ಸೂರಜ್ ರೇವಣ್ಣ ಪರ ದೂರು ನೀಡಿದ್ದ ಶಿವಕುಮಾರ್ ನಾಪತ್ತೆ, ಜತೆ ಇದ್ದು ಪಿತೂರಿ ಮಾಡಿದ್ನಾ?

ಜೆಡಿಎಸ್ ಕಾರ್ಯಕರ್ತನೋರ್ವ ವಿಧಾನಪರಿಷತ್ ಸದಸ್ಯ ಸೂರಜ್‌ ರೇವಣ್ಣ (Suraj Revanna Case) ವಿರುದ್ಧ ಸಲಿಂಗ ಕಾಮ, ಅಸಹಜ ಲೈಂಗಿಕ ದೌರ್ಜನ್ಯ (unnatural sexual abuse) ಆರೋಪ ಮಾಡಿದ್ದಾನೆ. ಮತ್ತೊಂದೆಡೆ ಸೂರಜ್ ವಿರುದ್ಧ ಆರೋಪ ಮಾಡಿರುವ ಯುವಕನ ವಿರುದ್ಧವೇ ಶಿವಕುಮಾರ್ ಎನ್ನುವಾತ ದೂರು ನೀಡಿದ್ದಾನೆ. ಆದ್ರೆ, ಇದೀಗ ಸೂರಜ್ ಅರೆಸ್ಟ್ ಆಗುತ್ತಿದ್ದಂತೆಯೇ ಶಿವಕುಮಾರ್ ನಾಪತ್ತೆಯಾಗಿದ್ದಾರೆ.

ಸೂರಜ್ ರೇವಣ್ಣ ಪರ ದೂರು ನೀಡಿದ್ದ ಶಿವಕುಮಾರ್ ನಾಪತ್ತೆ, ಜತೆ ಇದ್ದು ಪಿತೂರಿ ಮಾಡಿದ್ನಾ?
ಶಿವಕುಮಾರ್, ಸೂರಜ್ ರೇವಣ್ಣ
Follow us
ಮಂಜುನಾಥ ಕೆಬಿ
| Updated By: ರಮೇಶ್ ಬಿ. ಜವಳಗೇರಾ

Updated on: Jun 23, 2024 | 3:39 PM

ಹಾಸನ, (ಜೂನ್ 23): ಇತ್ತ ಬೆಂಗಳೂರಿನಲ್ಲಿ ಜೆಡಿಎಸ್ ಕಾರ್ಯಕರ್ತನೋರ್ವ, ಸೂರಜ್ ರೇವಣ್ಣ (Suraj Revanna) ವಿರುದ್ಧ ಸಲಿಂಗ ಕಾಮ, ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣ ದಾಖಲಿಸುತ್ತಿದ್ದಂತೆಯೇ ಇತ್ತ ಹೊಳೆನರಸೀಪುರದಲ್ಲಿ ಸಂತ್ರಸ್ತನ ವಿರುದ್ಧವೇ ದೂರು ದಾಖಲಾಗಿದೆ. ಸೂರಜ್ ರೇವಣ್ಣ ಆಪ್ತ ಶಿವಕುಮಾರ್ ಎನ್ನುವಾತ ಸಂತ್ರಸ್ತನ ವಿರುದ್ಧ ಹೊಳೆನರಸೀಪುರ ಟೌನ್ ಪೊಲೀಸ್ ಠಾಣೆಯಲ್ಲಿ ಬ್ಲ್ಯಾಕ್​ ಮೇಲ್​ ದೂರು ನೀಡಿದ್ದಾನೆ. ಆದ್ರೆ, ಇದೀಗ ಸಂತ್ರಸ್ತನ ದೂರಿನ ಅನ್ವಯ ಸೂರಜ್​ನನ್ನು ಪೊಲೀಸರು ಅರೆಸ್ಟ್ ಮಾಡುತ್ತಿದ್ದಂತೆಯೇ ಆಪ್ತ ಶಿವಕುಮಾರ್ ನಾಪತ್ತೆಯಾಗಿದ್ದಾರೆ.

ಸೂರಜ್ ರೇವಣ್ಣ ಪರವಾಗಿ ದೂರು ನೀಡಿದ ನಂತರ ಶಿವಕುಮಾರ್ ಸಂಪರ್ಕ ಸಾಧ್ಯವಾಗುತ್ತಿಲ್ಲ. ಮೊಬೈಲ್ ಸ್ವಿಚ್ ಆಫ್ ಮಾಡಿಕೊಂಡು ಶಿವಕುಮಾರ್ ನಾಪತ್ತೆ ನಾಪತ್ತೆಯಾಗಿದ್ದಾನೆ. ಸಂತ್ರಸ್ತನ ವಿರುದ್ಧ ಶಿವಕುಮಾರ್​​ ನೀಡಿದ್ದ ದೂರಿಗೆ ಸಾಕ್ಷಿ ನೀಡಲು ಹೋಗಿಯೇ ಸೂರಜ್ ರೇವಣ್ಣ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾರೆ. ಈ ಹಿನ್ನೆಲೆಯಲ್ಲಿ ಈಗ ಶಿವಕುಮಾರ್, ಸೂರಜ್ ರೇವಣ್ಣ ಜೊತೆಗಿದ್ದೇ ಪಿತೂರಿ ನಡೆಸಿದ್ನಾ? ಬೇರೆಯವರ ಜೊತೆ ಸೇರಿ ಟ್ರ್ಯಾಪ್ ಮಾಡಿದ್ನಾ? ಹೀಗೆ ಹಲವು ಅನುಮಾನಗಳು ಎಡೆಮಾಡಿಕೊಟ್ಟಿವೆ.

ಇದನ್ನೂ ಓದಿ: ಸೂರಜ್‌ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಮಾಡಿದ ವ್ಯಕ್ತಿ ವಿರುದ್ಧವೇ ಎಫ್‌ಐಆರ್

ಸೂರಜ್ ಆಪ್ತ ಶಿವಕುಮಾರ್ ಹೇಳಿದ್ದೇನು?

ಸೂರಜ್ ರೇವಣ್ಣ ವಿರುದ್ಧ ದೂರುದಾರ ಲೈಂಗಿಕ ಕಿರುಕುಳ ದೂರು ನೀಡುವುದಾಗಿ ಬೆದರಿಕೆ ಹಾಕಿದ್ದ. ಐದು ಕೋಟಿ ಹಣ ನೀಡದಿದ್ದರೆ ಲೈಂಗಿಕ ದೌರ್ಜನ್ಯ ಕೇಸ್ ದಾಖಲಿಸುತ್ತೇನೆ ಎಂದು ಬೆದರಿಕೆ ಹಾಕಿದ್ದಾನೆ. ಸುಳ್ಳು ದೂರು ನೀಡಿ ಬೆದರಿಕೆ ಹಾಕಿರುವ ಬಗ್ಗೆ ಉಲ್ಲೇಖಿಸಿ ಸೂರಜ್ ರೇವಣ್ಣ ಆಪ್ತ ಶಿವಕುಮಾರ್ ದೂರು ಸಲ್ಲಿಕೆ ಮಾಡಿದ್ದರಿಂದ ಐಪಿಸಿ ಸೆಕ್ಸೆನ್ 384, 506 ರ ಅಡಿಯಲ್ಲಿ 168/2024 ರಡಿ ಕೇಸ್ ದಾಖಲಾಗಿದೆ. ನಿಮ್ಮ ಬಾಸ್ ಬಳಿ ಕೆಲಸ ಕೊಡಿಸು ಎಂದು ಅರಕಲಗೂಡು ಮೂಲದ ಯುವಕ ಕೇಳಿಕೊಂಡಿದ್ದ. ನೀನೇ ಹೋಗಿ ಬಾಸ್ ಭೇಟಿ ಮಾಡು ಎಂದು ಫೊನ್ ನಂಬರ್ ಕೊಟ್ಟಿದ್ದೆ. ಜೂನ್ 16 ರಂದು ಗನ್ನಿಕಡದ ತೋಟದ ಮನೆಗೆ ಕೆಲಸ ಕೇಳಲು ಸಂತ್ರಸ್ತ ಹೋಗಿದ್ದ. ಕೆಲಸ ಕೇಳಿ ವಾಪಸ್ ಬಂದ ಬಳಿಕ ಬ್ಲ್ಯಾಕ್ ಮೇಲ್ ಮಾಡಿರೊದಾಗಿ ಆರೋಪಿಸಲಾಗಿದೆ. ನೀನು ಕೆಲಸ ಕೊಡಿಸಲ್ಲ, ನಿಮ್ಮ ಬಾಸೂ ಕೆಲಸ ಕೊಡಿಸ್ತಿಲ್ಲ. ನನಗೆ ತುಂಬಾ ಕಷ್ಟ ಇದೆ, ನನಗೆ ಹಣ ಬೇಕು. ನೀನು, ನಿಮ್ಮ ಬಾಸ್‌ನಿಂದ ಐದು ಕೋಟಿ ಹಣ ಕೊಡಿಸದಿದ್ದರೆ, ಅವರ ವಿರುದ್ಧ ಲೈಂಗಿಕ ದೌರ್ಜನ್ಯ ಕೇಸ್ ದಾಖಲಿಸುತ್ತೇನೆ ಎಂದು ಸಂತ್ರಸ್ತ ಬೆದರಿಕೆ ಹಾಕಿದ್ದಾನೆ ಎಂದು ದೂರುದಾರ ಶಿವಕುಮಾರ್‌ ಹೇಳಿದ್ದರು.

ಈ ವಿಚಾರವನ್ನು ನಾನು ನಮ್ಮ ಬಾಸ್‌ಗೆ ತಿಳಿಸಿದೆ. ಆತ ಕೆಲಸ ಕೇಳಿಕೊಂಡು ಮನೆಗೆ ಬಂದಾಗ ಭದ್ರತೆಗಾಗಿ ಇದ್ದ ಪೊಲೀಸ್ ಸೇರಿ ಹಲವಾರು ಜನರು ಇದ್ದರು. ನಾನೇನು ತಪ್ಪು ಮಾಡಿಲ್ಲ, ಯಾಕೆ ಹಣ ಕೊಡಬೇಕು ಎಂದು ಬಾಸ್ ಹೇಳಿದರು. ನಂತರ ಜೂನ್ 18 ರಂದು ಹಾಸನದ ಜಿಲ್ಲಾಸ್ಪತ್ರೆಗೆ ಬಂದು ಆಸ್ಪತ್ರೆ ಚೀಟಿಗೆ ಎಂಎಲ್‌ಸಿ ಸೀಲ್ ಹಾಕಿಸಿ ಫೋಟೊ ಹಾಕಿ ಬೆದರಿಕೆ ಹಾಕಿದ್ದಾನೆ. ಆಸ್ಪತ್ರೆ ಚೀಟಿ ತೋರಿಸಿ ಮತ್ತೆ ಹಣಕ್ಕಾಗಿ ಡಿಮ್ಯಾಂಡ್ ಮಾಡಿದ್ದಾನೆ. ಐದು ಕೋಟಿ ಬಳಿಕ ಮೂರು ಕೋಟಿ ಅಥವಾ ಕಡೆಗೆ ಎರಡೂವರೆ ಕೋಟಿಯಾದ್ರು ಹಣ ಕೊಡಿಸು ಎಂದು ಡಿಮ್ಯಾಂಡ್ ಮಾಡಿದ್ದಾನೆ. ಹಣ ಕೊಡಿಸದಿದ್ದರೆ ದೊಡ್ಡ ಕುಟುಂಬವಾದ ಅವರ ಮರ್ಯಾದೆ ಕಳೆಯುತ್ತೇನೆ ಎಂದು ಬ್ಲ್ಯಾಕ್ ಮೇಲ್ ಮಾಡಿದ ಬಗ್ಗೆ ದೂರು ಸಲ್ಲಿಸಲಾಗಿದೆ ಎಂದು ಸೂರಜ್‌ ಆಪ್ತ ಶಿವಕುಮಾರ್‌ ಎಂದಿದ್ದ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು