ಶಿರಾಡಿ ಘಾಟ್​​​ನಲ್ಲಿ ಸಂಚಾರ ಬಂದ್, ಟ್ರಾಫಿಕ್ ಜಾಮ್: ಅತ್ತ ಚಾರ್ಮಾಡಿ ಘಾಟ್​ನಲ್ಲೂ ಪ್ರಯಾಣ ದುಸ್ತರ

ಕಳೆದ ಕೆಲವು ದಿನಗಳಿಂದ ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಮಂಗಳೂರು ಬೆಂಗಳೂರು ನಡುವಣ ರಾಷ್ಟ್ರೀಯ ಹೆದ್ದಾರಿಯ ಶಿರಾಡಿ ಘಾಟ್ ಪ್ರದೇಶದಲ್ಲಿ ಸಂಚಾರಕ್ಕೆ ಅಡ್ಡಿಯಾಗಿದೆ. ಗುಡ್ಡ ಕುಸಿದ ಪರಿಣಾಮ ವಾಹನ ಸಂಚಾರ ತಾತ್ಕಾಲಿಕ ಬಂದ್ ಆಗಿದ್ದು, ವಾಹನಗಳನ್ನು ಹಾಸನದ ಕಂದಲಿ ಗ್ರಾಮದ ಬಳಿ ಅರ್ಧದಲ್ಲಿಯೇ ತಡೆದು ವಾಪಸ್ ಕಳುಹಿಸಲಾಗುತ್ತಿದೆ.

ಶಿರಾಡಿ ಘಾಟ್​​​ನಲ್ಲಿ ಸಂಚಾರ ಬಂದ್, ಟ್ರಾಫಿಕ್ ಜಾಮ್: ಅತ್ತ ಚಾರ್ಮಾಡಿ ಘಾಟ್​ನಲ್ಲೂ ಪ್ರಯಾಣ ದುಸ್ತರ
ಶಿರಾಡಿ ಘಾಟ್​​​ನಲ್ಲಿ ಸಂಚಾರ ಬಂದ್, ಟ್ರಾಫಿಕ್ ಜಾಮ್
Follow us
ಮಂಜುನಾಥ ಕೆಬಿ
| Updated By: Ganapathi Sharma

Updated on: Jul 18, 2024 | 10:31 AM

ಹಾಸನ, ಜುಲೈ: ಹಾಸನ ಹಾಸನ‌ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ಶಿರಾಡಿಘಾಟ್​​ನಲ್ಲಿ ಗುಡ್ಡ ಕುಸಿತ ಸಂಭವಿಸಿದ್ದು ವಾಹನ ಸಂಚಾರ ತಾತ್ಕಾಲಿಕವಾಗಿ ಸ್ಥಗಿತಗೊಂಡಿದೆ. ಇಂದು ಮುಂಜಾನೆ ದೊಡ್ಡತಪ್ಲು ಬಳಿ ಗುಡ್ಡ ಕುಸಿತ ಸಂಭವಿಸಿದೆ. ಗುಡ್ಡ ಕುಸಿತದಿಂದ ಸುಮಾರು 10 ಕಿಮೀ ಟ್ರಾಫಿಕ್ ಜಾಮ್ ಉಂಟಾಗಿದೆ. ಟ್ರಾಫಿಕ್ ಜಾಮ್ ಹಿನ್ನೆಲೆಯಲ್ಲಿ ಟ್ರಕ್, ಲಾರಿ ಟ್ಯಾಕರ್ ಓಡಾಟಕ್ಕೆ ತಾತ್ಕಾಲಿಕ ತಡೆ ಹೇರಲಾಗಿದೆ.

ಹಾಸನದ ಕಂದಲಿ ಗ್ರಾಮದ ಬಳಿಯೇ ಪೊಲೀಸರು ವಾಹನಗಳನ್ನು ತಡೆಯುತ್ತಿದ್ದಾರೆ. ಅತ್ತ ಚಾರ್ಮಾಡಿ ಘಾಟ್ ರಸ್ತೆಯಲ್ಲೂ ಪ್ರಯಾಣ ದುಸ್ತರವಾಗಿದ್ದು, ಹಾಸನ ಬಳಿಯೇ ವಾಹನ ನಿಲ್ಲಿಸಲು ಪೊಲೀಸರು ಸೂಚನೆ ನೀಡುತ್ತಿದ್ದಾರೆ.

ಮಂಗಳೂರು ಬಸ್​​ಗಳ ಸಂಚಾರಕ್ಕೆ ತಡೆ

ಸಕಲೇಶಪುರದ ವರೆಗೆ ತೆರಳುವ ಸಾರಿಗೆ ಬಸ್​​ಗಳಿಗೆ ಮಾತ್ರ ತೆರಳಲು ಅವಕಾಶ ನೀಡಲಾಗುತ್ತಿದೆ. ಮಂಗಳೂರು ಕಡೆಗೆ ಹೋಗುವ ಬಸ್​​​ಗಳಿಗೂ ಹಾಸನ ತಾಲ್ಲೂಕಿನ ಕಂದಲಿ ಬಳಿ ತಡೆಯೊಡ್ಡಲಾಗುತ್ತಿದೆ. ವಾಹನಗಳನ್ನು ತಡೆದು ಗುಡ್ಡ ಕುಸಿತದ ಬಗ್ಗೆ ಮಾಹಿತಿ ನೀಡಿ ವಾಪಸ್ ಕಳುಹಿಸಲಾಗುತ್ತಿದೆ. ರಸ್ತೆಗೆ ಬ್ಯಾರಿಕೇಡ್ ಹಾಕಿ ವಾಹನಗಳಿಗೆ ತಡೆಯೊಡ್ಡಲಾಗುತ್ತಿದೆ.

ರಸ್ತೆಗೆ ಕುಸಿದ ಮಣ್ಣು ತೆರವು ಮಾಡಿದ ಬಳಿಕ ವಾಹನ ಸಂಚಾರಕ್ಕೆ ಅವಕಾಶ ನೀಡುವ ಸಾಧ್ಯತೆ ಇದೆ.

ಇದನ್ನೂ ಓದಿ: ಶಿರಾಡಿಘಾಟ್​​ನಲ್ಲಿ ಚಲಿಸುತ್ತಿದ್ದ ಕಾರಿನ ಮೇಲೆ ಕುಸಿದ ಗುಡ್ಡ, ವಾಹನ ಸಂಚಾರ ಬಂದ್​​​​​

ದೊಡ್ಡತಪ್ಲು ಬಳಿಯ ಶಿರಾಡಿಘಾಟ್ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ತಡರಾತ್ರಿ ಚಲಿಸುತ್ತಿದ್ದ ಓಮಿನಿ ಕಾರಿನ ಮೇಲೆ ಗುಡ್ಡ ಕುಸಿದ ಘಟನೆ ಸಂಭವಿಸಿತ್ತು. ಅದೃಷ್ಟವಶಾತ್ ಕಾರಿನಲ್ಲಿದ್ದವರು ಸಣ್ಣ ಪುಟ್ಟ ಗಾಯಗಳೊಂದಿಗೆ ಪಾರಾಗಿದ್ದರು.

ನೇತ್ರಾವತಿ ನದಿ ಹರಿವು ಏರಿಕೆ

ಪಶ್ಚಿಮಘಟ್ಟ ಪ್ರದೇಶದಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ದಕ್ಷಿಣಕನ್ನಡ ಜಿಲ್ಲೆಯ ಜೀವನದಿ ನೇತ್ರಾವತಿಯಲ್ಲಿ ನೀರಿ‌ನ ಮಟ್ಟ ಏರಿಕೆಯಾಗಿದೆ. ಸದ್ಯ ನದಿ ನೀರಿನ ಮಟ್ಟ 7.8 ಮೀಟರ್​​​ಗೆ ಏರಿಕೆ ಕಂಡಿದೆ. 8.5 ಮೀಟರ್ ಅಪಾಯದ ಮಟ್ಟವಾಗಿದೆ. ನದಿ ನೀರು ಏರಿಕೆಯಿಂದ ಬಂಟ್ವಾಳದ ಪಾಣೆಮಂಗಳೂರಿನ ಆಲಡ್ಕ ಎಂಬಲ್ಲಿ ಮೈದಾನಕ್ಕೆ ನೀರು ನುಗ್ಗಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಆಲಡ್ಕದ ಸುಮಾರು 10 ಜನರ ಸ್ಥಳಾಂತರ ಮಾಡಲಾಗಿದೆ. ನದಿ ತೀರದಲ್ಲಿರುವ ಜನರು ಎಚ್ಚರಿಕೆಯಿಂದ ಇರುವಂತೆ ಜಿಲ್ಲಾಡಳಿತ ಸೂಚನೆ ನೀಡಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ