್ವರು ಹೋಗಿದ್ದರು – ಇಬ್ಬರು ಜಲಸಮಾಧಿಯಾದರು: ಯಾದಗಿರಿ: ಮೀನು ಹಿಡಿಯಲು ಹೋಗಿದ್ದ ಇಬ್ಬರು ವಿದ್ಯಾರ್ಥಿಗಳು ಬಾವಿಯಲ್ಲಿ ಮುಳುಗಿ ನೀರುಪಾಲಾಗಿದ್ದಾರೆ. ಯಾದಗಿರಿ ನಗರದ ಅಮರ್ ಲೇಔಟ್​ನಲ್ಲಿ ಈ ಕಹಿ ಘಟನೆ ನಡೆದಿದೆ. ಶಾಲೆಗೆ ಬಂಕ್ ಹಾಕಿ ನಾಲ್ವರು ಸ್ನೇಹಿತರು ಮೀನು ಹಿಡಿಯಲು ಹೋಗಿದ್ದರು. ನಾಲ್ವರಲ್ಲಿ ಇಬ್ಬರು, ನೀರಿನಲ್ಲಿ ಇಳಿದು ಮೃತಪಟ್ಟಿದ್ದಾರೆ. ನಕುಲ್ (11) ಮತ್ತು ನಿಹಾಲ್ ಸಿಂಗ್(11) ಜಲಸಮಾಧಿಯಾದವರು. ಯಾದಗಿರಿ ನಗರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ವಿದ್ಯುತ್ ಸ್ಪರ್ಶ: ಕೂಡ್ಲಿಗಿಯ ಶಿವಪುರ ಗ್ರಾಮ‌ ಪಂಚಾಯತ್ ಸದಸ್ಯ ಸಾವು ವಿಜಯನಗರ: ಮನೆಯ ಹತ್ತಿರದಲ್ಲಿ ನೀರು ಬಿಡುವಾಗ ಆಕಸ್ಮಿಕವಾಗಿ ವಿದ್ಯುತ್ ಸ್ಪರ್ಶದಿಂದ ಶಿವಪುರ ಗ್ರಾಮ ಪಂಚಾಯಿತಿ ಸದಸ್ಯ ಮನೆಯ ಮುಂದೆ ಸ್ಥಳದಲ್ಲೆ ಸಾವನ್ನಪ್ಪಿರುವ ಘಟನೆ ನಡೆದಿದೆ. ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಶಿವಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗೊಲ್ಲರಹಟ್ಟಿಯಲ್ಲಿ ಇಂದು ಬೆಳಿಗ್ಗೆ ಶಿವಪುರ ಗ್ರಾಮ ಪಂಚಾಯಿತಿ ಸದಸದ್ಯ ಕೃಷ್ಣಮೂರ್ತಿ (35) ವಿದ್ಯುತ್ ಸ್ಪರ್ಶಕ್ಕೆ ಬಲಿಯಾಗಿದ್ದಾರೆ.

ಶಿವಪುರ ಗ್ರಾಮಪಂಚಾಯಿತಿ ಹಾಲಿ ಸದಸ್ಯನಾಗಿದ್ದ ದಾಳಿ ಕೃಷ್ಣಮೂರ್ತಿ ಇಂದು ಬೆಳಿಗ್ಗೆ ಮೋಟಾರ ಅಳವಡಿಸಿ ಪೈಪಿನಿಂದ ನೀರು ಬಿಡುವಾಗ ಆಕಸ್ಮಿಕ ವಿದ್ಯುತ್ ಸ್ಪರ್ಶದಿಂದ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತನು ಇಬ್ಬರು ಪತ್ನಿಯರು ಮತ್ತು ಇಬ್ಬರು ಮಕ್ಕಳು, ಅಪಾರ ಬಂಧು ಮಿತ್ರರು, ಗ್ರಾಮಪಂಚಾಯಿತಿ ಸದಸ್ಯರ ಬಳಗವನ್ನು ಅಗಲಿದ್ದಾರೆ. ಈತನ ಆಕಸ್ಮಿಕ ಸಾವಿಗೆ ಕೂಡ್ಲಿಗಿ ತಾಲೂಕಿನ ಗ್ರಾಮಪಂಚಾಯಿತಿ ಸದಸ್ಯರ ಒಕ್ಕೂಟದ ಪದಾಧಿಕಾರಿಗಳು ಸಂತಾಪ ಸೂಚಿಸಿದ್ದಾರೆ.

belur road accident ksrtc bus and alto car accident 4 died

ಹಾಸನ ಬೇಲೂರು ನಡುವಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತ ಹೇಗಾಗಿರಬಹುದು ಎಂಬುದನ್ನು ಈ ಚಿತ್ರ ನೋಡಿದರೆ ಹೇಳಬಹುದು

ಇದನ್ನೂ ಓದಿ: ಪಾವಗಡ ಬಸ್ ಅಪಘಾತ ಪ್ರಕರಣ: ಬಸ್ ಚಾಲಕನಿಗೆ ಜಾಮೀನು ಮಂಜೂರು

ಇದನ್ನೂ ಓದಿ: ತುಮಕೂರು ಬಸ್ ಅಪಘಾತದಲ್ಲಿ ಮೃತಪಟ್ಟವರಿಗೆ ರಾಜ್ಯ ಸರ್ಕಾರ 25 ಲಕ್ಷ ರೂ. ಪರಿಹಾರ ನೀಡಬೇಕು: ಹೆಚ್​ಡಿ ಕುಮಾರಸ್ವಾಮಿ

Published On - 2:06 pm, Tue, 22 March 22

ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಆಂಟಿ ಕರೆದಳೆಂದು ಹೋದ ಯುವಕ ಆಸ್ಪತ್ರೆ ಪಾಲು, ಆಗಿದ್ದೇನು?
ಆಂಟಿ ಕರೆದಳೆಂದು ಹೋದ ಯುವಕ ಆಸ್ಪತ್ರೆ ಪಾಲು, ಆಗಿದ್ದೇನು?
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್