Hassan Accident: ಕಾರು-ಬೈಕ್ ಮುಖಾಮುಖಿ ಡಿಕ್ಕಿ; ಬೈಕ್ ಸವಾರ ಸಾವು, ಕಾರು ಚಾಲಕ ಎಸ್ಕೇಪ್

ಎದುರಿನಿಂದ ಬರುತ್ತಿದ್ದ ಬೈಕ್ಗೆ ಅಜಾಗರೂಕತೆಯಿಂದ ಬಂದ ಕಾರು ಡಿಕ್ಕಿ ಹೊಡೆದಿದೆ. ಈ ಪರಿಣಾಮ ಬೈಕ್ ಚಾಲಕನ ಪ್ರಾಣ ಪಕ್ಷಿ ಹಾರಿಹೋಗಿದೆ. ಆದ್ರೆ ಕಾರು ಚಾಲಕ ಸಿಕ್ಕಿ ಹಾಕಿಕೊಳ್ಳುವ ಭಯದಲ್ಲಿ ಕಾರನ್ನು ರಸ್ತೆಯಲ್ಲೇ ಬಿಟ್ಟು ಪರಾರಿಯಾಗಿದ್ದಾನೆ.

Hassan Accident: ಕಾರು-ಬೈಕ್ ಮುಖಾಮುಖಿ ಡಿಕ್ಕಿ; ಬೈಕ್ ಸವಾರ ಸಾವು, ಕಾರು ಚಾಲಕ ಎಸ್ಕೇಪ್
ಕಾರು-ಬೈಕ್ ಮುಖಾಮುಖಿ ಡಿಕ್ಕಿ
Edited By:

Updated on: Aug 13, 2021 | 12:28 PM

ಹಾಸನ: ಕಾರು ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿದ್ದು ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಭೀಕರ ಘಟನೆ ಹಾಸನ ಜಿಲ್ಲೆ ಆಲೂರು ತಾಲೂಕಿನ ಬೈರಾಪುರ ಬಳಿ ನಡೆದಿದೆ. ಅಪಘಾತದ ಬಳಿಕ ಕಾರು ಬಿಟ್ಟು ಚಾಲಕ ಎಸ್ಕೇಪ್ ಆಗಿದ್ದಾನೆ. ಸರ್ವೆ ಆಫೀಸ್ನಲ್ಲಿ ಕೆಲಸ ಮಾಡುತ್ತಿದ್ದ ಮಂಜುನಾಥ್(40) ಮೃತ ದುರ್ದೈವಿ.

ಎದುರಿನಿಂದ ಬರುತ್ತಿದ್ದ ಬೈಕ್ಗೆ ಅಜಾಗರೂಕತೆಯಿಂದ ಬಂದ ಕಾರು ಡಿಕ್ಕಿ ಹೊಡೆದಿದೆ. ಈ ಪರಿಣಾಮ ಬೈಕ್ ಚಾಲಕನ ಪ್ರಾಣ ಪಕ್ಷಿ ಹಾರಿಹೋಗಿದೆ. ಆದ್ರೆ ಕಾರು ಚಾಲಕ ಸಿಕ್ಕಿ ಹಾಕಿಕೊಳ್ಳುವ ಭಯದಲ್ಲಿ ಕಾರನ್ನು ರಸ್ತೆಯಲ್ಲೇ ಬಿಟ್ಟು ಪರಾರಿಯಾಗಿದ್ದಾನೆ. ಕಾರು ಚಾಲಕನ ಬೇಜವಾಬ್ದಾರಿತನದ ಚಾಲನೆಗೆ ಅಮಾಯಕ ಬೈಕ್ ಸವಾರ ಮೃತಪಟ್ಟಿದ್ದಾನೆ. ಭೀಕರ ಅಪಘಾತದ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ಆಗಸ್ಟ್ 10 ರಂದು ನಡೆದ ಭೀಕರ ಅಪಘಾತದ ವಿಡಿಯೋ ಈಗ ವೈರಲ್ ಆಗಿದೆ. ಆಲೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ಅಪಘಾತಕ್ಕೆ ಕಾರಣವಾದ ಕಾರನ್ನು ವಶಕ್ಕೆ ಪಡೆದು ಪೊಲೀಸರು ಆರೋಪಿ ಪತ್ತೆಗೆ ಮುಂದಾಗಿದ್ದಾರೆ.

ಕಾರು-ಬೈಕ್ ಮುಖಾಮುಖಿ ಡಿಕ್ಕಿ; ಬೈಕ್ ಸವಾರ ಸಾವು, ಕಾರು ಚಾಲಕ ಎಸ್ಕೇಪ್

ಇದನ್ನೂ ಓದಿ: ಕೊಪ್ಪಳದಲ್ಲಿ ಎರಡು ಲಾರಿಗಳ ನಡುವೆ ಅಪಘಾತ; ಲಾರಿಗಳ ನಡುವಲ್ಲಿ ಸಿಕ್ಕಿಕೊಂಡ ನಾಲ್ವರು