AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

2028ಕ್ಕೆ ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರ ಶತಃಸಿದ್ಧ: ಕೇಂದ್ರ ಸಚಿವ ಹೆಚ್​​.ಡಿ. ಕುಮಾರಸ್ವಾಮಿ

2028ಕ್ಕೆ ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರ ಬರುವುದು ಶತಃಸಿದ್ಧ ಎಂದ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಭವಿಷ್ಯ ನುಡಿದಿದ್ದಾರೆ. ಗೃಹ ಸಚಿವರ ನಡೆ ನೋಡಿದ್ರೆ ಹುನ್ನಾರ ನಡೆದಿದೆ ಎನ್ನಿಸುತ್ತಿದೆ. ನನ್ನನ್ನು ಪ್ರಚೋದಿಸಲು ಸಿಎಂರಿಂದ ನಿರ್ದೇಶನ ತೆಗೆದುಕೊಂಡು ಪ್ರಿಯಾಂಕ್ ಖರ್ಗೆ ಹೀಗೆ ಮಾತನಾಡುತ್ತಿದ್ದಾರೆ ಎಂದವರು ಗಂಭೀರ ಆರೋಪ ಮಾಡಿದ್ದಾರೆ. ಇದಕ್ಕೆ ಪ್ರಿಯಾಂಕ್​​ರಿಂದಲೂ ಕೌಂಟರ್​​ ವ್ಯಕ್ತವಾಗಿದೆ.

2028ಕ್ಕೆ ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರ ಶತಃಸಿದ್ಧ: ಕೇಂದ್ರ ಸಚಿವ ಹೆಚ್​​.ಡಿ. ಕುಮಾರಸ್ವಾಮಿ
ಹೆಚ್​​.ಡಿ. ಕುಮಾರಸ್ವಾಮಿ
ಮಂಜುನಾಥ ಕೆಬಿ
| Edited By: |

Updated on:Oct 18, 2026 | 2:32 PM

Share

ಹಾಸನ, ಅಕ್ಟೋಬರ್​​ 18: 2028ಕ್ಕೆ ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರ ಬರೋದು ಶತಃಸಿದ್ಧ ಎಂದು ಕೇಂದ್ರ ಸಚಿವ ಹೆಚ್​​.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಹಾಸನದಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ಇಲ್ಲದಿದ್ರೆ ಕಾಂಗ್ರೆಸ್​ ಯಾವತ್ತೋ ಮುಗಿದು ಹೋಗ್ತಿತ್ತು. ಅವರ ಜೊತೆ ರಾಜಕೀಯವಾಗಿ ದೊಡ್ಡ ಹೋರಾಟ ಮಾಡಿದ್ದೇನೆ. ಆದರೆ ಈಗ ಸಿದ್ದರಾಮಯ್ಯರನ್ನು ಮುಗಿಸಲು ಏನೆಲ್ಲಾ ನಡೆದಿದೆ? ಯಾವಾಗಲೂ ಅಧಿಕಾರದಲ್ಲಿ ನೀವೇ ಇರ್ತಿರಾ, 1 ವರ್ಷ ಕಳೆಯಲಿ ಏನಾಗುತ್ತೆ ಎಂದು ಗೊತ್ತಾಗಲಿದೆ. ಹಾಸನಾಂಬೆ ದೇವಾಲಯದ ಬಾಗಿಲು ಶೀಘ್ರದಲ್ಲೇ ತೆರೆಯಲಿದ್ದು, ದೇವಾಲಯದಲ್ಲಿ ಕುಳಿತು ಮಾತನಾಡುತ್ತೇನೆ. ಸಿದ್ದರಾಮಯ್ಯ ಯಾಕೆ ಬಾಯಿ ಬಿಡ್ತಿಲ್ಲ ಅನ್ನೋದೆ ನನಗೆ ಆಶ್ಚರ್ಯ ಎಂದವರು ಹೇಳಿದ್ದಾರೆ.

‘ತನಿಖೆ ನಡೆಸಲು ಇನ್ನೇನು ದಾಖಲೆ ಬೇಕು?’

ಸ್ಟಿಂಗ್ ಆಪರೇಷನ್ ನಾನೇ ಮಾಡಿದ್ದೇನೆಂದು ಆ ವ್ಯಕ್ತಿ ಹೇಳಿದ್ದು, ತನಿಖೆ ನಡೆಸಲು ಇನ್ನೇನು ದಾಖಲೆ ಬೇಕು? ಪಕ್ಷದ ಕಾರ್ಯಕರ್ತೆಯನ್ನು ಕೂರಿಸಿಕೊಂಡು ಸಿದ್ದರಾಮಯ್ಯ ಹೆಸರು ಹೇಳು ಅಂತಾರೆ. ಸಿದ್ದರಾಮಯ್ಯ ಎಷ್ಟೊತ್ತು ಇದ್ದರು, ಅವರ ದೇಹದ ಗುರುತು ಇದೆಯಾ ಎಂದು ಕಾರ್ಯಕರ್ತೆಯೊಬ್ಬರನ್ನು ಪ್ರಶ್ನೆ ಮಾಡುತ್ತಾರೆ. ಆ ವ್ಯಕ್ತಿಯನ್ನ ಟಚ್​ ಮಾಡೋಕೆ ಆಗ್ತಿಲ್ಲ, ಯಾಕೆ ಟಚ್ ಮಾಡೋಕೆ ಆಗ್ತಿಲ್ಲ? ಸಾಕಷ್ಟು ಪೊಲೀಸ್​ ಅಧಿಕಾರಿಗಳ ಸ್ಟಿಂಗ್ ಆಪರೇಷನ್ ಕೂಡ ಮಾಡಿದ್ದಾರೆ ಎಂದು ಕುಮಾರಸ್ವಾಮಿ ಮತ್ತೊಂದು ಸ್ಫೋಟಕ ಆರೋಪ ಮಾಡಿದ್ದಾರೆ. ಹಲವು ನಾಯಕರ ಸ್ಟಿಂಗ್ ಆಪರೇಷನ್ ಆಗಿದೆ ಎಂದು ರಾಜಣ್ಣ ಹೇಳಿದ್ದಾರೆ. ಹೀಗಾಗಿ ಕಾಂಗ್ರೆಸ್ ಹಿರಿಯ ಶಾಸಕರ ಬಾಯಿಯನ್ನೇ ಮುಚ್ಚಿಸಿದ್ದಾರೆ. ಒಬ್ಬರು ಮಾಜಿ ಪ್ರಧಾನಮಂತ್ರಿಗಳ ಬಗ್ಗೆ ಏಕವಚನದಲ್ಲಿ ಮಾತನಾಡ್ತಾನೆ. ಈ ಕಾಂಗ್ರೆಸ್ ಸರ್ಕಾರ ಎಲ್ಲಿಗೆ ಹೋಗ್ತಿದೆ ಎಂದವರು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಸಿದ್ದರಾಮಯ್ಯ ಹೆಸ್ರು ಹಾಳು ಮಾಡಲು ಸ್ಟಿಂಗ್ ಮಾಡಿದ್ದಾರೆ; ಇದನ್ನೆಲ್ಲಾ ನೋಡಿ ಅವರ ರಕ್ತ ಕುದಿಯುತ್ತಿಲ್ವಾ; ಹೆಚ್​ಡಿಕೆ ಪ್ರಶ್ನೆ

ಕುಮಾರಸ್ವಾಮಿ V/s ಖರ್ಗೆ

ಗೃಹ ಸಚಿವರ ನಡೆ ನೋಡಿದ್ರೆ ಹುನ್ನಾರ ನಡೆದಿದೆ ಎನ್ನಿಸುತ್ತಿದೆ. ನನ್ನನ್ನು ಪ್ರಚೋದಿಸಲು ಸಿಎಂರಿಂದ ನಿರ್ದೇಶನ ತೆಗೆದುಕೊಂಡು ಪ್ರಿಯಾಂಕ್ ಖರ್ಗೆ ಹೀಗೆ ಮಾತನಾಡುತ್ತಿದ್ದಾರೆ. ನನ್ನನ್ನು ಉತ್ತರ ಕುಮಾರ ಅಂತಾರೆ. KPSC ಹಗರಣದ ಬಗ್ಗೆ ಎಲ್ಲ ಮಾಹಿತಿ ಇದ್ದರೂ ಎಲ್ಲಿದೆ ಅಂತಾರೆ. ಕೆಪಿಎಸ್​​ಸಿ ಹಗರಣದ ವಿಚಾರದಲ್ಲಿ ಅವರ ಬಳಿ ಉತ್ತರವೇ ಇಲ್ಲ ಎಂದೂ ಕುಮಾರಸ್ವಾಮಿ ಕಿಡಿ ಕಾರಿದ್ದಾರೆ. ಕೇಂದ್ರ ಸಚಿವರ ಹೇಳಿಕೆಗೆ ಪ್ರಿಯಾಂಕ್​​ ಖರ್ಗೆ ಕೂಡ ಕೌಂಟರ್​​ ನೀಡಿದ್ದು, ನಾನು ಯಾರಿಂದಲೂ ನಿರ್ದೇಶನ ತೆಗೆದುಕೊಂಡು ಮಾತನಾಡಲ್ಲ. ಮಣ್ಣಿನ‌ ಮಕ್ಕಳು ಸಿನಿಮಾ ನಿರ್ಮಾಣ ಮಾಡಬಹುದಂತೆ, ಜಾಗ್ವಾರ್ ಆಗಬಹುದಂತೆ. ಆದರೆ ಓರ್ವ ದಲಿತ ಬಲಿತ ಆಗಬಾರದಂತೆ. ಏನ್ರೀ ಕುಮಾರಸ್ವಾಮಿ ಅವರ ಲೆಕ್ಕ ಎಂದವರು ಪ್ರಶ್ನಿಸಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On - 12:36 pm, Sun, 18 October 26

Follow Us
ಮಂಜುನಾಥ ಕೆಬಿ
ಮಂಜುನಾಥ ಕೆಬಿ

ಮಂಜುನಾಥ ಕೆಬಿ ಪತ್ರಿಕೋದ್ಯಮದಲ್ಲಿ ಕಳೆದ 17 ವರ್ಷಗಳಿಂದ ಸೇವೆ ಮಾಡುತ್ತಿದ್ದೇನೆ. ಕರುನಾಡಿನ ಹೆಮ್ಮೆಯ ಸುದ್ದಿ ವಾಹಿನಿ ಟಿವಿ9 ಕನ್ನಡ ಜೊತೆಗೆ 15ನೇ ವರ್ಷದ ಪಯಣ ನನ್ನದು. ಓದಿದ್ದು, ಮೈಸೂರು ವಿವಿಯಲ್ಲಿ ಕಾನೂನು ಪದವಿ, ಎರಡು ವರ್ಷ ವಕೀಲ ವೃತ್ತಿ ಬಳಿಕ ಮಾಧ್ಯಮ ಕ್ಷೇತ್ರಕ್ಕೆ ಆಗಮಿಸಿ ಟಿವಿ9 ವಾಹಿನಿ ಮೂಲಕ ಸಮಸ್ಯೆಗೆ ಧ್ವನಿಯಾಗಿ ಕಾಯಕ. ಕೊಡಗಿನಲ್ಲಿ ಐದುವರೆ ವರ್ಷ ವರದಿಗಾರನಾಗಿ ಕರ್ತವ್ಯ ನಿರ್ವಹಿಸಿದ್ದು, ಇದೀಗ ಹಾಸನದ ಹಿರಿಯ ವರದಿಗಾರನಾಗಿ ಕರ್ತವ್ಯ ನಿರ್ವಹಣೆ ಮಾಡುತ್ತಿದ್ದೇನೆ.

Read More
ಸಿದ್ದರಾಮಯ್ಯರೊಂದಿಗೆ ಡಿಕೆಶಿ ಚರ್ಚೆ: ಕೆಲ ವಿಚಾರ ತಿಳಿಸಿದ್ದೇನೆ; ಸಿಎಂ
ಸಿದ್ದರಾಮಯ್ಯರೊಂದಿಗೆ ಡಿಕೆಶಿ ಚರ್ಚೆ: ಕೆಲ ವಿಚಾರ ತಿಳಿಸಿದ್ದೇನೆ; ಸಿಎಂ
ಸ್ಟಿಂಗ್ ಆಪರೇಷನ್: CCB ವಿಚಾರಣೆಗೆ ಬಂದ ಕೃಪಾ ಆಳ್ವಾ; ವಕೀಲೆ ಹೇಳಿದ್ದೇನು?
ಸ್ಟಿಂಗ್ ಆಪರೇಷನ್: CCB ವಿಚಾರಣೆಗೆ ಬಂದ ಕೃಪಾ ಆಳ್ವಾ; ವಕೀಲೆ ಹೇಳಿದ್ದೇನು?
ರಾಜ್ಯ ಸರ್ಕಾರ ಮತ್ತು ರಾಜಮನೆತನದ ನಡುವಿನ ಸಂಘರ್ಷಕ್ಕೆ ಯದುವೀರ್ ರಿಯಾಕ್ಷನ್
ರಾಜ್ಯ ಸರ್ಕಾರ ಮತ್ತು ರಾಜಮನೆತನದ ನಡುವಿನ ಸಂಘರ್ಷಕ್ಕೆ ಯದುವೀರ್ ರಿಯಾಕ್ಷನ್
ಸ್ಪರ್ಧಿಗಳಿಗೆ ಹೊರಗಿನ ವಿಷಯ ರಿವೀಲ್ ಮಾಡಿದ ಮಂಜು; ಇಡೀ ಮನೆ ಅಲ್ಲೋಲ ಕಲ್ಲೋಲ
ಸ್ಪರ್ಧಿಗಳಿಗೆ ಹೊರಗಿನ ವಿಷಯ ರಿವೀಲ್ ಮಾಡಿದ ಮಂಜು; ಇಡೀ ಮನೆ ಅಲ್ಲೋಲ ಕಲ್ಲೋಲ
ಮಂಡ್ಯದ ಚಿನಕುರಳಿ ಗ್ರಾಮದಲ್ಲಿ ಭೀಕರ ಅಗ್ನಿ ಅವಘಡ; ಭಸ್ಮವಾದ ಮೂರು ಅಂಗಡಿಗಳು
ಮಂಡ್ಯದ ಚಿನಕುರಳಿ ಗ್ರಾಮದಲ್ಲಿ ಭೀಕರ ಅಗ್ನಿ ಅವಘಡ; ಭಸ್ಮವಾದ ಮೂರು ಅಂಗಡಿಗಳು
ನವೆಂಬರ್ 13ರಂದು ಮೈಸೂರಿಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ
ನವೆಂಬರ್ 13ರಂದು ಮೈಸೂರಿಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ
ಶಾಸಕ ಜನಾರ್ದನ ರೆಡ್ಡಿಗೆ ಶಾಕ್​​ ಕೊಟ್ಟ ಬಳ್ಳಾರಿ ಜಿಲ್ಲಾಡಳಿತ
ಶಾಸಕ ಜನಾರ್ದನ ರೆಡ್ಡಿಗೆ ಶಾಕ್​​ ಕೊಟ್ಟ ಬಳ್ಳಾರಿ ಜಿಲ್ಲಾಡಳಿತ
ಹಾಸನಾಂಬೆಯ ದರ್ಶನ ಪಡೆದ ಪ್ರಿಯಾ; ಅತ್ತೆ ಸಂಪ್ರದಾಯ ಮುಂದುವರಿಸಿದ ಸೊಸೆ
ಹಾಸನಾಂಬೆಯ ದರ್ಶನ ಪಡೆದ ಪ್ರಿಯಾ; ಅತ್ತೆ ಸಂಪ್ರದಾಯ ಮುಂದುವರಿಸಿದ ಸೊಸೆ
ಮಗು ಶಯಾನ ಕೋಮಾ ಪ್ರಕರಣ: ನಿರ್ಲಕ್ಷ್ಯ ಆರೋಪ ತಳ್ಳಿಹಾಕಿದ ಆಸ್ಪತ್ರೆ
ಮಗು ಶಯಾನ ಕೋಮಾ ಪ್ರಕರಣ: ನಿರ್ಲಕ್ಷ್ಯ ಆರೋಪ ತಳ್ಳಿಹಾಕಿದ ಆಸ್ಪತ್ರೆ
ಸ್ಟಿಂಗ್ ಕೇಸ್: ವಿಚಾರಣೆಗೆ ಹಾಜರಾಗುವಂತೆ ಕೃಪಾ ಆಳ್ವಾಗೆ ಸಿಸಿಬಿ ನೋಟಿಸ್
ಸ್ಟಿಂಗ್ ಕೇಸ್: ವಿಚಾರಣೆಗೆ ಹಾಜರಾಗುವಂತೆ ಕೃಪಾ ಆಳ್ವಾಗೆ ಸಿಸಿಬಿ ನೋಟಿಸ್