AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Earthquake: ಹಾಸನ, ಕೊಡಗಿನ ವಿವಿಧೆಡೆ ಭೂಕಂಪ: ರಿಕ್ಟರ್ ಮಾಪಕದಲ್ಲಿ ಭೂಕಂಪನದ ತೀವ್ರತೆ 3.4 ದಾಖಲು

Hassan Earthquake: ಹಾಸನ ಮಂಡ್ಯ ಮತ್ತು ಕೊಡಗು ಜಿಲ್ಲೆಯ ಹಲವು ಗ್ರಾಮಗಳಲ್ಲಿ ಜನರಿಗೆ ಭೂಮಿಯು ಕಂಪಿಸಿದ್ದು ಸ್ಪಷ್ಟವಾಗಿ ಅನುಭವಕ್ಕೆ ಬಂದಿದೆ.

Karnataka Earthquake: ಹಾಸನ, ಕೊಡಗಿನ ವಿವಿಧೆಡೆ ಭೂಕಂಪ: ರಿಕ್ಟರ್ ಮಾಪಕದಲ್ಲಿ ಭೂಕಂಪನದ ತೀವ್ರತೆ 3.4 ದಾಖಲು
ಪ್ರಾತಿನಿಧಿಕ ಚಿತ್ರ
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ|

Updated on:Jun 23, 2022 | 10:50 AM

Share

ಹಾಸನ/ಮಡಿಕೇರಿ: ಕೊಡಗು ಮತ್ತು ಹಾಸನ ಜಿಲ್ಲೆಯ ವಿವಿಧೆಡೆ ಗುರುವಾರ (ಜೂನ್ 23) ನಸುಕಿನಲ್ಲಿ ಭೂಮಿ ಕಂಪಿಸಿದೆ (Hassan Earthquake). ಭೂ ಕಂಪನದ ತೀವ್ರತೆಯು ರಿಕ್ಟರ್ ಮಾಪಕದಲ್ಲಿ 3.4 ತೀವ್ರತೆ ದಾಖಲಿಸಿದೆ. ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಆಯುಕ್ತರು ಭೂಕಂಪನ ಸಂಭವಿಸಿರುವುದನ್ನು ದೃಢಪಡಿಸಿದ್ದಾರೆ. ಹಾಸನ ಜಿಲ್ಲೆಯ, ಅರಕಲಗೂಡು, ಹೊಳೆನರಸೀಪುರ ತಾಲ್ಲೂಕಿನ ಹಲವು ಗ್ರಾಮಗಳಲ್ಲಿ ನಸುಕಿನ 4.30ರಿಂದ 5 ಗಂಟೆಯ ಅವಧಿಯಲ್ಲಿ ಭೂಮಿಯು ಕಂಪಿಸಿತ್ತು.  ಹೊಳೆನರಸೀಪುರ ತಾಲ್ಲೂಕಿನ ಮನುಗನಹಳ್ಳಿ ಗ್ರಾಮವು ಭೂಕಂಪನ ಕೇಂದ್ರವಾಗಿತ್ತು. ನಿದ್ರೆಯಲ್ಲಿದ್ದವರು ಗಾಬರಿಗೊಂಡು ಮನೆಗಳಿಂದ ಹೊರಗೆ ಓಡಿ ಬಂದಿದ್ದರು. ಇದೀಗ ಭೂಕಂಪ ಆಗಿರುವ ಬಗ್ಗೆ ಅಧಿಕಾರಿಗಳು ದೃಢಪಡಿಸಿದ್ದಾರೆ.

ಹಾಸನ ಜಿಲ್ಲೆಯಲ್ಲಿ ಸಂಭವಿಸಿದ ಭೂಕಂಪದ ವಿಚಾರವಾಗಿ ರಾಜ್ಯ ನೈಸರ್ಗಿಕ ವಿಪತ್ತು ನಿರ್ವಹಣಾ ಉಸ್ತುವಾರಿ ಕೇಂದ್ರವು ಸ್ಪಷ್ಟನೆ ನೀಡಿದೆ. ನಸುಕಿನ 4:37ರ ಸುಮಾರಿಗೆ ಭೂಕಂಪವಾಗಿದ್ದು, ತೀವ್ರತೆ ರಿಕ್ಟರ್ ಮಾಪಕದಲ್ಲಿ 3.4ರಷ್ಟು ಇದೆ ಎಂದು ಕೇಂದ್ರವು ತಿಳಿಸಿದೆ.

ನಸುಕಿನ 4.38ರಲ್ಲಿ ಭೂಮಿ ಲಘುವಾಗಿ ಕಂಪಿಸಿದೆ. ಅರಕಲಗೂಡು ಮತ್ತು ಹೊಳೆನರಸೀಪುರ ತಾಲ್ಲೂಕುಗಳ (Arakalagudu and Holenarasipura Taluks) ಹಲವು ಗ್ರಾಮಗಳಲ್ಲಿ ಜನರಿಗೆ ಭೂಮಿಯು ಕಂಪಿಸಿದ್ದು ಸ್ಪಷ್ಟವಾಗಿ ಅನುಭವಕ್ಕೆ ಬಂದಿದೆ. ಭೂಮಿಯು ಕಂಪಿಸುವ ಮೊದಲು ದೊಡ್ಡ ಸದ್ದು ಕೇಳಿಸಿತು ಎಂದು ಹಲವರು ತಮ್ಮ ನೆನಪಿಸಿಕೊಂಡಿದ್ದಾರೆ. ಅರಕಲಗೂಡು ಪಟ್ಟಣ, ತಾಲ್ಲೂಕಿನ ಮುದ್ದನಹಳ್ಳಿ, ಹನೆಮಾರನಹಳ್ಳಿ, ಕಾರಳ್ಳಿ, ಹೊಳೆನರಸೀಪುರ ತಾಲ್ಲೂಕಿನ ಚಿಟ್ನಳ್ಳಿ ಹೌಸಿಂಗ್ ಬೋರ್ಡ್ ಪ್ರದೇಶದಲ್ಲಿ ಭೂಮಿಯು ಕಂಪಿಸಿದ್ದು ಸ್ಪಷ್ಟವಾಗಿ ಜನರ ಅರಿವಿಗೆ ಬಂದಿದೆ. ಭೂಮಿಯು ಅಲುಗಾಡುತ್ತಿರುವ ಅನುಭವವಾದ ತಕ್ಷಣ ಜನರು ಭಯಗೊಂಡು ಮನೆಗಳಿಂದ ಹೊರಗೆ ಓಡಿ ಬಂದರು. ಈ ಘಟನೆಯು ಜನರಲ್ಲಿ ಭೀತಿ ಉಂಟು ಮಾಡಿದೆ.

ಕೊಡಗಿನ ವಿವಿಧೆಡೆ ಭೂಕಂಪ

ಕೊಡಗು ಜಿಲ್ಲೆ ಸೋಮವಾರಪೇಟೆ ತಾಲೂಕಿನ ರೇಂಜರ್ ಬ್ಲಾಕ್, ನೇಗಳ್ಳೆ ಗ್ರಾಮದಲ್ಲಿ ಹಲವರಿಗೆ ಭೂಮಿ ಕಂಪಿಸಿದ ಅನುಭವವಾಗಿದೆ. ಮಡಿಕೇರಿ ತಾಲೂಕಿನ ಮಡಿಕೇರಿ ನಗರ ಮತ್ತು ದೇವಸ್ತೂರು ಸೇರಿದಂತೆ ವಿವಿಧ ಗ್ರಾಮಗಳಲ್ಲಿಯೂ ಜನರಿಗೆ ಇಂಥದ್ದೇ ಅನುಭವವಾಗಿದೆ. ನಸುಕಿನ 4:37ಕ್ಕೆ ಭೂಕಂಪನವಾಗಿದೆ ಎಂದು ಮೂಲಗಳು ದೃಢಪಡಿಸಿವೆ.

ಮಂಡ್ಯದಲ್ಲೂ ಭೂಕಂಪ

ಮಂಡ್ಯ ಜಿಲ್ಲೆಯ ಕೆಲವೆಡೆಯೂ ಜನರಿಗೆ ಮುಂಜಾನೆ 4.40ರ ಸುಮಾರಿಗೆ ಲಘು ಭೂಕಂಪನದ ಅನುಭವವಾಗಿದೆ. ಕೆ.ಆರ್.ಪೇಟೆ ತಾಲೂಕಿನ ಐಕನಹಳ್ಳಿ, ಚಿನ್ನೇನಹಳ್ಳಿ, ಮಾದಾಪುರ, ಗೊಂದಿಹಳ್ಳಿ, ಬಿದರಹಳ್ಳಿ, ಗೊಡೇಹೊಸಹಳ್ಳಿಯ ಗ್ರಾಮಗಳ ಜನರು ಭೂಕಂಪದಿಂದ ಆತಂಕಗೊಂಡಿದ್ದಾರೆ.

ಕರ್ನಾಟಕದ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ. ದೇಶದ ಇತರ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ ಪ್ರಮುಖ  ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 6:39 am, Thu, 23 June 22

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ