ಹಾಸನ ಕಾಂಗ್ರೆಸ್‌ನಲ್ಲಿ ಭುಗಿಲೆದ್ದ ಭಿನ್ನಮತ: ಟಿಕೆಟ್​ಗಾಗಿ ಮಾರಾಮಾರಿ, ಪೊಲೀಸ್ ಮೆಟ್ಟಿಲೇರಿದ ಕೈ ನಾಯಕರ ಜಗಳ

ಬೇಲೂರು ವಿಧಾನಸಭಾ ಕ್ಷೇತ್ರದ ಟಿಕೆಟ್‌ಗಾಗಿ ಪೈಪೋಟಿ ಶುರುವಾಗಿದ್ದು, ಸ್ವ ಪಕ್ಷೀಯ ಮುಖಂಡರುಗಳ ನಡುವೆ ಭಿನ್ನಾಭಿಪ್ರಾಯ ಶುರುವಾಗಿದ್ದು, ಹೊಡೆದಾಡುವ ಮಟ್ಟಿಗೆ ಹೋಗಿದೆ.

ಹಾಸನ ಕಾಂಗ್ರೆಸ್‌ನಲ್ಲಿ ಭುಗಿಲೆದ್ದ ಭಿನ್ನಮತ: ಟಿಕೆಟ್​ಗಾಗಿ ಮಾರಾಮಾರಿ, ಪೊಲೀಸ್ ಮೆಟ್ಟಿಲೇರಿದ ಕೈ ನಾಯಕರ ಜಗಳ
ಹಲ್ಲೆಗೊಳಗಾದ ಹಿರಿಯ ಮುಖಂಡ ಶಿವಣ್ನ
Follow us
TV9 Web
| Updated By: ಕಿರಣ್ ಹನುಮಂತ್​ ಮಾದಾರ್

Updated on: Dec 07, 2022 | 3:31 PM

ಹಾಸನ:  ಬೇಲೂರು ಕಾಂಗ್ರೆಸ್ ಟಿಕೆಟ್‌ಗಾಗಿ‌ ಬಿ.ಶಿವರಾಂ, ವೈ.ಎನ್ ಕೃಷ್ಣೇಗೌಡ ಹಾಗೂ ರಾಜಶೇಖರ್ ಎಂಬುವವರು ಪೈಪೋಟಿ ನಡೆಸುತ್ತಿದ್ದಾರೆ. ಈ ಮಧ್ಯೆ ಹಳೇಬೀಡಿನ ಕಾಂಗ್ರೆಸ್ ‌ಕಾರ್ಯಕರ್ತರ ಸಭೆಯಲ್ಲಿ ಸ್ಥಳೀಯರಿಗೆ ಟಿಕೆಟ್ ನೀಡಬೇಕೆಂದು ಶಿವಣ್ಣ ಆಗ್ರಹಿಸಿದ್ದಾರೆ. ಬಿ. ಶಿವರಾಂ ಸಹಚರರಾಗಿರುವ ನಿಶಾಂತ್​ಗೆ ಇದು ಮುಜುಗರವಾಗಿದ್ದು, ಸಭೆಯಲ್ಲಿ ಬಿ.ಶಿವರಾಂ ವಿರುದ್ಧ ಮಾತನಾಡಿದ್ದಕ್ಕೆ ಸಿಟ್ಟಾಗಿ ಹಲ್ಲೆ‌ ಮಾಡಿದ್ದಾರೆ ಎಂದು ಆರೋಪ ಮಾಡಲಾಗಿದೆ.

ನಿನ್ನೆ (ಡಿ.6) ರಾತ್ರಿ ಬೇಲೂರು ಪಟ್ಟಣದಲ್ಲಿ ಶಿವಣ್ಣ ಮೇಲೆ ಎರಗಿರುವ ಬ್ಲಾಕ್ ಕಾಂಗ್ರೆಸ್ ‌ಅಧ್ಯಕ್ಷ ನಿಶಾಂತ್ ಸ್ಥಳೀಯರಿಗೆ ಟಿಕೆಟ್ ಕೇಳುತ್ತಿಯಲ್ಲ ನಿನ್ನ ರಕ್ಷಣೆಗೆ ಯಾರು ಬರುತ್ತಾರೆ. ಹೀಗೇ‌ ಎಗರಾಡಿದ್ರೆ ಕೊಲೆ ಮಾಡಿಸುತ್ತೇನೆ ಎಂದು ಆವಾಜ್ ಹಾಕಿದ್ದು,. ಕೈಯಲ್ಲಿ ಮಚ್ಚು ಹಿಡಿದು ಕೊಲೆ‌ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ಹಿರಿಯ ‌ಮುಖಂಡ ಶಿವಣ್ಣ ಬೇಲೂರು ಪೊಲೀಸರಿಗೆ ದೂರು ನೀಡಿದ್ದಾರೆ. ನಿಶಾಂತ್‌ ಜೊತೆ ಸಫಾಯಿ‌ ಕರ್ಮಚಾರಿ‌ ನಿಗಮದ ಮಾಜಿ ಅಧ್ಯಕ್ಷ ಎಂ.ಆರ್‌ವೆಂಕಟೇಶ್ ಕೂಡ ಇದ್ದರು ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿ:ಪ್ರಮೋದ್​ ಮುತಾಲಿಕ್ ಕಾಂಗ್ರೆಸ್​ ಪಕ್ಷದ ಬಿ ಟೀಮ್ ಎಂದ ಬಿಜೆಪಿ; ಕಮಲ ಪಕ್ಷದ ವಿರುದ್ಧ ಗರಂ

ಅಧ್ಯಕ್ಷ ನಿಶಾಂತ್ ವರ್ತನೆಗೆ ಬೇಲೂರು ಕಾಂಗ್ರೆಸ್ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದು, ಈ ಹಿಂದೆಯೂ ನಿಶಾಂತ್ ಅಲ್ಪಸಂಖ್ಯಾತ ಮುಖಂಡನ ಮೇಲೆ ಹಲ್ಲೆ ನಡೆಸಿದ್ದಾನೆ ಎಂದು ಕಿಡಿಕಾರಿದ್ದಾರೆ. ಕೂಡಲೇ ನಿಶಾಂತ್, ಎಂ.ಆರ್ ವೆಂಕಟೇಶ್​ರನ್ನು ಕಾಂಗ್ರೆಸ್​ ಪಕ್ಷದಿಂದ ವಜಾ ಮಾಡಬೇಕು ಎಂದು ಕಾರ್ಯಕರ್ತರು ಆಗ್ರಹಿಸಿದ್ದಾರೆ.

ಇನ್ನಷ್ಟು ರಾಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ತನ್ನ ತಂದೆ ಬಗ್ಗೆ ಮಾತಾಡಿದ ಬಿಜೆಪಿ ನಾಯಕನ ಹೇಳಿಕೆಗೆ ಕಣ್ಣೀರು ಹಾಕಿದ ಅತಿಶಿ
ತನ್ನ ತಂದೆ ಬಗ್ಗೆ ಮಾತಾಡಿದ ಬಿಜೆಪಿ ನಾಯಕನ ಹೇಳಿಕೆಗೆ ಕಣ್ಣೀರು ಹಾಕಿದ ಅತಿಶಿ
ರಾಮಚಂದ್ರಪ್ಪನಿಂದ ಪೀಡಿತ ಮತ್ತೊಬ್ಬ ಮಹಿಳೆ ತನ್ನ ವೇದನೆ ಹೇಳಿಕೊಂಡಿದ್ದಾರೆ
ರಾಮಚಂದ್ರಪ್ಪನಿಂದ ಪೀಡಿತ ಮತ್ತೊಬ್ಬ ಮಹಿಳೆ ತನ್ನ ವೇದನೆ ಹೇಳಿಕೊಂಡಿದ್ದಾರೆ
ಹೆಚ್ಎಂಪಿವಿ 2001ರಿಂದ ಭಾರತದಲ್ಲಿದೆ, ನಿಶ್ಶಕ್ತರು ಇದರ ಟಾರ್ಗೆಟ್: ದಿನೇಶ್
ಹೆಚ್ಎಂಪಿವಿ 2001ರಿಂದ ಭಾರತದಲ್ಲಿದೆ, ನಿಶ್ಶಕ್ತರು ಇದರ ಟಾರ್ಗೆಟ್: ದಿನೇಶ್
ಹೆಚ್ಎಂಪಿ ವೈರಸ್ ಯಾವ ವೇರಿಯಂಟ್ ಅಂತ ನಾನು ಹೇಳಲಾಗಲ್ಲ: ಅಶ್ವಥ್ ನಾರಾಯಣ
ಹೆಚ್ಎಂಪಿ ವೈರಸ್ ಯಾವ ವೇರಿಯಂಟ್ ಅಂತ ನಾನು ಹೇಳಲಾಗಲ್ಲ: ಅಶ್ವಥ್ ನಾರಾಯಣ
ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ
ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ
ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ
ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ
ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ
ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ
ನಾ ಡಿಸೋಜ ಅಂತಿಮ ದರ್ಶನ, ಅಂತ್ಯಕ್ರಿಯೆ ಬಗ್ಗೆ ಪುತ್ರ ನವೀನ್ ಮಾಹಿತಿ
ನಾ ಡಿಸೋಜ ಅಂತಿಮ ದರ್ಶನ, ಅಂತ್ಯಕ್ರಿಯೆ ಬಗ್ಗೆ ಪುತ್ರ ನವೀನ್ ಮಾಹಿತಿ