ಸರ್ಕಾರಿ ವಿಜ್ಞಾನ ಕಾಲೇಜಿನಲ್ಲಿ ಪದವಿ ಪ್ರದಾನ ಕಾರ್ಯಕ್ರಮ; ಇಸ್ರೋದ ವಿಶ್ರಾಂತ ಅಧ್ಯಕ್ಷ ಡಾ.ಕಿರಣ್ ಕುಮಾರ್ ಭಾಗಿ

ಯಾವುದೇ ಸಂಶೋದನೆ ಅಥವಾ ಆವಿಷ್ಕಾರಗಳು ಪರಿಸರಕ್ಕೆ ಮಾರಕ ಆಗುವ ರೀತಿ ಇರಬಾರದು. ಪರಿಸರಕ್ಕೆ ಎಲ್ಲರೂ ಗೌರವ ಕೊಡಬೇಕು. ಜೊತೆಗೆ ಪರಿಸರವನ್ನು ಎಂದಿಗೂ ದುರುಪಯೋಗ ಪಡಿಸಿಕೊಳ್ಳಬಾರದು. ಜೊತೆಗೆ ಪದವಿಧರರು ಗುರುಗಳು ಹೇಳಿಕೊಟ್ಟ ಬದುಕಿನ ಮೌಲ್ಯಗಳನ್ನು ಎಂದಿಗೂ ಮರೆಯಬಾರದು ಎಂದು ಇಸ್ರೋದ ವಿಶ್ರಾಂತ ಅಧ್ಯಕ್ಷ ಡಾ.ಕಿರಣ್ ಕುಮಾರ್ ತಿಳಿಸಿದ್ದಾರೆ.

ಸರ್ಕಾರಿ ವಿಜ್ಞಾನ ಕಾಲೇಜಿನಲ್ಲಿ ಪದವಿ ಪ್ರದಾನ ಕಾರ್ಯಕ್ರಮ; ಇಸ್ರೋದ ವಿಶ್ರಾಂತ ಅಧ್ಯಕ್ಷ ಡಾ.ಕಿರಣ್ ಕುಮಾರ್ ಭಾಗಿ
ಸರ್ಕಾರಿ ವಿಜ್ಞಾನ ಕಾಲೇಜಿನಲ್ಲಿ ಪದವಿ ಪ್ರದಾನ ಕಾರ್ಯಕ್ರಮ
Follow us
TV9 Web
| Updated By: preethi shettigar

Updated on: Feb 19, 2022 | 4:21 PM

ಹಾಸನ: ನಗರದ ಸರ್ಕಾರಿ ವಿಜ್ಞಾನ (ಸ್ವಾಯತ್ತ) ಕಾಲೇಜಿನಲ್ಲಿ ಶನಿವಾರ (ಫೆಬ್ರವರಿ 19) ಆಯೋಜಿಸಿದ್ದ ಮೊದಲ ಪದವಿ ಪ್ರದಾನ ಸಮಾರಂಭದಲ್ಲಿ ಬೆಂಗಳೂರಿನ ಇಸ್ರೋದ ವಿಶ್ರಾಂತ ಅಧ್ಯಕ್ಷ ಡಾ.ಕಿರಣ್ ಕುಮಾರ್ ಉಪಸ್ಥಿತರಿದ್ದರು. ಕಾಲೇಜಿನ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಿ ಮಾತನಾಡಿದ ಅವರು, ವಿದ್ಯಾರ್ಥಿಗಳು ಪಡೆದ ಪದವಿಗಳು ವೈಯಕ್ತಿಕ ಹಾಗೂ ದೇಶದ ಬೆಳವಣಿಗೆಗೆ ಸಹಕಾರಿಯಾಗಲಿ. ಕಲಿತ ವಿದ್ಯೆಯಿಂದ ದೇಶ ಹಾಗೂ ಸಮಾಜಕ್ಕೆ ಉಪಯೋಗ ಆಗುವ ರೀತಿಯ ಯೋಚನೆ ಮನಸ್ಸಿನಲ್ಲಿ ಹೊಂದಬೇಕು. ಕೆಲ ದಶಕಗಳ ಹಿಂದಿಗಿಂತ ಇಂದು ಅವಕಾಶ ಹೆಚ್ಚಿವೆ. ಅದರ ಜೊತೆಯಲ್ಲೇ ಸ್ಪರ್ಧೆ ಮತ್ತು ಸವಾಲುಗಳು ಹೆಚ್ಚಿವೆ. ಈ ಸವಾಲುಗಳನ್ನು ಎದುರಿಸಬೇಕಾದಲ್ಲಿ ಕೌಶಲಗಳನ್ನು ಮೈಗೂಡಿಸಿಕೊಳ್ಳುವುದು ಅತ್ಯಗತ್ಯ ಎಂದು ಹೇಳಿದರು.

ಯಾವುದೇ ಸಂಶೋದನೆ ಅಥವಾ ಆವಿಷ್ಕಾರಗಳು ಪರಿಸರಕ್ಕೆ ಮಾರಕ ಆಗುವ ರೀತಿ ಇರಬಾರದು. ಪರಿಸರಕ್ಕೆ ಎಲ್ಲರೂ ಗೌರವ ಕೊಡಬೇಕು. ಜೊತೆಗೆ ಪರಿಸರವನ್ನು ಎಂದಿಗೂ ದುರುಪಯೋಗ ಪಡಿಸಿಕೊಳ್ಳಬಾರದು. ಜೊತೆಗೆ ಪದವಿಧರರು ಗುರುಗಳು ಹೇಳಿಕೊಟ್ಟ ಬದುಕಿನ ಮೌಲ್ಯಗಳನ್ನು ಎಂದಿಗೂ ಮರೆಯಬಾರದು ಎಂದು ಇಸ್ರೋದ ವಿಶ್ರಾಂತ ಅಧ್ಯಕ್ಷ ಡಾ.ಕಿರಣ್ ಕುಮಾರ್ ತಿಳಿಸಿದ್ದಾರೆ.

ವಿದ್ಯಾರ್ಥಿ ಜೀವನದಲ್ಲಿ ಇದ್ದಷ್ಟು ಸ್ವಾತಂತ್ರ್ಯ ಮುಂದಿನ ಬದುಕಿನಲ್ಲಿ ಇರುವುದಿಲ್ಲ. ಪ್ರಸ್ತುತ ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರ ವೇಗವಾಗಿ ಬೆಳವಣಿಗೆ ಆಗುತ್ತಿದೆ. ಅ ವೇಗಕ್ಕೆ ಹೊಂದಿಕೊಳ್ಳಬೇಕಿದೆ. ಇಂದಿನ ಪದವಿ ಜೀವನ ರೂಪಿಸಿಕೊಳ್ಳಲು ಕೇವಲ ಒಂದು ಮಾತ್ರವೇ ಬಳಕೆಗೆ ಬರಬಹುದು. ಆದರೆ 60 ದಶಕಗಳ ಹಿಂದೆ ಕಲಿತ ವಿದ್ಯೆ 20 ವರ್ಷದ ವರೆಗೂ ವೃತ್ತಿ ಜೀವನಕ್ಕೆ ಅನುಕೂಲ ಆಗುತ್ತಿತ್ತು ಎಂದು ಇಸ್ರೋದ ವಿಶ್ರಾಂತ ಅಧ್ಯಕ್ಷ ಡಾ.ಕಿರಣ್ ಕುಮಾರ್ ತಿಳಿಸಿದರು.

ಬಳಿಕ ಮಾತನಾಡಿದ ಅವರು, ಭಾರತ ಆರ್ಥಿಕವಾಗಿ ವಿಶ್ವದಲ್ಲಿ 6ನೇ ಸ್ಥಾನದಲ್ಲಿದೆ. ಮೊದಲ ಸ್ಥಾನಕ್ಕೆ ಬರಲು ಹೆಜ್ಜೆ ಇಡುತ್ತಿದೆ. ಅದು ಸಾಕಾರವಾಗಬೇಕಾದರೆ ಯುವಕರು ಎಲ್ಲಾ ಕ್ಷೇತ್ರದಲ್ಲಿಯೂ ಹೆಚ್ಚು ಕೆಲಸ ಮಾಡುವ ಮೂಲಕ ದೇಶವನ್ನು ಮುನ್ನಡೆಸಬೇಕಾಗಿದೆ ಎಂದು ಹೇಳಿದರು.

ಉಪಗ್ರಹಗಳಿಂದ ಇಂದು ಸಾಕಷ್ಟು ಉಪಯೋಗ ಪಡೆಯುತ್ತಿದ್ದೇವೆ. ಮಾಹಿತಿ ತಂತ್ರಜ್ಞಾನ, ಸಂವಾಹನ, ಹವಮಾನ ಮಾಹಿತಿ ಇತ್ಯಾದಿ ಸಾಕಷ್ಟು ಅನುಕೂಲ ಪಡೆಯುತ್ತಿದ್ದೇವೆ. ವಿಜ್ಞಾನ ಪದವಿ ಪಡೆದ ವಿದ್ಯಾರ್ಥಿಗಳು ಬಾಹ್ಯಾಕಾಶ ಕ್ಷೇತ್ರದಲ್ಲಿ ಹೆಚ್ಚು ತೊಡಗಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು. ಬಳಿಕ ತಾನೂ ಕೂಡ ಇದೇ ಕಾಲೇಜಿನಲ್ಲಿ ಓದಿದ್ದು ಎಂದು ಕಿರಣ್ ಕುಮಾರ್ ಸ್ಮರಿಸಿದರು.

ಕಿರಣ್ ಕುಮಾರ್ ಅವರು 1968 ರಿಂದ 1971 ಅವದಿಯಲ್ಲಿ ಹಾಸನದ ಸರ್ಕಾರಿ ವಿಜ್ಞಾನ ಕಾಲೇಜಿನಲ್ಲಿ ಪದವಿ ಪೂರೈಸಿದ್ದರು. ಕಿರಣ್ ಕುಮಾರ ನಂತರ ವಿಜ್ಞಾನ ಕ್ಷೇತ್ರದಲ್ಲಿ ಉನ್ನತ ಸ್ಥಾನಕ್ಕೆ ಸೇರಿದರು. ಕಾರ್ಯಕ್ರಮದಲ್ಲಿ ವಿವಿಧ ವಿಷಯಗಳಲ್ಲಿ ಗರಿಷ್ಟ ಅಂಕಗಳಿಸಿದ ವಿದ್ಯಾರ್ಥಿಗಳಿಗೆ 25 ಚಿನ್ನದ ಪದಕ ನೀಡಿ ಗೌರವಿಸಲಾಯಿತು.  ಹಾಗೆಯೆ ಸುಮಾರು 50ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಲಾಯಿತು.

ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲ ಎಸ್.ಎಚ್ ಗಂಗೇಗೌಡ, ಶೈಕ್ಷಣಿಕ ಡೀನ್ ಎಂ.ಅಬ್ದುಲ್ ರಹಿಮಾನ್, ಪರೀಕ್ಷಾ ನಿಯಂತ್ರಕ ಕೆ.ಹರ್ಷೇಂದ್ರ, ಕಾಲೇಜು ಆಡಳಿತ ಮಂಡಳಿ ಸದಸ್ಯರಾದ ತಾರಾ ಎಸ್.ಸ್ವಾಮಿ, ಎಚ್.ವಿ.ಲಕ್ಷ್ಮೀ ನಾರಾಯಣ್, ಸುಬ್ರಹ್ಮಣ್ಯ ಇತರರು ಉಪಸ್ಥಿತರಿದ್ದರು.

ವರದಿ: ಮಂಜುನಾಥ್ ಕೆಬಿ

ಇದನ್ನೂ ಓದಿ: ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ, ಪರಿಸರ ಪ್ರೇಮಿ, ಜನಪದ ಕಲಾವಿದ ಮಹಾದೇವ ವೇಳಿಪ ಅಸ್ತಂಗತ

Bill Gates: ಬಿಲ್​ ಗೇಟ್ಸ್​​ಗೆ ಪಾಕಿಸ್ತಾನದ ಎರಡನೇ ಅತ್ಯುನ್ನತ ನಾಗರಿಕ ಪ್ರಶಸ್ತಿ ಹಿಲಾಲ್-ಎ-ಪಾಕಿಸ್ತಾನ

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ