ನೈಟ್ ಕರ್ಫ್ಯೂ ನಡುವೆ ಹಾಸನ ಬಿಜೆಪಿ ಜಿಲ್ಲಾಧ್ಯಕ್ಷನ ಭರ್ಜರಿ ಬರ್ತಡೇ ಪಾರ್ಟಿ; ಸಾಮಾಜಿಕ ಜಾಲತಾಣದಲ್ಲಿ ಜನರ ಆಕ್ರೋಶ

ಕೊವಿಡ್ ನಿಯಮಗಳನ್ನು ಉಲ್ಲಂಘಿಸಿ ಹುಟ್ಟುಹಬ್ಬದ ವೇಳೆ ಮೆರವಣಿಗೆ ಮಾಡಲಾಗಿದೆ. ರಾತ್ರಿ ನೈಟ್ ಕರ್ಫ್ಯೂ ನಡುವೆಯೂ ಅಭಿಮಾನಿಗಳು ಡಿಜೆ ಪಾರ್ಟಿ ಮಾಡಿದ್ದು, ಈ ವೇಳೆ ಟ್ರಾಫಿಕ್ ಜಾಮ್ ಆಗಿತ್ತು.

ನೈಟ್ ಕರ್ಫ್ಯೂ ನಡುವೆ ಹಾಸನ ಬಿಜೆಪಿ ಜಿಲ್ಲಾಧ್ಯಕ್ಷನ ಭರ್ಜರಿ ಬರ್ತಡೇ ಪಾರ್ಟಿ; ಸಾಮಾಜಿಕ ಜಾಲತಾಣದಲ್ಲಿ ಜನರ ಆಕ್ರೋಶ
ಕಠಿಣ ನಿಯಮಗಳ ನಡುವೆ ಹುಟ್ಟು ಹಬ್ಬ ಆಚರಿಸಿಕೊಂಡಿದ್ದ ಬಿಜೆಪಿ ಜಿಲ್ಲಾಧ್ಯಕ್ಷ ಹೆಚ್.ಕೆ.ಸುರೇಶ್
Follow us
TV9 Web
| Updated By: sandhya thejappa

Updated on:Sep 04, 2021 | 2:18 PM

ಹಾಸನ: ರಾಜ್ಯದಲ್ಲಿ ಕೊರೊನಾ ಭೀತಿ ಶುರುವಾಗಿದೆ. ಈ ವೇಳೆ ಬೇಜವಾಬ್ದಾರಿ ತೋರಿದರೆ ಸೋಂಕು ಹರಡುವ ಬಗ್ಗೆ ಯಾವುದೇ ಅನುಮಾನವಿಲ್ಲ. ಈಗಾಗಲೇ ಸೋಂಕು ಹೆಚ್ಚುತ್ತಿರುವ ಜಿಲ್ಲೆಗಳಲ್ಲಿ ನೈಟ್ ಕರ್ಫ್ಯೂ (Night Curfew) ಮತ್ತು ವೀಕೆಂಡ್ ಕರ್ಫ್ಯೂ (Weeken Curfew) ಜಾರಿಯಾಗಿದೆ. ಹಾಸನದಲ್ಲಿ 80-100 ಜನರಿಗೆ ಕೊರೊನಾ ಸೋಂಕು ದೃಢಪಡುತ್ತಿರುವ ಹಿನ್ನೆಲೆ ಜಿಲ್ಲಾಡಳಿತ ಕಟ್ಟುನಿಟ್ಟಿನ ಕ್ರಮ ಜಾರಿಗೊಳಿಸಿದೆ. ಹೀಗಿದ್ದೂ, ಬಿಜೆಪಿ ಜಿಲ್ಲಾಧ್ಯಕ್ಷನ ಹುಟ್ಟು ಹಬ್ಬದಲ್ಲಿ ನಿಯಮ ಉಲ್ಲಂಘನೆಯಾಗಿದೆ. ಹಾಸನ ಬಿಜೆಪಿ ಜಿಲ್ಲಾಧ್ಯಕ್ಷ ಹುಲ್ಲಹಳ್ಳಿ ಸುರೇಶ್ ಹುಟ್ಟು ಹಬ್ಬವನ್ನು ಅಭಿಮಾನಿಗಳು ಆಚರಿಸಿದ್ದು, ಕಟ್ಟುನಿಟ್ಟಿನ ನಿಯಮಗಳನ್ನು ಗಾಳಿಗೆ ತೂರಿದ್ದಾರೆ.

ಕೊವಿಡ್ ನಿಯಮಗಳನ್ನು ಉಲ್ಲಂಘಿಸಿ ಹುಟ್ಟು ಹಬ್ಬದ ವೇಳೆ ಮೆರವಣಿಗೆ ಮಾಡಲಾಗಿದೆ. ರಾತ್ರಿ ನೈಟ್ ಕರ್ಫ್ಯೂ ನಡುವೆಯೂ ಅಭಿಮಾನಿಗಳು ಡಿಜೆ ಪಾರ್ಟಿ ಮಾಡಿದ್ದು, ಈ ವೇಳೆ ಟ್ರಾಫಿಕ್ ಜಾಮ್ ಆಗಿತ್ತು. ಮಾಸ್ಕ್, ಸ್ಯಾನಿಟೈಜರ್ ಇಲ್ಲದೆ ಬೇಕಾಬಿಟ್ಟಿಯಾಗಿ ಬಿಜೆಪಿ ಕಾರ್ಯಕರ್ತರು ವರ್ತಿಸಿದ್ದಾರೆ. ಆಡಳಿತ ಪಕ್ಷದ ಜವಾಬ್ದಾರಿಯುತ ಅಧ್ಯಕ್ಷರಾಗಿ ಬೇಜವಾಬ್ದಾರಿ ವರ್ತನೆ ತೋರಿರುವುದರಿಂದ ಹುಲ್ಲಹಳ್ಳಿ ಸುರೇಶ್ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಜನ ಆಕ್ರೋಶ ಹೊರಹಾಕಿದ್ದಾರೆ.

ಅಭಿಮಾನಿಗಳು ಮುಂದಿನ ಶಾಸಕ ಹುಲ್ಲಹಳ್ಳಿ ಸುರೇಶ್ ಎಂದು ಘೋಷಣೆ ಕೂಗಿ ಹುಟ್ಟು ಹಬ್ಬವನ್ನು ಸಂಭ್ರಮದಿಂದ ಆಚರಿಸಿದ್ದಾರೆ. ರಸ್ತೆಯಲ್ಲಿ ನೂರಾರು ಜನ ಸೇರಿದ್ದರೂ ಪೊಲೀಸರು ಯಾವುದೇ ಕ್ರಮಕೈಗೊಳ್ಳಲು ಮುಂದಾಗಿಲ್ಲ. ಪೊಲೀಸರ ಸಮ್ಮುಖದಲ್ಲೇ ಬಿಜೆಪಿ ಜಿಲ್ಲಾಧ್ಯಕ್ಷ ಹುಲ್ಲಹಳ್ಳಿ ಸುರೇಶ್​​ರವರ ಮೇಲೆ ಅಭಿಮಾನಿಗಳು ಹೂ ಮಳೆ ಸುರಿಸಿ ಸಂಭ್ರಮಿಸಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಜಿಲ್ಲಾಧಿಕಾರಿ ಆರ್.ಗಿರೀಶ್, ರೂಲ್ಸ್​ ಬ್ರೇಕ್​​ ಬಗ್ಗೆ ವರದಿ ನೀಡುವಂತೆ ಎಸ್‌ಪಿಗೆ ಸೂಚನೆ ನೀಡಿದ್ದೇವೆ. ಬರ್ತಡೇಯಲ್ಲಿ ಹೆಚ್ಚಿನ ಜನರು ಸೇರಿರುವ ಬಗ್ಗೆ ಮಾಧ್ಯಮಗಳಿಂದ ಮಾಹಿತಿ ಗೊತ್ತಾಗಿದೆ. ಕೊವಿಡ್ ಸಂದರ್ಭದಲ್ಲಿ ಎಲ್ಲರೂ ಜವಾಬ್ದಾರಿಯಿಂದ ವರ್ತನೆ ಮಾಡಬೇಕು. ತಮ್ಮ ವರ್ತನೆ ಮೂಲಕ ಇತರರಿಗೆ ಮಾದರಿಯಾಗಬೇಕು ಅಂತ ಹೇಳಿದ್ದಾರೆ.

ವೀಕೆಂಡ್ ಕರ್ಫ್ಯೂ ಜಾರಿ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆ ಸೆ.3ರ ರಾತ್ರಿ 9ರಿಂದ ಸೆ.6ರ ಬೆಳಗ್ಗೆ 5ರವರೆಗೆ ವೀಕೆಂಡ್ ಕರ್ಫ್ಯೂ ಜಾರಿಗೊಳಿಸಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ. ಜಿಲ್ಲೆಯಲ್ಲಿ ಸೆ.13ರ ಬೆಳಗ್ಗೆ 5ರವರೆಗೆ ವೀಕೆಂಡ್ ಕರ್ಫ್ಯೂ ಜಾರಿ ಇರಲಿದೆ. ಅಗತ್ಯ ವಸ್ತುಗಳ ಖರೀದಿಗೆ ಜಿಲ್ಲಾಡಳಿತ ಸಮಯ ನಿಗದಿಪಡಿಸಿದ್ದು, ವಾರಾಂತ್ಯದಲ್ಲಿ ಮುಂಜಾನೆ 5ರಿಂದ ಮಧ್ಯಾಹ್ನ 2ರವರೆಗೆ ಅವಕಾಶ ನೀಡಲಾಗಿದೆ. ಮದ್ಯದಂಗಡಿಗಳಲ್ಲಿ ಮಧ್ಯಾಹ್ನ 2ರವರೆಗೆ ಪಾರ್ಸೆಲ್​ಗೆ ಅವಕಾಶ ಇರುತ್ತದೆ. ಹಾಲಿನ ಬೂತ್​ಗಳಿಗೆ ಬೆಳಗ್ಗೆ 5ರಿಂದ ರಾತ್ರಿ 8ರವರೆಗೆ ಅವಕಾಶವಿದ್ದು,  ಹೋಟೆಲ್​ಗಳಲ್ಲಿ ಪಾರ್ಸೆಲ್​ಗೆ ಮಾತ್ರ ಅವಕಾಶ ನೀಡಲಾಗಿದೆ.

ಇದನ್ನೂ ಓದಿ

ಬೆಳಗಾವಿಯಲ್ಲಿ ಬಿಜೆಪಿ ಶಾಸಕನ ಹುಟ್ಟು ಹಬ್ಬದ ವಿಡಿಯೋ ವೈರಲ್; ಹೂವಿನ ಮಳೆ ಸುರಿಸಿದ ಪೊಲೀಸರು

Top Up Loan: ಟಾಪ್ ಅಪ್ ಸಾಲದ ಬಗ್ಗೆ ನಿಮಗೆ ಗೊತ್ತಿರಲೇ ಬೇಕಾದ ಅಂಶಗಳಿವು

(BJP activists celebrate Suresh birthday amidst night curfew in Hassan)

Published On - 12:44 pm, Sat, 4 September 21

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್