ಹಾಸನ: ನವೆಂಬರ್ 30ರಂದು ಬಿಜೆಪಿ 2 ಗುಂಪುಗಳ ಮಧ್ಯೆ ಮಾರಾಮಾರಿ ಕೇಸ್ಗೆ ಸಂಬಂಧಿಸಿ ಗಲಾಟೆ ಸಂಬಂಧ ಠಾಣೆಯಲ್ಲಿ ಮೂರು ಎಫ್‌ಐಆರ್ ದಾಖಲಾಗಿದೆ. ಎನ್.ಆರ್.ಸಂತೋಷ್ ಹಾಗೂ ವಿಜಿಕುಮಾರ್ ಬಣದ ಹಲವರ ವಿರುದ್ದ ಪರಸ್ಪರ ದೂರು ದಾಖಲಾಗಿದೆ.
ಹಲ್ಲೆಗೊಳಗಾಗಿದ್ದ ವಿಜಿಕುಮಾರ್ ಬಣದ ಮೋಹನ್ ರಿಂದ ಸಂತೋಷ ಬಣದ ಐವರ ವಿರುದ್ಧ ಕೇಸ್ ದಾಖಲಾಗಿದೆ. ಹಾಸನ ಜಿಲ್ಲೆ ಅರಸೀಕೆರೆ ಟೌನ್ ಠಾಣೆಯಲ್ಲಿ FIR ದಾಖಲಾಗಿದೆ. ಸಂತೋಷ್ ಬಣದ ನಗರಸಭೆ ಮಾಜಿ ಸದಸ್ಯ ಹರ್ಷವರ್ಧನ್, ಚಂದ್ರಶೇಖರ್, ಸುಬ್ರಹ್ಮಣ್ಯ, ಬಾಬು, ಸೈಯದ್, ಸಿಖಂದರ್, ಮಟ್ಕಾ ಕುಮಾರ್ ವಿರುದ್ಧ ಪ್ರಕರಣ ದಾಖಲಾಗಿದೆ. ಮತ್ತೊಂದು ಬಣದ ವಿಜಿಕುಮಾರ್, ಮಲ್ಲಿಕಾರ್ಜುನ, ಶಶಿ, ಚರಣ್, ಶಿವರಾಜ್ ವಿರುದ್ಧವೂ ಎಫ್ಐಆರ್ ದಾಖಲಾಗಿದೆ. ಇನ್ನು ಹರ್ಷವರ್ಧನ ದೂರು ಆಧರಿಸಿ ಐವರ ವಿರುದ್ಧ ಅಟ್ರಾಸಿಟಿ ಕೇಸ್ ದಾಖಲಾಗಿದೆ.
ಪಕ್ಷದ ಕಾರ್ಯಕರ್ತರ ವಿರುದ್ಧ ಸಂತೋಷ್ ಅಟ್ರಾಸಿಟಿ ಕೇಸ್ ಹಾಕಿಸಿ ಕಿರುಕುಳ ಕೊಡುತ್ತಿದ್ದಾರೆ ಎಂದು ವಿಜಿಕುಮಾರ್ ಆರೋಪಿಸಿದ್ದರು. ವಿಜಿಕುಮಾರ್ ವಿರುದ್ಧವೇ ಈಗ ಅಟ್ರಾಸಿಟಿ ಕೇಸ್ ದಾಖಲಾಗಿದೆ. ಇನ್ನು ಘಟನಾ ಸ್ಥಳದಲ್ಲಿ ಕರ್ತವ್ಯದಲ್ಲಿದ್ದ ಪೊಲೀಸ್ ಸಿಬ್ಬಂದಿ ಕುಮಾರ್ ದೂರು ಆಧರಿಸಿ ಎರಡೂ ಬಣದ ತಲಾ ಒಬ್ಬರ ವಿರುದ್ಧ ಸಾರ್ವಜನಿಕ ನೆಮ್ಮದಿಗೆ ಭಂಗ ತಂದ ಆರೋಪದಲ್ಲಿ ಮತ್ತೊಂದು ಎಫ್.ಐ.ಆರ್ ದಾಖಲಾಗಿದೆ.
ಘಟನೆ ಹಿನ್ನೆಲೆ
ಪರಿಷತ್ ಚುನಾವಣಾ ಬಿಜೆಪಿ ಪ್ರಚಾರ ಸಭೆಯಲ್ಲಿ 2 ಗುಂಪುಗಳ ಮಧ್ಯೆ ಗಲಾಟೆ ನಡೆದಿತ್ತು. ವೇದಿಕೆಯಲ್ಲಿ ಭಾಷಣ ಮಾಡುವ ವಿಚಾರಕ್ಕೆ ಗಲಾಟೆ ಉಂಟಾಗಿತ್ತು. ಸಭೆ ಬಳಿಕ ಪರಸ್ಪರ ಕಾರ್ಯಕರ್ತರು ಹೊಡೆದಾಡಿಕೊಂಡಿದ್ದರು. ನಾಲ್ವರಿಗೆ ಸಣ್ಣಪುಟ್ಟ ಗಾಯವಾಗಿದ್ದು ಗಾಯಾಳುಗಳನ್ನು ತಾಲೂಕು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.
ಪರಿಷತ್ ಚುನಾವಣಾ ಪ್ರಚಾರ ಸಭೆಯಲ್ಲಿ ಮಾರಾಮಾರಿ ನಡೆದಿದೆ. ಬಿಜೆಪಿ ಪ್ರಚಾರ ಸಭೆಯಲ್ಲಿ 2 ಗುಂಪುಗಳ ಮಧ್ಯೆ ಗಲಾಟೆ ನಡೆದಿದೆ. ಈ ಬಗ್ಗೆ, ಟಿವಿ9ಗೆ ಅಬಕಾರಿ ಸಚಿವ ಕೆ.ಗೋಪಾಲಯ್ಯ ಪ್ರತಿಕ್ರಿಯೆ ನೀಡಿದ್ದರು. ಸ್ಥಳದಲ್ಲಿ ನಾನು ಇರುವ ವರೆಗೂ ಯಾವುದೇ ಗಲಾಟೆ ನಡೆದಿಲ್ಲ. ನಾನು ತೆರಳಿದ ಬಳಿಕ ಕಾರ್ಯಕರ್ತರು ಗಲಾಟೆ ಆಗಿದೆ. ನಾವು ಕುಳಿತು ಮಾತನಾಡಿ ಬಗೆಹರಿಸಿಕೊಳ್ಳುತ್ತೇವೆ ಎಂದು ಟಿವಿ9ಗೆ ಅಬಕಾರಿ ಸಚಿವ ಕೆ.ಗೋಪಾಲಯ್ಯ ಪ್ರತಿಕ್ರಿಯೆ ನೀಡಿದ್ದರು.
ಇದನ್ನೂ ಓದಿ: ಅರಸೀಕೆರೆಯಲ್ಲಿ ಬಿಜೆಪಿಯ 2 ಗುಂಪುಗಳ ನಡುವೆ ಮಾರಾಮಾರಿ; ಅಶಾಂತಿಗೆ ಎನ್ಆರ್ ಸಂತೋಷ್ ಕಾರಣ ಎಂದ ವಿಜಿಕುಮಾರ್