ಸೂರಜ್ ರೇವಣ್ಣ ಆಪ್ತ ಶಿವಕುಮಾರ್ ವಿರುದ್ಧ ಎಫ್​ಐಆರ್​ ದಾಖಲು

ಜೆಡಿಎಸ್​ ವಿಧಾನಪರಿಷತ್ ಸದಸ್ಯ ಸೂರಜ್ ರೇವಣ್ಣ ಆಪ್ತ ಶಿವಕುಮಾರ್ ಎಂಬಾತನ ವಿರುದ್ಧ ಹಣ ದುರುಪಯೋಗ ಆರೋಪದಡಿ ಅರಕಲಗೂಡು ತಾಲೂಕಿನ ಕೊಣನೂರು ಪೊಲೀಸ್ ಠಾಣೆಯಲ್ಲಿ ಎಫ್​ಐಆರ್(FIR)​ ದಾಖಲಾಗಿದೆ. ಇನ್ನು ಪ್ರಕರಣ ದಾಖಲಾಗುತ್ತಿದ್ದಂತೆ ಶಿವಕುಮಾರ್ ಎಸ್ಕೇಪ್ ಆಗಿದ್ದಾನೆ.

ಸೂರಜ್ ರೇವಣ್ಣ ಆಪ್ತ ಶಿವಕುಮಾರ್ ವಿರುದ್ಧ ಎಫ್​ಐಆರ್​ ದಾಖಲು
ಸೂರಜ್ ರೇವಣ್ಣ ಆಪ್ತ ಶಿವಕುಮಾರ್
Follow us
| Updated By: ಕಿರಣ್ ಹನುಮಂತ್​ ಮಾದಾರ್

Updated on: Jun 25, 2024 | 3:26 PM

ಹಾಸನ, ಜೂ.25: ಜೆಡಿಎಸ್ ಎಂಎಲ್​ಸಿ ಸೂರಜ್ ರೇವಣ್ಣ(Suraj Revanna) ಆಪ್ತ ಶಿವಕುಮಾರ್ ಎಂಬಾತನ ವಿರುದ್ಧ ಹಣ ದುರುಪಯೋಗ ಆರೋಪದಡಿ ಎಫ್​ಐಆರ್(FIR)​ ದಾಖಲಾಗಿದೆ. ಹೌದು, ಇತ್ತೀಚೆಗಷ್ಟೇ ಸೂರಜ್ ವಿರುದ್ದ ಅಸಹಜ ಲೈಂಗಿಕ ದೌರ್ಜನ್ಯ ಆರೋಪ ಹಿನ್ನಲೆ ಜೆಡಿಎಸ್​ ಕಾರ್ಯಕರ್ತ ಠಾಣೆಗೆ ದೂರ ನೀಡಿದ್ದ. ಆದರೆ, ಆತ ಹಣಕ್ಕಾಗಿ ಅರೋಪಿಸಿ ಪೀಡಿಸಿದ್ದಾರೆ ಎಂದು ಸೂರಜ್ ರೇವಣ್ಣ ಆಪ್ತ ಶಿವಕುಮಾರ್, ಹೊಳೆನರಸೀಪುರ ನಗರ ಠಾಣೆಗೆ ದೂರು ನೀಡಿದ್ದರು.

ಶಿವಕುಮಾರ್​ ವಿರುದ್ಧವೇ ದಾಖಲಾಯ್ತು ಎಫ್​ಐಆರ್

ಇದೀಗ ಶಿವಕುಮಾರ್​ ವಿರುದ್ಧವೇ ಅರಕಲಗೂಡು ತಾಲೂಕಿನ ಕೊಣನೂರು ಪೊಲೀಸ್ ಠಾಣೆಯಲ್ಲಿ ​ದೂರು ದಾಖಲಾಗಿದೆ. ಆರೋಪಿ ಶಿವಕುಮಾರ್ ಶ್ರೀರಾಮ್ ಫೈನಾನ್ಸ್​ ರಾಮನಾಥಪುರ ಶಾಖೆಯಲ್ಲಿ ಕೆಲಸ ಮಾಡುತ್ತಿದ್ದ. ಈ ವೇಳೆ ಆರು ಗ್ರಾಹಕರು ವಾಹನ ಸಾಲದ ವಂತಿಕೆ ಕಟ್ಟಲು ನೀಡಿದ್ದ 2,91,916 ರೂಪಾಯಿ ಹಣವನ್ನ ದುರ್ಬಳಕೆ ಮಾಡಿದ್ದ ಆರೋಪದಡಿ ಕೇಸ್​​ ದಾಖಲಾಗಿದ್ದು, ಈ ಕುರಿತು ಜೂ.21ರಂದೇ ಶಾಖೆಯ ಮ್ಯಾನೇಜರ್ ಕೇಶವಮೂರ್ತಿ ದೂರು ನೀಡಿದ್ದರು. ಇನ್ನು ಪ್ರಕರಣ ದಾಖಲಾಗುತ್ತಿದ್ದಂತೆ ಶಿವಕುಮಾರ್ ಎಸ್ಕೇಪ್ ಆಗಿದ್ದಾನೆ.

ಇದನ್ನೂ ಓದಿ:ಸೂರಜ್ ರೇವಣ್ಣ ಅಸಹಜ ಲೈಂಗಿಕ ದೌರ್ಜನ್ಯ ಕೇಸ್; ತನಿಖಾಧಿಕಾರಿಗಳ ನೇಮಕ, ಬಾಡಿ ವಾರಂಟ್ ಸಲ್ಲಿಕೆ

ಜುಲೈ 1 ರವರೆಗೆ ಸಿಐಡಿ ಕಸ್ಟಡಿಯಲ್ಲಿರುವ ಸೂರಜ್ ರೇವಣ್ಣ

ನಿನ್ನೆ (ಸೋಮವಾರ) ಬೆಂಗಳೂರಿನ 42ನೇ ಎಸಿಎಂಎಂ (ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ) ಕೋರ್ಟ್,  ‘ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿ ಆಗಿರುವ ಸೂರಜ್ ರೇವಣ್ಣ ಅವರನ್ನು ವಿಚಾರಣೆ ಮಾಡುವ ಸಲುವಾಗಿ ಹತ್ತು ದಿನ ಕಸ್ಟಡಿಗೆ ನೀಡುವಂತೆ ಸಿಐಡಿ ಅಧಿಕಾರಿಗಳು ಮನವಿ ಮಾಡಿದ್ದರು. ಆದರೆ, ಕೋರ್ಟ್, 10 ದಿನ ಬದಲಾಗಿ 8 ದಿನ ಸಿಐಡಿ ಕಸ್ಟಡಿಗೆ ನೀಡಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ವಿಡಿಯೋ: ರಾಮ-ಆಂಜನೇಯನ ಮೂರ್ತಿ ಉದ್ಘಾಟಿಸಿದ ಶಿವರಾಜ್ ಕುಮಾರ್
ವಿಡಿಯೋ: ರಾಮ-ಆಂಜನೇಯನ ಮೂರ್ತಿ ಉದ್ಘಾಟಿಸಿದ ಶಿವರಾಜ್ ಕುಮಾರ್
ಕೃಷ್ಣ ಭಜನೆ, ಭಾರತೀಯ ನೃತ್ಯದ ಮೂಲಕ ರಷ್ಯಾದಲ್ಲಿ ಪ್ರಧಾನಿ ಮೋದಿಗೆ ಸ್ವಾಗತ
ಕೃಷ್ಣ ಭಜನೆ, ಭಾರತೀಯ ನೃತ್ಯದ ಮೂಲಕ ರಷ್ಯಾದಲ್ಲಿ ಪ್ರಧಾನಿ ಮೋದಿಗೆ ಸ್ವಾಗತ
ಕಾಂಗ್ರೆಸ್​ನಿಂದ ಸ್ಪರ್ಧಿಸಿ ಗೆದ್ದರೆ ಮಂತ್ರಿಯಾಗಬಹುದೇ ಯೋಗೇಶ್ವರ್?
ಕಾಂಗ್ರೆಸ್​ನಿಂದ ಸ್ಪರ್ಧಿಸಿ ಗೆದ್ದರೆ ಮಂತ್ರಿಯಾಗಬಹುದೇ ಯೋಗೇಶ್ವರ್?
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಬದೋನಿ ಬ್ಯೂಟಿ... ಅತ್ಯುತ್ತಮ ಡೈವಿಂಗ್ ಕ್ಯಾಚ್ ಹಿಡಿದ ಆಯುಷ್
ಬದೋನಿ ಬ್ಯೂಟಿ... ಅತ್ಯುತ್ತಮ ಡೈವಿಂಗ್ ಕ್ಯಾಚ್ ಹಿಡಿದ ಆಯುಷ್
ಭೂಮಾಫಿಯಾ ಜೊತೆ ಬಿಬಿಎಂಪಿ ಅಧಿಕಾರಿಗಳು ಶಾಮೀಲು: ಜಗದೀಶ್, ವಕೀಲ
ಭೂಮಾಫಿಯಾ ಜೊತೆ ಬಿಬಿಎಂಪಿ ಅಧಿಕಾರಿಗಳು ಶಾಮೀಲು: ಜಗದೀಶ್, ವಕೀಲ