AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾಸನ ಡಿಸಿಗೆ ಯಾರಿಂದ ಕಿರುಕುಳ ಇದೆ ಎಲ್ಲರಿಗೂ ಗೊತ್ತು: ಹೆಚ್​​ಡಿ ರೇವಣ್ಣ ವಿರುದ್ಧ ಡಿಕೆ ಶಿವಕುಮಾರ್ ಪರೋಕ್ಷ ವಾಗ್ದಾಳಿ

ಹಾಸನ ಜಿಲ್ಲೆಯ ಸಕಲೇಶಪುರದಲ್ಲಿ ಇಂದು ನಡೆದ ಕಸ್ತೂರಿ ರಂಗನ್ ವರದಿ ಕುರಿತ ನೇರ ಸಂವಾದ ಸಭೆಯಲ್ಲಿ ಸಿಎಂ ಡಿಕೆ ಶಿವಕುಮಾರ್​ ಭಾಗಿಯಾಗಿದ್ದರು. ಈ ವೇಳೆ ಮಾತನಾಡಿದ ಅವರು, ಹಾಸನದ ಜಿಲ್ಲಾಧಿಕಾರಿಗೆ ಯಾರಿಂದ ಕಿರಕುಳ ಇದೆ ನಿಮಗೆ ಗೊತ್ತು ಎಂದು ಹೇಳುವ ಮೂಲಕ ಪರೋಕ್ಷವಾಗಿ ಹೆಚ್​​ಡಿ ರೇವಣ್ಣ ವಿರುದ್ಧ ವಾಗ್ದಾಳಿ ಮಾಡಿದ್ದಾರೆ.

ಹಾಸನ ಡಿಸಿಗೆ ಯಾರಿಂದ ಕಿರುಕುಳ ಇದೆ ಎಲ್ಲರಿಗೂ ಗೊತ್ತು: ಹೆಚ್​​ಡಿ ರೇವಣ್ಣ ವಿರುದ್ಧ ಡಿಕೆ ಶಿವಕುಮಾರ್ ಪರೋಕ್ಷ ವಾಗ್ದಾಳಿ
ಡಿಕೆ ಶಿವಕುಮಾರ್​Image Credit source: x.com/DKShivakumar
ಮಂಜುನಾಥ ಕೆಬಿ
| Edited By: |

Updated on: Sep 20, 2026 | 7:39 PM

Share

ಹಾಸನ, ಸೆಪ್ಟೆಂಬರ್​​ 20: ‘ಜಿಲ್ಲೆಯಲ್ಲಿ ಉತ್ತಮ‌ ಅಧಿಕಾರಿಗಳ ತಂಡ ಇದೆ. ಆದರೆ ಇಲ್ಲಿನ ಜಿಲ್ಲಾಧಿಕಾರಿಗೆ ಕಿರುಕುಳ ಇದೆ. ಯಾರಿಂದ ಕಿರುಕುಳ ಇದೆ ಎಂಬುದು ಎಲ್ಲರಿಗೂ ಚೆನ್ನಾಗಿ ಗೊತ್ತಿದೆ’ ಎಂದು ಸಿಎಂ ಡಿಕೆ ಶಿವಕುಮಾರ್ ಹೇಳಿದರು. ಆ ಮೂಲಕ ಮಾಜಿ ಸಚಿವ ಹೆಚ್​​.ಡಿ. ರೇವಣ್ಣ ವಿರುದ್ಧ ಅವರು ಪರೋಕ್ಷವಾಗಿ ಆಕ್ರೋಶ ಹೊರಹಾಕಿದ್ದಾರೆ.

ಯಾರಿಗೂ ಹೆದರಿಕೊಳ್ಳುವ ಅವಶ್ಯಕತೆ ಇಲ್ಲ ಎಂದ ಡಿಕೆ ಶಿವಕುಮಾರ್​​

ಸಕಲೇಶಪುರದಲ್ಲಿ ನಡೆದ ಕಸ್ತೂರಿ ರಂಗನ್ ವರದಿ ಕುರಿತ ನೇರ ಸಂವಾದ ಸಭೆಯಲ್ಲಿ ಮಾತನಾಡಿದ ಸಿಎಂ ಡಿಕೆ ಶಿವಕುಮಾರ್​, ‘ನಾನೇ ಖುದ್ದು ಜಿಲ್ಲಾಧಿಕಾರಿಗೆ ಫೋನ್ ಮಾಡಿ ಧೈರ್ಯ ತುಂಬಿದ್ದೇನೆ. ಯಾರಿಗೂ ಹೆದರಿಕೊಳ್ಳುವ ಅವಶ್ಯಕತೆ ಇಲ್ಲ. ಬಡವರ ಪರವಾಗಿ ಕೆಲಸ ಮಾಡಮ್ಮ’ ಎಂದು ಹೇಳಿದ್ದೇನೆ ಎಂದರು.

ಘಟನೆ ಹಿನ್ನೆಲೆ

ಇತ್ತೀಚೆಗೆ ಗ್ರಾಮ ಪಂಚಾಯಿತಿ ಚುನಾವಣಾ ಮೀಸಲಾತಿ ಹಂಚಿಕೆಗೆ ಸಂಬಂಧಿಸಿದಂತೆ ಮಾಜಿ ಸಚಿವ ಹೆಚ್‌.ಡಿ. ರೇವಣ್ಣ ಹಾಗೂ ಹಾಸನ ಜಿಲ್ಲಾಧಿಕಾರಿ ಕೆ.ಎಸ್. ಲತಾಕುಮಾರಿ ಅವರ ನಡುವೆ ತೀವ್ರ ಮಾತಿನ ಸಮರವೇ ನಡೆದಿತ್ತು. ಈ ವೇಳೆ ರೇವಣ್ಣ ಅವರು ಜಿಲ್ಲಾಧಿಕಾರಿಯವರ ವಿರುದ್ಧ ಸಾರ್ವಜನಿಕವಾಗಿ ಆಕ್ಷೇಪಾರ್ಹ ಹೇಳಿಕೆ ನೀಡಿದ್ದರು. ಡಿಸಿ ಕೂಡ ತಮ್ಮ ಮೇಲಿನ ಆರೋಪಗಳಿಗೆ ಖಡಕ್​​ ತಿರುಗೇಟು ನೀಡಿದ್ದರು. ಈ ವಿಚಾರ ಸಾಕಷ್ಟು ಚರ್ಚೆಗೂ ಗ್ರಾಸವಾಗಿತ್ತು.

LIVE TV

ಅಧಿಕಾರದ ಬಗ್ಗೆ ಮಾರ್ಮಿಕವಾಗಿ ಮಾತನಾಡಿದ ಡಿಕೆ ಶಿವಕುಮಾರ್​​

ಇನ್ನು ಇದೇ ಸಂದರ್ಭದಲ್ಲಿ ತಮ್ಮ ಅಧಿಕಾರದ ಅವಧಿಯ ಬಗ್ಗೆ ಮಾರ್ಮಿಕವಾಗಿ ಮಾತನಾಡಿದ ಡಿಕೆ ಶಿವಕುಮಾರ್​, ‘ನನಗೆ ಎಷ್ಟು ದಿನ ಸಮಯವಿದೆಯೋ ಗೊತ್ತಿಲ್ಲ. ಎಲ್ಲಿಯವರೆಗೂ ನನ್ನ ಶ್ರಮ ಇರುತ್ತದೆಯೋ, ಅಲ್ಲಿಯವರೆಗೂ ಜನರಿಗೆ ಸ್ಪಂದಿಸುತ್ತೇನೆ. ಅಲ್ಲಿಯವರೆಗೂ ನನಗೆ ಶಕ್ತಿ ಇರುತ್ತದೆ’ ಎಂದು ಹೇಳಿದರು.

ಇದನ್ನೂ ಓದಿ: ಹಾಸನದಲ್ಲಿ ಮತ್ತೆ ಹೆಚ್​​.ಡಿ.ರೇವಣ್ಣ v/s ಜಿಲ್ಲಾಧಿಕಾರಿ: ಗ್ರಾ.ಪಂ.ಗಳ ಚುನಾವಣೆ ಮೀಸಲು ಸಂಬಂಧ ಜಟಾಪಟಿ

‘ದೇವರು ವರವನ್ನೂ ಕೊಡಲ್ಲ, ಶಾಪವನ್ನೂ ಕೊಡಲ್ಲ, ಕೇವಲ ಅವಕಾಶ ಕೊಡುತ್ತಾನೆ. ನೀವು ನನಗೊಂದು ಅವಕಾಶ ಕೊಟ್ಟಿದ್ದೀರಿ, ನಾನು ನಿಮ್ಮ ಕೆಲಸ ಮಾಡುತ್ತೇನೆ. ಇದೇ ವೇಳೆ, ‘ಬಿಜೆಪಿ ಸ್ನೇಹಿತರು ಅವರ ಸಾಧನೆಗಳನ್ನು ಹೇಳಿಕೊಳ್ಳಲಿ, ಬೇಡ ಎನ್ನಲ್ಲ. ಆದರೆ ಕೆಲಸ ಮಾಡದೆ ಹೋದಾಗ ಪ್ರಶ್ನಿಸಬೇಕಾಗುತ್ತದೆ’ ಎಂದಿದ್ದಾರೆ.

ಶಾಸಕ ಶಿವಲಿಂಗೇಗೌಡರಿಗೆ ಸಿಎಂ ಸಲಹೆ

ಸ್ಥಳೀಯ ನಾಯಕರ ಕಾರ್ಯವೈಖರಿ ಕುರಿತು ಪ್ರಸ್ತಾಪಿಸಿದ ಅವರು, ‘ಶಿವಲಿಂಗೇಗೌಡರಿಗೆ ಅಧಿಕಾರದಲ್ಲಿ ಅವಕಾಶ ನೀಡಿದ್ದೇವೆ. ಅವರೇನು ಪದೇ ಪದೇ ಬೆಂಗಳೂರಿಗೆ ಬರುವ ಅವಶ್ಯಕತೆ ಇಲ್ಲ. ಹಳ್ಳಿ ಹಳ್ಳಿಗೆ ತಿರುಗಿ ಜನರ ಸಮಸ್ಯೆಗಳನ್ನು ಆಲಿಸಿ ಬಗೆಹರಿಸುವ ಕೆಲಸ ಮಾಡಲಿ’ ಎಂದು ಕಿವಿಮಾತು ಹೇಳಿದರು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಮಂಜುನಾಥ ಕೆಬಿ
ಮಂಜುನಾಥ ಕೆಬಿ

ಮಂಜುನಾಥ ಕೆಬಿ ಪತ್ರಿಕೋದ್ಯಮದಲ್ಲಿ ಕಳೆದ 17 ವರ್ಷಗಳಿಂದ ಸೇವೆ ಮಾಡುತ್ತಿದ್ದೇನೆ. ಕರುನಾಡಿನ ಹೆಮ್ಮೆಯ ಸುದ್ದಿ ವಾಹಿನಿ ಟಿವಿ9 ಕನ್ನಡ ಜೊತೆಗೆ 15ನೇ ವರ್ಷದ ಪಯಣ ನನ್ನದು. ಓದಿದ್ದು, ಮೈಸೂರು ವಿವಿಯಲ್ಲಿ ಕಾನೂನು ಪದವಿ, ಎರಡು ವರ್ಷ ವಕೀಲ ವೃತ್ತಿ ಬಳಿಕ ಮಾಧ್ಯಮ ಕ್ಷೇತ್ರಕ್ಕೆ ಆಗಮಿಸಿ ಟಿವಿ9 ವಾಹಿನಿ ಮೂಲಕ ಸಮಸ್ಯೆಗೆ ಧ್ವನಿಯಾಗಿ ಕಾಯಕ. ಕೊಡಗಿನಲ್ಲಿ ಐದುವರೆ ವರ್ಷ ವರದಿಗಾರನಾಗಿ ಕರ್ತವ್ಯ ನಿರ್ವಹಿಸಿದ್ದು, ಇದೀಗ ಹಾಸನದ ಹಿರಿಯ ವರದಿಗಾರನಾಗಿ ಕರ್ತವ್ಯ ನಿರ್ವಹಣೆ ಮಾಡುತ್ತಿದ್ದೇನೆ.

Read More
ಇಂದಿನಿಂದ ನವರಾತ್ರಿ ಆರಂಭ; ಹೊಸ ಕೆಲಸ ಆರಂಭಿಸಲು ಒಳ್ಳೆಯ ದಿನ
ಇಂದಿನಿಂದ ನವರಾತ್ರಿ ಆರಂಭ; ಹೊಸ ಕೆಲಸ ಆರಂಭಿಸಲು ಒಳ್ಳೆಯ ದಿನ
ಅಲೆಮಾರಿ ಕುಟುಂಬಗಳ ಮಕ್ಕಳಿಗಾಗಿ ಗುಡಿಸಲಿನಲ್ಲಿ ಗ್ರಂಥಾಲಯ
ಅಲೆಮಾರಿ ಕುಟುಂಬಗಳ ಮಕ್ಕಳಿಗಾಗಿ ಗುಡಿಸಲಿನಲ್ಲಿ ಗ್ರಂಥಾಲಯ
ಕೊನೆಗೂ ಪೆನ್​ಡ್ರೈವ್​ನಲ್ಲಿ ಏನಿದೆ ಎಂಬ ಗುಟ್ಟು ಬಿಚ್ಚಿಟ್ಟ ಕುಮಾರಸ್ವಾಮಿ
ಕೊನೆಗೂ ಪೆನ್​ಡ್ರೈವ್​ನಲ್ಲಿ ಏನಿದೆ ಎಂಬ ಗುಟ್ಟು ಬಿಚ್ಚಿಟ್ಟ ಕುಮಾರಸ್ವಾಮಿ
ಹಾಸನ ಡಿಸಿ ಮತ್ತು ಜಿಲ್ಲಾ ಸಚಿವರ ಸಂಘರ್ಷ ಶುರುವಾಗಿದೆ ಎಂದು ಹೆಚ್​​ಡಿಕೆ
ಹಾಸನ ಡಿಸಿ ಮತ್ತು ಜಿಲ್ಲಾ ಸಚಿವರ ಸಂಘರ್ಷ ಶುರುವಾಗಿದೆ ಎಂದು ಹೆಚ್​​ಡಿಕೆ
ಸಿಜೆಪಿ ಪ್ರತಿಭಟನೆ ವಿರುದ್ಧ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ವಾಗ್ದಾಳಿ
ಸಿಜೆಪಿ ಪ್ರತಿಭಟನೆ ವಿರುದ್ಧ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ವಾಗ್ದಾಳಿ
‘ಪ್ರೇಮದ ಊರಲಿ’ ಚಿತ್ರಕ್ಕಾಗಿ ನನ್ನ ಸಿನಿಮಾ ರಿಲೀಸ್ ಮುಂದಕ್ಕೆ ಹಾಕಿದ್ದೀನಿ’
‘ಪ್ರೇಮದ ಊರಲಿ’ ಚಿತ್ರಕ್ಕಾಗಿ ನನ್ನ ಸಿನಿಮಾ ರಿಲೀಸ್ ಮುಂದಕ್ಕೆ ಹಾಕಿದ್ದೀನಿ’
ಬಳ್ಳಾರಿ ಸರ್ಕಾರಿ ಆಸ್ಪತ್ರೆಯಲ್ಲಿ ಕರೆಂಟ್ ಕಟ್: ತನಿಖೆ ಮಾಡುತ್ತೇವೆ, ಖಾದರ್
ಬಳ್ಳಾರಿ ಸರ್ಕಾರಿ ಆಸ್ಪತ್ರೆಯಲ್ಲಿ ಕರೆಂಟ್ ಕಟ್: ತನಿಖೆ ಮಾಡುತ್ತೇವೆ, ಖಾದರ್
ಕನ್​​ಫೆಷನ್ ರೂಮಿನಲ್ಲಿ ಬಿಕ್ಕಿ-ಬಿಕ್ಕಿ ಅತ್ತ ಮಂಜ: ವಿಡಿಯೋ ನೋಡಿ
ಕನ್​​ಫೆಷನ್ ರೂಮಿನಲ್ಲಿ ಬಿಕ್ಕಿ-ಬಿಕ್ಕಿ ಅತ್ತ ಮಂಜ: ವಿಡಿಯೋ ನೋಡಿ
ಪ್ರತಿಭಟನೆ ವೇಳೆ ದೆಹಲಿಯಲ್ಲಿ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಪೊಲೀಸ್ ವಶಕ್ಕೆ
ಪ್ರತಿಭಟನೆ ವೇಳೆ ದೆಹಲಿಯಲ್ಲಿ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಪೊಲೀಸ್ ವಶಕ್ಕೆ
ಮಂಗಳೂರಿನಲ್ಲಿ ಚಲಿಸುತ್ತಿದ್ದ ಬಸ್ಸಿಗೆ ರಭಸವಾಗಿ ಬಡಿದ ಗಿಡುಗ
ಮಂಗಳೂರಿನಲ್ಲಿ ಚಲಿಸುತ್ತಿದ್ದ ಬಸ್ಸಿಗೆ ರಭಸವಾಗಿ ಬಡಿದ ಗಿಡುಗ