ಹಾಸನ: ಜಿಲ್ಲೆಯ ತಾಂತ್ರಿಕ ಕಾಲೇಜಿನ ವಿದ್ಯಾರ್ಥಿಗಳ ನಡುವೆ ಮಾರಾಮಾರಿಯಾಗಿದೆ. ಹಾಸನದ ಹಳೇಬೀಡು ರಸ್ತೆಯ ಮಲೆನಾಡು ತಾಂತ್ರಿಕ ಕಾಲೇಜಿನಲ್ಲಿ ವಿದ್ಯಾರ್ಥಿ ಪ್ರತಿನಿಧಿ ಆಯ್ಕೆ ಬಳಿಕ ಗೆದ್ದವರು ಸೋತವರ ನಡುವೆ ಗಲಾಟೆಯಾಗಿದ್ದು ಒಬ್ಬರನೊಬ್ಬರು ಹಲ್ಲೆ ಮಾಡಿ ಆತಂಕ ಸೃಷ್ಟಿಸಿದ್ದಾರೆ.
ನಿನ್ನೆ ಸಂಜೆ ವಿದ್ಯಾರ್ಥಿ ಪ್ರತಿನಿಧಿ ಚುನಾವಣಾ ಫಲಿತಾಂಶ ಬಳಿಕ 2 ಗುಂಪುಗಳ ಸುಮಾರು 150ಕ್ಕೂ ಹೆಚ್ಚು ವಿದ್ಯಾರ್ಥಿಗಳ ನಡುವೆ ಗಲಾಟೆ ನಡೆದಿದ್ದು ಸಾರ್ವಜನಿಕರು ಆತಂಕಕ್ಕೊಳಗಾಗಿದ್ರು. ತಕ್ಷಣ ಸ್ಥಳಕ್ಕೆ ಬಂದ ಪೊಲೀಸರು ಲಾಠಿ ಬೀಸಿ ಪರಿಸ್ಥಿತಿ ತಿಳಿಗೊಳಿಸಿದ್ರು. ವಿದ್ಯಾರ್ಥಿಗಳ ವರ್ತನೆ ಬಗ್ಗೆ ಜನರು ಆಕ್ರೋಶ ವ್ಯಕ್ತಪಡಿಸಿದ್ದು ಚುನಾವಣೆ ಹೆಸರಿನಲ್ಲಿ ಪುಂಡಾಟ ನಡೆಸಿರೋ ಬಗ್ಗೆ ಕಿಡಿಕಾರಿದ್ದಾರೆ. ಹಾಸನ ಬಡಾವಣೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿರುವ ಘಟನೆ
ಇನ್ನು ಮತ್ತೊಂದೆಡೆ ಯಲಹಂಕ ತಾಲೂಕಿನ ರಾಜಾನುಕುಂಟೆ ಬಳಿಯ ಪ್ರೆಸಿಡೆನ್ಸಿ ಕಾಲೇಜು ಬಳಿಯೂ ಗಲಾಟೆ ನಡೆದಿದೆ. ಕ್ಷುಲ್ಲಕ ಕಾರಣಕ್ಕೆ ದೊಣ್ಣೆ, ವಿಕೆಟ್ಗಳನ್ನಿಡಿದು ಕಾಲೇಜು ವಿದ್ಯಾರ್ಥಿಗಳು ನಡು ರಸ್ತೆಯಲ್ಲಿ ಗೂಂಡಾಗಿರಿ ಮಾಡಿದ್ದಾರೆ. ಕೈನಲ್ಲಿ ವಿಕೆಟ್ ಮತ್ತು ದೊಣ್ಣೆಗಳಿಡಿದು ಓಡಾಡುವ ದೃಶ್ಯ ಮೊಬೈಲ್ ನಲ್ಲಿ ಸೆರೆಯಾಗಿದೆ. ಪ್ರತಿನಿತ್ಯ ಕಾಲೇಜು ಬಳಿ ಪುಂಡ ಯುವಕರು ದಾಂದಲೆ ನಡೆಸುತ್ತಿದ್ದು ಸುತ್ತಮುತ್ತಲಿನ ಜನರು ಆಕ್ರೋಶ ಹೊರ ಹಾಕಿದ್ದಾರೆ.
Published On - 10:45 am, Wed, 21 December 22