AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೇಲೂರು ಪುರಸಭೆ ಮಳಿಗೆ ವಿವಾದ: ಶಾಸಕ ಸುರೇಶ್, ಪುರಸಭೆ ಅಧಿಕಾರಿಗಳ ಹೆಸರು ಬರೆದಿಟ್ಟು ವರ್ತಕ ಆತ್ಮಹತ್ಯೆ

ಬೇಲೂರು ಪುರಸಭೆಯ ಅಂಗಡಿ ಮಳಿಗೆ ವಿವಾದ ವ್ಯಕ್ತಿಯೊಬ್ಬರ ಸಾವಿಗೆ ಕಾರಣವಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ವರ್ತಕ ನಾಗೇಶ್ ಎ.ಆರ್. ಬರೆದಿಟ್ಟ ಡೆತ್‌ನೋಟ್ ಆಧರಿಸಿ ಶಾಸಕ ಎಚ್.ಕೆ. ಸುರೇಶ್ ಸೇರಿದಂತೆ ಹಲವರ ವಿರುದ್ಧ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ. ಮಳಿಗೆಗೆ ಬೀಗ ಹಾಕಿದ ವಿಚಾರವಾಗಿ ಅಧಿಕಾರಿಗಳ ವಿರುದ್ಧ ಕಿರುಕುಳದ ಆರೋಪ ಕೇಳಿಬಂದಿದೆ.

ಬೇಲೂರು ಪುರಸಭೆ ಮಳಿಗೆ ವಿವಾದ: ಶಾಸಕ ಸುರೇಶ್, ಪುರಸಭೆ ಅಧಿಕಾರಿಗಳ ಹೆಸರು ಬರೆದಿಟ್ಟು ವರ್ತಕ ಆತ್ಮಹತ್ಯೆ
ಬೇಲೂರು ಶಾಸಕ ಎಚ್.ಕೆ. ಸುರೇಶ್ ಹಾಗೂ ಒಳಚಿತ್ರದಲ್ಲಿ ವರ್ತಕ ನಾಗೇಶ್Image Credit source: tv9
ಮಂಜುನಾಥ ಕೆಬಿ
| Edited By: |

Updated on: Oct 14, 2026 | 12:59 PM

Share

ಮುಖ್ಯಾಂಶಗಳು

  • ಮಳಿಗೆ ವಿವಾದದಲ್ಲಿ ಶಾಸಕ ಸೇರಿ ಹಲವರ ವಿರುದ್ಧ ಎಫ್‌ಐಆರ್
  • ಅಧಿಕಾರಿಗಳ ಕಿರುಕುಳದ ಆರೋಪ ಮಾಡಿದ ವರ್ತಕ
  • ಡೆತ್‌ನೋಟ್ ಆಧರಿಸಿ ಬೇಲೂರು ಪೊಲೀಸರಿಂದ ತನಿಖೆ

ಹಾಸನ, ಅಕ್ಟೋಬರ್ 14: ಪುರಸಭೆಯ ಅಂಗಡಿ ಮಳಿಗೆ ಬಾಡಿಗೆ ವಿಚಾರದಲ್ಲಿ ಅಧಿಕಾರಿಗಳಿಂದ ಕಿರುಕುಳವಾಗಿದೆ ಎಂದು ಆರೋಪಿಸಿ ಡೆತ್‌ನೋಟ್ ಬರೆದಿಟ್ಟು ಬೇಲೂರಿನ ವರ್ತಕ ನಾಗೇಶ್ ಎ.ಆರ್. ಆತ್ಮಹತ್ಯೆಗೆ ಶರಣಾಗಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬೇಲೂರು ಶಾಸಕ ಎಚ್.ಕೆ. ಸುರೇಶ್ ಸೇರಿದಂತೆ ಪುರಸಭೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ವಿರುದ್ಧ ಬೇಲೂರು ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ. ಪ್ರಕರಣದಲ್ಲಿ ಶಾಸಕ ಎಚ್.ಕೆ. ಸುರೇಶ್ ಏಳನೇ ಆರೋಪಿಯಾಗಿದ್ದಾರೆ.

ಬೇಲೂರು ಪುರಸಭೆ ಮಳಿಗೆ ವಿಚಾರವಾಗಿ ವಿವಾದ

ಬೇಲೂರು ಪುರಸಭೆಗೆ ಸೇರಿದ ಮಳಿಗೆ ಸಂಖ್ಯೆ 3 ಅನ್ನು ಉಮಾ ಎಂಬುವವರು ಹರಾಜಿನಲ್ಲಿ ಪಡೆದಿದ್ದರು. ಅವರ ಪತಿ ಸುರೇಶ್‌ಬಾಬು ಕೆಲ ವರ್ಷಗಳ ಹಿಂದೆ ನಿಧನರಾಗಿದ್ದರು. ಅನಾರೋಗ್ಯದ ಹಿನ್ನೆಲೆಯಲ್ಲಿ ಉಮಾ ಬೆಂಗಳೂರಿನಲ್ಲಿರುವ ತಮ್ಮ ಮಗಳ ಮನೆಯಲ್ಲಿ ವಾಸವಾಗಿದ್ದರು. ಈ ನಡುವೆ, ಕುಟುಂಬದ ಆತ್ಮೀಯರಾಗಿದ್ದ ನಾಗೇಶ್ ಎ.ಆರ್. ಅವರಿಗೆ ದಿನಸಿ ಅಂಗಡಿ ನಡೆಸಲು ಮಳಿಗೆಯನ್ನು ಲೀಸ್‌ಗೆ ನೀಡಿದ್ದರು. ಅಂಗಡಿಗಾಗಿ ನಾಗೇಶ್ ಹತ್ತು ಲಕ್ಷ ರೂಪಾಯಿಗೂ ಹೆಚ್ಚು ಬಂಡವಾಳ ಹೂಡಿದ್ದರು. ಈ ನಡುವೆ, ಪುರಸಭೆ ಅಧಿಕಾರಿಗಳು ಮಳಿಗೆಗಳ ಸಾರ್ವಜನಿಕ ಹರಾಜಿಗೆ ಮುಂದಾಗಿದ್ದರು. ಇದನ್ನು ಪ್ರಶ್ನಿಸಿ ಬಾಡಿಗೆದಾರರು ಹೈಕೋರ್ಟ್ ಮೆಟ್ಟಿಲೇರಿದ್ದರು. ಮುಂದಿನ ಆದೇಶದವರೆಗೆ ಹಾಗೂ ಸಾರ್ವಜನಿಕ ಬಹಿರಂಗ ಹರಾಜು ಪ್ರಕ್ರಿಯೆ ಪೂರ್ಣಗೊಳ್ಳುವವರೆಗೆ ಮಳಿಗೆಯನ್ನು ಖಾಲಿ ಮಾಡಿಸಬಾರದು ಎಂದು ಹೈಕೋರ್ಟ್ ಆದೇಶಿಸಿತ್ತು.

ಮಳಿಗೆಗೆ ಬೀಗ ಹಾಕಿದ್ದೇ ವಿವಾದಕ್ಕೆ ಕಾರಣ?

2026ರ ಜುಲೈ 20ರಂದು ಮಳಿಗೆಯನ್ನು ಖಾಲಿ ಮಾಡುವಂತೆ ಸೂಚಿಸಿ, ಬೇಲೂರು ಪುರಸಭೆಯ ಆರ್‌ಐ, ಆರ್‌ಒ, ಆರೋಗ್ಯ ನಿರೀಕ್ಷಕ ಹಾಗೂ ಇತರ ಸಿಬ್ಬಂದಿ ಮಳಿಗೆಗೆ ಬೀಗ ಹಾಕಿದ್ದರು ಎಂದು ಆರೋಪಿಸಲಾಗಿದೆ. ಬಳಿಕ ಮಳಿಗೆ ತೆರೆಯಲು ಅವಕಾಶ ನೀಡುವಂತೆ ನಾಗೇಶ್ ಅಧಿಕಾರಿಗಳನ್ನು ಹಲವು ಬಾರಿ ಭೇಟಿಯಾಗಿ ಮನವಿ ಮಾಡಿದ್ದರು. ಈ ವೇಳೆ ಶಾಸಕರ ಬಳಿ ತೆರಳಿ ಮಾತನಾಡುವಂತೆ ಅಧಿಕಾರಿಗಳು ಸೂಚಿಸಿದ್ದರು. ಅಲ್ಲದೆ, ಒಂದು ಲಕ್ಷ ರೂಪಾಯಿ ನೀಡಿದರೆ ಮಾತ್ರ ಮಳಿಗೆಯ ಕೀ ನೀಡುವುದಾಗಿ ಅಧಿಕಾರಿಗಳು ಹೇಳಿದ್ದರು ಎಂಬ ಆರೋಪವೂ ಕೇಳಿಬಂದಿದೆ. ಮಳಿಗೆಗೆ ಬೀಗ ಹಾಕಿದ್ದರಿಂದ ನಾಗೇಶ್ ತೀವ್ರವಾಗಿ ಮನನೊಂದಿದ್ದರು ಎಂದು ಅವರ ಕುಟುಂಬದವರು ದೂರಿದ್ದಾರೆ.

ಡೆತ್‌ನೋಟ್ ಆಧರಿಸಿ ಎಫ್‌ಐಆರ್

ಸೆಪ್ಟೆಂಬರ್ 12ರಂದು ಮನೆಯಲ್ಲಿ ಒಬ್ಬರೇ ಇದ್ದಾಗ ನಾಗೇಶ್ ಡೆತ್‌ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿದ್ದರು. ಸಾವಿಗೆ ಶಾಸಕ ಎಚ್.ಕೆ. ಸುರೇಶ್ ಅವರು ಮಳಿಗೆ ಸಂಖ್ಯೆ 3ರ ಕೀ ಕೊಡಿಸುವ ವಿಚಾರದಲ್ಲಿ ರಾಜಕೀಯ ಮಾಡಿದ್ದೇ ಕಾರಣ ಎಂದು ಡೆತ್‌ನೋಟ್‌ನಲ್ಲಿ ಉಲ್ಲೇಖಿಸಿರುವುದಾಗಿ ತಿಳಿದುಬಂದಿದೆ. ತಮ್ಮ ಸಾವಿನ ಬಳಿಕವೂ ರಾಜಕೀಯ ಮಾಡದೆ, ಮಳಿಗೆಯ ಕೀಯನ್ನು ಮಕ್ಕಳಿಗೆ ಕೊಡಿಸುವಂತೆ ಅವರು ಮನವಿ ಮಾಡಿದ್ದರು.

LIVE TV

ಡೆತ್‌ನೋಟ್‌ನಲ್ಲಿನ ಉಲ್ಲೇಖಗಳ ಆಧಾರದ ಮೇಲೆ ಬೇಲೂರು ಪೊಲೀಸರು ಶಾಸಕ ಎಚ್.ಕೆ. ಸುರೇಶ್, ಪುರಸಭೆಯ ಸಿಇಒ, ಆರ್‌ಐ, ಆರ್‌ಒ, ಆರೋಗ್ಯ ನಿರೀಕ್ಷಕ ಲೋಹಿತ್, ಬಿಲ್ ಕಲೆಕ್ಟರ್ ಸೇರಿದಂತೆ ಹಲವರ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ. ಘಟನೆ ಬೇಲೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಮಂಜುನಾಥ ಕೆಬಿ
ಮಂಜುನಾಥ ಕೆಬಿ

ಮಂಜುನಾಥ ಕೆಬಿ ಪತ್ರಿಕೋದ್ಯಮದಲ್ಲಿ ಕಳೆದ 17 ವರ್ಷಗಳಿಂದ ಸೇವೆ ಮಾಡುತ್ತಿದ್ದೇನೆ. ಕರುನಾಡಿನ ಹೆಮ್ಮೆಯ ಸುದ್ದಿ ವಾಹಿನಿ ಟಿವಿ9 ಕನ್ನಡ ಜೊತೆಗೆ 15ನೇ ವರ್ಷದ ಪಯಣ ನನ್ನದು. ಓದಿದ್ದು, ಮೈಸೂರು ವಿವಿಯಲ್ಲಿ ಕಾನೂನು ಪದವಿ, ಎರಡು ವರ್ಷ ವಕೀಲ ವೃತ್ತಿ ಬಳಿಕ ಮಾಧ್ಯಮ ಕ್ಷೇತ್ರಕ್ಕೆ ಆಗಮಿಸಿ ಟಿವಿ9 ವಾಹಿನಿ ಮೂಲಕ ಸಮಸ್ಯೆಗೆ ಧ್ವನಿಯಾಗಿ ಕಾಯಕ. ಕೊಡಗಿನಲ್ಲಿ ಐದುವರೆ ವರ್ಷ ವರದಿಗಾರನಾಗಿ ಕರ್ತವ್ಯ ನಿರ್ವಹಿಸಿದ್ದು, ಇದೀಗ ಹಾಸನದ ಹಿರಿಯ ವರದಿಗಾರನಾಗಿ ಕರ್ತವ್ಯ ನಿರ್ವಹಣೆ ಮಾಡುತ್ತಿದ್ದೇನೆ.

Read More
ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದ ಬಳಿ ಭಾರೀ ಅವಘಡ
ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದ ಬಳಿ ಭಾರೀ ಅವಘಡ
ನಿರ್ಬಂಧದ ನಡುವೆಯೂ ದಸರಾ ಆನೆಗಳ ಜೊತೆ ಶಾಸಕರ ಮಕ್ಕಳ ವಿಶೇಷ ಫೋಟೋಶೂಟ್!
ನಿರ್ಬಂಧದ ನಡುವೆಯೂ ದಸರಾ ಆನೆಗಳ ಜೊತೆ ಶಾಸಕರ ಮಕ್ಕಳ ವಿಶೇಷ ಫೋಟೋಶೂಟ್!
ಬಿಗ್ ಬಾಸ್ ಮನೆಯಲ್ಲಿ ಟಫ್ ಟಾಸ್ಕ್; ಹೈರಾಣಾದ ಸ್ಪರ್ಧಿಗಳು
ಬಿಗ್ ಬಾಸ್ ಮನೆಯಲ್ಲಿ ಟಫ್ ಟಾಸ್ಕ್; ಹೈರಾಣಾದ ಸ್ಪರ್ಧಿಗಳು
ದೇವನಹಳ್ಳಿ ಬಳಿ ಕಾರಿಗೆ ಲಾರಿ ಡಿಕ್ಕಿ; ಬಿಜೆಪಿ ಮುಖಂಡ ಶಿವಕುಮಾರ್ ಸಾವು!
ದೇವನಹಳ್ಳಿ ಬಳಿ ಕಾರಿಗೆ ಲಾರಿ ಡಿಕ್ಕಿ; ಬಿಜೆಪಿ ಮುಖಂಡ ಶಿವಕುಮಾರ್ ಸಾವು!
ಕಬ್ಬು ಬೆಳೆಗಾರರ ಅಹೋರಾತ್ರಿ ಧರಣಿ: ಹೆದ್ದಾರಿಯಲ್ಲೇ ಊಟ-ನಿದ್ದೆ!
ಕಬ್ಬು ಬೆಳೆಗಾರರ ಅಹೋರಾತ್ರಿ ಧರಣಿ: ಹೆದ್ದಾರಿಯಲ್ಲೇ ಊಟ-ನಿದ್ದೆ!
ಇಂದು ಕೂಷ್ಮಾಂಡ ದೇವಿಯ ಆರಾಧನೆಯಿಂದ ಚೈತನ್ಯ ವೃದ್ಧಿ
ಇಂದು ಕೂಷ್ಮಾಂಡ ದೇವಿಯ ಆರಾಧನೆಯಿಂದ ಚೈತನ್ಯ ವೃದ್ಧಿ
ಮುಖ್ಯರಸ್ತೆಗೆ ವೈದ್ಯಕೀಯ ತ್ಯಾಜ್ಯ ಸುರಿದ ಕ್ಲಿನಿಕ್‌ಗೆ 15 ಸಾವಿರ ರೂ.ದಂಡ
ಮುಖ್ಯರಸ್ತೆಗೆ ವೈದ್ಯಕೀಯ ತ್ಯಾಜ್ಯ ಸುರಿದ ಕ್ಲಿನಿಕ್‌ಗೆ 15 ಸಾವಿರ ರೂ.ದಂಡ
ಹನಿಟ್ರ್ಯಾಪ್ ವಿಡಿಯೋ ಭೀತಿ: ಮಾಧ್ಯಮಗಳ ವಿರುದ್ಧ ಮಾಜಿ ಸಿಎಂ ನಿರ್ಬಂಧಕಾಜ್ಞೆ
ಹನಿಟ್ರ್ಯಾಪ್ ವಿಡಿಯೋ ಭೀತಿ: ಮಾಧ್ಯಮಗಳ ವಿರುದ್ಧ ಮಾಜಿ ಸಿಎಂ ನಿರ್ಬಂಧಕಾಜ್ಞೆ
ಚಿತ್ರದುರ್ಗಕ್ಕೆ ಸುದೀಪ್ ಭೇಟಿ: ಚಪ್ಪಲಿ ಧರಿಸದೇ ನಡೆದುಬಂದ ನಟ
ಚಿತ್ರದುರ್ಗಕ್ಕೆ ಸುದೀಪ್ ಭೇಟಿ: ಚಪ್ಪಲಿ ಧರಿಸದೇ ನಡೆದುಬಂದ ನಟ
ಸೌಜನ್ಯ ಪ್ರಕರಣ ಮರು ತನಿಖೆ ಬಗ್ಗೆ ಎಸ್​​ಐಟಿಯಿಂದ ಹೈವೋಲ್ಟೇಜ್ ಸಭೆ
ಸೌಜನ್ಯ ಪ್ರಕರಣ ಮರು ತನಿಖೆ ಬಗ್ಗೆ ಎಸ್​​ಐಟಿಯಿಂದ ಹೈವೋಲ್ಟೇಜ್ ಸಭೆ