ಆಫ್​ಲೈನ್ ತರಗತಿ ನಡೆಸದೇ ಪರೀಕ್ಷೆ; ಹಾಸನ ಕೃಷಿ ಕಾಲೇಜು ವಿದ್ಯಾರ್ಥಿಗಳಿಂದ ಅಹೋರಾತ್ರಿ ಧರಣಿ

ಕತ್ತಲ ನಡುವೆಯೂ ಕೈಯಲ್ಲಿ ಮೊಬೈಲ್ ಟಾರ್ಚ್ ಹಿಡಿದು ವಿದ್ಯಾರ್ಥಿಗಳ ಧರಣಿ ನಡೆಸುತ್ತಿದ್ದಾರೆ. ಬೇಡಿಕೆ ಈಡೇರುವವರೆಗೂ ಹೋರಾಟ ಮುಂದುವರೆಸುವುದಾಗಿ ವಿದ್ಯಾರ್ಥಿಗಳು ಎಚ್ಚರಿಕೆ ನೀಡಿದ್ದಾರೆ.

ಆಫ್​ಲೈನ್ ತರಗತಿ ನಡೆಸದೇ ಪರೀಕ್ಷೆ; ಹಾಸನ ಕೃಷಿ ಕಾಲೇಜು ವಿದ್ಯಾರ್ಥಿಗಳಿಂದ ಅಹೋರಾತ್ರಿ ಧರಣಿ
ಸಾಂಕೇತಿಕ ಚಿತ್ರ
Follow us
TV9 Web
| Updated By: guruganesh bhat

Updated on: Aug 09, 2021 | 10:37 PM

ಹಾಸನ: ಕೊವಿಡ್ ಕಾರಣದಿಂದಾಗಿ ಆಫ್ಲೈನ್ ತರಗತಿಗಳು ನಡೆದಿಲ್ಲ. ಈಗ ಏಕಾಏಕಿ ಪರೀಕ್ಷೆ ನಡೆಸಿದರೆ ಎದುರಿಸುವುದು ಕಷ್ಟ ಎಂದು ಪರೀಕ್ಷೆ ರದ್ದುಗೊಳಿಸುವಂತೆ ಹಾಸನದ ಕೃಷಿ ಕಾಲೇಜು ವಿದ್ಯಾರ್ಥಿಗಳು ಅಹೋರಾತ್ರಿ ಧರಣಿ ನಡೆಸುತ್ತಿದ್ದಾರೆ. 3 ದಿನಗಳಿಂದ ಕಾಲೇಜು ಕ್ಯಾಂಪಸ್ನಲ್ಲಿ ವಿದ್ಯಾರ್ಥಿಗಳ ಧರಣಿ ನಡೆಸುತ್ತಿದ್ದು ಇಂದು ಸಮಸ್ಯೆ ಬಗೆಹರಿಸುವುದಾಗಿ ಆಡಳಿತ ಮಂಡಳಿ ಭರವಸೆ ನೀಡಿತ್ತು ಎನ್ನಲಾಗಿದೆ. ಆದರೆ ಭರವಸೆ ಈಡೇರದ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ಹೋರಾಟ ಮುಂದುವರೆಸಿದ್ದಾರೆ. ಕತ್ತಲ ನಡುವೆಯೂ ಕೈಯಲ್ಲಿ ಮೊಬೈಲ್ ಟಾರ್ಚ್ ಹಿಡಿದು ವಿದ್ಯಾರ್ಥಿಗಳ ಧರಣಿ ನಡೆಸುತ್ತಿದ್ದಾರೆ. ಬೇಡಿಕೆ ಈಡೇರುವವರೆಗೂ ಹೋರಾಟ ಮುಂದುವರೆಸುವುದಾಗಿ ವಿದ್ಯಾರ್ಥಿಗಳು ಎಚ್ಚರಿಕೆ ನೀಡಿದ್ದಾರೆ.

ಎಸ್​ಎಸ್​ಎಲ್​ಸಿ ಪರೀಕ್ಷೆ ಫಲಿತಾಂಶಪ್ರಕಟ; ವಿವರ ಇಲ್ಲಿದೆ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಸೋಮವಾರ ಎಸ್​ಎಸ್​ಎಲ್​ಸಿ ಫಲಿತಾಂಶದ ವಿವರಗಳನ್ನು ಮಾಧ್ಯಮಗಳಿಗೆ ಒದಗಿಸಿದರು. ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಸಭಾಂಗಣದಲ್ಲಿ ನಡೆದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಸಚಿವರು, ಜುಲೈ 19, 22ರಂದು ನಡೆದಿದ್ದ ಎಸ್​ಎಸ್​ಎಲ್​ಸಿ ಪರೀಕ್ಷೆಯಲ್ಲಿ ಈ ಬಾರಿ ಶೇ 99.9ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ ಎಂದರು. 4,70,160 ವಿದ್ಯಾರ್ಥಿಗಳು, 4,01,280 ವಿದ್ಯಾರ್ಥಿನಿಯರು ಉತ್ತೀರ್ಣರಾಗಿದ್ದಾರೆ. ಓರ್ವ ವಿದ್ಯಾರ್ಥಿನಿ ಗೈರಾಗಿದ್ದರಿಂದ ಅನುತ್ತೀರ್ಣರಾಗಿದ್ದಾರೆ.

1,28,931 ವಿದ್ಯಾರ್ಥಿಗಳು A+ ಗ್ರೇಡ್​, 2,50,317 ವಿದ್ಯಾರ್ಥಿಗಳು A ಗ್ರೇಡ್, 2,87,694 ವಿದ್ಯಾರ್ಥಿಗಳು B ಗ್ರೇಡ್​, 1,13,610 ವಿದ್ಯಾರ್ಥಿಗಳು C ಗ್ರೇಡ್​ ಪಡೆದುಕೊಂಡಿದ್ದಾರೆ. ಸಿ ಗ್ರೇಡ್ ಪಡೆದಿರುವ ಶೇ 9ರಷ್ಟು ವಿದ್ಯಾರ್ಥಿಗಳಿಗೆ ಕೃಪಾಂಕ (ಗ್ರೇಸ್​ ಮಾರ್ಕ್ಸ್​) ನೀಡಿ ಉತ್ತೀರ್ಣ ಮಾಡಲಾಗಿದೆ.

ಒಟ್ಟು 157 ವಿದ್ಯಾರ್ಥಿಗಳು 625ಕ್ಕೆ 625 ಅಂಕ ಪಡೆದಿದ್ದಾರೆ. 289 ವಿದ್ಯಾರ್ಥಿಗಳು 623 ಅಂಕ, ಇಬ್ಬರು 622 ಅಂಕ, 449 ವಿದ್ಯಾರ್ಥಿಗಳು 621, 28 ವಿದ್ಯಾರ್ಥಿಗಳು 620 ಅಂಕ ಪಡೆದಿದ್ದಾರೆ. ಪ್ರಥಮ ಭಾಷೆಯಲ್ಲಿ 25,702 ವಿದ್ಯಾರ್ಥಿಗಳಿಗೆ 125ಕ್ಕೆ 125 ಅಂಕ, ದ್ವಿತೀಯ ಭಾಷೆಯಲ್ಲಿ 36,628 ವಿದ್ಯಾರ್ಥಿಗಳಿಗೆ 100ಕ್ಕೆ 100 ಅಂಕ, ತೃತೀಯ ಭಾಷೆಯಲ್ಲಿ 36,776 ವಿದ್ಯಾರ್ಥಿಗಳಿಗೆ 100ಕ್ಕೆ 100 ಅಂಕ, ಗಣಿತ ವಿಷಯದಲ್ಲಿ 6321 ಮಕ್ಕಳಿಗೆ 100ಕ್ಕೆ 100, ವಿಜ್ಞಾನ ವಿಷಯದಲ್ಲಿ 3,649 ಮಕ್ಕಳು 100ಕ್ಕೆ 100, ಸಮಾಜ ವಿಜ್ಞಾನ ವಿಷಯದಲ್ಲಿ 9,367 ಮಕ್ಕಳು 100ಕ್ಕೆ 100 ಅಂಕ ಪಡೆದಿದ್ದಾರೆ.

ಇದನ್ನೂ ಓದಿ: 

ಎಸ್​ಎಸ್​ಎಲ್​ಸಿ ಪರೀಕ್ಷೆ ಹಿಂದಿನ ದಿನವೇ ಕೊವಿಡ್ ಖಚಿತ; ಅಂಜದೇ ಅಳುಕದೇ ಪರೀಕ್ಷೆ ಬರೆದ ವಿದ್ಯಾರ್ಥಿ ಇಂದು ಸಾಧಕ

ಕೊನೆ ಅರ್ಧ ಗಂಟೆ ಪರೀಕ್ಷೆ ಆಕ್ಸಿಜನ್ ಸಪೋರ್ಟ್ ಮೇಲಿದ್ದು ಬರೆದ ಈ ತಾಂಡಾ ಹುಡುಗಿ ಎಲ್ಲ 625 ಅಂಕ ಬಾಚಿಕೊಂಡಳು!

(Exam without running an offline class Hassan Agricultural College Students protest day and night)

ಆಟವೆಲ್ಲ ರಂಪಾಟವಾದಾಗ; ಹದ್ದುಮೀರಿ ನಡೆದುಕೊಂಡ ಸ್ಪರ್ಧಿಗಳು
ಆಟವೆಲ್ಲ ರಂಪಾಟವಾದಾಗ; ಹದ್ದುಮೀರಿ ನಡೆದುಕೊಂಡ ಸ್ಪರ್ಧಿಗಳು
ಕೈ ತುತ್ತಿನ ಹಿಂದಿರುವ ಮಹತ್ವದ ಬಗ್ಗೆ ನಿಮಗೆ ಗೊತ್ತಾ?
ಕೈ ತುತ್ತಿನ ಹಿಂದಿರುವ ಮಹತ್ವದ ಬಗ್ಗೆ ನಿಮಗೆ ಗೊತ್ತಾ?
ವಿಷ್ಣು, ಗಣೇಶನ ಲಹರಿ ಇರುವ ಈ ದಿನದ ರಾಶಿ ಭವಿಷ್ಯ ಹೇಗಿದೆ ತಿಳಿಯಿರಿ
ವಿಷ್ಣು, ಗಣೇಶನ ಲಹರಿ ಇರುವ ಈ ದಿನದ ರಾಶಿ ಭವಿಷ್ಯ ಹೇಗಿದೆ ತಿಳಿಯಿರಿ
2025ರ ಸರ್ಕಾರಿ ಕ್ಯಾಲೆಂಡರ್ ಹೇಗಿರುತ್ತದೆ? ಇಲ್ಲಿದೆ ನೋಡಿ ವಿಡಿಯೋ
2025ರ ಸರ್ಕಾರಿ ಕ್ಯಾಲೆಂಡರ್ ಹೇಗಿರುತ್ತದೆ? ಇಲ್ಲಿದೆ ನೋಡಿ ವಿಡಿಯೋ
ಹಿಮದಿಂದ ತುಂಬಿದ ಕಣಿವೆಯಲ್ಲಿ ಚಿರತೆಗಳ ಕುಣಿದಾಟ
ಹಿಮದಿಂದ ತುಂಬಿದ ಕಣಿವೆಯಲ್ಲಿ ಚಿರತೆಗಳ ಕುಣಿದಾಟ
ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ