ಹಾಸನ: ಸಕಲೇಶಪುರದಲ್ಲಿ ವಿದ್ಯುತ್​ ತಂತಿ ಸ್ಪರ್ಶಿಸಿ ಆನೆ ಸಾವು

ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಬನವಾಸೆ ಗ್ರಾಮದ ಬಿಎಸ್​​ಎನ್​ಎಲ್​ ಟವರ್ ಬಳಿ ವಿದ್ಯುತ್​ ತಂತಿ ಸ್ಪರ್ಶಿಸಿ ಕಾಡಾನೆ ಮೃತಪಟ್ಟಿದೆ. ಅಂದಾಜು 25 ವರ್ಷದ ಒಂಟಿಸಲಗ ಸಾವಿಗೀಡಾಗಿದೆ. ಸ್ಥಳಕ್ಕೆ ಅರಣ್ಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಹಾಸನ: ಸಕಲೇಶಪುರದಲ್ಲಿ ವಿದ್ಯುತ್​ ತಂತಿ ಸ್ಪರ್ಶಿಸಿ ಆನೆ ಸಾವು
ಆನೆ ಸಾವು
Follow us
TV9 Web
| Updated By: ವಿವೇಕ ಬಿರಾದಾರ

Updated on:Oct 17, 2024 | 12:42 PM

ಹಾಸನ, ಅಕ್ಟೋಬರ್​ 17: ಸಕಲೇಶಪುರ (Sakleshpur) ತಾಲೂಕಿನ ಬನವಾಸೆ ಗ್ರಾಮದ ಬಳಿ ಕಾಡಾನೆಯೊಂದು (Elephant) ಮೃತಪಟ್ಟಿದೆ. ಗ್ರಾಮದ ಬಿಎಸ್​​ಎನ್​ಎಲ್​ ಟವರ್ ಬಳಿ ವಿದ್ಯುತ್​ ತಂತಿ ಸ್ಪರ್ಶಿಸಿ ಅಂದಾಜು 25 ವರ್ಷದ ಒಂಟಿಸಲಗ ಸಾವಿಗೀಡಾಗಿದೆ. ಆನೆ ಆಹಾರ ಅರಸಿ ಗ್ರಾಮದ ಬಳಿ ಬಂದಿತ್ತು. ಈ ವೇಳೆ ವಿದ್ಯುತ್​​ ತಂತಿಗೆ ಆನೆಯ ಸೊಂಡಿಲು ತಾಗಿ ಮೃತಪಟ್ಟಿದೆ. ಸ್ಥಳಕ್ಕೆ ಅರಣ್ಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಗಜಪಡೆ ದಾಳಿಯಿಂದ ಭತ್ತದ ಗದ್ದೆ ನಾಶ

ಮತ್ತೊಂದಡೆ ಕಾಡಾನೆ ದಾಳಿಗೆ ಅಪಾರ ಪ್ರಮಾಣದ ಭತ್ತ ನಾಶವಾಗಿದೆ. ಇದೇ ಸಕಲೇಶಪುರ ತಾಲೂಕಿನ ಮಲಗಳ್ಳಿ ಗ್ರಾಮದ ಭತ್ತದ ಗದ್ದೆಗಳಿಗೆ ಇಂದು (ಅ.17) ಮುಂಜಾನೆ ಕಾಡಾನೆಗಳ ಹಿಂಡು ನುಗ್ಗಿದೆ. ಆನೆಗಳು ಭತ್ತದ ಬೆಳೆಯನ್ನು ತುಳಿದು, ತಿಂದು ನಾಶ ಮಾಡಿವೆ. ಗ್ರಾಮದ ಹೂವಣ್ಣ, ರುದ್ರಯ್ಯ, ಚಿನ್ನಪ್ಪ, ಹೇಮಂತ್, ಉಮೇಶ್ ಎಂಬುವವರಿಗೆ ಸೇರಿದ ಭತ್ತದ ಗದ್ದೆಗಳು ಸಂಪೂರ್ಣ ನಾಶವಾಗಿವೆ.

ಇದನ್ನೂ ಓದಿ: ಭದ್ರಾ ಅಭಯಾರಣ್ಯದಲ್ಲಿ ಆನೆ ಶಿಬಿರ ಸ್ಥಾಪನೆ: ಸಚಿವ ಈಶ್ವರ ಖಂಡ್ರೆ ಘೋಷಣೆ 

ರೈತರು ಸಾಲ ಮಾಡಿ ಭತ್ತ ನಾಟಿ ಮಾಡಿದ್ದರು. ಆದರೆ, ಕಾಡಾನೆಗಳ ದಾಳಿಯಿಂದ ಫಸಲಿಗೆ ಬಂದಿದ್ದ ಭತ್ತದ ನಾಶವಾಗಿದ್ದು, ರೈತರು ಕಣ್ಣೀರು ಹಾಕುತ್ತಿದ್ದಾರೆ. ಬೆಳೆ ನಷ್ಟಕ್ಕೆ ಸೂಕ್ತ ಪರಿಹಾರ ನೀಡುವಂತೆ ರೈತರು ಆಗ್ರಹಿಸಿದ್ದಾರೆ. ಕಾಡಾನೆ ಹಾವಳಿಗೆ ಬ್ರೇಕ್ ಹಾಕದ ಸರ್ಕಾರ ವಿರುದ್ಧ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದು, ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡುವಂತೆ ಆಗ್ರಹಿಸಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 12:37 pm, Thu, 17 October 24

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ