ಹಾಸನ: ಅಂತ್ಯಸಂಸ್ಕಾರ ಮಾಡಿದ 3 ತಿಂಗಳ ಬಳಿಕ ಸಮಾಧಿಯಿಂದ ಶವ ನಾಪತ್ತೆ; ವಾಮಾಚಾರಕ್ಕಾಗಿ ಶವ ಹೊತ್ತೊಯ್ದಿರುವ ಶಂಕೆ

ಜೂನ್ ತಿಂಗಳಲ್ಲಿ ವಯೋಸಹಜ ಅನಾರೋಗ್ಯದಿಂದ ಮೃತಪಟ್ಟಿದ್ದ ಲಕ್ಷ್ಮಮ್ಮ ಅವರನ್ನು ಕುಟುಂಬಸ್ಥರು ತಮ್ಮದೇ ಜಮೀನಿನಲ್ಲಿ ಅಂತ್ಯಸಂಸ್ಕಾರ ನೆರವೇರಿಸಿದ್ದರು. ಆದರೆ ಸೆಪ್ಟೆಂಬರ್ 21 ರ ರಾತ್ರಿ ಸಮಾಧಿ ಬಗೆದು ಕಿಡಿಗೇಡಿಗಳು ಶವ ಹೊತ್ತೊಯ್ದಿದ್ದಾರೆ.

ಹಾಸನ: ಅಂತ್ಯಸಂಸ್ಕಾರ ಮಾಡಿದ 3 ತಿಂಗಳ ಬಳಿಕ ಸಮಾಧಿಯಿಂದ ಶವ ನಾಪತ್ತೆ; ವಾಮಾಚಾರಕ್ಕಾಗಿ ಶವ ಹೊತ್ತೊಯ್ದಿರುವ ಶಂಕೆ
ಅಂತ್ಯ ಸಂಸ್ಕಾರ ಮಾಡಿದ ಮೂರು ತಿಂಗಳ ಬಳಿಕ ಸಮಾಧಿಯಿಂದ ಶವ ನಾಪತ್ತೆ
Follow us
| Updated By: preethi shettigar

Updated on:Sep 25, 2021 | 11:33 AM

ಹಾಸನ: ಅಂತ್ಯಸಂಸ್ಕಾರ ಮಾಡಿದ ಮೂರು ತಿಂಗಳ ಬಳಿಕ ಸಮಾಧಿಯಿಂದ ಶವ ನಾಪತ್ತೆಯಾದ ಘಟನೆ ಹಾಸನ ಜಿಲ್ಲೆಯ ಅರಸೀಕೆರೆ ತಾಲ್ಲೂಕಿನ ಯಾದಾಪುರ ಗ್ರಾಮದಲ್ಲಿ ನಡೆದಿದೆ. ರಾತ್ರೋ ರಾತ್ರಿ ಸಮಾಧಿ‌ ಬಗೆದು ಕಿರಾತಕರು ಶವ ಹೊತ್ತೊಯ್ದಿದ್ದು, ಜಿಲ್ಲೆಯ ಜನರನ್ನು ಬೆಚ್ಚಿಬೀಳಿಸಿದ ವಿಚಿತ್ರ ಪ್ರಕರಣ ನಡೆದಿದೆ. ವಾಮಾಚಾರಕ್ಕಾಗಿ ಶವ ಹೊತ್ತೊಯ್ದಿರುವ ಶಂಕೆ ವ್ಯಕ್ತವಾಗಿದೆ.

ಜೂನ್ ತಿಂಗಳಲ್ಲಿ ವಯೋಸಹಜ ಅನಾರೋಗ್ಯದಿಂದ ಮೃತಪಟ್ಟಿದ್ದ ಲಕ್ಷ್ಮಮ್ಮ ಅವರನ್ನು ಕುಟುಂಬಸ್ಥರು ತಮ್ಮದೇ ಜಮೀನಿನಲ್ಲಿ ಅಂತ್ಯಸಂಸ್ಕಾರ ನೆರವೇರಿಸಿದ್ದರು. ಆದರೆ ಸೆಪ್ಟೆಂಬರ್ 21 ರ ರಾತ್ರಿ ಸಮಾಧಿ ಬಗೆದು ಕಿಡಿಗೇಡಿಗಳು ಶವ ಹೊತ್ತೊಯ್ದಿದ್ದಾರೆ. ವಿಷಯ ತಿಳಿದ ಕುಟುಂಬಸ್ಥರು ಶವ ಪತ್ತೆ ಮಾಡಿಕೊಡಲು ಪೊಲೀಸರಿಗೆ ದೂರು ನೀಡಿದ್ದಾರೆ.

ಲಕ್ಷ್ಮಮ್ಮ ಅವರ ಪುತ್ರ ಮಂಜುನಾಥ್ ಸೇರಿದಂತೆ ಇನ್ನಿತರ ಕುಟುಂಬದ ಸದಸ್ಯರು, ಅರಸೀಕೆರೆ ಗ್ರಾಮಾಂತರ ಪೊಲೀಸರಿಗೆ ದೂರು ನೀಡಿ ಶವ ಪತ್ತೆಗಾಗಿ ಮನವಿ ಮಾಡಿಕೊಂಡಿದ್ದಾರೆ. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ತಾಲ್ಲೂಕು ಆಡಳಿತ ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದೆ. ತಹಸಿಲ್ದಾರ್ ಸಂತೋಷ ಕುಮಾರ್ ನೇತೃತ್ವದ ತಂಡ ಸ್ಥಳ ಪರಿಶೀಲನೆ ನಡೆಸಿದೆ.

ಇದನ್ನೂ ಓದಿ:

ಅಂತ್ಯ ಸಂಸ್ಕಾರಕ್ಕೆ ಹಣ ಪಡೆಯಲು ಶವವನ್ನೇ ಬ್ಯಾಂಕ್​ಗೆ ಹೊತ್ತೊಯ್ದ ಗ್ರಾಮಸ್ಥರು!

ಗದಗ: ರಜೆಗೆ ಬಂದಿದ್ದ ಯೋಧ ಹೃದಯಾಘಾತದಿಂದ ಸಾವು! ಇಂದು ಹುಟ್ಟೂರಿನಲ್ಲಿ ಅಂತ್ಯಸಂಸ್ಕಾರ

Published On - 7:34 am, Sat, 25 September 21

‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ