AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕುಡಿದ ಮತ್ತಿನಲ್ಲಿ ಸ್ನೇಹಿತನನ್ನೇ ಕೊಂದು ಎಸ್ಕೇಪ್​​: ಮೃತದೇಹ ಕಚ್ಚಿತಿಂದ ಕಾಡು ಪ್ರಾಣಿಗಳು!

ಕುಡಿದ ಮತ್ತಿನಲ್ಲಿ ಗೆಳೆಯರು ಸ್ನೇಹಿತನನ್ನೇ ಇರಿದು ಕೊಲೆ ಮಾಡಿದ್ದಾರೆ. ಮೃತದೇಹವನ್ನು ಕಾಡಿನಲ್ಲಿ ಬಿಟ್ಟ ಪರಿಣಾಮ, ಕಾಡು ಪ್ರಾಣಿಗಳು ಅದರ ಭಾಗಗಳನ್ನು ಕಚ್ಚಿ ತಿಂದಿವೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ. ಇಂತಹ ಕ್ರೂರ ಕೃತ್ಯ ಸಮಾಜದಲ್ಲಿ ಆತಂಕ ಮೂಡಿಸಿದೆ. ಮತ್ತೊಂದು ಪ್ರಕರಣದಲ್ಲಿ ಕಲಬುರಗಿಯಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಹತ್ಯೆ ಮಾಡಲಾಗಿದೆ.

ಕುಡಿದ ಮತ್ತಿನಲ್ಲಿ ಸ್ನೇಹಿತನನ್ನೇ ಕೊಂದು ಎಸ್ಕೇಪ್​​: ಮೃತದೇಹ ಕಚ್ಚಿತಿಂದ ಕಾಡು ಪ್ರಾಣಿಗಳು!
ಕುಡಿದ ಮತ್ತಲ್ಲಿ ಸ್ನೇಹಿತನ ಕೊಲೆ
ಮಂಜುನಾಥ ಕೆಬಿ
| Edited By: |

Updated on: Jan 21, 2026 | 12:19 PM

Share

ಹಾಸನ/ಕಲಬುರಗಿ, ಜನವರಿ 21: ಕುಡಿದ ಮತ್ತಿನಲ್ಲಿ ಗೆಳೆಯರು ಸ್ನೇಹಿತನನ್ನೇ ಹತ್ಯೆ ಮಾಡಿರುವ ಆತಂಕಕಾರಿ ಘಟನೆ ಹಾಸನ ಜಿಲ್ಲೆ ಹೊಳೆನರಸೀಪುರ ತಾಲೂಕಿನ ಕಬ್ಬೂರು ಗ್ರಾಮದಲ್ಲಿ ನಡೆದಿದೆ. ಗಣೇಶ್​(46) ಮೃತ ದುರ್ದೈವಿಯಾಗಿದ್ದು, ಅಶೋಕ್ ಮತ್ತು ಸುಧೀರ್ ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾರೆ. ​ಕ್ಷುಲ್ಲಕ ಕಾರಣಕ್ಕೆ ಆರಂಭವಾದ ಗಲಾಟೆ ಕೊಲೆಯಲ್ಲಿ ಅಂತ್ಯವಾಗಿದ್ದು, ಪ್ರಕರಣ ಸಂಬಂಧ ಆರೋಪಿಗಳನ್ನ ಹಳ್ಳಿಮೈಸೂರು ಪೊಲೀಸರು ಬಂಧಿಸಿದ್ದಾರೆ.

ಜ.19ರಂದು ಜಮೀನು ಕಾವಲು ಕಾಯಲು ಗಣೇಶ್​ ಹೋಗಿದ್ದು, ಈ ವೇಳೆ ಸ್ನೇಹಿತರ ಜೊತೆ ಎಣ್ಣೆ ಪಾರ್ಟಿ ಮಾಡಿದ್ದ. ಬಳಿಕ ಕುಡಿದ ಮತ್ತಿನಲ್ಲಿ ಕ್ಷುಲ್ಲಕ ವಿಚಾರಕ್ಕೆ ಸ್ನೇಹಿತರ ನಡುವೆ ಗಲಾಟೆ ಶುರುವಾಗಿದ್ದು, ಮಾತಿಗೆ ಮಾತು ಬೆಳೆದು ಚಾಕುವಿನಿಂದ ಇರಿದು ಗಣೇಶ್ ಕೊಲೆ ನಡೆದಿದೆ. ಸ್ಥಳದಲ್ಲೇ ಗಣೇಶ್ ಶವ ಬಿಟ್ಟು ಆರೋಪಿಗಳು ಪರಾರಿಯಾಗಿದ್ದು, ಮೃತದೇಹದ ತಲೆ ಮತ್ತು ಕುತ್ತಿಗೆ ಭಾಗವನ್ನು ಕಾಡು ಪ್ರಾಣಿಗಳು ಕಚ್ಚಿ ತಿಂದಿವೆ. ಶವ ಗಮನಿಸಿದ ಕರ್ತವ್ಯಕ್ಕೆ ತೆರಳಿದ್ದ ಅರಣ್ಯ ಸಿಬ್ಬಂದಿ ಈ ಬಗ್ಗೆ ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಪೊಲೀಸರು ಮತ್ತು ಸೋಕೋ ತಂಡ ಭೇಟಿ ನೀಡಿ ಪರಿಶೀಲಿಸಿದ್ದು,  ಬಂಧಿತ ಅಶೋಕ್ ಈಗಾಗಲೇ ಕೊಲೆ ಕೇಸ್​ನಲ್ಲಿ ಜೈಲಿಗೆ ಹೋಗಿ ಬಂದಿದ್ದಾತ ಎಂಬ ವಿಷಯ ಗೊತ್ತಾಗಿದೆ. ಈ ಬಗ್ಗೆ ಹಳ್ಳಿಮೈಸೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

ಇದನ್ನೂ ಓದಿ: ಲೇಡಿ ಫಿಟ್ನೆಸ್ ಇನ್​ಫ್ಲುಯೆನ್ಸರ್​​ಗೆ ಲೈಂಗಿಕ ಕಿರುಕುಳ; ಹರಿಯಾಣ ವ್ಯಕ್ತಿ ಅರೆಸ್ಟ್​​

ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಹತ್ಯೆ

ಕಲಬುರಗಿಯ ಮೋಹನ್ ಲಾಡ್ಜ್ ಬಳಿಯ ಪಾರ್ಕ್​ನಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನೋರ್ವನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಸೈಯದ್ ಮೆಹಬೂಬ್(21) ಕೊಲೆಗೈದು ದುಷ್ಕರ್ಮಿಗಳು ಪರಾರಿಯಾಗಿದ್ದು, ಹಳೇ ದ್ವೇಷಕ್ಕೆ ಕೃತ್ಯ ನಡೆಸಿರುವ ಶಂಕೆ ವ್ಯಕ್ತವಾಗಿದೆ. ಸೈಯದ್ ಮೆಹಬೂಬ್ ಕೆಲವು ಕಳ್ಳತನ ಪ್ರಕರಣಗಳ ಆರೋಪಿಯೂ ಆಗಿದ್ದು, ಸ್ಥಳಕ್ಕೆ ಕಲಬುರಗಿ ಪೊಲೀಸ್ ಆಯುಕ್ತ ಶರಣಪ್ಪ ಭೇಟಿನೀಡಿ ಪರೀಶಿಲನೆ ನಡೆಸಿದ್ದಾರೆ. ಈ ಬಗ್ಗೆ ಕಲಬುರಗಿಯ ಸ್ಟೇಷನ್ ಬಜಾರ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

ಕಡಿಮೆ ಆಗಿಲ್ಲ ಶ್ರೀನಾಥ್ ಎನರ್ಜಿ; ‘ನೀನೆ ಸಾಕಿದ ಗಿಣಿ’ ಹಾಡಿಗೆ ಡ್ಯಾನ್ಸ್
ಕಡಿಮೆ ಆಗಿಲ್ಲ ಶ್ರೀನಾಥ್ ಎನರ್ಜಿ; ‘ನೀನೆ ಸಾಕಿದ ಗಿಣಿ’ ಹಾಡಿಗೆ ಡ್ಯಾನ್ಸ್
ಉದ್ಘಾಟನೆಗೂ ಮುನ್ನವೇ ಕುಸಿದು ಬಿತ್ತು 21 ಕೋಟಿ ರೂ. ವೆಚ್ಚದ ನೀರಿನ ಟ್ಯಾಂಕ್
ಉದ್ಘಾಟನೆಗೂ ಮುನ್ನವೇ ಕುಸಿದು ಬಿತ್ತು 21 ಕೋಟಿ ರೂ. ವೆಚ್ಚದ ನೀರಿನ ಟ್ಯಾಂಕ್
ಕೆಲಸ ಮಾಡುವ ಕಚೇರಿಯಲ್ಲಿ ಇರಬೇಕಾದ ದೇವರ ಫೋಟೋಗಳು
ಕೆಲಸ ಮಾಡುವ ಕಚೇರಿಯಲ್ಲಿ ಇರಬೇಕಾದ ದೇವರ ಫೋಟೋಗಳು
ಇಂದು ಈ ರಾಶಿಯವರ ವೈವಾಹಿಕ ಜೀವನದಲ್ಲಿ ಅಸ್ಥಿರತೆ!
ಇಂದು ಈ ರಾಶಿಯವರ ವೈವಾಹಿಕ ಜೀವನದಲ್ಲಿ ಅಸ್ಥಿರತೆ!
ಗಿಲ್ಲಿ ನನಗೆ ಹೊಡೆದಾಗ ಖುಷಿ ಆಗುತ್ತಿತ್ತು, ಎಂಜಾಯ್ ಮಾಡಿದೆ: ರಕ್ಷಿತಾ
ಗಿಲ್ಲಿ ನನಗೆ ಹೊಡೆದಾಗ ಖುಷಿ ಆಗುತ್ತಿತ್ತು, ಎಂಜಾಯ್ ಮಾಡಿದೆ: ರಕ್ಷಿತಾ
ಆಕಸ್ಮಿಕ ಬೆಂಕಿಗೆ ಹೊತ್ತಿ ಉರಿದ ಶಂಕಿತ ಬಾಂಗ್ಲಾ ವಲಸಿಗರ ಶೆಡ್​ಗಳು
ಆಕಸ್ಮಿಕ ಬೆಂಕಿಗೆ ಹೊತ್ತಿ ಉರಿದ ಶಂಕಿತ ಬಾಂಗ್ಲಾ ವಲಸಿಗರ ಶೆಡ್​ಗಳು
ಗಿಲ್ಲಿ ಪಕ್ಕ ರಕ್ಷಿತಾ ಅಲ್ಲ, ನಾನು ಇರಬೇಕಿತ್ತು: ಕಾವ್ಯಾ ಅಸಮಾಧಾನದ ಮಾತು
ಗಿಲ್ಲಿ ಪಕ್ಕ ರಕ್ಷಿತಾ ಅಲ್ಲ, ನಾನು ಇರಬೇಕಿತ್ತು: ಕಾವ್ಯಾ ಅಸಮಾಧಾನದ ಮಾತು
ಬಿಗ್​​ಬಾಸ್​​ ಸಂಭಾವನೆ, ಆದ ಖರ್ಚು ಮತ್ತು ಪಿಆರ್ ಬಗ್ಗೆ ಕಾವ್ಯಾ ಮಾತು
ಬಿಗ್​​ಬಾಸ್​​ ಸಂಭಾವನೆ, ಆದ ಖರ್ಚು ಮತ್ತು ಪಿಆರ್ ಬಗ್ಗೆ ಕಾವ್ಯಾ ಮಾತು
ಬಿಗ್​​ಬಾಸ್​​ಗೆ ಹೋಗಿದ್ದು ಏಕೆ? ಕಾವ್ಯಾ ಕೊಟ್ಟರು ಕಾರಣ
ಬಿಗ್​​ಬಾಸ್​​ಗೆ ಹೋಗಿದ್ದು ಏಕೆ? ಕಾವ್ಯಾ ಕೊಟ್ಟರು ಕಾರಣ
ಬಿಗ್​​ಬಾಸ್ ಬಳಿಕ ರಕ್ಷಿತಾ ಶೆಟ್ಟಿಯ ಮುಂದಿನ ಯೋಜನೆಗಳೇನು?
ಬಿಗ್​​ಬಾಸ್ ಬಳಿಕ ರಕ್ಷಿತಾ ಶೆಟ್ಟಿಯ ಮುಂದಿನ ಯೋಜನೆಗಳೇನು?