ಹಾಸನ: ಕಾಡಾನೆ ದಾಳಿಗೆ ರೈತ ಗಂಭೀರ ಗಾಯ, ತಡ ರಾತ್ರಿ ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ ಪ್ರಜ್ವಲ್ ರೇವಣ್ಣ

ಹಾಸನ ಜಿಲ್ಲೆ ಬೇಲೂರು ತಾಲೂಕಿನ ಬೊಮ್ಮಡಿಹಳ್ಳಿಯಲ್ಲಿ ರೈತ ದೇವರಾಜು ಮೇಲೆ ಕಾಡಾನೆ ದಾಳಿ ನಡೆಸಿದ್ದು ರೈತ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆ ಸೇರಿದ್ದಾರೆ. ತಡರಾತ್ರಿ ಸಂಸದ ಪ್ರಜ್ವಲ್ ರೇವಣ್ಣ ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳು ರೈತರ ಆರೋಗ್ಯ ವಿಚಾರಿಸಿದ್ದಾರೆ. ಚುನಾವಣಾ ಪ್ರಚಾರದ ಬ್ಯುಸಿ ನಡುವೆಯೇ ಪ್ರಜ್ವಲ್ ರೇವಣ್ಣ ರಾತ್ರಿ ಗಾಯಾಳು ಭೇಟಿ ಮಾಡಿದ್ದಾರೆ. ಕಾಡಾನೆ ಹಾವಳಿ ಪರಿಹಾರದ ಬಗ್ಗೆ ಕ್ರಮದ ಭರವಸೆ ನೀಡಿದ್ದಾರೆ.

ಹಾಸನ: ಕಾಡಾನೆ ದಾಳಿಗೆ ರೈತ ಗಂಭೀರ ಗಾಯ, ತಡ ರಾತ್ರಿ ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ ಪ್ರಜ್ವಲ್ ರೇವಣ್ಣ
ಸಂಸದ ಪ್ರಜ್ವಲ್ ರೇವಣ್ಣ
Edited By: ಆಯೇಷಾ ಬಾನು

Updated on: Mar 31, 2024 | 12:15 PM

ಹಾಸನ, ಮಾರ್ಚ್​.31: ಜಮೀನಿನಿಂದ ಜಾನುವಾರುಗಳೊಂದಿಗೆ ಮನೆಗೆ ತೆರಳುತ್ತಿದ್ದ ರೈತನ ಮೇಲೆ ಕಾಡಾನೆ ದಾಳಿ (Elephant Attack) ನಡೆಸಿದ ಘಟನೆ ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಬೊಮ್ಮಡಿಹಳ್ಳಿ ಗ್ರಾಮದಲ್ಲಿ ನಡೆದಿದ್ದು ಗಾಯಾಳನ್ನು ಸಂಸದ ಪ್ರಜ್ವಲ್ ರೇವಣ್ಣ (Prajwal Revanna) ಭೇಟಿ ಮಾಡಿ ಧೈರ್ಯ ತುಂಬಿದ್ದಾರೆ. ಕಾಡಾನೆ ದಾಳಿಯಿಂದ ಗಾಯಗೊಂಡ ರೈತ ದೇವರಾಜ್ (58) ಅವರನ್ನು ಎನ್​ಡಿಎ ಅಭ್ಯರ್ಥಿ, ಸಂಸದ ಪ್ರಜ್ವಲ್ ರೇವಣ್ಣ ಅವರು ತಡ ರಾತ್ರಿ ಆಸ್ಪತ್ರೆಗೆ ಭೇಟಿ ನೀಡಿ ಸಂತ್ರಸ್ತನ ಆರೋಗ್ಯ ವಿಚಾರಿಸಿದ್ದಾರೆ.

ಗಾಯಾಳು ದೇವರಾಜ್ ಅವರಿಗೆ ಬೇಲೂರು ತಾಲೂಕು ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಲಾಗಿದ್ದು ಸದ್ಯ ಹಾಸನದ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ. ಚುನಾವಣಾ ಪ್ರಚಾರದ ಬ್ಯುಸಿ ನಡುವೆಯೇ ಪ್ರಜ್ವಲ್ ರೇವಣ್ಣ ರಾತ್ರಿ ಗಾಯಾಳು ಭೇಟಿ ಮಾಡಿದ್ದಾರೆ. ಕಾಡಾನೆ ಹಾವಳಿ ಪರಿಹಾರದ ಬಗ್ಗೆ ಕ್ರಮದ ಭರವಸೆ ನೀಡಿದ್ದಾರೆ.

ಇದನ್ನೂ ಓದಿ: ಕಾಲೇಜು ಕಟ್ಟಡದಿಂದ ಬಿದ್ದು ಸಾಯುವ ಮುನ್ನ ಅಪ್ಪ, ಅಮ್ಮ, ಅಕ್ಕ, ತಂಗಿಗೆ ಕರುಳುಹಿಂಡುವ ಮೆಸೇಜ್ ಬರೆದ ಬಾಲಕಿ

ಘಟನೆ ವಿವರ

ಹಾಸನ ಜಿಲ್ಲೆ ಬೇಲೂರು ತಾಲೂಕಿನ ಬೊಮ್ಮಡಿಹಳ್ಳಿಯಲ್ಲಿ ರೈತ ದೇವರಾಜು ಅವರು ಜಮೀನಿನಲ್ಲಿ ಜಾನುವಾರುಗಳನ್ನು ಮೇಯಿಸಿ ಮನೆಗೆ ತೆರಳುತ್ತಿದ್ದರು. ಈ ವೇಳೆ ಏಕಾಏಕಿ ಕಾಡಾನೆ ಬಂದು ದಾಳಿ ನಡೆಸಿತ್ತು. ಕಾಡಾನೆಯಿಂದ ತಪ್ಪಿಸಿಕೊಳ್ಳಲು ದೇವರಾಜು ಯತ್ನಿಸಿದ್ದು ಕಾಡಾನೆ ಸೊಂಡಿಲಿನಿಂದ ರೈತನನ್ನ ಎತ್ತಿ ಎಸೆದಿತ್ತು. ಕೆಳಕ್ಕೆ ಬಿದ್ದ ರೈತನನ್ನ ಕಾಲಿನಿಂದ ತುಳಿಯಲು ಯತ್ನಿಸಿತ್ತು. ಕಾಡಾನೆ ದಾಳಿಯಿಂದ ರೈತನ ಮೈ, ಕೈಗೆ ಗಾಯವಾಗಿದ್ದು, ಕಿವಿ ಕಟ್ ಆಗಿದೆ. ದೇವರಾಜ್ ಗಂಭೀರವಾಗಿ ಗಾಯಗೊಂಡಿದ್ದಾರೆ. ಸದ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಕೊಡಗು ಜಿಲ್ಲೆಯಲ್ಲಿ ಕಾಡಾನೆ ದಾಳಿಗೆ ಮತ್ತೊಂದು ಬಲಿ

ಇನ್ನು ಮತ್ತೊಂದೆಡೆ ಕಾಡಾನೆ ದಾಳಿಗೆ ಕೊಡಗಿನಲ್ಲಿ ಮತ್ತೊಂದು ಬಲಿಯಾಗಿದೆ. ಕೊಡಗು ಜಿಲ್ಲೆ ಸೋಮವಾರಪೇಟೆ ತಾಲೂಕಿನ ಹೊಸಗುತ್ತಿ ಗ್ರಾಮದಲ್ಲಿ 45 ವರ್ಷದ ಕಾಂತರಾಜು ಎಂಬುವವರು ಕಾಡಾನೆ ದಾಳಿಗೆ ಬಲಿಯಾಗಿದ್ದಾರೆ. ಸ್ಥಳಕ್ಕೆ‌ ಅರಣ್ಯ ಇಲಾಖೆ ಸಿಬ್ಬಂದಿ‌ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಶನಿವಾರಸಂತೆ ಸಮೀಪದ‌ ಹೊಸಗುತ್ತಿ ಗ್ರಾಮದಲ್ಲಿ ಕಾಂತರಾಜು ಅವರು ಆನೆ ತುಳಿತದಿಂದ ಮೃತಪಟ್ಟಿದ್ದಾರೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಮಂಜುನಾಥ ಕೆಬಿ

ಮಂಜುನಾಥ ಕೆಬಿ ಪತ್ರಿಕೋದ್ಯಮದಲ್ಲಿ ಕಳೆದ 17 ವರ್ಷಗಳಿಂದ ಸೇವೆ ಮಾಡುತ್ತಿದ್ದೇನೆ. ಕರುನಾಡಿನ ಹೆಮ್ಮೆಯ ಸುದ್ದಿ ವಾಹಿನಿ ಟಿವಿ9 ಕನ್ನಡ ಜೊತೆಗೆ 15ನೇ ವರ್ಷದ ಪಯಣ ನನ್ನದು. ಓದಿದ್ದು, ಮೈಸೂರು ವಿವಿಯಲ್ಲಿ ಕಾನೂನು ಪದವಿ, ಎರಡು ವರ್ಷ ವಕೀಲ ವೃತ್ತಿ ಬಳಿಕ ಮಾಧ್ಯಮ ಕ್ಷೇತ್ರಕ್ಕೆ ಆಗಮಿಸಿ ಟಿವಿ9 ವಾಹಿನಿ ಮೂಲಕ ಸಮಸ್ಯೆಗೆ ಧ್ವನಿಯಾಗಿ ಕಾಯಕ. ಕೊಡಗಿನಲ್ಲಿ ಐದುವರೆ ವರ್ಷ ವರದಿಗಾರನಾಗಿ ಕರ್ತವ್ಯ ನಿರ್ವಹಿಸಿದ್ದು, ಇದೀಗ ಹಾಸನದ ಹಿರಿಯ ವರದಿಗಾರನಾಗಿ ಕರ್ತವ್ಯ ನಿರ್ವಹಣೆ ಮಾಡುತ್ತಿದ್ದೇನೆ.

Read More
Loading...
Unable to load recommendations.
Follow Us