ಸಾವಿನಲ್ಲೂ ಒಂದಾದ ಜೀವದ ಗೆಳತಿಯರು: ಸುಟ್ಟು ಕರಕಲಾದ ನವ್ಯ-ಮಾನಸಳ ಗೆಳೆತನ ಬಿಚ್ಚಿಟ್ಟು ಕಣ್ಣೀರಿಟ್ಟ ತಂದೆ
ಚಿತ್ರದುರ್ಗ ಹಿರಿಯೂರು ತಾಲೂಕಿನ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತ (Accident) ವರ್ಷದ ಭೀಕರ ದುರಂತದಲ್ಲಿ ಒಂದಾಗಿದೆ. ಕಂಟೇನರ್ ಡಿಕ್ಕಿಯಿಂದ ಖಾಸಗಿ ಸ್ಲೀಪರ್ ಕೋಚ್ ಬಸ್ ಹೊತ್ತಿ ಉರಿದಿದೆ. ದುರಂತದಲ್ಲಿ ಒಟ್ಟು 7ಜನ ಸಾವನ್ನಪ್ಪಿದ್ದಾರೆ. ಅದರಲ್ಲೂ ಇನ್ನು ಚನ್ನರಾಯಪಟ್ಟಣ ಮೂಲದ ನವ್ಯ ಹಾಗೂ ಮಾನಸ ಎನ್ನುವ ಕುಚಿಕು ಗೆಳೆಯರು ಸಹ ಸುಟ್ಟು ಕರಕಲಾಗಿದ್ದು, ನವ್ಯಳ ತಂದೆ ಮಂಜಪ್ಪ, ಸುಟ್ಟ ಕರಕಲಾದ ಬಸ್ನಲ್ಲಿ ಮಗಳನ್ನ ಹುಡುಕುತ್ತಿದ್ದು ದೃಶ್ಯ ಮನಕಲಕುವಂತಿತ್ತು. ಇನ್ನು ಇದೀಗ ನವ್ಯ ಹಾಗೂ ಮಾನಸಳ ಗೆಳೆತನ ಬಗ್ಗೆ ಎಳೆ ಎಳೆಯಾಗಿ ಬಿಚ್ಚಿಟ್ಟು ಕಣ್ಣೀರಿಟ್ಟಿದ್ದಾರೆ.

ಹಾಸನ, (ಡಿಸೆಂಬರ್ 26): ಚಿತ್ರದುರ್ಗ (Chitradruga) ಜಿಲ್ಲೆಯ ಹಿರಿಯೂರು ಪಟ್ಟಣದ ಬಳಿ ಸಂಭವಿಸಿದ ಭೀಕರ ಬಸ್ ದುರಂತದಲ್ಲಿ (Bus Incident) ಒಟ್ಟು 7 ಮಂದಿ ಪ್ರಾಣ ಕಳೆದುಕೊಂಡಿದ್ದು, ಸದಾ ಜೊತೆಯಲ್ಲೇ ಇರುತ್ತಿದ್ದ ಹಾಸನದ (Hassan) ಚನ್ನರಾಯಪಟ್ಟಣ ಮೂಲದ ನವ್ಯ ಹಾಗೂ ಮಾನಸ ಸಹ ಸುಟ್ಟು ಕರಕಲಾಗಿದ್ದಾರೆ. ಇದರೊಂದಿಗೆ ಕುಚಿಕು ಗೆಳೆಯರು ಸಾವಿನಲ್ಲೂ ಜೊತೆಯಾಗಿದ್ದಾರೆ. ಇನ್ನು ಮೃತ ಮಗಳು ನವ್ಯ ತಂದೆ ಮಂಜಪ್ಪ ಮಾತನಾಡಿ, ನಿನ್ನೆ ಬೆಳಿಗ್ಗೆ7 ಗಂಟೆಗೆ ನಮಗೆ ವಿಷಯ ತಿಳಿಯಿತು ಅವರು ಮಾನಸ, ನವ್ಯ, ಮಿಲನ ಮೂರು ಜನರು ಹೋಗಿದ್ರು. ಅದರಲ್ಲಿ ಮಿಲನ ಬದುಕಿದ್ದರಿಂದ ನಮಗೆ ಫೋನ್ ಮಾಡಿ ಹೇಳಿದರು. ಹೋಗಿ ನೋಡಿದಾಗ ನಮ್ಮ ಮಗಳು ಹಾಗೂ ಮಾನಸ ಸಂಪೂರ್ಣ ಸುಟ್ಟು ಹೋಗಿದ್ದರು. ನಮ್ಮ ಮಗಳು ಕೂತಿದ್ದ ಸೀಟ್ ಸಮೀಪಕ್ಕೇ ಲಾರಿ ಡಿಕ್ಕಿಯಾಗಿದೆ. ಅವರು ಅದರೊಳಗೇ ಜ್ಞಾನ ತಪ್ಪಿದಾರೆ. ಹಾಗಾಗಿ ಅಲ್ಲೇ ಸುಟ್ಟು ಹೋಗಿದಾರೆ. ಮೃತದೇಹ ಕಂಡು ಹಿಡಿಯಲು ಆಗದ ರೀತಿ ಆಗಿತ್ತು ಎಂದು ಬಿಕ್ಕಿ ಬಿಕ್ಕಿ ಹತ್ತರು.
ನವ್ಯ-ಮಾನಸದ ಸ್ನೇಹ ಹೇಗಿತ್ತು?
ಇನ್ನು ಮಂಜಪ್ಪ ಅವರು ನವ್ಯ ಹಾಗೂ ಮಾನಸ ಸ್ನೇಹದ ಬಗ್ಗೆ ಎಳೆ ಎಳೆಯಾಗಿ ಬಿಟ್ಟಿದ್ದಾರೆ. ಮಾನಸ ಹಾಗೂ ನವ್ಯ ಒಂದೇ ರೀತಿಯ ಬಟ್ಟೆ ತೆಗೆದುಕೊಳ್ಳುತ್ತಿದ್ದರು. ಒಂದೇ ರೀತಿಯ ಜ್ಯುವೆಲರಿ ಹಾಕಿಕೊಳ್ಳುತ್ತಿದ್ದರು. ಇಬ್ಬರು ಓದಿದ್ದು ಒಂದೇ ಕಾಲೇಜು. ಒಟ್ಟಿಗೆ ಒಂದೇ ಕಡೆ ಕೆಲಸ ಮಾಡುತಿದ್ದರು. ಒಂದೇ ತಟ್ಟೆಯಲ್ಲಿ ಅನ್ನ ತಿನ್ನೋರು. ಎಲ್ಲಿಗೆ ಹೋಗಲಿ ಊರಿಗೆ ಬರಲಿ ಒಟ್ಟಿಗೆ ಓಡಾಡೋರು. ಅವರಿಬ್ಬರು ಒಟ್ಟಿಗೆ ಇದ್ದದ್ದು ನಮಗೂ ಧೈರ್ಯ ಇತ್ತು. ಆದರೆ ದೇವರು ಈ ರೀತಿ ಅನ್ಯಾಯ ಮಾಡಿಬಿಟ್ಟ. ಎರಡು ವರ್ಷದಿಂದ ಬೆಂಗಳೂರಿನಲ್ಲಿ ಕೆಲಸ ಮಾಡಿಕೊಂಡಿದ್ದರು. ಬೆಂಗಳೂರಿನ ಮಾರತ್ ಹಳ್ಳಿಯಲ್ಲಿ ಇದ್ದರು. ಜೊತೆಯಲ್ಲೆ ಇದ್ದರು ಈ ಜೊತೆಯಾಗೆ ನಮ್ಮನ್ನ ಬಿಟ್ಟು ಹೋದ್ರು ಎಂದು ಕಣ್ಣೀರಿಟ್ಟರು.
ಇದನ್ನೂ ನೋಡಿ: ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ನವ್ಯಳ ಮದ್ವೆ ಫಿಕ್ಸ್ ಆಗಿತ್ತು
ಚಿತ್ರದುರ್ಗ ಪೊಲೀಸರು ತುಂಬಾ ಸಹಾಯ ಮಾಡಿದ್ರು. ಘಟನೆ ಸಂಭವಿಸುವ ಮುನ್ನ ರಾತ್ರಿ 8 ಗಂಟೆಗೆ ಬಸ್ ಹತ್ತಿದಾಗ ಅರ್ಧ ಗಂಟೆ ಮಾತಾಡಿದ್ದಳು.ಆದ್ರೆ, ಬೆಳಿಗ್ಗೆ ಫೋನ್ ಮಾಡಿದ್ರೆ ಸ್ಚಿಚ್ ಆಫ್ ಆಗಿತ್ತು. ಏಪ್ರಿಲ್ 28-29ಕ್ಕೆ ನವ್ಯಳ ಮದುವೆ ನಿಶ್ಚಯ ಮಾಡಿದ್ದು, ಎಲ್ಲಾ ತಯಾರಿ ಮಾಡಿದ್ದೆವು. ಮಂಟಪ ಸಹ ಬುಕ್ ಮಾಡಲಾಗಿತ್ತಿ. ಅಲ್ಲದೇ ಜನವರಿ 25ಕ್ಕೆ ಬೆಂಗಳೂರಿನಲ್ಲಿ ಎಂಗೇಜ್ಮೆಂಟ್ ಕೂಡ ಮಾಡಬೇಕಿತ್ತು ಸರ್ ಎಂದು ಮಗಳನ್ನು ನೆನೆದು ಗೋಳಾಡಿದರು.
ಕುಚಿಕು ಗೆಳೆಯರನ್ನು ಗುರುತಿಸಲು ಡಿಎನ್ಎ ಟೆಸ್ಟ್
ನವ್ಯ ಹಾಗೂ ಮಾನಸ ಅವರ ಶವಗಳನ್ನು ಗುರುತು ಹಿಡಿಯಲು ಇಬ್ಬರ ತಂದೆ – ತಾಯಿಯನ್ನು ಕರೆಯಿಸಿದ್ದರೂ ಸಾಧ್ಯವಾಗಿಲ್ಲ. ಕತ್ತಿನಲ್ಲಿದ್ದ ಚೈನ್ ಮೂಲಕ ಪತ್ತೆ ಮಾಡಲು ಮುಂದಾಗಿದ್ದರು . ಆದ್ರೆ, ಇಬ್ಬರೂ ಕುಚಿಕು ಸ್ನೇಹಿತರಾಗಿದ್ದರಿಂದ ಪರಸ್ಪರ ಎಕ್ಸ್ಚೇಂಜ್ ಮಾಡಿಕೊಳ್ಳುತ್ತಾರೆ ಎಂದು ಕುಟುಂಬಸ್ಥರು ಹೇಳಿದ್ದಾರೆ. ಹೀಗಾಗಿ ಪತ್ತೆ ಮಾಡಲು ಗೊಂದಲ ಸೃಷ್ಟಿ ಆಗಿದೆ. ಹಾಗಾಗಿ, ಅಂತಿಮವಾಗಿ ಇವರಿಬ್ಬರ ಅಸ್ಥಿಪಂಜರದ ಮೂಳೆಗಳನ್ನು ಅವರ ಸಂಬಂಧಿಕರ ರಕ್ತದ ಸ್ಯಾಂಪಲ್ ನಿಂದ ಡಿಎನ್ ಎ ಟೆಸ್ಟ್ ಮಾಡಿಸಲು ಪೊಲೀಸರು ನಿರ್ಧರಿಸಿದ್ದಾರೆ. ಡಿಎನ್ ಎ ಟೆಸ್ಟ್ ನಿಂದ ಈ ಎರಡು ಅಸ್ಥಿಪಂಜರಗಳಲ್ಲಿ ಯಾರು ನವ್ಯಾ, ಯಾರು ಮಾನಸ ಎಂಬುದು ತಿಳಿದುಬರಲಿದೆ.
ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 5:59 pm, Fri, 26 December 25




