AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

EV Charging Stations: ಕರ್ನಾಟಕದಲ್ಲಿ ಶೀಘ್ರ ಒಂದು ಸಾವಿರ ಚಾರ್ಜಿಂಗ್ ಪಾಯಿಂಟ್ ಆರಂಭ; ಇಂಧನ ಸಚಿವ ಸುನಿಲ್ ಕುಮಾರ್

ಜೂನ್ 24ರಿಂದ ರಾಜ್ಯಾದ್ಯಂತ ಅಭಿಯಾನ ಆರಂಭವಾಗಲಿದ್ದು, ಮೂರುವರೆ ಸಾವಿರ ಪ್ಲಗ್ ಪಾಯಿಂಟ್ ರೂಪಿಸುವ ಉದ್ದೇಶವನ್ನು ಹೊಂದಿದ್ದೇವೆ ಎಂದು ಸಚಿವರು ಹೇಳಿದರು.

EV Charging Stations: ಕರ್ನಾಟಕದಲ್ಲಿ ಶೀಘ್ರ ಒಂದು ಸಾವಿರ ಚಾರ್ಜಿಂಗ್ ಪಾಯಿಂಟ್ ಆರಂಭ; ಇಂಧನ ಸಚಿವ ಸುನಿಲ್ ಕುಮಾರ್
ಬೆಸ್ಕಾಂ ಸ್ಥಾಪಿಸಿರುವ ಇವಿ ಚಾರ್ಜಿಂಗ್ ಸ್ಟೇಷನ್, ಇಂಧನ ಸಚಿವ ವಿ.ಸುನಿಲ್​ಕುಮಾರ್
TV9 Web
| Edited By: |

Updated on:Jun 08, 2022 | 4:04 PM

Share

ಹಾಸನ: ಕರ್ನಾಟಕದಲ್ಲಿ ವಿದ್ಯುತ್ ವಾಹನಗಳು ಸುಲಭವಾಗಿ ಚಾರ್ಜ್ (EV Charging Stations) ಮಾಡಲು ಅನುಕೂಲ ಕಲ್ಪಿಸುವ 1,000 ಚಾರ್ಜಿಂಗ್ ಸ್ಟೇಷನ್​ಗಳನ್ನು ಶೀಘ್ರ ಆರಂಭಿಸಲಾಗುವುದು. ಜೂನ್ 24ರಿಂದ ರಾಜ್ಯಾದ್ಯಂತ ಅಭಿಯಾನ ಆರಂಭವಾಗಲಿದ್ದು, ಮೂರುವರೆ ಸಾವಿರ ಪ್ಲಗ್ ಪಾಯಿಂಟ್ ರೂಪಿಸುವ ಉದ್ದೇಶವನ್ನು ಹೊಂದಿದ್ದೇವೆ. ರಾಜ್ಯದ ಪ್ರತಿ ಜಿಲ್ಲಾ ಕೇಂದ್ರ, ಪ್ರವಾಸಿ ತಾಣ, ರಾಷ್ಟ್ರೀಯ ಹೆದ್ದಾರಿಗಳಲ್ಲಿ ಚಾರ್ಜಿಂಗ್ ಸೆಂಟರ್ ಆರಂಭಿಸಲಾಗುವುದು ಎಂದು ಹಾಸನದಲ್ಲಿ ಇಂಧನ ಸಚಿವ ಸುನಿಲ್ ಕುಮಾರ್  (V Sunil Kumar) ಹೇಳಿದರು. ದ್ವಿಚಕ್ರ ವಾಹನಗಳೂ ಸೇರಿದಂತೆ ವಿದ್ಯುತ್ ವಾಹನಗಳು ದೊಡ್ಡ ಪ್ರಮಾಣದಲ್ಲಿ ಬರುತ್ತಿವೆ. ದೇಶದಲ್ಲಿ ಅತಿಹೆಚ್ಚು ಇವಿ ಚಾರ್ಜರ್ ಕೇಂದ್ರಗಳನ್ನು ಹೊಂದಿರುವ ರಾಜ್ಯವಾಗಿ ಕರ್ನಾಟಕ ಇರಬೇಕು ಎನ್ನುವುದು ನಮ್ಮ ಉದ್ದೇಶ. ಇದಕ್ಕಾಗಿ ಹಲವು ಯೋಜನೆ ರೂಪಿಸಿದ್ದೇವೆ ಎಂದು ಹೇಳಿದರು.

ಪಠ್ಯ ಪುಸ್ತಕ ವಿಚಾರ ಕುರಿತು ಪ್ರತಿಕ್ರಿಯಿಸಿದ ಅವರು, ಕಾಂಗ್ರೆಸ್ ಹಾಗೂ ಇತರ ಪಕ್ಷಗಳ ನಾಯಕರು ಅನಗತ್ಯವಾಗಿ ವಿವಾದ ಹುಟ್ಟು ಹಾಕುತ್ತಿದ್ದಾರೆ. ಮುಕ್ತ ಮನಸ್ಸಿನಿಂದ ಲೋಪದೋಷಗಳನ್ನು ಸರಿಮಾಡಿಕೊಳ್ಳಲು ಸಿದ್ಧ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಕೆಲವು ಸತ್ಯ ಸಂಗತಿಗಳು ಕೆಲವರಿಗೆ ಕಹಿಯಾಗಿ ಕಾಣುತ್ತವೆ. ಅದಕ್ಕೆ ನಾವು ಏನೂ ಮಾಡಲು ಆಗುವುದಿಲ್ಲ. ಕೆಲವರಿಗೆ ಕಹಿಯಾಗಿ ಕಾಣುತ್ತೆ ಎಂದು ಸತ್ಯ ಮುಚ್ಚಿಡಲು ಸಾಧ್ಯವಿಲ್ಲ. ಯಾವ ಸತ್ಯ ಸಂಗತಿಗಳನ್ನು ಇತಿಹಾಸದಲ್ಲಿ ಮುಚ್ಚಿಡಲಾಗಿತ್ತೊ ಅದನ್ನು ತಿಳಿಸುವ ಪ್ರಯತ್ನ ಆಗಿದೆ. ಕೆಲವು ಸಾಲುಗಳಲ್ಲಿ ಲೋಪದೋಷ ಆಗಿರಬಹುದು ಅದನ್ನ ಸರಿಮಾಡೋದಾಗಿ ಸ್ವತಃ ಸಿಎಂ ಹೇಳಿದ್ದಾರೆ ಎಂದರು.

ರಾಜ್ಯದಲ್ಲಿ ಯಾವುದೇ ವಿವಾದಗಳು ಇಲ್ಲ ಎನ್ನುವ ಕಾರಣಕ್ಕೆ ವಿವಾದಗಳನ್ನು ಹುಟ್ಟು ಹಾಕಲಾಗುತ್ತಿದೆ. ರಾಜ್ಯದಲ್ಲಿ ಒಂದು ಒಳ್ಳೆಯ ಸರ್ಕಾರದ ಆಡಳಿತ ನಡೆಯುತ್ತಿದೆ. ಇಂತಹ ವೇಳೆಯಲ್ಲಿ ಆಡಳಿತದ ಮೇಲೆ ಜನರ ಲಕ್ಷ್ಯ ದೂರಮಾಡಿ ವಿವಾದದ ಮೂಲಕ ತಮ್ಮ ಇರುವಿಕೆ ತೋರಿಸಲು ಹೊರಟಿದ್ದಾರೆ. ಇದು ಬಹಳ ದಿನ ನಡೆಯಲು ಸಾದ್ಯವಿಲ್ಲ. ನಾವು ಬಜೆಟ್​ನಲ್ಲಿ ಘೋಷಣೆ ಮಾಡಿದ ವಿಚಾರಗಳು ಸರ್ಕಾರಿ ಆದೇಶವಾಗಿ ಬರುತ್ತಿವೆ. ಜನರ ಭಾವನೆಗಳೊಂದಿಗೆ ಕಾಂಗ್ರೆಸ್ ಆಟವಾಡುತ್ತಿದೆ ಎಂದರು.

ಕರ್ನಾಟಕದ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ. ದೇಶದ ಇತರ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ ಪ್ರಮುಖ  ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 3:55 pm, Wed, 8 June 22

Follow Us
TV9 Web
TV9 Web

TV9 Kannada

Read More
ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ