ಕಾಂಗ್ರೆಸ್ ಮುಖಂಡನಿಗೆ ಕುರ್ಚಿ ಸಿಕ್ಕಿಲ್ಲವೆಂದು ಗದ್ದಲ: ಟಿಕೆಟ್​​ ಆಕಾಂಕ್ಷಿಗಳ ಸಭೆಯಲ್ಲೇ ‘ಕೈ’ ಕುರ್ಚಿ ಗಲಾಟೆ

ಹಾಸನ ಹೊರವಲಯದ ಕಲ್ಯಾಣ ಮಂಟಪದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಭೆ ನಡೆದಿದ್ದು, ಗದ್ದಲ ಉಂಟಾಗಿದೆ. ಆಸನ ಸಿಕ್ಕಿಲ್ಲವೆಂದು ಕಾಂಗ್ರೆಸ್​​ ಮುಖಂಡ ಹೆಚ್.ಕೆ.ಮಹೇಶ್​ ಬೆಂಬಲಿಗರಿಂದ ಗದ್ದಲ ಮಾಡಲಾಗಿದೆ. ಕಾರ್ಯಕರ್ತರ ವರ್ತನೆಗೆ ಸಚಿವ ಎನ್​.ಚಲುವರಾಯಸ್ವಾಮಿ ಬೇಸರ ವ್ಯಕ್ತಪಡಿಸಿದ್ದಾರೆ.

ಕಾಂಗ್ರೆಸ್ ಮುಖಂಡನಿಗೆ ಕುರ್ಚಿ ಸಿಕ್ಕಿಲ್ಲವೆಂದು ಗದ್ದಲ: ಟಿಕೆಟ್​​ ಆಕಾಂಕ್ಷಿಗಳ ಸಭೆಯಲ್ಲೇ ‘ಕೈ’ ಕುರ್ಚಿ ಗಲಾಟೆ
ಕಾಂಗ್ರೆಸ್ ಸಭೆ
Follow us
ಮಂಜುನಾಥ ಕೆಬಿ
| Updated By: ಗಂಗಾಧರ​ ಬ. ಸಾಬೋಜಿ

Updated on: Oct 22, 2023 | 4:46 PM

ಹಾಸನ, ಅಕ್ಟೋಬರ್​​​​​ 22: ಹಾಸನ ಲೋಕಸಭಾ ಕ್ಷೇತ್ರ ಗೆಲ್ಲಲು ಕಾಂಗ್ರೆಸ್ ಮೆಗಾ ಪ್ಲ್ಯಾನ್​ ಮಾಡಲಾಗುತ್ತಿದೆ. ಹಾಗಾಗಿ ಇಂದು ಹಾಸನ ಹೊರವಲಯದ ಕಲ್ಯಾಣ ಮಂಟಪದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಭೆ ನಡೆದಿದ್ದು, ಗದ್ದಲ ಉಂಟಾಗಿದೆ. ಆಸನ ಸಿಕ್ಕಿಲ್ಲವೆಂದು ಕಾಂಗ್ರೆಸ್​​ ಮುಖಂಡ ಹೆಚ್.ಕೆ.ಮಹೇಶ್​ ಬೆಂಬಲಿಗರಿಂದ ಗದ್ದಲ ಮಾಡಲಾಗಿದೆ. ಕಾರ್ಯಕರ್ತರ ವರ್ತನೆಗೆ ಸಚಿವ ಎನ್​.ಚಲುವರಾಯಸ್ವಾಮಿ (N chaluvaraya swamy) ಬೇಸರ ಉಂಟು ಮಾಡಿದೆ.

ನೀವು ಈ ರೀತಿ ಗಲಾಟೆ ಮಾಡಿದರೆ ನಾನು ಹೊರಟು ಹೋಗುತ್ತೇನೆ. 40 ವರ್ಷದಲ್ಲಿ ಈ ರೀತಿ ಸಭೆ ನೋಡಿಲ್ಲ. ಸಣ್ಣ ಪುಟ್ಟ ವ್ಯತ್ಯಾಸಗಳಿದ್ದರೆ ಸರಿ ಮಾಡಿಕೊಂಡು ಹೋರಾಡೋಣ ಎಂದು ಸಚಿವ ಎನ್. ಚಲುವರಾಯಸ್ವಾಮಿ ಹೇಳಿದ್ದಾರೆ.

ಇದನ್ನೂ ಓದಿ: ಬಿಜೆಪಿ ಟಿಕೆಟ್​ ಕೊಡಿಸುವುದಾಗಿ ಕೋಟ್ಯಂತರ ರೂ. ವಂಚನೆ: ವಂಚನೆಗೊಳಗಾದ ವ್ಯಕ್ತಿ ಹೇಳಿದ್ದಿಷ್ಟು

ಹಾಸನ ಲೋಕಸಭಾ ಕ್ಷೇತ್ರ ಗೆಲ್ಲಲು 5 ತಿಂಗಳ ಮುಂಚೆಯೇ ಕಾಂಗ್ರೆಸ್ ಚುನಾವಣಾ ತಯಾರಿ ನಡೆಸಿದ್ದು, ಸಚಿವರಾದ ಕೆ.ಎನ್.ರಾಜಣ್ಣ, ಚಲುವರಾಯಸ್ವಾಮಿ ನೇತೃತ್ವದಲ್ಲಿ ಸಭೆ ಮಾಡಲಾಗಿದೆ. ಕಾರ್ಯಕರ್ತರು, ಟಿಕೆಟ್​​ ಆಕಾಂಕ್ಷಿಗಳ ಜತೆ ಸಭೆ ನಡೆಸಿದರು. ಸಭೆಯಲ್ಲಿ ಕಾರ್ಯಕರ್ತರು, ಪ್ರಮುಖರಿಂದ ಮಾಹಿತಿ ಪಡೆಯಲಾಗಿದೆ.

ಅಭಿಪ್ರಾಯ ಸಂಗ್ರಹಿಸಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್​​ ಕೆಪಿಸಿಸಿಗೆ ಮಾಹಿತಿ ರವಾನಿಸಲಾಗಿದೆ. ಜಿಲ್ಲಾ ಉಸ್ತುವಾರಿ ಸಚಿವರ ಜೊತೆಗೆ ಮತ್ತೊಬ್ಬ ಸಚಿವರಿಗೆ ಜವಾಬ್ದಾರಿ ನೀಡಲಾಗಿದೆ. ಹಾಸನ ಲೋಕಸಭಾ ವ್ಯಾಪ್ತಿಯ ಕಾಂಗ್ರೆಸ್ ಶಾಸಕರಾದ ಶಿವಲಿಂಗೇಗೌಡ, ಕಡೂರು ಶಾಸಕ ಆನಂದ್, ಎಂಎಲ್​ಸಿ ಮಧು ಮಾದೇಗೌಡ ಭಾಗಿ ಆಗಿದ್ದರು.

ಇದನ್ನೂ ಓದಿ: ಈ ಹಿಂದೆ ರಾಜಕಾರಣ ಸೇವೆಯಾಗಿತ್ತು, ಈಗ ವೃತ್ತಿಯಾಗಿದೆ: ನಿವೃತ್ತ ಲೋಕಾಯುಕ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ

ಅದೇ ರೀತಿಯಾಗಿ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಇತ್ತೀಚೆಗೆ ಮಂಡ್ಯದಲ್ಲಿ ಕಾಂಗ್ರೆಸ್ ಪೂರ್ವಭಾವಿ ಸಭೆಯನ್ನ ಖಾಸಗಿ ಕಲ್ಯಾಣ ಮಂಟಪದಲ್ಲಿ ಆಯೋಜನೆ ಮಾಡಿತ್ತು. ಸಭೆಯಲ್ಲಿ ಮಂಡ್ಯ ಲೋಕಸಭಾ ಕ್ಷೇತ್ರ ಚುನಾವಣಾ ಉಸ್ತುವಾರಿ ಹಾಗೂ ಉನ್ನತ ಶಿಕ್ಷಣ ಸಚಿವರು ಆದ ಎಂಸಿ ಸುಧಾಕರ್, ಮಂಡ್ಯ ಉಸ್ತುವಾರಿ ಸಚಿವ ಎನ್​ ಚಲುವರಾಯಸ್ವಾಮಿ, ಶಾಸಕರಾದ ರಮೇಶ್ ಬಾಬು ಬಂಡಿಸಿದ್ದೇಗೌಡ, ನರೇಂದ್ರಸ್ವಾಮಿ, ಎಮ್ ಎಲ್ ಸಿಗಳಾದ ಜಿ ಮಧು ಮಾದೇಗೌಡ, ದಿನೇಶ್ ಗೂಳಿಗೌಡ ಸೇರಿದಂತೆ ಅನೇಕರು ಭಾಗವಹಿಸಿದ್ದರು.

ಸಭೆಯಲ್ಲಿ ವಿವಿಧ ಘಟಕಗಳ ಅಧ್ಯಕ್ಷರು, ಉಸ್ತುವಾರಿಗಳು, ಮಾಜಿ ಶಾಸಕರು, ಕಾಂಗ್ರೆಸ್ ಮುಖಂಡರು ಸಭೆಯಲ್ಲಿ ಪಾಲ್ಗೊಂಡಿದ್ದರು. ಸಭೆಯಲ್ಲಿ ಅನೇಕ ವಿಚಾರಗಳನ್ನ ಚರ್ಚೆ ಮಾಡಲಾಗಿದೆ. ಒಮ್ಮತ ಅಭ್ಯರ್ಥಿಯನ್ನ ಕಣಕ್ಕೆ ಇಳಿಸುವ ಬಗ್ಗೆ ಚರ್ಚೆ ಮಾಡಲಾಗಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ
ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ
ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ
ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ
ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ
ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ
ನಾ ಡಿಸೋಜ ಅಂತಿಮ ದರ್ಶನ, ಅಂತ್ಯಕ್ರಿಯೆ ಬಗ್ಗೆ ಪುತ್ರ ನವೀನ್ ಮಾಹಿತಿ
ನಾ ಡಿಸೋಜ ಅಂತಿಮ ದರ್ಶನ, ಅಂತ್ಯಕ್ರಿಯೆ ಬಗ್ಗೆ ಪುತ್ರ ನವೀನ್ ಮಾಹಿತಿ
ನಡುರಸ್ತೆಯಲ್ಲಿ ವಿದ್ಯಾರ್ಥಿನಿಯ ಕತ್ತು ಹಿಸುಕಿ ಕೊಲೆ ಮಾಡಲು ಯತ್ನಿಸಿದ ಯುವಕ
ನಡುರಸ್ತೆಯಲ್ಲಿ ವಿದ್ಯಾರ್ಥಿನಿಯ ಕತ್ತು ಹಿಸುಕಿ ಕೊಲೆ ಮಾಡಲು ಯತ್ನಿಸಿದ ಯುವಕ
ಕುದುರೆಮುಖ ಅರಣ್ಯದಲ್ಲಿ ನಕ್ಸಲ್​ ನಾಯಕಿ ಸುಂದರಿ ವಾಸ
ಕುದುರೆಮುಖ ಅರಣ್ಯದಲ್ಲಿ ನಕ್ಸಲ್​ ನಾಯಕಿ ಸುಂದರಿ ವಾಸ
ಆಸ್ಟ್ರೇಲಿಯಾದಲ್ಲಿ RCB ದಾಂಡಿಗನ ಸಿಡಿಲಬ್ಬರ: ಸ್ಪೋಟಕ ಅರ್ಧಶತಕ
ಆಸ್ಟ್ರೇಲಿಯಾದಲ್ಲಿ RCB ದಾಂಡಿಗನ ಸಿಡಿಲಬ್ಬರ: ಸ್ಪೋಟಕ ಅರ್ಧಶತಕ
ಆಮರಣಾಂತ ಉಪವಾಸ ಸತ್ಯಾಗ್ರಹ, ಪ್ರಶಾಂತ್ ಕಿಶೋರ್ ಬಂಧನ
ಆಮರಣಾಂತ ಉಪವಾಸ ಸತ್ಯಾಗ್ರಹ, ಪ್ರಶಾಂತ್ ಕಿಶೋರ್ ಬಂಧನ
ಈ ವಾರದ ಟಾಸ್ಕ್​ ಗೆದ್ದರೆ ಸಿಗಲಿದೆ ಡೈರೆಕ್ಟ್​ ಫಿನಾಲೆಗೆ ಏರುವ ಟಿಕೆಟ್
ಈ ವಾರದ ಟಾಸ್ಕ್​ ಗೆದ್ದರೆ ಸಿಗಲಿದೆ ಡೈರೆಕ್ಟ್​ ಫಿನಾಲೆಗೆ ಏರುವ ಟಿಕೆಟ್