Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡಿವೈಎಸ್​ಪಿ ಬ್ಯಾಂಕ್​ ಖಾತೆಗಳಿಗೆ ಕನ್ನ ಹಾಕಿದ ಖದೀಮರು; ಬರೋಬ್ಬರಿ 15,98,761 ರೂ. ವರ್ಗಾವಣೆ

ಸೈಬರ್ ಖದೀಮರು ಹಾಸನ ಉಪವಿಭಾಗದ ಪೊಲೀಸ್ ಉಪಾಧೀಕ್ಷಕ ಪಿ.ಕೆ.ಮುರಳೀಧರ್ ಅವರ 2 ಖಾತೆಯಿಂದ ಬರೋಬ್ಬರಿ 15,98,761 ಲಕ್ಷ ರೂ ಎಗರಿಸಿದ್ದಾರೆ. ಘಟನೆ ಸಂಬಂಧ ಹಾಸನ ನಗರದ ಸಿಇಎನ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಮುರಳೀಧರ್ ಅವರು ಖದೀಮರನ್ನು ಪತ್ತೆ ಮಾಡಿ ತಮ್ಮ ಹಣ ವಾಪಸ್ ಕೊಡಿಸುವಂತೆ ಸೆನ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಡಿವೈಎಸ್​ಪಿ ಬ್ಯಾಂಕ್​ ಖಾತೆಗಳಿಗೆ ಕನ್ನ ಹಾಕಿದ ಖದೀಮರು; ಬರೋಬ್ಬರಿ 15,98,761 ರೂ. ವರ್ಗಾವಣೆ
DySP ಪಿ.ಕೆ.ಮುರಳೀಧರ್
Follow us
ಮಂಜುನಾಥ ಕೆಬಿ
| Updated By: ಆಯೇಷಾ ಬಾನು

Updated on:May 22, 2024 | 7:58 AM

ಹಾಸನ, ಮೇ.22: ಖದೀಮರು ಡಿವೈಎಸ್​ಪಿ (DySP) ಬ್ಯಾಂಕ್​ ಖಾತೆಗಳಿಗೆ ಕನ್ನ ಹಾಕಿ 2 ಬ್ಯಾಂಕ್ ಖಾತೆಯಿಂದ 15,98,761 ರೂ. ಎಗರಿಸಿರುವ ಘಟನೆ ಹಾಸನದಲ್ಲಿ (Hassan) ನಡೆದಿದೆ. ಹಾಸನ ಉಪವಿಭಾಗದ ಪೊಲೀಸ್ ಉಪಾಧೀಕ್ಷಕ ಪಿ.ಕೆ.ಮುರಳೀಧರ್ ಅವರ ಖಾತೆಯಿಂದ ಸೈಬರ್ ಖದೀಮರು (Cyber Crime) ಹಣ ಎಗರಿಸಿದ್ದಾರೆ. 2 ಬ್ಯಾಂಕ್ ಖಾತೆಗಳಿಂದ ಬರೋಬ್ಬರಿ 15,98,761 ಲಕ್ಷ ರೂ ಎಗರಿಸಿದ್ದಾರೆ. ಘಟನೆ ಸಂಬಂಧ ಹಾಸನ ನಗರದ ಸಿಇಎನ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

DySP ಪಿ.ಕೆ.ಮುರಳೀಧರ್ ಅವರು ಮಡಿಕೇರಿಯ ಕೆನರಾ ಬ್ಯಾಂಕ್ ಮುಖ್ಯ ಶಾಖೆ ಹಾಗೂ ಭಾಗಮಂಡಲದ ಕೆನರಾ ಬ್ಯಾಂಕ್‌ನ ಶಾಖೆಯಲ್ಲಿ ಖಾತೆಗಳನ್ನು ಹೊಂದಿದ್ದಾರೆ. ಮೇ.20 ರಂದು ಮಧ್ಯಾಹ್ನ 1.30ರ ಸಮಯದಲ್ಲಿ ಫೋನ್​ಗೆ ಬಂದ ಮೆಸೇಜ್‌ಗಳ ಮೂಲಕ ಖದೀಮರ ಕೈಚಳಕ ಗಮನಕ್ಕೆ ಬಂದಿದೆ. ಡಿವೈಎಸ್‌ಪಿ ಅವರ ಬ್ಯಾಂಕ್‌ ಖಾತೆಗಳಿಂದ ಅಧಿಕಾರಿಯ ಗಮನಕ್ಕೆ ಬಾರದೆ ಬೇರೆ ಬೇರೆ ಖಾತೆಗಳಿಗೆ ಹಣ ವರ್ಗಾವಣೆ ಆಗಿದೆ.

ಕೆನರಾಬ್ಯಾಂಕ್ ಮಡಿಕೇರಿ ಮುಖ್ಯ ಶಾಖೆ ಖಾತೆಯಿಂದ ಬೆಳಗ್ಗೆ 10.29 ಗಂಟೆಯಿಂದ ಮಧ್ಯಾಹ್ನ 1.30 ಗಂಟೆವರೆಗೆ ಒಟ್ಟು 25 ವರ್ಗಾವಣೆಗಳ ಮೂಲಕ ಒಟ್ಟು 12,12,711 ರೂ ಮತ್ತು ಕೆನರಾಬ್ಯಾಂಕ್ ಭಾಗಮಂಡಲ ಶಾಖೆ ಖಾತೆಯಿಂದ ಬೆಳಿಗ್ಗೆ 10.28 ಗಂಟೆಯಿಂದ ಮಧ್ಯಾಹ್ನ 12.56 ಗಂಟೆವರೆಗೆ ಒಟ್ಟು 10 ವರ್ಗಾವಣೆ ಮೂಲಕ ಒಟ್ಟು 3,88,050 ರೂ ವರ್ಗಾವಣೆ ಮಾಡಿಕೊಳ್ಳಲಾಗಿದೆ. ಎರಡು ಕೆನರಾ ಬ್ಯಾಂಕ್ ಖಾತೆಗಳಿಂದ ಒಟ್ಟು 15,98,761 ರೂ ಹಣವನ್ನು ಅಪರಿಚಿತ ವಂಚಕರು ಬೇರೆ ಬೇರೆ ಬ್ಯಾಂಕ್ ಖಾತೆಗಳಿಗೆ ವರ್ಗಾವಣೆ ಮಾಡಿಕೊಂಡಿದ್ದಾರೆ. ಖದೀಮರನ್ನು ಪತ್ತೆ ಮಾಡಿ ತಮ್ಮ ಹಣ ವಾಪಸ್ ಕೊಡಿಸುವಂತೆ ಸೆನ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಇದನ್ನೂ ಓದಿ: ಹಣ ಕೊಡಬೇಕಾಗುತ್ತೆಂದು ಎಲ್ಲೆಂದರಲ್ಲಿ ತ್ಯಾಜ್ಯ ಡಂಪ್ ಮಾಡುತ್ತಿರುವ ಕಾರ್ಖಾನೆಗಳು, ಸ್ಥಳೀಯರಿಗೆ ಸಂಕಷ್ಟ

ನಿರುಪಯುಕ್ತ ವಸ್ತುಗಳಿಗೆ ಆಕಸ್ಮಿಕ ಬೆಂಕಿ.. ಭಸ್ಮ

ಶೇಖರಣೆ ಮಾಡಿಟ್ಟಿದ್ದ ನಿರುಪಯುಕ್ತ ವಸ್ತುಗಳಿಗೆ ಆಕಸ್ಮಿಕ ಬೆಂಕಿ ತಗುಲಿ, ಸುಟ್ಟು ಭಸ್ಮವಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ದಾಬಸ್​ಪೇಟೆ ಕೈಗಾರಿಕಾ ಪ್ರದೇಶದಲ್ಲಿ ಘಟನೆ ನಡೆದಿದ್ದು, ಇ-ಪರಿಸರ ಕಂಪನಿಗೆ ಸೇರಿದ ನಿರುಪಯುಕ್ತ ಎಲೆಕ್ಟ್ರಾನಿಕ್ ವಸ್ತುಗಳು ಸುಟ್ಟು ಕರಕಲಾಗಿವೆ. ಬೆಂಕಿ ಜ್ವಾಲೆ ಮುಗಿಲೆತ್ತರಕ್ಕೆ ಚಿಮ್ಮಿತ್ತು. ಎರಡು ಅಗ್ನಿಶಾಮಕ ದಳದ ಸಿಬ್ಬಂದಿ ಹರಿಸಾಹಸ ಪಟ್ಟು ಬೆಂಕಿ ನಂದಿಸಿದ್ರು.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 7:56 am, Wed, 22 May 24