ಹಾಸನ: ಜೆಡಿಎಸ್​ ನನ್ನ ನೈಜ ಎದುರಾಳಿ ಎಂದ ಬಿಜೆಪಿ ಶಾಸಕ ಪ್ರೀತಂಗೌಡ

ಕ್ಷೇತ್ರದಲ್ಲಿ ಬಿಜೆಪಿ ಒಂದು ಲಕ್ಷ ಮತ ಪಡೆಯುವುದು ನಿಶ್ಚಿತ. ಜೆಡಿಎಸ್​​ ಅಭ್ಯರ್ಥಿ ಸ್ವರೂಪ್​ ಎರಡನೇ ಸ್ಥಾನಕ್ಕಾಗಿ ಫೈಟ್​ ಮಾಡಲಿ ಎಂದು ಹಾಸನ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪ್ರೀತಂಗೌಡ (Preethamgowda) ಹೇಳಿದ್ದಾರೆ.

ಹಾಸನ: ಜೆಡಿಎಸ್​ ನನ್ನ ನೈಜ ಎದುರಾಳಿ ಎಂದ ಬಿಜೆಪಿ ಶಾಸಕ ಪ್ರೀತಂಗೌಡ
ಬಿಜೆಪಿ ಶಾಸಕ ಪ್ರೀತಂ ಗೌಡ
Follow us
ಕಿರಣ್ ಹನುಮಂತ್​ ಮಾದಾರ್
|

Updated on: Apr 15, 2023 | 10:43 AM

ಹಾಸನ: ‘ಕ್ಷೇತ್ರದಲ್ಲಿ ಬಿಜೆಪಿ ಒಂದು ಲಕ್ಷ ಮತ ಪಡೆಯುವುದು ನಿಶ್ಚಿತ. ಜೆಡಿಎಸ್​​ ಅಭ್ಯರ್ಥಿ ಸ್ವರೂಪ್​ ಎರಡನೇ ಸ್ಥಾನಕ್ಕಾಗಿ ಫೈಟ್​ ಮಾಡಲಿ ಎಂದು ಹಾಸನ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪ್ರೀತಂ ಗೌಡ (Preetham gowda) ಹೇಳಿದ್ದಾರೆ. ನಿನ್ನೆ ಹಾಸನ ಜನರು ನನ್ನ ಎದುರಾಳಿಗಳಿಗೆ ಸಂದೇಶ ಕೊಟ್ಟಿದ್ದಾರೆ. ಕಾಂಗ್ರೆಸ್, ಜೆಡಿಎಸ್, ಆಮ್ ಆದ್ಮಿಯಿಂದ ಕೂಡ ಅಭ್ಯರ್ಥಿ ಇರುತ್ತಾರೆ. ಆದರೆ ಜೆಡಿಎಸ್​ ನನ್ನ ನೈಜ ಎದುರಾಳಿ, ಉಳಿದ ಮೂರು ಪಕ್ಷಗಳು 2ನೇ ಸ್ಥಾನಕ್ಕೆ ಹೋರಾಟ ಮಾಡುತ್ತವೆ ಎಂದಿದ್ದಾರೆ.

ಹಾಸನದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಹಾಸನ ಲೂಟಿಯಾಗಿದೆ ಎಂಬ H​​.D.ರೇವಣ್ಣ ಹೇಳಿಕೆ ವಿಚಾರ ಕುರಿತು ಮಾತನಾಡಿದ ಪ್ರೀತಂಗೌಡ ಅವರು ‘ ಹೌದು ನಾನು ಕ್ಷೇತ್ರದ ಜನರ ಪ್ರೀತಿಯನ್ನು ಲೂಟಿ ಮಾಡಿದ್ದೇನೆ. ಜನರ ಪ್ರೀತಿ ಲೂಟಿ ಮಾಡಿದ್ದಕ್ಕೆ ನಿನ್ನೆ ಅಷ್ಟೊಂದು ಜನ ಸೇರಿದ್ದು. ಸ್ವರೂಪ್​​ ಟಿಕೆಟ್​ ಪಡೆಯುವುದಕ್ಕೆ ಎಷ್ಟೊಂದು ಪರದಾಡಿದರು. ಇನ್ನು ಅವರು ಏನು ಕೆಲಸ ಮಾಡುತ್ತಾರೆ ಎಂದು ಜನ ಯೋಚನೆ ಮಾಡುತ್ತಾರೆ. ಒಂದು ಪತ್ರ ಕೊಡುವುದಕ್ಕೂ ಹೊಳೆನರಸೀಪುರದ ಅನುಮತಿ ಬೇಕು. ಹಾಗಾಗಿ ಹಾಸನದ ಜನರು ಕೆಲಸಗಾರನಿಗೆ ಅವಕಾಶ ಕೊಡುತ್ತಾರೆ ಎಂದು ರೇವಣ್ಣಗೆ ಟಾಂಗ್​ ನೀಡಿದ್ದಾರೆ.

ಇದನ್ನೂ ಓದಿ:S Angara: ರಾಜಕೀಯ ನಿವೃತ್ತಿ ಹೇಳಿಕೆ ಹಿಂಪಡೆದ ಎಸ್. ಅಂಗಾರ, ಭಾಗೀರಥಿ ಮುರುಳ್ಯ ಪರ ಪ್ರಚಾರ ಮಾಡುವೆ

ಸಾಮಾನ್ಯ ಕಾರ್ಯಕರ್ತನಿಗೆ ಟಿಕೆಟ್ ಕೊಟ್ಟಿದ್ದೇವೆ ಎಂಬ ದಳಪತಿಗಳ ಹೇಳಿಕೆಗೆ ತಿರುಗೇಟು

ಸ್ವರೂಪ್ ಅವರ ತಂದೆ ನಗರಸಭೆ ಅಧ್ಯಕ್ಷರಾಗಿ, ಆರು ಬಾರಿ ಚುನಾವಣೆಯಲ್ಲಿ ಅಭ್ಯರ್ಥಿ ಆಗಿದ್ದರು, 40 ವರ್ಷ ಆಕ್ಟೀವ್ ರಾಜಕೀಯದಲ್ಲಿ ಇದ್ದವರು. ಎನ್ನುವ ಮೂಲಕ ದಳಪತಿಗಳ ಹೇಳಿಕೆಗೆ ತಿರುಗೇಟು ನೀಡಿದ್ದಾರೆ. ನಾನು ಮಾಡಿದ ಕೆಲಸ ಏನೆಂದು ನಿನ್ನೆ ಜನರು ಉತ್ತರ ಕೊಟ್ಟಿದಾರೆ. ನಾನು ಯಾರಿಗು ಸಂದೇಶ ಕೊಟ್ಟಿಲ್ಲ. ಜನರೇ ನನ್ನ ಎದುರಾಳಿಗಳಿಗೆ ಸಂದೇಶ ಕೊಟ್ಟಿದ್ದಾರೆ ಎಂದರು.

ರೇವಣ್ಣ ಸ್ಪರ್ಧೆ ಮಾಡಿದ್ರೆ ಐವತ್ತು ಸಾವಿರ ಮತಗಳ ಅಂತರದಲ್ಲಿ ಗೆಲುವು

ರೇವಣ್ಣ ಸ್ಪರ್ಧೆ ಮಾಡಿದ್ರೆ ಐವತ್ತು ಸಾವಿರ ಮತಗಳ ಅಂತರದಲ್ಲಿ ಗೆಲುವು ಎಂಬ ಸವಾಲು ವಿಚಾರ ‘ಅವರು ಈಗ ಚುನಾವಣೆಯಲ್ಲಿ ಸ್ಪರ್ಧೆ ಮಾಡುತ್ತಿಲ್ಲ. ಹಾಗಾಗಿ ಇದು ಈಗ ಅಪ್ರಸ್ತುತ. ‘ಯಾರೇ ಅಭ್ಯರ್ಥಿಯಾದರೂ ಒಂದು ಲಕ್ಷ ಓಟು ಪಡೆದುಕೊಳ್ಳಬೇಕು ಎಂದು ಕಾರ್ಯಕರ್ತರು ನಿರ್ಧರಿಸಿದ್ದಾರೆ. ‘ಹದಿನೆಂಟು ತಿಂಗಳ ಹಿಂದೆ ಸವಾಲು ಹಾಕಿದ್ದೆ. ಆಗ ಯಾರು ಉತ್ತರ ಕೊಡಬೇಕು ಕೊಟ್ಟರೆ ಅದಕ್ಕೆ ಮಾನ್ಯತೆ ಇರುತ್ತಿತ್ತು. ಈಗ ಅವರು ಮಾತನಾಡಿದರೆ ನಾನು ಚರ್ಚೆ ಮಾಡುತ್ತೇನೆ. ಐವತ್ತು ಸಾವಿರ ಮತಗಳ ಲೀಡ್‌ಗೆ ಈಗಲೂ ಬದ್ದ, ಮುಂದಿನ ಚುನಾವಣೆಗೂ ಅವಕಾಶ ಕೋಡುತ್ತೇನೆ ಎಂದಿದ್ದರು.

ಇನ್ನಷ್ಟು ಚುನಾವಣಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ