
ಹಾಸನ: ವರ್ಷಕೊಮ್ಮೆ ಹಾಸನಾಂಬೆ (Hasanamba) ದೇಗುಲದ ಗರ್ಭಗುಡಿ ಬಾಗಿಲನ್ನು ತೆರೆಯುಯವ ಮೂಲಕ ಭಕ್ತರಿಗೆ ಹಾಸನಾಂಬೆಯ ದರ್ಶನಕ್ಕೆ ಅನುವು ಮಾಡಿಕೊಡಲಾಗುತ್ತಿದೆ. ಇಂದಿನಿಂದ ಅ.27ರವರೆಗೂ ದೇಗುಲದ ಬಾಗಿಲು ತೆರೆದಿರಲಿದೆ. ಅದರಂತೆ ಮೊದಲ ದಿನವೇ ಭಾರಿ ಸಂಖ್ಯೆಯಲ್ಲಿ ಭಕ್ತರು ದೇವಸ್ಥಾನಕ್ಕೆ ಆಗಮಿಸುತ್ತಿದ್ದಾರೆ. ಮುಂಜಾನೆಯೇ ದೊಡ್ಡ ಸಂಖ್ಯೆಯಲ್ಲಿ ಆಗಮಿಸಿ ಭಕ್ತರು ಹಸನಾಂಬೆಯ ದರ್ಶನ ಪಡೆಯಲು ಸರದಿಯ ಸಾಲಿನಲ್ಲಿ ನಿಂತಿದ್ದಾರೆ. ಈ ಸಾಲು ಕಿಲೋಮೀಟರ್ಗೂ ಮೀರಿದೆ. ರಾತ್ರಿ ಸುರಿದ ಮಳೆಯಿಂದ ಹಾಸನಾಂಬೆ ನೈವೇದ್ಯ ಪೂಜೆ ತಡವಾದ್ದರಿಂದ ದರ್ಶನೋತ್ಸವ ಒಂದು ಗಂಟೆ ತಡವಾಗಿ ಆರಂಭವಾಗುತ್ತಿದೆ.
ಕುದುರು ಗಂಡಿಯಲ್ಲಿ ಇರುವ ಕ್ರಿ.ಶ.೧೧೪ ವೀರಗಲ್ಲಿನ ಶಾಸನದ ಪ್ರಕಾರ ೧೨ ನೇ ಶತಮಾನದಲ್ಲಿದ್ದ ಪಾಳೆಯಗಾರ ಕೃಷ್ಣಪ್ಪನಾಯಕ ಕಾರ್ಯನಿಮಿತ್ತ ಪ್ರಯಾಣ ಹೊರಟಾಗ ಮೊಲವೊಂದು ಅಡ್ಡ ಬಂದಿತು. ಆಗ ಇದು ಅಪಶಕುನವೆಂದು ಭಾವಿಸುತ್ತಾನೆ. ಆಗ ಪ್ರತ್ಯಕ್ಷಳಾದ ಆದಿಶಕ್ತಿ ಸ್ವರೂಪಿಣಿ ಈ ಸ್ಥಳದಲ್ಲಿ ದೇಗುಲ ಕಟ್ಟು, ನಾನು ಹಾಸನಾಂಬೆ ಎಂದೇ ಹೆಸರಾಗಿ ಇಲ್ಲಿ ನೆಲೆಸುವೆ ಎಂದಳಂತೆ.
ಕೃಷ್ಣಪ್ಪ ನಾಯಕನ ಕಾಲದಿಂದಲೂ ಆಶ್ವೀಜ ಮಾಸ ಪೌರ್ಣಮಿಯ ನಂತರ ಬರುವ ಗುರುವಾರದಂದು ಹಾಸನಾಂಬೆಯ ದೇವಾಲಯ ತೆರೆಯಲ್ಪಡುತ್ತದೆ. ಸಹಸ್ರ ಸಂಖ್ಯೆಯಲ್ಲಿ ಭಕ್ತಾದಿಗಳು ದೇವಿಯ ದರ್ಶನ ಪಡೆಯುತ್ತಾರೆ. ಗರ್ಭಗುಡಿಯಲ್ಲಿ ಹುತ್ತದೋಪಾದಿಯಲ್ಲಿರುವ ಆದಿಶಕ್ತಿಸ್ವರೂಪಿಣಿ ಹಾಸನಾಂಬೆಗೆ ಹಿಂದಿನ ವರುಷ ಹಚ್ಚಿಟ್ಟಿದ್ದ ದೀಪವು ಆರದೆ, ಮುಡಿಸಿದ ಹೂ ಬಾಡದೆ ಹಾಗೂ ನೈವೇದ್ಯಕ್ಕಿಟ್ಟ ಅಕ್ಕಿಯು ಅನ್ನವಾಗಿರುವ ವಿಸ್ಮಯ ದೃಶ್ಯವನ್ನು ಭಕ್ತರು ಕಣ್ತುಂಬಿಕೊಳ್ಳುತ್ತಾರೆ.
ಮತ್ತಷ್ಟು ರಾಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 8:33 am, Fri, 14 October 22