ಮಹಿಳಾ ದೌರ್ಜನ್ಯ ತಡೆಗೆ ಆಗ್ರಹಿಸಿ ವಿದ್ಯಾರ್ಥಿಯಿಂದ ಸೈಕಲ್ ಜಾಥಾ; ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಕೆ
ಮಹಿಳಾ ದೌರ್ಜನ್ಯ ಎಸಗುವವರ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿ, ಪ್ರಥಮ ಬಿಎ ಓದುತ್ತಿರುವ ಬೆಂಗಳೂರು ಮೂಲದ ವಿದ್ಯಾರ್ಥಿ ಕಿರಣ್. ವಿ ಮನವಿ ಸಲ್ಲಿಸಿದ್ದಾರೆ. ಇತ್ತೀಚೆಗೆ ಅತ್ಯಾಚಾರ ಪ್ರಕರಣ ಹೆಚ್ಚುತ್ತಿವೆ. ಅತ್ಯಾಚಾರಿಗಳಿಗೆ ಗಲ್ಲು ಶಿಕ್ಷೆಯಾಗಲಿ ಎಂದು ಆಗ್ರಹಿಸಿ ಸೈಕಲ್ ಜಾಥಾ ನಡೆಸುತ್ತಿದ್ದಾರೆ.
ಹಾಸನ: ಮಹಿಳಾ ದೌರ್ಜನ್ಯ ತಡೆಗೆ ಆಗ್ರಹಿಸಿ ವಿದ್ಯಾರ್ಥಿ ಸೈಕಲ್ ಜಾಥಾ ನಡೆಸಿದ್ದಾರೆ. ಬೆಂಗಳೂರಿನ ಬನ್ನೇರುಘಟ್ಟದ ಬಸವಾಪುರ ವಿದ್ಯಾರ್ಥಿ ಕಿರಣ್ ಸೈಕಲ್ ಜಾಥಾ ಮೂಲಕ ಜಾಗೃತಿ ಮೂಡಿಸುವ ಕಾರ್ಯ ಮಾಡುತ್ತಿದ್ದಾರೆ. ರಾಜ್ಯದ ಎಲ್ಲಾ ಜಿಲ್ಲೆಗಳಿಗೂ ತೆರಳಿ ವಿದ್ಯಾರ್ಥಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದು, ಒಟ್ಟು 3500 ಕಿಲೋ ಮೀಟರ್ ಸೈಕಲ್ ಜಾಥಾ ನಡೆಸುತ್ತಿದ್ದಾರೆ. ಸದ್ಯ ವಿದ್ಯಾರ್ಥಿ ಕಿರಣ್ 24 ಜಿಲ್ಲೆ ಪೂರೈಸಿ 25ನೇ ಜಿಲ್ಲೆಯಾಗಿ ಹಾಸನಕ್ಕೆ ಭೇಟಿ ನೀಡಿದ್ದಾರೆ.
ಸೈಕಲ್ನಲ್ಲಿಯೇ ಹಾಸನಕ್ಕೆ ಬಂದ ವಿದ್ಯಾರ್ಥಿ ಕಿರಣ್ ಡಿಸಿ ಕಛೇರಿಗೆ ಬಂದು ಮನವಿ ಸಲ್ಲಿಸಿದ್ದಾರೆ. ಮಹಿಳಾ ದೌರ್ಜನ್ಯ ಎಸಗುವವರ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿ, ಪ್ರಥಮ ಬಿಎ ಓದುತ್ತಿರುವ ಬೆಂಗಳೂರು ಮೂಲದ ವಿದ್ಯಾರ್ಥಿ ಕಿರಣ್. ವಿ ಮನವಿ ಸಲ್ಲಿಸಿದ್ದಾರೆ. ಇತ್ತೀಚೆಗೆ ಅತ್ಯಾಚಾರ ಪ್ರಕರಣ ಹೆಚ್ಚುತ್ತಿವೆ. ಅತ್ಯಾಚಾರಿಗಳಿಗೆ ಗಲ್ಲು ಶಿಕ್ಷೆಯಾಗಲಿ ಎಂದು ಆಗ್ರಹಿಸಿ ಸೈಕಲ್ ಜಾಥಾ ನಡೆಸುತ್ತಿದ್ದಾರೆ.
ಇದನ್ನೂ ಓದಿ: ಬೆಂಗಳೂರಿನಲ್ಲಿಂದು ಸಾಲು ಸಾಲು ಪ್ರತಿಭಟನೆ; ಟ್ರಾಫಿಕ್ ಸಮಸ್ಯೆ ಸಾಧ್ಯತೆ ಹೆಚ್ಚು
ಸ್ವಾತಂತ್ರ್ಯದ ಅಮೃತ ಮಹೋತ್ಸವ; ಶಾಸಕ ಎಂ.ಪಿ. ರೇಣುಕಾಚಾರ್ಯ, ಅಧಿಕಾರಿಗಳಿಂದ ಕಾಲ್ನಡಿಗೆ, ಸೈಕಲ್ ಜಾಥಾ