ಹಾಸನಾಂಬೆ ದರ್ಶನಕ್ಕೆ ಹರಿದು ಬಂದ ಭಕ್ತರ ದಂಡು; ಇನ್ನು ಆರು ದಿನ ಮಾತ್ರ ತೆರೆದಿರಲಿದೆ ಗರ್ಭಗುಡಿ ಬಾಗಿಲು
ಇನ್ನು ಕೇವಲ ಆರು ದಿನ ಮಾತ್ರ ಹಾಸನಾಂಬೆ ಗರ್ಭಗುಡಿ ಬಾಗಿಲು ತೆರೆದಿರುತ್ತದೆ. ಹೀಗಾಗಿ ಹಾಸನಾಂಬೆಯನ್ನು ಕಣ್ತುಂಬಿಕೊಂಡು ಆಶೀರ್ವಾದ ಪಡೆಯಲು ಭಕ್ತ ಸಮೂಹ ಆಗಮಿಸುತ್ತಿದೆ.
ಹಾಸನ: ವರ್ಷಕ್ಕೊಮ್ಮೆ ದರ್ಶನ ಕೊಡುವ ಹಾಸನಾಂಬೆಯನ್ನು ಕಣ್ತುಂಬಿಕೊಳ್ಳಲು ಭಕ್ತ ಸಾಗರವೇ ಹರಿದು ಬರುತ್ತಿದೆ. ಇಂದು (ಅ.31) ಭಾನುವಾರವಾಗಿರುವ ಹಿನ್ನೆಲೆಯಲ್ಲಿ ಬೆಳಿಗ್ಗೆಯಿಂದಲೇ ಅಪಾರ ಭಕ್ತರು ದೇಗುಲಕ್ಕೆ ಆಗಮಿಸುತ್ತಿದ್ದಾರೆ. ಸರತಿ ಸಾಲಿನಲ್ಲಿ ನಿಂತು ಸಹಸ್ರಾರು ಭಕ್ತರು ಹಾಸನಾಂಬೆ ದರ್ಶನ ಪಡೆಯುತ್ತಿದ್ದಾರೆ. ನಾಲ್ಕನೇ ದಿನವಾದ ಇಂದು ಹೆಚ್ಚಿನ ಸಂಖ್ಯೆಯಲ್ಲಿ ಬರುತ್ತಿರುವ ಭಕ್ತರು ದೇವರ ದರ್ಶನ ಪಡೆದು ಪುನೀತರಾಗುತ್ತಿದ್ದಾರೆ.
ಮೈಸೂರು ಮಹಾರಾಜ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಹಾಸನಾಂಬೆ ದರ್ಶನ ಪಡೆದರು. ಬೆಳಿಗ್ಗೆಯೇ ಹಾಸನಾಂಬೆ ದೇಗುಲಕ್ಕೆ ಬೇಟಿ ನೀಡಿ ದರ್ಶನ ಪಡೆದರು.
ಇನ್ನು ಕೇವಲ ಆರು ದಿನ ಮಾತ್ರ ಹಾಸನಾಂಬೆ ಗರ್ಭಗುಡಿ ಬಾಗಿಲು ತೆರೆದಿರುತ್ತದೆ. ಹೀಗಾಗಿ ಹಾಸನಾಂಬೆಯನ್ನು ಕಣ್ತುಂಬಿಕೊಂಡು ಆಶೀರ್ವಾದ ಪಡೆಯಲು ಭಕ್ತ ಸಮೂಹ ಆಗಮಿಸುತ್ತಿದೆ. ಅಕ್ಟೋಬರ್ 28ರಿಂದ ಐತಿಹಾಸಿಕ ಹಾಸನಾಂಬೆಯ ದರ್ಶನಕ್ಕೆ ಭಕ್ತರಿಗೆ, ಸಾರ್ವಜನಿಕರಿಗೆ ಅವಕಾಶ ನೀಡಲಾಗಿದೆ. ದೇವರ ದರ್ಶನಕ್ಕೆ ಬರುವವರು 2 ಡೋಸ್ ಕೊವಿಡ್ ಲಸಿಕೆ ಹಾಕಿಸಿಕೊಂಡಿರುವುದು ಕಡ್ಡಾಯ. ವ್ಯಾಕ್ಸಿನ್ ಪಡೆದವರಿಗೆ ಮಾತ್ರ ದೇವರ ದರ್ಶನಕ್ಕೆ ಅವಕಾಶ ನೀಡಲಾಗುತ್ತೆ.
ಈ ಬಾರಿ ಹಾಸನಾಂಬೆ ದರ್ಶನಕ್ಕೆ ವಿಶೇಷ ಪಾಸ್ ವ್ಯವಸ್ಥೆ ಕೂಡ ಮಾಡಲಾಗಿದ್ದು 1,000, 300 ರೂ. ವಿಶೇಷ ದರ್ಶನ ಟಿಕೆಟ್ ಮೂಲಕ ಅವಕಾಶ ನೀಡಲಾಗಿದೆ. ಆದರೆ ಕೊನೆಯ ದಿನ ಸಾರ್ವಜನಿಕರಿಗೆ ಅವಕಾಶವಿಲ್ಲ.
ಪ್ರತಿ ವರುಷಕ್ಕೊಮ್ಮೆ ತೆರೆಯುವ ದೇಗುಲದ ಗರ್ಭಗುಡಿ ಕೃಷ್ಣಪ್ಪ ನಾಯಕನ ಕಾಲದಿಂದಲೂ ಆಶ್ವೀಜ ಮಾಸ ಪೌರ್ಣಮಿಯ ನಂತರ ಬರುವ ಗುರುವಾರದಂದು ಹಾಸನಾಂಬೆಯ ದೇವಾಲಯ ತೆರೆಯಲ್ಪಡುತ್ತದೆ. ಸಹಸ್ರ ಸಹಸ್ರ ಸಂಖ್ಯೆಯಲ್ಲಿ ಭಕ್ತಾದಿಗಳು ಅಂದು ದರ್ಶನಾಕಾಂಕ್ಷಿಗಳಾಗಿ ಬಂದು ದೇವಿಯ ದರ್ಶನ ಪಡೆಯುತ್ತಾರೆ. ಗರ್ಭಗುಡಿಯಲ್ಲಿ ಹುತ್ತದೋಪಾದಿಯಲ್ಲಿರುವ ಆದಿಶಕ್ತಿಸ್ವರೂಪಿಣಿ ಹಾಸನಾಂಬೆಗೆ ಹಿಂದಿನ ವರುಷ ಹಚ್ಚಿಟ್ಟಿದ್ದ ದೀಪವು ಆರದೇ, ಮುಡಿಸಿದ ಹೂ ಬಾಡದೇ ಹಾಗೂ ನೈವೇದ್ಯಕ್ಕಿಟ್ಟ ಅಕ್ಕಿಯು ಅನ್ನವಾಗಿರುವ ವಿಸ್ಮಯ ದೃಶ್ಯವನ್ನು ಕಣ್ತುಂಬಿಕೊಳ್ತುವ ಭಕ್ತರು ಪುನೀತರಾಗುತ್ತಾರೆ. ಹೀಗೆ ವರ್ಷಕ್ಕೊಮ್ಮೆ ದೇಗುಲದ ಬಾಗಿಲ ಪುರ ಪ್ರಮುಖರಾದ ತಹಸಿಲ್ದಾರರು/ ಕಮೀಷನರ್ ಶಾಸಕರು ಮುಂತಾದವರ ಸಮ್ಮುಖದಲ್ಲಿ ತೆರೆಯಲಾಗುತ್ತದೆಯಲ್ಲದೇ, ಬಲಿಪಾಡ್ಯಮಿಯ ಮಾರನೇ ದಿನ ಅವರೆಲ್ಲರ ಸಮ್ಮುಖದಲ್ಲಿ ದೇವಿಗೆ ದೀಪ, ಅಕ್ಕಿ ನೈವೇದ್ಯ ಇಟ್ಟು ಅಲಂಕಾರವನ್ನು ಮಾಡಿ ಮುಚ್ಚಲಾಗುತ್ತದೆ.
ಇದನ್ನೂ ಓದಿ
ಹಾಸನಾಂಬೆಯ ಮೊದಲ ದಿನದ ದರ್ಶನೋತ್ಸವ ಆರಂಭ; ಬೆಳಿಗ್ಗೆಯೇ ದೇವಾಲಯ ದತ್ತ ಲಗ್ಗೆಯಿಟ್ಟ ಸಹಸ್ರಾರು ಭಕ್ತರು
ವರ್ಷಕ್ಕೆ ಒಮ್ಮೆ ಮಾತ್ರ ದರ್ಶನ ನೀಡುವ ಹಾಸನಾಂಬೆ ದೇವಸ್ಥಾನದ ಬಾಗಿಲು ಓಪನ್, ನಾಳೆಯಿಂದ ಭಕ್ತರಿಗೆ ದರ್ಶನ ಭಾಗ್ಯ
Published On - 10:44 am, Sun, 31 October 21