ಹಳ್ಳಕ್ಕೆ ಬಿದ್ದ ಟೂರಿಸ್ಟ್ ಬಸ್: ಓರ್ವ ಮಹಿಳೆ ಸಾವು, 20ಕ್ಕೂ ಹೆಚ್ಚು ಜನರಿಗೆ ಗಾಯ

ಪ್ರವಾಸಕ್ಕೆ ಹೋಗಿದ್ದ ಬೆಂಗಳೂರು ಮೂಲದ ಜನರಿದ್ದ ಖಾಸಗಿ ಬಸ್​ವೊಂದು ಹಾಸನದ ಬೇಲೂರು ಬಳಿ ಚಾಲಕನ ನಿಯಂತ್ರಣ ತಪ್ಪಿ ಹಳ್ಳಿ ಬಿದ್ದಿದೆ. ಪರಿಣಾಮ ಓರ್ವ ಮಹಿಳೆ ಸಾವನ್ನಪ್ಪಿದ್ದು, ಹಲವರಿಗೆ ಗಾಯಗಳಾಗಿವೆ.

ಹಳ್ಳಕ್ಕೆ ಬಿದ್ದ ಟೂರಿಸ್ಟ್ ಬಸ್:  ಓರ್ವ ಮಹಿಳೆ ಸಾವು, 20ಕ್ಕೂ ಹೆಚ್ಚು ಜನರಿಗೆ ಗಾಯ
Follow us
| Updated By: ರಮೇಶ್ ಬಿ. ಜವಳಗೇರಾ

Updated on:Nov 04, 2023 | 8:38 AM

ಹಾಸನ, (ನವೆಂಬರ್ 04): ಬೆಂಗಳೂರಿನಿಂದ ಪ್ರವಾಸಕ್ಕೆ ತೆರಳುತ್ತಿದ್ದ ಖಾಸಗಿ ಬಸ್ (private  Bus) ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಬಿದ್ದಿದ್ದೆ. ಹಾಸನ ಜಿಲ್ಲೆ ಬೇಲೂರು ತಾಲ್ಲೂಕಿನ ಕಸ್ಕೆ ಬಯಲು ಗ್ರಾಮದ ಬಳಿ ಈ ದುರ್ಘಟನೆ ನಡೆದಿದ್ದು, ಪರಿಣಾಮ ಸ್ಥಳದಲ್ಲಿ ಓರ್ವ ಮಹಿಳೆ ಮೃತಪಟ್ಟಿದ್ದರೆ, 20ಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿವೆ. ಕೆ.ಆರ್.ಪುರಂನ ಸುರೇಖಾ (45) ಮೃತ ಮಹಿಳೆ. ಇನ್ನು ಗಾಯಗೊಂಡವರಲ್ಲಿ ಏಳು ಜನರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ. 48ಕ್ಕೂ ಹೆಚ್ಚು ಪ್ರವಾಸಿಗರು ಬಸ್ಸಿನಲ್ಲಿದ್ದು, ಬೆಂಗಳೂರು-ಹಾಸನ-ಮೂಡಿಗೆರೆ ಮಾರ್ಗವಾಗಿ ಹೊರನಾಡಿಗೆ ಹೋಗುತ್ತಿತ್ತು. ಆದ್ರೆ, ಇಂದು (ನವೆಂಬರ್ 04) ಬೆಳಗಿನ ಜಾವ 4:45 ಸಮಯದಲ್ಲಿ ಹಳ್ಳಕ್ಕೆ ಬಿದ್ದಿದೆ.

ಬೆಂಗಳೂರಿನ ರಾಜನಗುಂಟೆಯಿಂದ 25 ಮಂದಿ ಹಾಗೂ ಕೆ.ಆರ್.ಪುರಂನಿಂದ 25 ಮಂದಿ ಸೇರಿಕೊಂಡು ಖಾಸಗಿ ಬಸ್​ನಲ್ಲಿ ಪ್ರವಾಸಕ್ಕೆ ಹೋಗಿದ್ದರು. ಧರ್ಮಸ್ಥಳ, ಸುಬ್ರಹ್ಮಣ್ಯ, ಶೃಂಗೇರಿಗೆ ಪ್ರವಾಸಕ್ಕೆ ಹೊರಟ್ಟಿದ್ದಾಗ ಬೇಲೂರು ತಾಲ್ಲೂಕಿನ ಕಸ್ಕೆ ಬಯಲು ಗ್ರಾಮದ ಬಳಿ ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಬಿದ್ದಿದೆ. ಸದ್ಯ ಗಾಯಾಳುಗಳನ್ನು ಬೇಲೂರು ತಾಲ್ಲೂಕು ಆಸ್ಪತ್ರೆ ಹಾಗೂ ಹಾಸನ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ. ಇನ್ನು ವಿಷಯ ತಿಳಿದು ಸ್ಥಳಕ್ಕೆ ಬೇಲೂರು ಪೊಲೀಸ್ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದರು.

ಇದೇ ಜಾಗದಲ್ಲಿ 70ಕ್ಕೂ ಹೆಚ್ಚು ಅಪಘಾತಗಳು ಸಂಭವಿಸಿವೆ. ಇದರಿಂದ ಹಳಕ್ಕೆ ತಡೆಗೋಡೆ ನಿರ್ಮಿಸುವಂತೆ ಸ್ಥಳೀಯರು ಹತ್ತಾರು ಬಾರಿ ಅಧಿಕಾರಿಗಳಿಗೆ ಮನವಿ ಮಾಡಿದ್ದಾರೆ. ಆದರೂ ಸಹ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದ್ದರಿಂದ ಪದೇ ಪದೇ ಅಪಘಾತಗಳು ಸಂಭವಿಸುತ್ತಲೇ ಇವೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 7:34 am, Sat, 4 November 23