AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾಸನ: ಕೊರೊನಾ ಸೋಂಕು ಉಲ್ಬಣ; 23 ಪೊಲೀಸರಿಗೆ ಕೊರೊನಾ ಸೋಂಕು ದೃಢ

ಜನವರಿ 7 ಮತ್ತು 8 ರಂದು ಒಟ್ಟು 23 ಪೊಲೀಸರಿಗೆ ಕೊರೊನಾ ದೃಢಪಟ್ಟಿದೆ. ಸದ್ಯ ಎಲ್ಲರನ್ನೂ ಹೋಂ ಕ್ವಾರೆಂಟೇನ್ ಮಾಡಿದ್ದು, ಪೊಲೀಸ್ ಇಲಾಖೆ ಚಿಕಿತ್ಸೆ ಕೊಡಿಸುತ್ತಿದೆ. ಪ್ರಾಥಮಿಕ ಸಂಪರ್ಕದಲ್ಲಿರುವವರಿಗೂ ಇಂದು ಕೊವಿಡ್ ಟೆಸ್ಟ್ ಮಾಡಿಸಲು ಕ್ರಮ ಕೈಗೊಳ್ಳಲಾಗಿದೆ.

ಹಾಸನ: ಕೊರೊನಾ ಸೋಂಕು ಉಲ್ಬಣ; 23 ಪೊಲೀಸರಿಗೆ ಕೊರೊನಾ ಸೋಂಕು ದೃಢ
ಪ್ರಾತಿನಿಧಿಕ ಚಿತ್ರ
TV9 Web
| Updated By: preethi shettigar|

Updated on:Jan 09, 2022 | 10:47 AM

Share

ಹಾಸನ: ಕೊರೊನಾ ಸೋಂಕು ದಿನೇ ದಿನೇ ಹೆಚ್ಚಾಗುತ್ತಿದ್ದು, ಹಾಸನ ಜಿಲ್ಲೆಯಲ್ಲಿ 23 ಪೊಲೀಸರಿಗೆ ಕೊರೊನಾ (coronavirus) ಸೋಂಕು ದೃಢಪಟ್ಟಿದೆ. ಓರ್ವ ಇನ್ಸ್‌ಪೆಕ್ಟರ್, ಓರ್ವ ಸಬ್ ಇನ್ಸ್‌ಪೆಕ್ಟರ್, 21 ಕಾನ್ಸ್‌ಟೇಬಲ್‌ಗಳಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಹಾಸನ ನಗರದಲ್ಲಿಯೇ ಅತಿ ಹೆಚ್ಚು ಪೊಲೀಸರಿಗೆ ಕೊರೊನಾ ಪಾಸಿಟಿವ್ ಬಂದಿದೆ. ಟ್ರಾಫಿಕ್ ಹಾಗೂ ಗ್ರಾಮಾಂತರ ಠಾಣೆ ಪೊಲೀಸರಿಗೆ (karnataka police) ಕೊರೊನ ಪಾಸಿಟಿವ್ ಬಂದಿದೆ. ಶುಕ್ರವಾರ ಜಿಲ್ಲೆಯ ಎಲ್ಲಾ ಪೊಲೀಸರಿಗೂ ಕೊರೊನ ಟೆಸ್ಟ್ ಮಾಡಲಾಗಿತ್ತು. ರ್ಯಾಂಡಮ್ ಟೆಸ್ಟ್ ವೇಳೆ 23 ಪೊಲೀಸರಿಗೆ ಕೊರೊನಾ ಇರುವುದು ಪತ್ತೆಯಾಗಿದೆ.

ಜನವರಿ 7 ಮತ್ತು 8 ರಂದು ಒಟ್ಟು 23 ಪೊಲೀಸರಿಗೆ ಕೊರೊನಾ ದೃಢಪಟ್ಟಿದೆ. ಸದ್ಯ ಎಲ್ಲರನ್ನೂ ಹೋಂ ಕ್ವಾರೆಂಟೇನ್ ಮಾಡಿದ್ದು, ಪೊಲೀಸ್ ಇಲಾಖೆ ಚಿಕಿತ್ಸೆ ಕೊಡಿಸುತ್ತಿದೆ. ಪ್ರಾಥಮಿಕ ಸಂಪರ್ಕದಲ್ಲಿರುವವರಿಗೂ ಇಂದು ಕೊವಿಡ್ ಟೆಸ್ಟ್ ಮಾಡಿಸಲು ಕ್ರಮ ಕೈಗೊಳ್ಳಲಾಗಿದೆ.

ಮೈಸೂರು: ಕೊರೊನಾ ಸೋಂಕಿತ 11 ವಿದ್ಯಾರ್ಥಿನಿಯರಿಗೆ ಚಿಕಿತ್ಸೆ ಮೈಸೂರಿನ ನಜರ್‌ಬಾದ್‌ನಲ್ಲಿರುವ ಬಾಲಕಿಯರ ಶಾಲೆಯಲ್ಲಿ 11 ವಿದ್ಯಾರ್ಥಿನಿಯರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಒಬ್ಬ ವಿದ್ಯಾರ್ಥಿನಿಯಲ್ಲಿ ಸೋಂಕು ಕಾಣಿಸಿಕೊಂಡಿತ್ತು. ಹೀಗಾಗಿ ಶಾಲೆಯ ಇತರ ವಿದ್ಯಾರ್ಥಿಗಳಿಗೆ ಪರೀಕ್ಷೆ ಮಾಡಲಾಗಿತ್ತು. ಈ ಪರೀಕ್ಷೆ ವೇಳೆ ಮತ್ತೆ 10 ವಿದ್ಯಾರ್ಥಿನಿಯರಲ್ಲಿ ಸೋಂಕು ಕಾಣಿಸಿಕೊಂಡಿದೆ. ಸದ್ಯ ಎಲ್ಲರನ್ನೂ ಪ್ರತ್ಯೇಕವಾಗಿರಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ದಾವಣಗೆರೆಗೆ ಶುರುವಾದ ತಮಿಳು‌ನಾಡಿನ ಭೀತಿ ದಾವಣಗೆರೆ ಜಿಲ್ಲೆಯ ಚನ್ನಗಿರಿ ಹಾಗೂ ಜಗಳೂರು ತಾಲೂಕಿನಲ್ಲಿ ತಲಾ ಎರಡು ಪಾಸಿಟಿವ್ ಪ್ರಕರಣ ಪತ್ತೆಯಾಗಿದೆ. ತಮಿಳುನಾಡಿನಿಂದ ಬಂದ ನಾಲ್ವರಿಗೆ ಪಾಸಿಟಿವ್ ಬಂದಿದ್ದು, ದಾವಣಗೆರೆಯಲ್ಲಿ ಕೊರೊನಾ ಭೀತಿ ಎದುರಾಗಿದೆ. ಜಗಳೂರು ತಾಲೂಕಿನ ವಿವಿಧ ಕಡೆ ವಿಂಡ್ ಫ್ಯಾನ್ ಕಂಪನಿಗಳಲ್ಲಿ ಕೆಲಸ ಮಾಡುತ್ತಿದ್ದರು. ಇಬ್ಬರಿಗೆ ಹಾಗೂ ಚನ್ನಗಿರಿ ತಾಲೂಕಿನಿಂದ ತಮಿಳುನಾಡಿನ ಓಂಶಕ್ತಿ ಪುಣ್ಯಕ್ಷೇತ್ರಕ್ಕೆ ಹೋಗಿ ಬಂದ ಇಬ್ಬರು ಮಹಿಳೆಯರಿಗೆ ಸೋಂಕು ಪತ್ತೆಯಾಗಿದೆ. ಇನ್ನೂ 44 ಜನ ತಮಿಳುನಾಡಿನಿಂದ ಬಂದವರ ವರದಿಗಾಗಿ ಸದ್ಯ ಜಿಲ್ಲಾಡಳಿತ ಕಾಯುತ್ತಿದೆ.

ಮೈಸೂರು: ವಿಚಾರಣಾಧೀನ ಕೈದಿಗೆ ಸೋಂಕು ದೃಢ ಮೈಸೂರಿನ ಕೇಂದ್ರ ಕಾರಾಗೃಹದ ವಿಚಾರಣಾಧೀನ ಕೈದಿಗೆ ಕೊರೊನಾ ಸೋಂಕು ದೃಢವಾಗಿದೆ. ಎರಡು ದಿನಗಳ ಹಿಂದೆ ಅಷ್ಟೇ ಕರೆದುಕೊಂಡು ಬಂದಿದ್ದ ವಿಚಾರಣಾಧೀನ ಕೈದಿಯ ಸಂಪರ್ಕದಲ್ಲಿದ್ದ ಎಲ್ಲ ಸಿಬ್ಬಂದಿಗೆ ಕೊವಿಡ್ ಟೆಸ್ಟ್ ಮಾಡಿಸಲಾಗಿದೆ. ಸೋಂಕಿತನನ್ನು ಮೇಟಗಳ್ಳಿಯ ಕೊವಿಡ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಸುಮಾರು 10ಕ್ಕೂ ಹೆಚ್ಚು ಜೈಲು ಸಿಬ್ಬಂದಿಗೆ ಪರೀಕ್ಷೆ ಮಾಡಲಾಗಿದೆ.

ಇದನ್ನೂ ಓದಿ: ಇಟಲಿಯಿಂದ ಅಮೃತ​ಸರ​ಕ್ಕೆ ಬಂದ ವಿಮಾನದಲ್ಲಿದ್ದ 125 ಪ್ರಯಾಣಿಕರಿಗೆ ಕೊರೊನಾ ಸೋಂಕು ಎಂಬುದು ಸುಳ್ಳು ಸುದ್ದಿ: ಏರ್​ ಇಂಡಿಯಾ ಸ್ಪಷ್ಟನೆ

Covid 19: ದೇಶದಲ್ಲಿ ಏರುತ್ತಿದೆ ಕೊರೊನಾ; ಒಂದೇ ದಿನ 1,59,632 ಪ್ರಕರಣ ಪತ್ತೆ, 327 ಜನರ ಸಾವು

Published On - 10:02 am, Sun, 9 January 22

ಹೈವೇಯಲ್ಲೇ ಅಡುಗೆ ಮಾಡಿ ಧಿಮಾಕು ತೋರಿದ ಮಹಿಳೆ!
ಹೈವೇಯಲ್ಲೇ ಅಡುಗೆ ಮಾಡಿ ಧಿಮಾಕು ತೋರಿದ ಮಹಿಳೆ!
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ