ಮರಳು ಗಣಿಗಾರಿಕೆ ವಿಚಾರಕ್ಕೆ ಗಲಾಟೆ; ಮನೆ-ವಾಹನ ಜಖಂ, ಮೂವರು ಆಸ್ಪತ್ರೆಗೆ ದಾಖಲು

ದಿವಾಕರ್ ಎಂಬಾತ ಅನಿಲ್ ಎಂಬುವರ ಮನೆ ಮೇಲೆ ದಾಳಿ ನಡೆಸಿ ವಾಹನ ಜಖಂ ಮಾಡಿದ್ದಾನೆ ಎಂಬ ಆರೋಪ ಕೇಳಿ ಬಂದಿದೆ. ಘಟನೆಯಲ್ಲಿ ಅನಿಲ್ ತಂದೆಗೆ ಗಾಯಗಳಾಗಿದ್ದು ಬೇಲೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಮರಳು ಗಣಿಗಾರಿಕೆ ವಿಚಾರಕ್ಕೆ ಗಲಾಟೆ; ಮನೆ-ವಾಹನ ಜಖಂ, ಮೂವರು ಆಸ್ಪತ್ರೆಗೆ ದಾಖಲು
ಮರಳು ಗಣಿಗಾರಿಕೆ ವಿಚಾರಕ್ಕೆ ಗಲಾಟೆ; ಮನೆ-ವಾಹನ ಜಖಂ, ಮೂವರು ಆಸ್ಪತ್ರೆಗೆ ದಾಖಲು
Follow us
TV9 Web
| Updated By: ಆಯೇಷಾ ಬಾನು

Updated on: Dec 07, 2021 | 12:35 PM

ಹಾಸನ‌: ಮರಳು ಗಣಿಗಾರಿಕೆ ವಿಚಾರಕ್ಕೆ ಸಂಬಂಧಿಸಿ ಗಲಾಟೆ ನಡೆದಿರುವ ಘಟನೆ ಹಾಸನ‌ ಜಿಲ್ಲೆ ಬೇಲೂರು ತಾಲೂಕಿನ ದೊಡ್ಡಿಹಳ್ಳಿಯಲ್ಲಿ ನಡೆದಿದೆ. ಘಟನೆಯಲ್ಲಿ ಮನೆ, ವಾಹನ ಜಖಂ ಆಗಿದೆ. ತನ್ನ ವಿರುದ್ಧ ಮರಳು ಅಕ್ರಮ ಗಣಿಗಾರಿಕೆ ಆರೋಪ ಮಾಡಲಾಗಿದೆ ಎಂದು ದಿವಾಕರ್ ಅನಿಲ್ ನಡುವೆ ಗಲಾಟೆ ನಡೆದಿದ್ದು ಹಲ್ಲೆ ಮಾಡಿರೋ ಆರೋಪ ಕೇಳಿ ಬಂದಿದೆ.

ಹಾಸನ ಜಿಲ್ಲೆಯ ಬೇಲೂರು ತಾಲ್ಲೂಕಿನ ‌ಅರೆಹಳ್ಳಿ ಪೋಲೀಸ್ ಠಾಣೆ ವ್ಯಾಪ್ತಿಯಲ್ಲಿ ಮತ್ತೆ ಮರಳು ವಿಚಾರಕ್ಕೆ ಸಂಘರ್ಷ ನಡೆದಿದೆ. ಇಲ್ಲಿನ ದೊಡ್ಡಿಹಳ್ಳಿ ವ್ಯಾಪ್ತಿಯಲ್ಲಿ ನೆನ್ನೆ ರಾತ್ರಿ ಮರಳು ಸಾಗಾಟದ ಬಗ್ಗೆ ಮಾಹಿತಿ ನೀಡಿದ ಆರೋಪದಲ್ಲಿ ಅನಿಲ್ ಎಂಬುಬವರ ಮನೆ ಮೇಲೆ ದಾಳಿ ನಡೆದಿದ್ದು, ದಾಳಿಯಲ್ಲಿ ಒಂದು ಕಾರು, ಹಾಗು ಮನೆ ಜಖಂಗೊಂಡಿದೆ.ಇದೇ ಗ್ರಾಮದ ದಿವಾಕರ್ ಎಂಬುವರು ಮತ್ತು ಹಲವರು ದಾಳಿ ಮಾಡಿ ಮನೆ ಕಾರು ಹಾನಿಮಾಡಿದ್ದು ಅರೆಹಳ್ಳಿ ಪೊಲೀಸ್ ಠಾಣೆಯಲ್ಲಿ ಕೊಲೆ ಯತ್ನ ಕೇಸ್ ದಾಖಲಾಗಿದೆ. ಘಟನೆಯಲ್ಲಿ ಅನಿಲ್ ತಂದೆಗೆ ಗಾಯಗಳಾಗಿದ್ದು ಬೇಲೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಜೊತೆಗೆ ಅಕ್ರಮ ಮರಳು ಗಣಿಗಾರಿಕೆ ಆರೋಪಿಸಿ ದಿವಾಕರ್ ವಿರುದ್ಧ ಅನಿಲ್ ದೂರು ನೀಡಿರುವ ಆರೋಪ ಕೇಳಿ ಬಂದಿದೆ. ಇದೇ ವಿಚಾರಕ್ಕೆ ಅನಿಲ್ ಮತ್ತು ದಿವಾಕರ್ ಮಧ್ಯೆ ಗಲಾಟೆ ನಡೆದಿದೆ.

ಈ ಹಿಂದೆ ಕೂಡ ಅರೆಹಳ್ಲಿ ಠಾಣೆ ವ್ಯಾಪ್ತಿಯಲ್ಲಿ ಮರಳು ಅಕ್ರಮ ಸಾಗಾಟದ ವಿಚಾರವಾಗಿ ಗಲಾಟೆ ನೆಡೆದಿತ್ತು. ಅಕ್ರಮಕ್ಕೆ ಬ್ರೇಕ್ ಹಾಕಲು ಮುಂದಾಗಿದ್ದ ಇಬ್ಬರು ಪಿಎಸ್ ಐ ಗಳನ್ನು ವರ್ಗಾವಣೆ ಮಾಡಿದ್ದ ಬಗ್ಗೆಯೂ ಸಾರ್ವಜನಿಕ ವಲಯದಲ್ಲಿ ಚರ್ಚೆಯಾಗಿತ್ತು. ಇದೀಗ ದಿವಾಕರ್ ಅಕ್ರಮವಾಗಿ ಮರಳು ಸಾಗಟ ಮಾಡುತ್ತಾರೆ ಎನ್ಜೋ ವಿಚಾರದ ಬಗ್ಗೆ ಅನಿಲ್ ಪೊಲೀಸರಿಗೆ ಮಾಹಿತಿ ನೀಡಿದ್ದರು ಎನ್ನೋ ಅನುಮಾನದಲ್ಲಿ ಇಬ್ಬರ ನಡುವೆ ಶುರುವಾದ ಜಗಳ ರಾತ್ರಿ ತಾರಕಕ್ಕೇರಿದ್ದು ಘಟನೆಯಲ್ಲಿ ಮೂವರು ಗಾಯಗೊಂಡು ಆಸ್ಪತ್ರೆ ಗೆ ದಾಖಲಾಗಿದ್ದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ

ಇದನ್ನೂ ಓದಿ: ದಾಂಪತ್ಯ ಜೀವನಕ್ಕೆ ಕಾಲಿಡಲು ಸಜ್ಜು: ರಾಜಸ್ತಾನಕ್ಕೆ ತೆರಳಿದ ಬಾಲಿವುಡ್​ ಜೋಡಿ ಕತ್ರಿನಾ -ವಿಕ್ಕಿ

ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ
Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ
‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?