AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಕಲೇಶಪುರದಲ್ಲಿ 80 ಅಡಿ ಪ್ರಪಾತಕ್ಕೆ ಬಿದ್ದ ಕಾರು: ಮುಂದಾಗಿದ್ದು ಪವಾಡ

ಹಾಸನದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಾರು ಪ್ರಪಾತಕ್ಕೆ ಬಿದ್ದ ಪರಿಣಾಮ ಒಂದೇ ಕುಟುಂಬದ ನಾಲ್ವರು ಗಾಯಗೊಂಡಿದ್ದಾರೆ.  80 ಅಡಿ ಆಳಕ್ಕೆ ಕಾರು ಬಿದ್ದರೂ ಕಾರಿನಲ್ಲಿದ್ದವರು ಪವಾಡ ಸದೃಶರೀತಿಯಲ್ಲಿ ಪಾರಾಗಿದ್ದಾರೆ. ಇತ್ತ ಹಾವೇರಿಯ ಶಿವಬಸವ ನಗರದಲ್ಲಿ ನೀರಿನ ಬಕೆಟ್​ಗೆ ಬಿದ್ದು ಒಂದು ವರ್ಷದ ಮಗು ದಾರುಣವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ.

ಸಕಲೇಶಪುರದಲ್ಲಿ 80 ಅಡಿ ಪ್ರಪಾತಕ್ಕೆ ಬಿದ್ದ ಕಾರು: ಮುಂದಾಗಿದ್ದು ಪವಾಡ
ಕಾರು ಅಪಘಾತ
ಪ್ರಸನ್ನ ಹೆಗಡೆ
|

Updated on:Oct 24, 2025 | 1:39 PM

Share

ಹಾಸನ/ಹಾವೇರಿ ಅಕ್ಟೋಬರ್​ 24: ಚಾಲಕನ ನಿಯಂತ್ರಣ ತಪ್ಪಿ ಕಾರು ಪ್ರಪಾತಕ್ಕೆ ಬಿದ್ದ ಪರಿಣಾಮ ಒಂದೇ ಕುಟುಂಬದ ನಾಲ್ವರು ಗಾಯಗೊಂಡಿರುವ ಘಟನೆ ಹಾಸನ (Hassan) ಜಿಲ್ಲೆಯ ಸಕಲೇಶಪುರದ ಮಾರಹಳ್ಳಿ ಗ್ರಾಮದ ಬಳಿ ನಡೆದಿದೆ. ಮಗನನ್ನು ಗುರುವಾಯಿನಕೆರೆಯಲ್ಲಿರುವ ನವೋದಯ ಶಾಲೆಗೆ ಬಿಡಲು ಪತ್ನಿ ಮತ್ತು ಇಬ್ಬರ ಮಕ್ಕಳ ಜೊತೆ ಶಿವಮೊಗ್ಗ ಮೂಲದ ಗೋವಿಂದನಾಯ್ಕ್  ತೆರಳುತ್ತಿದ್ದರು. ಈ ವೇಳೆ ಕಾರು ನಿಯಂತ್ರಣ ತಪ್ಪಿದ್ದು, ಮಾರನಹಳ್ಳಿ ಬಳಿ ತಡೆಗೋಡೆಯಿಲ್ಲದೆ ಕಾರಣ 80 ಅಡಿ ಆಳಕ್ಕೆ ಬಿದ್ದಿದೆ. ಕಾರು ಬಿದ್ದಿದ್ದನ್ನು ಕಂಡ ಸ್ಥಳೀಯರು ಹಾಗೂ ವಾಹನ ಸವಾರರು ಕೂಡಲೇ ರಕ್ಷಣೆಗೆ ಮುಂದಾಗಿದ್ದಾರೆ. ಘಟನೆಯಲ್ಲಿ ಕಾರಿನಲ್ಲಿದ್ದ ನಾಲ್ವರು ಅದೃಷ್ಟವಶಾತ್​ ಪ್ರಾಣಾಪಾಯದಿಂದ ಪಾರಾಗಿದ್ದು, ಸಕಲೇಶಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಮಳೆಗೆ ಕುಸಿದ ಮನೆ ಗೋಡೆ: ವೃದ್ಧೆ ಸಾವು

ನಿರಂತರ ಮಳೆಗೆ ಮನೆ ಗೋಡೆ ಕುಸಿದ ಪರಿಣಾಮ ವೃದ್ಧೆ ಮೃತಪಟ್ಟಿರುವ ಘಟನೆ ಹಾಸನ ಜಿಲ್ಲೆ ಅರಕಲಗೂಡು ತಾಲೂಕಿನ ಮತ್ತಿಗೋಡು ಗ್ರಾಮದಲ್ಲಿ ನಡೆದಿದೆ. ಜವರಮ್ಮ(63) ದುರ್ಮರಣ ಹೊಂದಿದವರಾಗಿದ್ದು, ಮನೆಯಲ್ಲಿ ಮಲಗಿದ್ದಾಗ ವೃದ್ಧೆ ಮೇಲೆ ಗೋಡೆ ಕುಸಿದಿದೆ. ಈ ವೇಳೆ ಮೃತ ಜವರಮ್ಮನ ಮಗ ಕೋದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಘಟನಾ ಸ್ಥಳಕ್ಕೆ ಸ್ಥಳೀಯ ಶಾಸಕ ಎ.ಮಂಜು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಮರಣೋತ್ತರ ಪರೀಕ್ಷೆಗಾಗಿ ಮಹಿಳೆಯ ಮೃತದೇಹವನ್ನ ಕೊಣನೂರು ಸಮುದಾಯ ಆರೋಗ್ಯ ಕೇಂದ್ರಕ್ಕೆ ರವಾನಿಸಲಾಗಿದೆ.

ಇದನ್ನೂ ಓದಿ: ಕೃತಿಕಾ ರೆಡ್ಡಿ ಕೊಲೆ ಬಳಿಕ ಆರೋಪಿ ಮಹೇಂದ್ರ ರೆಡ್ಡಿ ಮಾಡಿದ್ದೇನು ಗೊತ್ತಾ?

ನೀರಿನ ಬಕೆಟ್​ ಗೆ ಬಿದ್ದು ಮಗು ಸಾವು

ಆಟವಾಡುವ ವೇಳೆ ಆಯತಪ್ಪಿ ನೀರಿನ ಬಕೆಟ್​ಗೆ ಬಿದ್ದ ಪರಿಣಾಮ ಒಂದು ವರ್ಷದ ಮಗು ದಾರುಣವಾಗಿ ಮೃತಪಟ್ಟ ಘಟನೆ ಹಾವೇರಿಯ ಶಿವಬಸವ ನಗರದಲ್ಲಿ ನಡೆದಿದೆ. ದಕ್ಷಿತ್ ಯಳಂಬಲ್ಲಿಮಠ ಮೃತ ಮಗುವಾಗಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ತಲೆಕೆಳಗಾಗಿ ಬಕೆಟ್​ನನಲ್ಲಿ ಬಿದ್ದ ಮಗುವನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾದರೂ ಷಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದೆ. ಹಾವೇರಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 1:01 pm, Fri, 24 October 25

'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ವಿಮಾನ ನಿಲ್ದಾಣದಲ್ಲಿ ಶಾಸ್ತ್ರೀಯ ನೃತ್ಯಕ್ಕೆ ಮನಸೋತ ರಷ್ಯಾ ಅಧ್ಯಕ್ಷ ಪುಟಿನ್
ವಿಮಾನ ನಿಲ್ದಾಣದಲ್ಲಿ ಶಾಸ್ತ್ರೀಯ ನೃತ್ಯಕ್ಕೆ ಮನಸೋತ ರಷ್ಯಾ ಅಧ್ಯಕ್ಷ ಪುಟಿನ್
ಭಾರತಕ್ಕೆ ಬಂದ ಗೆಳೆಯ ಪುಟಿನ್​ಗೆ ಪ್ರಧಾನಿ ಮೋದಿಯ ಅಪ್ಪುಗೆಯ ಸ್ವಾಗತ
ಭಾರತಕ್ಕೆ ಬಂದ ಗೆಳೆಯ ಪುಟಿನ್​ಗೆ ಪ್ರಧಾನಿ ಮೋದಿಯ ಅಪ್ಪುಗೆಯ ಸ್ವಾಗತ