ಹಾಸನ: ಕೋಟಿ ಕೋಟಿ ಇನ್ಶೂರೆನ್ಸ್ ಹಣ ಪಡೆಯಲು ಅಮಾಯಕನನ್ನು ಕೊಲೆ ಮಾಡಿ ನಾಟಕವಾಡಿದ್ದ ಖತರ್ನಾಕ್ ದಂಪತಿ ಅರೆಸ್ಟ್

ಸಾಲ ತೀರಿಸಲು ಕೋಟಿ ಕೋಟಿ ಇನ್ಶೂರೆನ್ಸ್ ಹಣ ಪಡೆಯಲೆಂದು ದಂಪತಿ ಖತರ್ನಾಕ್ ಪ್ಲಾನ್ ಮಾಡಿ ಸಿಕ್ಕಿಬಿದ್ದಿದ್ದಾರೆ. ಮುನಿಸ್ವಾಮಿ ಎಂಬುವವರು ಇನ್ಶೂರೆನ್ಸ್ ಹಣಕ್ಕಾಗಿ ತಮ್ಮನ್ನೇ ಹೋಲುವ ವ್ಯಕ್ತಿಯನ್ನು ಹುಡುಕಿ ಕೊಲೆ ಮಾಡಿ ಅಪಘಾತವೆಂಬಂತೆ ಬಿಂಬಿಸಿದ್ದಾರೆ. ಸದ್ಯ ತನನ್ನು ಬಜಾವ್ ಮಾಡುವಂತೆ ಆರೋಪಿ ಶಿಡ್ಲಘಟ್ಟ ಇನ್ಸ್ಪೆಕ್ಟರ್ ಮೊರೆ ಹೋಗಿದ್ದು ಶಿಡ್ಲಘಟ್ಟ ಇನ್ಸ್ಪೆಕ್ಟರ್ ಗಂಡಸಿ ಪೊಲೀಸರಿಗೆ ಮಾಹಿತಿ ನೀಡಿ ಆರೋಪಿಯನ್ನು ಬಂಧಿಸಲು ಸಹಾಯ ಮಾಡಿದ್ದಾರೆ.

ಹಾಸನ: ಕೋಟಿ ಕೋಟಿ ಇನ್ಶೂರೆನ್ಸ್ ಹಣ ಪಡೆಯಲು ಅಮಾಯಕನನ್ನು ಕೊಲೆ ಮಾಡಿ ನಾಟಕವಾಡಿದ್ದ ಖತರ್ನಾಕ್ ದಂಪತಿ ಅರೆಸ್ಟ್
ಇನ್ಶೂರೆನ್ಸ್ ಹಣ ಪಡೆಯಲು ಖತರ್ನಾಕ್ ಪ್ಲಾನ್ ಮಾಡಿ ಸಿಕ್ಕಿಬಿದ್ದ ದಂಪತಿ
Follow us
ಮಂಜುನಾಥ ಕೆಬಿ
| Updated By: ಆಯೇಷಾ ಬಾನು

Updated on:Aug 24, 2024 | 11:58 AM

ಹಾಸನ, ಆಗಸ್ಟ್​.24: ಕೋಟಿ ಕೋಟಿ ಇನ್ಶೂರೆನ್ಸ್ ಹಣಕ್ಕಾಗಿ (Insurance Money) ಅಮಾಯಕನನ್ನು ಕೊಲೆ (Murder) ಮಾಡಿ ಅಪಘಾತವೆಂದು ಬಿಂಬಿಸಿ ನಾಟಕವಾಡಿದ್ದ ಖತರ್ನಾಕ್ ದಂಪತಿಯನ್ನು ಬಂಧಿಸಲಾಗಿದೆ. ಈ ನಟೋರಿಯಸ್ ದಂಪತಿ ಅಮಾಯಕನನ್ನು ಕೊಂದು ಹಣ ಪೀಕಲು ಪ್ಲಾನ್ ಮಾಡಿದ್ದರು. ಹತ್ತು ದಿನಗಳ ನಂತರ ಸಿನಿಮೀಯ ಮಾದರಿ ಕೊಲೆ ಪ್ರಕರಣದ ರಹಸ್ಯ ಬಯಲಾಗಿದೆ.

ಆಗಸ್ಟ್​ 12ರಂದು ಅರಸೀಕೆರೆ ತಾಲೂಕಿನ, ಗೊಲ್ಲರಹೊಸಳ್ಳಿ ಗೇಟ್ ಬಳಿ ಲಾರಿ ಡಿಕ್ಕಿಯಾಗಿ ಓರ್ವ ವ್ಯಕ್ತಿ ಮೃತಪಟ್ಟಿದ್ದ. ಸ್ಥಳದಲ್ಲಿ ಇದ್ದ ಕಾರಿನ ಆಧಾರದಲ್ಲಿ ಪೊಲೀಸರು ಮೃತನ ಗುರುತು ಪತ್ತೆ ಹಚ್ಚಿದ್ದರು. ಬೆಂಗಳೂರು ಹೊಸಕೋಟೆ ಮೂಲದ ಶಿಲ್ಪರಾಣಿ ಎಂಬುವವರು ಆ.13ರಂದು ಜಿಲ್ಲಾಸ್ಪತ್ರೆಗೆ ಬಂದು ಶವದ ಗುರುತು ಪತ್ತೆ ಹಚ್ಚಿದ್ದರು. ಈ ಮೃತದೇಹ ನನ್ನ ಪತಿ ಮುನಿಸ್ವಾಮಿಗೌಡರದ್ದು ಎಂದು ಕಣ್ಣೀರು ಹಾಕಿದ್ದರು. ಆ.13 ರಂದು ಹೊಸಕೋಟೆ ತಾಲೂಕಿನ, ಚಿಕ್ಕಕೋಲಿಗ ಗ್ರಾಮದಲ್ಲಿ ಅಂತ್ಯಸಂಸ್ಕಾರ ಕೂಡ ನಡೆಸಲಾಗಿತ್ತು. ಇಷ್ಟೆಲ್ಲ ಆದ ನಂತರ ಮೃತ ವ್ಯಕ್ತಿಯ ಕುತ್ತಿಗೆಯಲ್ಲಿದ್ದ ಗಾಯದ ಗುರುತು ಕಂಡು ಅನುಮಾನಗೊಂಡ ಪೊಲೀಸರು ತೀವ್ರ ತನಿಖೆಗೆ ಇಳಿದ್ರು.

ಕುತ್ತಿಗೆ ಬಳಿ ಪತ್ತೆಯಾದ ಗುರುತಿನಿಂದ ಆರೋಪಿಗಳ ನಾಟಕ ಬಯಲು

ಮೃತ ವ್ಯಕ್ತಿಯ ಕುತ್ತಿಗೆ ಭಾಗದಲ್ಲಿ ಕಂಡು ಬಂದಿದ್ದ ಗುರುತಿನಿಂದ ಅನುಮಾನಗೊಂಡ ಗಂಡಸಿ ಠಾಣೆಯ ಪಿಎಸ್​ಐ ಹಾಗೂ ಅರಸೀಕೆರೆ ಗ್ರಾಮಾಂತರ ವೃತ್ತ ನಿರೀಕ್ಷರರು ತನಿಖೆ ನಡೆಸಿದ್ದು ತನಿಖೆ ವೇಳೆ ಆಘಾತಕಾರಿ ಅಂಶ ಬೆಳಕಿಗೆ ಬಂದಿದೆ. ಹೊಸಕೋಟೆಯಲ್ಲಿ ಎಮ್‌ಆರ್​ಎಫ್ ಟೈರ್ ಅಂಗಡಿ ಇಟ್ಟುಕೊಂಡಿದ್ದ ಮುನಿ ಸ್ವಾಮಿ ಗೌಡ, ಸಾಕಷ್ಟು ಸಾಲ ಮಾಡಿಕೊಂಡಿದ್ದ. ಈ ಸಾಲ ತೀರಿಸಲು ಹಣಕ್ಕಾಗಿ ಈ ದಂಪತಿ ಮಾಡಿದ ಪ್ಲಾನ್ ಅಂತಿಂತದ್ದಲ್ಲ.

ಇದನ್ನೂ ಓದಿ: ಕೊಪ್ಪಳದಲ್ಲಿ ವಿವಾದಕ್ಕೆ ಕಾರಣವಾದ ಬೀದಿದೀಪಗಳು; ಕಂಬಗಳ ಮೇಲೆ ಗದೆ, ಬಿಲ್ಲುಬಾಣ, ತಿಮ್ಮಪ್ಪನ ನಾಮದ ಚಿತ್ರ

ಸಾಲ ತೀರಿಸಲು ಖತರ್ನಾಕ್ ಪ್ಲಾನ್

ಮುನಿಸ್ವಾಮಿ ಗೌಡ ಹಾಗೂ ಆಕೆಯ ಹೆಂಡತಿ ಶಿಲ್ಪರಾಣಿ ಇಬ್ಬರೂ ಸೇರಿಕೊಂಡು ಸಾಲ ತೀರಿಸಲು ಇನ್ಶೂರೆನ್ಸ್ ಹಣಬೇಕೆಂದು ಖತರ್ನಾಕ್ ಪ್ಲಾನ್ ಮಾಡಿದ್ದಾರೆ. ಮುನಿಸ್ವಾಮಿಗೌಡನನ್ನೇ ಹೋಲುವ ವ್ಯಕ್ತಿಯನ್ನ ಹುಡುಕಿ ಹತ್ಯೆಗೆ ಪ್ಲಾನ್ ಮಾಡಿದ್ದಾರೆ. ವ್ಯಕ್ತಿಯನ್ನು ಕಾರಿನಲ್ಲಿ ಕರೆತಂದು ಅರಸೀಕೆರೆ ತಾಲೂಕಿನ ಗೊಲ್ಲರಹೊಸಳ್ಳಿ ಬಳಿ ಹತ್ಯೆ ಮಾಡಿ ಲಾರಿ ಚಾಲಕನ ಜೊತೆ ಸೇರಿ ಲಾರಿ ಡಿಕ್ಕಿ ಹೊಡೆಸಿ ಅಪಘಾತದಿಂದ ಸಾವು ಎಂಬಂತೆ ಬಿಂಭಿಸಿದ್ದಾರೆ.

ಈ ಘಟನೆ ಬಳಿಕ ಮುನಿಸ್ವಾಮಿ ತಲೆಮರಿಸಿಕೊಂಡಿದ್ದ. ತನ್ನದೇ ಸಾವಲ್ಲಿ ಏನಾಗುತ್ತಿದೆ ಎಂದು ತಿಳಿಯದೆ ಗೊಂದಲಕ್ಕೆ ಬಿದ್ದಿದ್ದ. ಇತ್ತ ಪತಿ ಕಳೆದುಕೊಂಡ ನೋವಿನಲ್ಲಿ ಇದ್ದಂತೆ ಪತ್ನಿ ಶಿಲ್ಪರಾಣಿ ಕೂಡ ನಾಟಕವಾಡಿದ್ದಳು. ಮುಂದೇನು ಮಾಡಬೇಕೆಂದು ತಿಳಿಯದೆ ಆರೋಪಿ ಮುನಿಸ್ವಾಮಿ ತನ್ನ ಸಂಬಂಧಿ ಇನ್ಸ್ಪೆಕ್ಟರ್ ಒಬ್ಬರ ಮುಂದೆ ಹಾಜರಾಗಿದ್ದ. ನಡೆದ ಘಟನೆ ವಿವರಿಸಿ ರಕ್ಷಣೆಗೆ ಅಂಗಲಾಚಿದ್ದ. ಆ ಇನ್ಸ್ಪೆಕ್ಟರ್, ಮುನಿಸ್ವಾಮಿ ಮಾಹಿತಿ ಬಳಿಕ ಗಂಡಸಿ ಪೊಲೀಸರಿಗೆ ಮಾಹಿತಿ ನೀಡಿದ್ದು ಕೂಡಲೇ ಆರೋಪಿಯನ್ನ ಬಂಧಿಸಲಾಗಿದೆ. ಶಿಡ್ಲಘಟ್ಟ ಇನ್ಸ್ಪೆಕ್ಟರ್ ರ ಕರ್ತವ್ಯ ಪ್ರಜ್ಞೆ ಹಾಗು ನಿಷ್ಠಾವಂತಿಕೆಯಿಂದ ಆರೋಪಿಯನ್ನು ಬಂಧಿಸಲಾಗಿದೆ. ಪ್ರಕರಣ ಉಳಿದ ಆರೋಪಿಗಳ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.

ಮೂರು ಬಾರಿ ಹತ್ಯೆಗೆ ಯತ್ನಿಸಿದ್ದ ದಂಪತಿ

ಇನ್ನು ಮೂರು ಬಾರಿ ಹತ್ಯೆಗೆ ಯತ್ನ ಮಾಡಿ ನಾಲ್ಕನೇ ಬಾರಿಗೆ ಸಕ್ಸಸ್ ಆಗಿದ್ದಾರೆ. ಅರಸೀಕೆರೆ ತಾಲ್ಲೂಕಿನ ಗಂಡಸಿ ರಸ್ತೆಯಲ್ಲೇ ಮೂರು ಬಾರಿಗೆ ಹತ್ಯೆ ಯತ್ನ ನಡೆದಿತ್ತು. ಮೂರು ಬಾರಿ ಫೇಲ್ಯೂರ್ ಆಗಿದ್ದ ಮುನಿಸ್ವಾಮಿ ಗೌಡ ನಾಲ್ಕನೇ ಬಾರಿಗೆ ಕೊಲೆಗೈದು ಅಪಘಾತ ಎಂದು ಬಿಂಬಿಸಿದ್ದ. ಪ್ರಕರಣ ಸಂಬಂಧ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪ್ರಮುಖ ಆರೋಪಿ ಮುನಿಸ್ವಾಮಿ ಹಾಗು ಲಾರಿ ಚಾಲಕ ಪೊಲೀಸರ ವಶದಲ್ಲಿದ್ದಾರೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 9:18 am, Sat, 24 August 24

ಈ ಕೋತಿ ಚಪಾತಿಯನ್ನೂ ಮಾಡುತ್ತೆ, ಪಾತ್ರೆಯನ್ನೂ ತೊಳೆಯುತ್ತೆ!
ಈ ಕೋತಿ ಚಪಾತಿಯನ್ನೂ ಮಾಡುತ್ತೆ, ಪಾತ್ರೆಯನ್ನೂ ತೊಳೆಯುತ್ತೆ!
ರಜೆಗೆ ಮನೆಗೆ ಹೊರಟಿದ್ದ ಸೈನಿಕ ಕಾಲು ಜಾರಿ ರೈಲಿನಡಿ ಬಿದ್ದು ಸಾವು
ರಜೆಗೆ ಮನೆಗೆ ಹೊರಟಿದ್ದ ಸೈನಿಕ ಕಾಲು ಜಾರಿ ರೈಲಿನಡಿ ಬಿದ್ದು ಸಾವು
ಹೊಸ ವರ್ಷದಂದು ಬೆಂಗಳೂರಿನ ಅಧಿಕಾರಿಗಳಿಗೆ ರಜೆ ಇಲ್ಲ: ಡಿಕೆ ಶಿವಕುಮಾರ್
ಹೊಸ ವರ್ಷದಂದು ಬೆಂಗಳೂರಿನ ಅಧಿಕಾರಿಗಳಿಗೆ ರಜೆ ಇಲ್ಲ: ಡಿಕೆ ಶಿವಕುಮಾರ್
ಈ ಬಾರಿ ಬಿಗ್ ಬಾಸ್ ಟ್ರೋಫಿ ಯಾರಿಗೆ? ಭವಿಷ್ಯ ನುಡಿದ ಐಶ್ವರ್ಯಾ
ಈ ಬಾರಿ ಬಿಗ್ ಬಾಸ್ ಟ್ರೋಫಿ ಯಾರಿಗೆ? ಭವಿಷ್ಯ ನುಡಿದ ಐಶ್ವರ್ಯಾ
ದೋಸೆ ಜೊತೆ ಅವರೇ ಕಾಳಿನ ಹಲವಾರು ತಿಂಡಿಗಳು ಮೇಳದಲ್ಲಿ ಲಭ್ಯ
ದೋಸೆ ಜೊತೆ ಅವರೇ ಕಾಳಿನ ಹಲವಾರು ತಿಂಡಿಗಳು ಮೇಳದಲ್ಲಿ ಲಭ್ಯ
ಹೊಲಗಳಿಗೆ ಕುಟುಂಬವಾಗಿ ತೆರಳಿ ಒಟ್ಟಿಗೆ ಕೂತು ಉಣ್ಣುವುದೇ ಒಂದು ಸಂಭ್ರಮ!
ಹೊಲಗಳಿಗೆ ಕುಟುಂಬವಾಗಿ ತೆರಳಿ ಒಟ್ಟಿಗೆ ಕೂತು ಉಣ್ಣುವುದೇ ಒಂದು ಸಂಭ್ರಮ!
ಬೆಂಗಳೂರು ನಗರದಲ್ಲಿ ಒತ್ತುವರಿ ಮಾಡಿಕೊಳ್ಳುವ ಕಾಯಕ ಎಗ್ಗಿಲ್ಲದೆ ಸಾಗುತ್ತಿದೆ
ಬೆಂಗಳೂರು ನಗರದಲ್ಲಿ ಒತ್ತುವರಿ ಮಾಡಿಕೊಳ್ಳುವ ಕಾಯಕ ಎಗ್ಗಿಲ್ಲದೆ ಸಾಗುತ್ತಿದೆ
ಹಿಮಪಾತದಿಂದ ಮನಾಲಿಯಲ್ಲಿ ಟ್ರಾಫಿಕ್ ಜಾಮ್; ಹಿಮದಲ್ಲೇ ಮುಚ್ಚಿಹೋದ ಕಾರುಗಳು
ಹಿಮಪಾತದಿಂದ ಮನಾಲಿಯಲ್ಲಿ ಟ್ರಾಫಿಕ್ ಜಾಮ್; ಹಿಮದಲ್ಲೇ ಮುಚ್ಚಿಹೋದ ಕಾರುಗಳು
ಮುನಿರತ್ನಗೆ ಒಂದು ನೋಟೀಸ್ ನೀಡುವ ಯೋಗ್ಯತೆ ಬಿಜೆಪಿಗಿಲ್ಲ: ಪ್ರಿಯಾಂಕ್ ಖರ್ಗೆ
ಮುನಿರತ್ನಗೆ ಒಂದು ನೋಟೀಸ್ ನೀಡುವ ಯೋಗ್ಯತೆ ಬಿಜೆಪಿಗಿಲ್ಲ: ಪ್ರಿಯಾಂಕ್ ಖರ್ಗೆ
ಮಹಿಳೆಯರ ವಿಷಯದಲ್ಲಿ ಅವಾಚ್ಯ ಪದಬಳಕೆ ಸಲ್ಲದು: ಬಸವರಾಜ ಹೊರಟ್ಟಿ, ಸಭಾಪತಿ
ಮಹಿಳೆಯರ ವಿಷಯದಲ್ಲಿ ಅವಾಚ್ಯ ಪದಬಳಕೆ ಸಲ್ಲದು: ಬಸವರಾಜ ಹೊರಟ್ಟಿ, ಸಭಾಪತಿ