AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್​ಗೆ ಅನುಮತಿ ಕೊಟ್ಟರೆ ರಾಜ್ಯದಲ್ಲಿ ರಕ್ತ ಕ್ರಾಂತಿ: ಕೈ ಶಾಸಕ ಎಚ್ಚರಿಕೆ

ಮುಡಾ ಮತ್ತು ವಾಲ್ಮೀಕಿ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್​ಗೆ ಅನುಮತಿ ನೀಡುವ ಸುದ್ದಿಹರಿದಾಡುತ್ತಿದ್ದು, ರಾಜ್ಯ ರಾಜಕಾರಣದಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಸಿದೆ. ಇತ್ತ ಇದರ ವಿರುದ್ಧ ಹಾಸನದಲ್ಲಿ ಕಾಂಗ್ರೆಸ್ ಪ್ರತಿಭಟನೆ ನಡೆಸಿದ್ದು, ಸಿದ್ದರಾಮಯ್ಯ ಸರ್ಕಾರ ಅಲುಗಾಡಿಸಿದ್ರೆ ರಕ್ತಕ್ರಾಂತಿಯಾಗುತ್ತೆ ಎಂದು ಕಾಂಗ್ರೆಸ್ ಶಾಸಕ ಎಚ್ಚರಿಕೆ ನೀಡಿದ್ದಾರೆ.

ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್​ಗೆ ಅನುಮತಿ ಕೊಟ್ಟರೆ ರಾಜ್ಯದಲ್ಲಿ ರಕ್ತ ಕ್ರಾಂತಿ: ಕೈ ಶಾಸಕ ಎಚ್ಚರಿಕೆ
ಕಾಂಗ್ರೆಸ್ ಶಾಸಕ ಶಿವಲಿಂಗೇಗೌಡ
ಮಂಜುನಾಥ ಕೆಬಿ
| Updated By: ರಮೇಶ್ ಬಿ. ಜವಳಗೇರಾ|

Updated on: Jul 31, 2024 | 7:14 PM

Share

ಹಾಸನ, (ಜುಲೈ 31): ಹಗರಣಗಳ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್​ಗೆ ಅನುಮತಿ ನೀಡಲಿದ್ದಾರೆ ಎನ್ನುವ ಸುದ್ದಿ ಓಡಾಡುತ್ತಿದೆ. ಈ ಸುದ್ದಿ ಬೆನ್ನಲ್ಲೇ ಇತ್ತ ಹಾಸನದಲ್ಲಿ ಕಾಂಗ್ರೆಸ್​ ಬೀದಿಗಳಿದು ಪ್ರತಿಭಟನೆ ನಡೆಸಿದ್ದು, ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದೆ. ಬಳಿಕ ಹಾಸನದ ಕಾಂಗ್ರೆಸ್ ಕಚೇರಿಯಿಂದ ಜಿಲ್ಲಾಧಿಕಾರಿ ಕಚೇರಿವರೆಗೂ ಮೆರವಣಿಗೆ ಮಾಡಿದ್ದು, ಸಿಎಂ ವಿರುದ್ಧ ಪ್ರಾಸಿಕ್ಯೂಷನ್​ಗೆ ಅನುಮತಿ ನೀಡದಂತೆ ಹಾಸನ ಡಿಸಿ ಮೂಲಕ ರಾಜ್ಯಪಾಲರಿಗೆ ಮನವಿಪತ್ರ ನೀಡಿದರು. ಈ ವೇಳೆ ಮಾತನಾಡಿದ ಶಾಸಕ ಶಿವಲಿಂಗೇಗೌಡ, ಸಿದ್ದರಾಮಯ್ಯ ಸರ್ಕಾರ ಅಲುಗಾಡಿಸಿದ್ರೆ ರಕ್ತಕ್ರಾಂತಿಯಾಗುತ್ತೆ ಎಂದು ಎಚ್ಚರಿಕೆ ನೀಡಿದರು.

ರಾಜ್ಯದಲ್ಲಿ ಸಿದ್ದರಾಮಯ್ಯ ಸರ್ಕಾರವನ್ನು ಅಲುಗಾಡಿಸಿದರೆ ರಕ್ತಕ್ರಾಂತಿ ಆಗುತ್ತೆ ಎಚ್ಚರದಿಂದ ಇರಿ. ನಿಮಗೆ ಏನಾದರೂ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡುವ ಆಲೋಚನೆ ಇದ್ದರೆ ಅದನ್ನು ಹಿಂಪಡೆದುಕೊಳ್ಳಿ. ಒಂದು ವೇಳೆ  ಪ್ರಾಸಿಕ್ಯೂಷನ್‌ಗೆ ನೋಟಿಸ್ ಕೊಟ್ಟರೆ ಉಗ್ರಕ್ರಾಂತಿ ಆಗುತ್ತದೆ ಎಂದು ಎಚ್ಚರಿಸಿದ್ದಾರೆ.

ಇದನ್ನೂ ಓದಿ: ರಾಜ್ಯಪಾಲರ ಮೂಲಕ ಸಿದ್ದರಾಮಯ್ಯ ಸರ್ಕಾರ ಅಸ್ಥಿರಗೊಳಿಸುವ ಕಸರತ್ತು ನಡೆದಿದ್ಯಾ? ಪುಷ್ಠಿ ನೀಡುವ ಅಂಶಗಳು ಇಲ್ಲಿವೆ

ಬಿಜೆಪಿ ಸರ್ಕಾರ ಎರಡು ಬಾರಿಯೂ ಮುಂಭಾಗಲಿನಿಂದ ಅಧಿಕಾರಕ್ಕೆ ಬಂದಿಲ್ಲ. ಬದಲಾಗಿ ಹಿಂಭಾಗಿಲಿನಿಂದ ಅಧಿಕಾರಕ್ಕೆ ಬಂದಿದೆ. ಈ ಬಾರಿ ಪುನಃ ಇದೇ ಆಟವನ್ನು ಬಿಜೆಪಿಯವರು ಹೊರಟಿದ್ದಾರೆ. ಇಂದು ಹಾಸನದಲ್ಲಿ ಕಾಂಗ್ರೆಸ್ ಕಚೇರಿಯಲ್ಲಿ ಇವತ್ತು ಸತ್ಯಶೋಧನೆ ಸಮಿತಿ ಸಭೆ ನಡೆಸಿದ್ದೇವೆ. ಇಂದು ಪ್ರತಿಭಟನೆ ಮೂಲಕ ಜಿಲ್ಲಾಧಿಕಾರಿಗೆ ಮನವಿ ನೀಡಿದ್ದೇವೆ. ಇದು ನಡೆದರೆ ಕೇಂದ್ರ ಸರ್ಕಾರ ಹಾಗೂ ಬಿಜೆಪಿ ವಿರುದ್ಧ ಉಗ್ರ ಹೋರಾಟ ಮಾಡುತ್ತೇವೆ, ರಕ್ತ ಕ್ರಾಂತಿ ಆಗುತ್ತೆ. ಇದಕ್ಕೆ ನಾವು ತಯಾರಾಗಿದ್ದೇವೆ ಎಂದು ಖಡಕ್ ಆಗಿ ಹೇಳಿದರು.

136 ಸೀಟ್ ಬಂದಿರುವ ಸರ್ಕಾರವನ್ನು ಅನ್ಯ ಮಾರ್ಗದಲ್ಲಿ ತಗೆಯಲು ಹೋದರೆ ಈ ರಾಜ್ಯದಲ್ಲಿ ಯುದ್ದನೇ ಆಗುತ್ತೆ, ರಕ್ತ ಕ್ರಾಂತಿ ಆಗುತ್ತೆ. ಬಿಜೆಪಿಗೆಯವರಿಗೆ ಇದು ಎಚ್ಚರಿಕೆ. ಎರಡು ಬಾರಿ ನಿಮ್ಮ ಆಟ ನೋಡಿದ್ದೇವೆ. ಈ ಬಾರಿ ನಿಮ್ಮ ಆಟ ನಡೆಯಲ್ಲ. ರಾಜ್ಯದಲ್ಲಿ ಯುದ್ದನೇ ಮಾಡಬೇಕಾಗುತ್ತೆ. ಅನಿವಾರ್ಯ ಘಟನೆ ನಡೆದರೆ ಎಲ್ಲಾ ಕಾಂಗ್ರೆಸ್ ಕಾರ್ಯಕರ್ತರು ಯುದ್ಧಕ್ಕೆ ತಯಾರಾಗಿ ಎಂದು ಕರೆ ನೀಡಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು