AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾಸನ: ಕೇರಳ ಮೂಲದ 102 ನರ್ಸಿಂಗ್ ವಿದ್ಯಾರ್ಥಿಗಳಿಗೆ ಕೊರೊನಾ ದೃಢ

ಮೂರು ದಿನಗಳಿಂದ 2042 ವಿದ್ಯಾರ್ಥಿಗಳಿಗೆ ಕೊವಿಡ್‌ ಟೆಸ್ಟ್‌ ಮಾಡಲಾಗಿತ್ತು. ಈ ಪೈಕಿ 102 ನರ್ಸಿಂಗ್ ವಿದ್ಯಾರ್ಥಿಗಳಿಗೆ ಕೊರೊನಾ ದೃಢವಾಗಿದೆ. ಕೇರಳದಿಂದ ಬಂದ ವಿದ್ಯಾರ್ಥಿಗಳಿಗೆ ಸೋಂಕು ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಆತಂಕ ಹೆಚ್ಚಾಗಿದೆ.

ಹಾಸನ: ಕೇರಳ ಮೂಲದ 102 ನರ್ಸಿಂಗ್ ವಿದ್ಯಾರ್ಥಿಗಳಿಗೆ ಕೊರೊನಾ ದೃಢ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: Aug 08, 2021 | 3:45 PM

Share

ಹಾಸನ: ಕೇರಳ ಮೂಲದ 102 ನರ್ಸಿಂಗ್ ವಿದ್ಯಾರ್ಥಿಗಳಿಗೆ ಜಿಲ್ಲೆಯಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ. ಹಾಸನ ನಗರದ ವಿವಿಧ ನರ್ಸಿಂಗ್ ಕಾಲೇಜು ವಿದ್ಯಾರ್ಥಿಗಳಿಗೆ ಕೊವಿಡ್-19 ದೃಢವಾಗಿದೆ. ಮೂರು ದಿನಗಳಿಂದ 2042 ವಿದ್ಯಾರ್ಥಿಗಳಿಗೆ ಕೊವಿಡ್‌ ಟೆಸ್ಟ್‌ ಮಾಡಲಾಗಿತ್ತು. ಈ ಪೈಕಿ 102 ನರ್ಸಿಂಗ್ ವಿದ್ಯಾರ್ಥಿಗಳಿಗೆ ಕೊರೊನಾ ದೃಢವಾಗಿದೆ. ಕೇರಳದಿಂದ ಬಂದ ವಿದ್ಯಾರ್ಥಿಗಳಿಗೆ ಸೋಂಕು ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಆತಂಕ ಹೆಚ್ಚಾಗಿದೆ.

ಕರ್ನಾಟಕ ರಾಜ್ಯದಲ್ಲಿ ಶನಿವಾರ (ಆಗಸ್ಟ್ 7) ಹೊಸದಾಗಿ 1,610 ಜನರಿಗೆ ಕೊರೊನಾ ಸೋಂಕು ದೃಢವಾಗಿದೆ. ಈ ಮೂಲಕ, ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 29,16,927 ಕ್ಕೆ ಏರಿಕೆಯಾಗಿದೆ. ಸೋಂಕಿತರ ಪೈಕಿ 28,55,862 ಜನ ಗುಣಮುಖರಾಗಿ ಡಿಸ್ಚಾರ್ಜ್ ಹೊಂದಿದ್ದಾರೆ. ರಾಜ್ಯದಲ್ಲಿ ಇಂದು ಕೊರೊನಾ ಸೋಂಕಿನಿಂದ 32 ಜನರ ಸಾವು ಸಂಭವಿಸಿದೆ. ಅದರಂತೆ, ರಾಜ್ಯದಲ್ಲಿ ಈವರೆಗೆ ಕೊರೊನಾದಿಂದ 36,773 ಜನ ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ 24,266 ಜನರಲ್ಲಿ ಕೊರೊನಾ ಸೋಂಕು ಸಕ್ರಿಯವಾಗಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಈ ಬಗ್ಗೆ ಮಾಹಿತಿ ನೀಡಿದೆ.

ಬೆಂಗಳೂರಿನಲ್ಲಿ ಇಂದು ಒಂದೇ ದಿನ 357 ಜನರಿಗೆ ಕೊವಿಡ್-19 ಸೋಂಕು ದೃಢಪಟ್ಟಿದೆ. ಈ ಮೂಲಕ, ಬೆಂಗಳೂರಲ್ಲಿ ಕೊರೊನಾ ಪೀಡಿತರ ಸಂಖ್ಯೆ 12,30,138 ಕ್ಕೆ ಏರಿಕೆಯಾಗಿದೆ. 12,30,138 ಸೋಂಕಿತರ ಪೈಕಿ 12,05,712 ಜನರು ಗುಣಮುಖರಾಗಿದ್ದಾರೆ. ರಾಜ್ಯ ರಾಜಧಾನಿಯಲ್ಲಿ ಇಂದು ಕೊರೊನಾ ಸೋಂಕಿಗೆ 5 ಮಂದಿ ಬಲಿಯಾಗಿದ್ದಾರೆ. ಅದರಂತೆ, ನಗರದಲ್ಲಿ ಕೊರೊನಾದಿಂದ ಈವರೆಗೆ 15,913 ಜನರ ಸಾವು ಸಂಭವಿಸಿದೆ. ಬೆಂಗಳೂರಲ್ಲಿ 8,512 ಜನರಲ್ಲಿ ಕೊರೊನಾ ಸೋಂಕು ಸಕ್ರಿಯವಾಗಿದೆ.

ಜಿಲ್ಲಾವಾರು ಕೊರೊನಾ ಪ್ರಕರಣಗಳ ವಿವರ ಬಾಗಲಕೋಟೆ 0, ಬಳ್ಳಾರಿ 9, ಬೆಳಗಾವಿ 26, ಬೆಂಗಳೂರು ಗ್ರಾಮಾಂತರ 21, ಬೆಂಗಳೂರು ನಗರ 357, ಬೀದರ್ 2, ಚಾಮರಾಜನಗರ 27, ಚಿಕ್ಕಬಳ್ಳಾಪುರ 6, ಚಿಕ್ಕಮಗಳೂರು 66, ಚಿತ್ರದುರ್ಗ 20, ದಕ್ಷಿಣ ಕನ್ನಡ 342, ದಾವಣಗೆರೆ 8, ಧಾರವಾಡ 11, ಗದಗ 3, ಹಾಸನ 129, ಹಾವೇರಿ 2, ಕಲಬುರಗಿ 4, ಕೊಡಗು 81, ಕೋಲಾರ 33, ಕೊಪ್ಪಳ 2, ಮಂಡ್ಯ 27, ಮೈಸೂರು 141, ರಾಯಚೂರು 10, ರಾಮನಗರ 5, ಶಿವಮೊಗ್ಗ 37, ತುಮಕೂರು 53, ಉಡುಪಿ 131, ಉತ್ತರ ಕನ್ನಡ 55, ವಿಜಯಪುರ 2, ಯಾದಗಿರಿ ಜಿಲ್ಲೆಯಲ್ಲಿ 0 ಕೊವಿಡ್ 19 ಪ್ರಕರಣಗಳು ದಾಖಲಾಗಿವೆ.

ಇದನ್ನೂ ಓದಿ: ‘ಇಂದಿನಿಂದ ನಾನು ಯಾವುದೇ ಸಮಾರಂಭದಲ್ಲಿ ಭಾಗಿಯಾಗಲ್ಲ; ಕೊರೊನಾ ತಡೆಗೆ ಸ್ವಯಂ ನಿರ್ಬಂಧ ವಿಧಿಸಿಕೊಳ್ಳಿ’

ಭಾರತಕ್ಕೆ ಸಿಕ್ಕಿತು ಮತ್ತೊಂದು ಕೊರೊನಾ ವ್ಯಾಕ್ಸಿನ್ -ಸಿಂಗಲ್ ಡೋಸ್ ಜಾನ್ಸನ್ ಲಸಿಕೆ: ಏನಿದರ ಮಹತ್ವ?

(Coronavirus Covid19 case confirmed to 102 Nursing Students from Kerala in Hassan)

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?