ಹಾಸನ (ನವೆಂಬರ್ 15): ಪ್ರಸಕ್ತ ವರ್ಷ ಶಕ್ತಿದೇವತೆ ಹಾಸನಾಂಬೆ (Hasanamba Temple) ಉತ್ಸವ ಸಂಪನ್ನಗೊಂಡಿದೆ. ನವೆಂಬರ್ 2ರಿಂದ 14 ದಿನಗಳ ಕಾಲನಡೆದ ಹಾಸನಾಂಬೆ ಉತ್ಸವಕ್ಕೆ ಇಂದು(ನವೆಂಬರ್ 15) ವಿದ್ಯುಕ್ತವಾಗಿ ತೆರೆ ಕಂಡಿದೆ. ಜಿಲ್ಲಾ ಉಸ್ತುವಾರಿ ಸಚಿವ ಕೆ.ಎನ್.ರಾಜಣ್ಣ, ಜಿಲ್ಲಾಧಿಕಾರಿ ಸೇರಿದಂತೆ ಹಲವರ ಸಮ್ಮುಖದಲ್ಲಿ ಹಾಸನಾಂಬೆ ದೇಗುಲದ ಗರ್ಭಗುಡಿ ಬಾಗಿಲು ಬಂದ್ ಮಾಡಲಾಯ್ತು. ಹಾಸನಾಂಬೆಗೆ ಮಾಡಲಾಗಿದ್ದ ಅಲಂಕಾರ ತೆರವುಗೊಳಿಸಿ ಬಳಿಕ ಅರ್ಚಕ ನಾಗರಾಜ್ ಪೂಜೆ ಮಾಡಿ ಗರ್ಭಗುಡಿ ಬಾಗಿಲಿಗೆ ಬೀಗ ಹಾಕಿದರು. ಮುಂದಿನ ವರ್ಷವೇ ಹಾಸನಾಂಬೆ ದೇಗುಲ ಓಪನ್ ಆಗಲಿದೆ. ಮುಂದಿನ ವರ್ಷ ಅಂದರೆ 2024ರ ಅಕ್ಟೋಬರ್ 24 ರಿಂದ ನವೆಂಬರ್ 3 ರ ವರೆಗೆ ಹಾಸನಾಂಬೆ ದರ್ಶನೋತ್ಸವದ ದಿನಾಂಕ ನಿಗದಿ ಮಾಡಲಾಗಿದೆ.
ಪ್ರಸಕ್ತ ವರ್ಷ ನವೆಂಬರ್ 2ರಂದು ಹಾಸನಬಾಂಬೆ ದೇವಸ್ಥಾನ ತೆರೆಯಲಾಗಿತ್ತು. ಆದ್ರೆ, ನವೆಂಬರ್ 3ರಿಂದ ನ.15ರ ಬೆಳಗ್ಗೆ 7 ಗಂಟೆ ವರೆಗೆ ಸಾರ್ವಜನಿಕರ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗಿತ್ತು. ಈ ಸಮಯದಲ್ಲಿ ಲಕ್ಷಾಂತರ ಭಕ್ತರು ಹಾಸನಾಂಬೆ ದರ್ಶನ ಪಡೆದುಕೊಂಡಿದ್ದಾರೆ. ಇದೀಗ ಮುಂದಿನ ವರ್ಷ ಹಾಸನಾಂಬೆ ದರ್ಶನೋತ್ಸವಕ್ಕೆ ದಿನಾಂಕವನ್ನು ನಿಗದಿ ಮಾಡಲಾಗಿದ್ದು, 2024ರ ಅಕ್ಟೋಬರ್ 24ರಿಂದ ನವೆಂಬರ್ 3ರ ವರೆಗೆ ಹಾಸನಾಂಬೆ ದರ್ಶನ ಇರಲಿದೆ. ಇದರೊಂದಿಗೆ ಒಟ್ಟು 9 ದಿನಗಳ ಕಾಲ ಹಾಸನಾಂಬೆ ದರ್ಶನಕ್ಕೆ ಭಕ್ತರಿಗೆ ಅವಕಾಶ ನೀಡಲಾಗುತ್ತದೆ.
ಈ ವರ್ಷ ಒಟ್ಟು 12 ದಿನಗಳ ಕಾಲ ಸಾರ್ವಜನಿಕರ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗಿತ್ತು. ಆದ್ರೆ, ಮುಂದಿನ ವರ್ಷ 9 ದಿನ ಮಾತ್ರ ಹಾಸನಾಂಬೆಯ ದರ್ಶನಕ್ಕೆ ಅವಕಾಶ ಇರಲಿದೆ.
ಇನ್ನು ಈ ವರ್ಷ ಹಾಸನ ಜಿಲ್ಲಾಡಳಿ ಹಾಸನಾಂಬೆ ಉತ್ಸವನ್ನು ಬಹಳ ಅಚ್ಚುಕಟ್ಟಾಗಿ ಮಾಡಿತ್ತು. ಒಟ್ಟು 14 ಲಕ್ಷ ಭಕ್ತರು ಅಮ್ಮನ ದರ್ಶನಕ್ಕೆ ಆಗಮಿಸಿದ್ದು, ಒಟ್ಟು 6 ಕೋಟಿಗೂ ಅಧಿಕ ಆದಾಯ ಸಂಗ್ರಹವಾಗಿದೆ.
Published On - 12:53 pm, Wed, 15 November 23