AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾಸನ: ಕಾಡಾನೆ ಮತ್ತಿನಲ್ಲಿ ಇದ್ದರೂ ಕಾಳಗಕ್ಕಿಳಿದಿದ್ದ ಅರ್ಜುನ; ದಸರಾ ಆನೆ ಸಾವಿನ ಬಗ್ಗೆ ಡಿಎಫ್​ಓ ನೀಡಿದ ವಿವರ ಇಲ್ಲಿದೆ

Dasara Elephant Arjuna; ಅರ್ಜುನ 2012 ರಿಂದ 2019 ರ ನಡುವೆ ಎಂಟು ಬಾರಿ 750 ಕೆಜಿ ತೂಕದ ಚಿನ್ನದ ಅಂಬಾರಿಯನ್ನು ಹೊತ್ತಿದ್ದ. ನಂತರವೂ ದಸರಾ ಉತ್ಸವಗಳಲ್ಲಿ ಭಾಗವಹಿಸಿದ್ದ. ಈ ವರ್ಷ ನಡೆದ ದಸರಾ ಮಹೋತ್ಸವದಲ್ಲಿ ಕೂಡ ಭಾಗಿಯಾಗಿದ್ದ.

ಹಾಸನ: ಕಾಡಾನೆ ಮತ್ತಿನಲ್ಲಿ ಇದ್ದರೂ ಕಾಳಗಕ್ಕಿಳಿದಿದ್ದ ಅರ್ಜುನ; ದಸರಾ ಆನೆ ಸಾವಿನ ಬಗ್ಗೆ ಡಿಎಫ್​ಓ ನೀಡಿದ ವಿವರ ಇಲ್ಲಿದೆ
ಕಾಡಾನೆ ಸೆರೆ ಕಾರ್ಯಾಚರಣೆಗೆ ಹೊರಟ್ಟಿದ್ದ ಅರ್ಜುನ ಹಾಗೂ ಇತರ ಆನೆಗಳು
ಮಂಜುನಾಥ ಕೆಬಿ
| Updated By: Ganapathi Sharma|

Updated on: Dec 04, 2023 | 6:06 PM

Share

ಹಾಸನ, ಡಿಸೆಂಬರ್ 4: ಹಾಸನ ಜಿಲ್ಲೆಯ ಸಕಲೇಶಪುರ (Sakleshpura) ತಾಲ್ಲೂಕಿನ ಯಸಳೂರು ಬಳಿ ಕಾಡಾನೆ ಸೆರೆ ಕಾರ್ಯಾಚರಣೆ ವೇಳೆ ನಡೆದ ಕಾಳಗದಲ್ಲಿ ದಸರಾ ಆನೆ ಅರ್ಜುನ ಮೃತಪಟ್ಟಿದೆ. ಅರ್ಜುನ (Dasata Elephant Arjuna) ಹಾಗೂ ಕಾಡಾನೆ ನಡುವೆ ನಡೆದ ಕಾಳದ ಬಗ್ಗೆ ಇದೀಗ ವಿಭಾಗೀಯ ಅರಣ್ಯಾಧಿಕಾರಿ ಮೋಹನ್ ​ಕುಮಾರ್​ ‘ಟಿವಿ9’ಗೆ ಮಾಹಿತಿ ನೀಡಿದ್ದಾರೆ. ಸೋಮವಾರ ಬೆಳಗ್ಗೆಯೇ ಕಾಡಾನೆ ಸೆರೆ ಕಾರ್ಯಾಚರಣೆ ಆರಂಭಿಸಲಾಗಿತ್ತು. ಕಾಡಾನೆಗಳು ಇದ್ದ ಸ್ಥಳಕ್ಕೆ ಹೋದಾಗ 12 ಆನೆಗಳಿದ್ದವು. ಆನೆಗಳ ಗುಂಪನ್ನು ಗಂಡಾನೆಯೊಂದು ಲೀಡ್​ ಮಾಡ್ತಿತ್ತು. ಕಾಡಾನೆ ಮತ್ತಿನಲ್ಲಿ ಇದ್ದರೂ ಅರ್ಜುನ ಕಾಳಗಕ್ಕೆ ಇಳಿದಿದ್ದ ಎಂದು ಅವರು ತಿಳಿಸಿದ್ದಾರೆ.

ಕಾಡಾನೆಗೆ ಅರಿವಳಿಕೆ ಚುಚ್ಚುಮದ್ದು ನೀಡಲಾಗಿದ್ದರೂ ಅದು ಪೂರ್ಣ ಪ್ರಜ್ಞೆ ತಪ್ಪಿರಲಿಲ್ಲ. ಮತ್ತಿನಲ್ಲಿದ್ದಾಗ ಸಾಕಾನೆಗಳ ಮೇಲೆ ದಾಳಿಗೆ ಮುಂದಾಗಿದೆ. ಇದೇ ವೇಳೆ ಇತರ ಆನೆಗಳು ಹಾಗೂ ಅರಣ್ಯ ಇಲಾಖೆ ಸಿಬ್ಬಂದಿ ಓಡಿಹೋಗಿದ್ದಾರೆ. ಆದರೆ, ಅರ್ಜುನ ಮಾತ್ರ ಅದರ ಜತೆ ಕಾಳಗ ನಡೆಸಿತು ಎಂದು ಅವರು ಮಾಹಿತಿ ನೀಡಿದ್ದಾರೆ.

ಇದೀಗ ಮೃತಪಟ್ಟಿರುವ ಅರ್ಜುನ ಆನೆ ಬಳಿ ಹೋಗಲು ಸಾಧ್ಯವಾಗುತ್ತಿಲ್ಲ. ಸುತ್ತಮುತ್ತ ಕಾಡಾನೆಗಳು ಇನ್ನೂ ಓಡಾಡುತ್ತಿವೆ. ಮೇಲಧಿಕಾರಿಗಳಿಗೆ ಈ ಘಟನೆ ಬಗ್ಗೆ ಮಾಹಿತಿ ನೀಡಿದ್ದೇವೆ. ಮೇಲಧಿಕಾರಿಗಳ ಸೂಚನೆ ಬಳಿಕ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಮೋಹನ್ ​ಕುಮಾರ್ ತಿಳಿಸಿದ್ದಾರೆ.

ಪ್ರಜ್ಞೆತಪ್ಪಿ ಬಿದ್ದ ಮಾವುತ

ದಸರಾ ಆನೆ ಅರ್ಜುನನ ಸಾವಿನಿಂದ ಮಾವುತ ವಿನೋದ್‌ ಕಂಗಾಲಾಗಿದ್ದಾರೆ. ಅಸ್ವಸ್ಥಗೊಂಡ ಅವರು ಪ್ರಜ್ಞೆತಪ್ಪಿ ಬಿದ್ದಿದ್ದು, ಌಂಬುಲೆನ್ಸ್‌ ಮೂಲಕ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಇತರ ಮಾವುತರು ಕೂಡ ಅರ್ಜುನನನ್ನು ಕಳೆದುಕೊಂಡು ಬಿಕ್ಕಿಬಿಕ್ಕಿ ಅಳುತ್ತಿರುವ ದೃಶ್ಯ ಕಂಡುಬಂದಿದೆ.

ಇದನ್ನೂ ಓದಿ: ಹಾಸನ: ದಸರಾ ಅಂಬಾರಿ ಹೊತ್ತಿದ್ದ ಅರ್ಜುನ ಸಕಲೇಶಪುರದಲ್ಲಿ ಕಾಡಾನೆ ದಾಳಿಗೆ ಬಲಿ

ಹಲವರ ಪ್ರಾಣ ಉಳಿಸಿದ ಅರ್ಜುನ

ಮತ್ತಿನಲ್ಲಿದ್ದ ಕಾಡಾನೆಯೊಂದಿಗೆ ಹೋರಾಟ ನಡೆಸುವ ಮೂಲಕ ಅರ್ಜುನ ಹಲವರ ಪ್ರಾಣ ಉಳಿಸಿದೆ. ಅರ್ಜುನ ಹೋರಾಟ ನಡೆಸಿದ್ದರಿಂದ ದೊಡ್ಡ ಅನಾಹುತ ತಪ್ಪಿದೆ ಎನ್ನಲಾಗಿದೆ. ಕೊಂಚ ಎಡವಟ್ಟಾಗಿದ್ರೂ ಹಲವು ಸಿಬ್ಬಂದಿ ಪ್ರಾಣಕ್ಕೆ ಕುತ್ತು ಬರುತ್ತಿತ್ತು. ಅರ್ಜುನ ಕಾಡಾನೆ ಜತೆ ಸೆಣಸಿದ್ದರಿಂದ ಇತರ ಆನೆಗಳಿಗೆ ಹಾಗೂ ಸಿಬ್ಬಂದಿಗೆ ಕಾಡಾನೆ ದಾಳಿಯಿಂದ ತಪ್ಪಿಸಿಕೊಳ್ಳುವುದು ಸಾಧ್ಯವಾಯಿತು ಎಂದು ಮೂಲಗಳು ತಿಳಿಸಿವೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ