ನಮ್ಮ ರಾಜ್ಯದಲ್ಲಿ ಕಾರ್ಖಾನೆ ನಿರ್ಮಿಸಿ, ನಮ್ಮವರಿಗೇ ಇಲ್ಲ ಕೆಲಸ; ಕ್ರಮಕ್ಕೆ ಸಂಸದ ಪ್ರಜ್ವಲ್ ರೇವಣ್ಣ ಆಗ್ರಹ

ಹಾಸನದ ಹೊರ ವಲಯದಲ್ಲಿರುವ ಕೈಗಾರಿಕೆಗಳಲ್ಲಿ ನಮ್ಮ ಸ್ಥಳೀಯರನ್ನು ನಿರ್ಲಕ್ಷಿಸಲಾಗುತ್ತಿದೆ. ಹೊರ ರಾಜ್ಯದವರಿಗೆ ಹೆಚ್ಚಿನ ಆಧ್ಯತೆ ನೀಡಲಾಗುತ್ತಿದೆ. ನಮ್ಮದೇ ಜಾಗದಲ್ಲಿ ಕಾರ್ಖಾನೆ ನಿರ್ಮಿಸಿ ನಮ್ಮವರನ್ನು ಕಡೆಗಣಿಸಲಾಗುತ್ತಿದೆ. ಹೀಗಾಗಿ ಅಂತವರ ವಿರುದ್ಧ ಕ್ರಮ ಆಗಬೇಕು ಎಂದು ಸಂಸದ ಪ್ರಜ್ವಲ್ ರೇವಣ್ಣ ಆಗ್ರಹಿಸಿದ್ದಾರೆ.

ನಮ್ಮ ರಾಜ್ಯದಲ್ಲಿ ಕಾರ್ಖಾನೆ ನಿರ್ಮಿಸಿ, ನಮ್ಮವರಿಗೇ ಇಲ್ಲ ಕೆಲಸ; ಕ್ರಮಕ್ಕೆ ಸಂಸದ ಪ್ರಜ್ವಲ್ ರೇವಣ್ಣ ಆಗ್ರಹ
ಸಂಸದ ಪ್ರಜ್ವಲ್ ರೇವಣ್ಣ
Follow us
ಮಂಜುನಾಥ ಕೆಬಿ
| Updated By: ಆಯೇಷಾ ಬಾನು

Updated on: Feb 19, 2024 | 9:22 AM

ಹಾಸನ, ಫೆ.19: ಹಾಸನದ ಕೈಗಾರಿಕೆಗಳಿಂದ ಸ್ಥಳೀಯ ಕನ್ನಡಿಗರಿಗೆ ಅನ್ಯಾಯ ಆಗುತ್ತಿರುವ ಆರೋಪ ಕೇಳಿ ಬಂದಿದೆ. ಹೊರ ರಾಜ್ಯದ ಉದ್ಯಮಿಗಳು ನಮ್ಮ ರಾಜ್ಯದಲ್ಲಿ ಕೈಗಾರಿಕೆಗಳನ್ನು ನಿರ್ಮಿಸಿ ಕೋಟಿ ಕೋಟಿ ಅನುದಾನ ಪೀಕುತ್ತಿದ್ದಾರೆ. ಕನ್ನಡಿಗರಿಗೆ ಕೊಂಚವೂ ಕಿಮ್ಮತ್ತು ನೀಡುತ್ತಿಲ್ಲ. ನೂರಾರು ಎಕರೆ ಕರ್ನಾಟಕದ ಭೂಮಿ ಪಡೆದು ಕೋಟಿ ಕೋಟಿ ಸಂಪಾದಿಸುತ್ತಿರುವ ಕೈಗಾರಿಕೆಗಳಿಂದ ಸ್ಥಳೀಯರಿಗೆ ವಂಚನೆ ಆಗುತ್ತಿದೆ ಎಂಬ ಆರೋಪ ಕೇಳಿ ಬಂದಿದೆ. ಹೀಗಾಗಿ ಇಂತವರ ವಿರುದ್ದ ಕ್ರಮಕ್ಕೆ ಸಂಸದ ಪ್ರಜ್ವಲ್ ರೇವಣ್ಣ (Prajwal Revanna) ಆಗ್ರಹಿಸಿದ್ದಾರೆ.

ಹಾಸನದ ಹೊರ ವಲಯದಲ್ಲಿರುವ ಕೈಗಾರಿಕೆಗಳಲ್ಲಿ ಸ್ಥಳೀಯರನ್ನು ನಿರ್ಲಕ್ಷಿಸಲಾಗುತ್ತಿದೆ. ಸುಪ್ರೀಂ ಕೋರ್ಟ್ ಆದೇಶವಿದ್ದರೂ ಹೊರ ರಾಜ್ಯದ ನೌಕರರನ್ನೇ ಕಾರ್ಖಾನೆಗಳು ಬಳಸಿಕೊಳ್ಳುತ್ತಿವೆ. ಹಾಸನದ ಕೈಗಾರಿಕಾ ವಲಯದಲ್ಲಿರುವ ಹಿಮತ್ ಸಿಂಗ್ ಕಾ ಕಾರ್ಖಾನೆ ಸೇರಿ ವಿವಿಧ ಗಾರ್ಮೆಂಟ್ಸ್ ಉದ್ಯಮದ ಕೈಗಾರಿಕೆಗಳ ವಿರುದ್ಧ ಗಂಭೀರ ಆರೋಪ ಕೇಳಿ ಬಂದಿದೆ. ಸುಮಾರು 300 ಎಕರೆಗೂ ಹೆಚ್ಚು ಭೂಮಿ ಪಡೆದು ಹೊರ ರಾಜ್ಯದ ಉದ್ಯಮಿಗಳು ನಮ್ಮಲ್ಲಿ ಕಾರ್ಖಾನೆ ನಡೆಸುತ್ತಿದ್ದಾರೆ. ಕರ್ನಾಟಕ ರಾಜ್ಯ ಸರ್ಕಾರದಿಂದ ಸುಮಾರು 430ಕೋಟಿ‌ ಹಣ ರಿಯಾಯಿತಿ ಪಡೆದಿರೋ ಹಿಮತ್ ಸಿಂಕಾ ಕಾರ್ಖಾನೆ ರಾಜ್ಯದ ಅನುಕೂಲ ಪಡೆದು ಸ್ಥಳೀಯರಿಗೆ ಅವಕಾಶವನ್ನೇ ನೀಡುತ್ತಿಲ್ಲ.

ಸರೋಜಿನಿ ಮಹಿಷಿ ವರದಿಯನ್ನೂ ಗಾಳಿಗೆ ತೂರಿದ್ದಾರೆ ಎಂದು ಜೆಡಿಎಸ್ ನಾಯಕರು ಆರೋಪ ಮಾಡಿದ್ದಾರೆ. ಸಾವಿರಾರು ಹೊರ ರಾಜ್ಯದ ಯುವಕರಿಗೆ ಮಾತ್ರ ಉದ್ಯೋಗಕ್ಕೆ ಆಧ್ಯತೆ ನೀಡಲಾಗಿದೆ. ಕೈಗಾರಿಕಾ ವಲಯಕ್ಕೆ ಭೂಮಿ ಕಳೆದುಕೊಂಡು ಸ್ಥಳೀಯ ರೈತರು ಗೋಳಾಡುತ್ತಿದ್ದಾರೆ. ತಮ್ಮ ಮಕ್ಕಳಿಗೆ ಕೆಲಸವಿಲ್ಲದೆ ನಿರುದ್ಯೋಗ ಅನುಭವಿಸುತ್ತಿದ್ದಾರೆ. ಉದ್ಯೋಗ ನೀಡದ ಕೈಗಾರಿಕೆಗಳ ವಿರುದ್ದ ಕ್ರಮಕ್ಕೆ ಸಂಸದ ಪ್ರಜ್ವಲ್ ರೇವಣ್ಣ ಆಗ್ರಹಿಸಿದ್ದಾರೆ.

ಇದನ್ನೂ ಓದಿ: ಹೆಚ್ಚಿನ ಸಂಬಳ ಆಸೆಗೆ ಚಾಲಕ ವೃತ್ತಿ ಬಿಟ್ಟು ಕಾರ್ಖಾನೆಯಲ್ಲಿ ಕೆಲಸಕ್ಕೆ ಸೇರಿ ಜೀವಕ್ಕೆ ತಂದುಕೊಂಡರು ಕುತ್ತು

ಮಲೆಮಹದೇಶ್ವರ ಬೆಟ್ಟದಲ್ಲಿ ಅಪರಿಚಿತನ ಶವ ಪತ್ತೆ

ಮಲೆಮಹದೇಶ್ವರ ಬೆಟ್ಟದಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿದೆ. ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಆನೆಹೊಲ ಗ್ರಾಮದ ಬಳಿ ಮೃತದೇಹ ಸಿಕ್ಕಿದೆ. ಸುಮಾರು 35 ವರ್ಷದ ಪುರುಷನ ಶವ ಎಂದು ಗುರುತು ಮಾಡಲಾಗಿದ್ದು, ಸ್ಥಳಕ್ಕೆ ಮಲೆ ಮಹದೇಶ್ವರ ಬೆಟ್ಟ ಠಾಣೆಯ ಪೊಲೀಸರ ಭೇಟಿ ನೀಡಿ ಪರಿಶೀಲಿಸಿದ್ರು. ಮೃತದೇಹವನ್ನ ಹನೂರು ತಾಲೂಕು ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ. ಕೊಲೆಯೊ. ಆತ್ಮಹತ್ಯೆಯೊ ಎಂದು ಪೊಲೀಸರು ತನಿಖೆ ಆರಂಭಿಸಿದ್ದಾರೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಟೀಂ ಇಂಡಿಯಾವನ್ನು ಅವರ ನೆಲದಲ್ಲೇ ಸೋಲಿಸಬೇಕು; ಶೋಯೆಬ್ ಅಖ್ತರ್
ಟೀಂ ಇಂಡಿಯಾವನ್ನು ಅವರ ನೆಲದಲ್ಲೇ ಸೋಲಿಸಬೇಕು; ಶೋಯೆಬ್ ಅಖ್ತರ್
ರಸ್ತೆಯಲ್ಲೇ ಲೇಡಿ ಕಾನ್​ಸ್ಟೆಬಲ್​ ಕೆನ್ನೆಗೆ ಹೊಡೆದು, ಚುಂಬಿಸಿದ ಬೈಕ್ ಸವಾರ
ರಸ್ತೆಯಲ್ಲೇ ಲೇಡಿ ಕಾನ್​ಸ್ಟೆಬಲ್​ ಕೆನ್ನೆಗೆ ಹೊಡೆದು, ಚುಂಬಿಸಿದ ಬೈಕ್ ಸವಾರ
ಮುಡಾ ಹಗರಣದ ತನಿಖೆ ಚುರುಕು: ವಿಧಾನಸೌಧ ತಲುಪಿದ ಇಡಿ ತನಿಖೆ!
ಮುಡಾ ಹಗರಣದ ತನಿಖೆ ಚುರುಕು: ವಿಧಾನಸೌಧ ತಲುಪಿದ ಇಡಿ ತನಿಖೆ!
ತಮಿಳುನಾಡಿನಲ್ಲಿ ಫೆಂಗಲ್ ಚಂಡಮಾರುತದ ಅಬ್ಬರ; ಕೊಚ್ಚಿಹೋದ ಬಸ್​ಗಳು
ತಮಿಳುನಾಡಿನಲ್ಲಿ ಫೆಂಗಲ್ ಚಂಡಮಾರುತದ ಅಬ್ಬರ; ಕೊಚ್ಚಿಹೋದ ಬಸ್​ಗಳು
‘ಚೈತ್ರಾ ಯಾರಿಗೆ ಹಾಲು ಕೊಡ್ತಾರೆ ಅಂತ ಗೊತ್ತಾಗಲ್ಲ’: ಐಶ್ವರ್ಯಾ ನೇರ ಮಾತು
‘ಚೈತ್ರಾ ಯಾರಿಗೆ ಹಾಲು ಕೊಡ್ತಾರೆ ಅಂತ ಗೊತ್ತಾಗಲ್ಲ’: ಐಶ್ವರ್ಯಾ ನೇರ ಮಾತು
ತುಮಕೂರಿನಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣಕ್ಕೆ CM ಶಂಕುಸ್ಥಾಪನೆ
ತುಮಕೂರಿನಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣಕ್ಕೆ CM ಶಂಕುಸ್ಥಾಪನೆ
ಯಡಿಯೂರಪ್ಪ ಒಂದು ಸ್ಪೆಂಟ್ ಫೋರ್ಸ್, ಲಿಂಗಾಯತರಿಗೂ ಬೇಡವಾಗಿದ್ದಾರೆ: ಯತ್ನಾಳ್
ಯಡಿಯೂರಪ್ಪ ಒಂದು ಸ್ಪೆಂಟ್ ಫೋರ್ಸ್, ಲಿಂಗಾಯತರಿಗೂ ಬೇಡವಾಗಿದ್ದಾರೆ: ಯತ್ನಾಳ್
ಮಂಗಳೂರು ಕಾಂಗ್ರೆಸ್ ಕಚೇರಿಯಲ್ಲಿ ಹೊಡೆದಾಟ, ಪೊಲೀಸ್ ಎಂಟ್ರಿ
ಮಂಗಳೂರು ಕಾಂಗ್ರೆಸ್ ಕಚೇರಿಯಲ್ಲಿ ಹೊಡೆದಾಟ, ಪೊಲೀಸ್ ಎಂಟ್ರಿ
ಬೇರೆ ನಾಯಕರೇಕೆ ಯತ್ನಾಳ್​ರಂತೆ ಹೋರಾಟಕ್ಕೆ ಮುಂದಾಗಲಿಲ್ಲ? ಬಂಗಾರಪ್ಪ
ಬೇರೆ ನಾಯಕರೇಕೆ ಯತ್ನಾಳ್​ರಂತೆ ಹೋರಾಟಕ್ಕೆ ಮುಂದಾಗಲಿಲ್ಲ? ಬಂಗಾರಪ್ಪ
ಚಂದ್ರಶೇಖರನಾಥ ಸ್ವಾಮೀಜಿ ವಿರುದ್ಧ ಪ್ರಕರಣ ವಾಪಸ್ ಪಡೆಯಬೇಕು: ಡಿಕೆ ಸುರೇಶ್
ಚಂದ್ರಶೇಖರನಾಥ ಸ್ವಾಮೀಜಿ ವಿರುದ್ಧ ಪ್ರಕರಣ ವಾಪಸ್ ಪಡೆಯಬೇಕು: ಡಿಕೆ ಸುರೇಶ್