AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Students Fight: ಕಾಲೇಜು ಆವರಣದಲ್ಲೇ ವಿದ್ಯಾರ್ಥಿಗಳ ಗೂಂಡಾಗಿರಿ, ಜನರಲ್ಲಿ ಆತಂಕ

ವಿದ್ಯಾರ್ಥಿ ಪ್ರತಿನಿಧಿ ಚುನಾವಣಾ ಫಲಿತಾಂಶ ಬಳಿಕ 2 ಗುಂಪುಗಳ ಸುಮಾರು 150ಕ್ಕೂ ಹೆಚ್ಚು ವಿದ್ಯಾರ್ಥಿಗಳ ನಡುವೆ ಗಲಾಟೆ ನಡೆದಿದ್ದು ಸಾರ್ವಜನಿಕರು ಆತಂಕಕ್ಕೊಳಗಾಗಿದ್ರು.

Students Fight: ಕಾಲೇಜು ಆವರಣದಲ್ಲೇ ವಿದ್ಯಾರ್ಥಿಗಳ ಗೂಂಡಾಗಿರಿ, ಜನರಲ್ಲಿ ಆತಂಕ
ಪೊಲೀಸರು ಲಾಠಿ ಬೀಸಿ ಪರಿಸ್ಥಿತಿ ತಿಳಿಗೊಳಿಸಿದ್ರು
TV9 Web
| Edited By: |

Updated on:Dec 21, 2022 | 10:45 AM

Share

ಹಾಸನ: ಜಿಲ್ಲೆಯ ತಾಂತ್ರಿಕ ಕಾಲೇಜಿನ ವಿದ್ಯಾರ್ಥಿಗಳ ನಡುವೆ ಮಾರಾಮಾರಿಯಾಗಿದೆ. ಹಾಸನದ ಹಳೇಬೀಡು ರಸ್ತೆಯ ಮಲೆನಾಡು ತಾಂತ್ರಿಕ ಕಾಲೇಜಿನಲ್ಲಿ ವಿದ್ಯಾರ್ಥಿ ಪ್ರತಿನಿಧಿ ಆಯ್ಕೆ ಬಳಿಕ ಗೆದ್ದವರು ಸೋತವರ ನಡುವೆ ಗಲಾಟೆಯಾಗಿದ್ದು ಒಬ್ಬರನೊಬ್ಬರು ಹಲ್ಲೆ ಮಾಡಿ ಆತಂಕ ಸೃಷ್ಟಿಸಿದ್ದಾರೆ.

ನಿನ್ನೆ ಸಂಜೆ ವಿದ್ಯಾರ್ಥಿ ಪ್ರತಿನಿಧಿ ಚುನಾವಣಾ ಫಲಿತಾಂಶ ಬಳಿಕ 2 ಗುಂಪುಗಳ ಸುಮಾರು 150ಕ್ಕೂ ಹೆಚ್ಚು ವಿದ್ಯಾರ್ಥಿಗಳ ನಡುವೆ ಗಲಾಟೆ ನಡೆದಿದ್ದು ಸಾರ್ವಜನಿಕರು ಆತಂಕಕ್ಕೊಳಗಾಗಿದ್ರು. ತಕ್ಷಣ ಸ್ಥಳಕ್ಕೆ‌ ಬಂದ ಪೊಲೀಸರು ಲಾಠಿ ಬೀಸಿ ಪರಿಸ್ಥಿತಿ ತಿಳಿಗೊಳಿಸಿದ್ರು. ವಿದ್ಯಾರ್ಥಿಗಳ ವರ್ತನೆ ಬಗ್ಗೆ ಜನರು ಆಕ್ರೋಶ ವ್ಯಕ್ತಪಡಿಸಿದ್ದು ಚುನಾವಣೆ ಹೆಸರಿನಲ್ಲಿ ‌ಪುಂಡಾಟ ನಡೆಸಿರೋ ಬಗ್ಗೆ ಕಿಡಿಕಾರಿದ್ದಾರೆ. ಹಾಸನ‌ ಬಡಾವಣೆ ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ನಡೆದಿರುವ ಘಟನೆ

ಇನ್ನು ಮತ್ತೊಂದೆಡೆ ಯಲಹಂಕ ತಾಲೂಕಿನ ರಾಜಾನುಕುಂಟೆ ಬಳಿಯ ಪ್ರೆಸಿಡೆನ್ಸಿ ಕಾಲೇಜು‌ ಬಳಿಯೂ ಗಲಾಟೆ ನಡೆದಿದೆ. ಕ್ಷುಲ್ಲಕ ಕಾರಣಕ್ಕೆ ದೊಣ್ಣೆ, ವಿಕೆಟ್​ಗಳನ್ನಿಡಿದು ಕಾಲೇಜು ವಿದ್ಯಾರ್ಥಿಗಳು ನಡು ರಸ್ತೆಯಲ್ಲಿ ಗೂಂಡಾಗಿರಿ ಮಾಡಿದ್ದಾರೆ. ಕೈನಲ್ಲಿ ವಿಕೆಟ್ ಮತ್ತು ದೊಣ್ಣೆಗಳಿಡಿದು‌ ಓಡಾಡುವ ದೃಶ್ಯ ‌ಮೊಬೈಲ್ ನಲ್ಲಿ ಸೆರೆಯಾಗಿದೆ. ಪ್ರತಿನಿತ್ಯ ಕಾಲೇಜು ಬಳಿ ಪುಂಡ‌ ಯುವಕರು ದಾಂದಲೆ ನಡೆಸುತ್ತಿದ್ದು ಸುತ್ತಮುತ್ತಲಿನ ಜನರು ಆಕ್ರೋಶ ಹೊರ ಹಾಕಿದ್ದಾರೆ.

Published On - 10:45 am, Wed, 21 December 22

Follow Us
ಇಂದು ಈ ರಾಶಿಯವರಿಗೆ ಧನಾತ್ಮಕ ಶಕ್ತಿ
ಇಂದು ಈ ರಾಶಿಯವರಿಗೆ ಧನಾತ್ಮಕ ಶಕ್ತಿ
30 ಅಡಿ ಆಳದ ಬಾವಿಗೆ ಬಿದ್ದ ಆನೆ: ಅರಣ್ಯಾಧಿಕಾರಿಗಳ 6 ಗಂಟೆಗಳ ಕಾರ್ಯಚರಣೆ
30 ಅಡಿ ಆಳದ ಬಾವಿಗೆ ಬಿದ್ದ ಆನೆ: ಅರಣ್ಯಾಧಿಕಾರಿಗಳ 6 ಗಂಟೆಗಳ ಕಾರ್ಯಚರಣೆ
ಸುದೀಪ್ ಸುಮ್ಮನಿದ್ದಾರೆ ರಜತ್, ವಿನಯ್ ಪ್ರಚೋದಿಸುತ್ತಿದ್ದಾರೆ: ಡಾಗ್ ಸತೀಶ್
ಸುದೀಪ್ ಸುಮ್ಮನಿದ್ದಾರೆ ರಜತ್, ವಿನಯ್ ಪ್ರಚೋದಿಸುತ್ತಿದ್ದಾರೆ: ಡಾಗ್ ಸತೀಶ್
ಕಾರ್ಯಕ್ರಮಕ್ಕೆ ಬಾರದ ಬ್ಯಾನರ್ಜಿ ಬಗ್ಗೆ ದ್ರೌಪದಿ ಮುರ್ಮು ಬೇಸರದ ಮಾತು
ಕಾರ್ಯಕ್ರಮಕ್ಕೆ ಬಾರದ ಬ್ಯಾನರ್ಜಿ ಬಗ್ಗೆ ದ್ರೌಪದಿ ಮುರ್ಮು ಬೇಸರದ ಮಾತು
ಬಾಲ್ಯದ ದಿನಗಳಲ್ಲಿ ಮಿಠಾಯಿ, ತಂಬಿಟ್ಟು ತಿಂತಿರೋ ಕಥೆ ಬಿಚ್ಚಿಟ್ಟ ಸಿಎಂ!
ಬಾಲ್ಯದ ದಿನಗಳಲ್ಲಿ ಮಿಠಾಯಿ, ತಂಬಿಟ್ಟು ತಿಂತಿರೋ ಕಥೆ ಬಿಚ್ಚಿಟ್ಟ ಸಿಎಂ!
ಯುಗಾದಿ ವರ್ಷ ಭವಿಷ್ಯ; ಮಿಥುನ ರಾಶಿಗೆ ಈ ವರ್ಷ ಹೇಗಿರಲಿದೆ ಗೊತ್ತಾ?
ಯುಗಾದಿ ವರ್ಷ ಭವಿಷ್ಯ; ಮಿಥುನ ರಾಶಿಗೆ ಈ ವರ್ಷ ಹೇಗಿರಲಿದೆ ಗೊತ್ತಾ?
ಲೋಕಸಭೆ ಸ್ಪೀಕರ್ ವಿರುದ್ಧ ಅವಿಶ್ವಾಸ ನಿರ್ಣಯಕ್ಕೆ ಸಿದ್ಧತೆ
ಲೋಕಸಭೆ ಸ್ಪೀಕರ್ ವಿರುದ್ಧ ಅವಿಶ್ವಾಸ ನಿರ್ಣಯಕ್ಕೆ ಸಿದ್ಧತೆ
ಹುಟ್ಟುಹಬ್ಬದಂದು ಅಭಿಮಾನಿಗಳ ಭೇಟಿ ಮಾಡಿದ ರಾಧಿಕಾ ಪಂಡಿತ್: ವಿಡಿಯೋ
ಹುಟ್ಟುಹಬ್ಬದಂದು ಅಭಿಮಾನಿಗಳ ಭೇಟಿ ಮಾಡಿದ ರಾಧಿಕಾ ಪಂಡಿತ್: ವಿಡಿಯೋ
ಟ್ರೋಫಿಗಾಗಿ ಕೆಲವರ ಹೃದಯ ಛಿದ್ರಗೊಳಿಸುವುದರಲ್ಲಿ ತಪ್ಪಿಲ್ಲ; ಸ್ಯಾಂಟ್ನರ್
ಟ್ರೋಫಿಗಾಗಿ ಕೆಲವರ ಹೃದಯ ಛಿದ್ರಗೊಳಿಸುವುದರಲ್ಲಿ ತಪ್ಪಿಲ್ಲ; ಸ್ಯಾಂಟ್ನರ್
ಯುಗಾದಿ ವರ್ಷ ಭವಿಷ್ಯ; ವೃಷಭ ರಾಶಿಗೆ ಈ ವರ್ಷ ಹೇಗಿರಲಿದೆ ಗೊತ್ತಾ?
ಯುಗಾದಿ ವರ್ಷ ಭವಿಷ್ಯ; ವೃಷಭ ರಾಶಿಗೆ ಈ ವರ್ಷ ಹೇಗಿರಲಿದೆ ಗೊತ್ತಾ?