ಹಾಸನ, ಜೂ.25: ಜೆಡಿಎಸ್ ಎಂಎಲ್ಸಿ ಸೂರಜ್ ರೇವಣ್ಣ(Suraj Revanna) ಆಪ್ತ ಶಿವಕುಮಾರ್ ಎಂಬಾತನ ವಿರುದ್ಧ ಹಣ ದುರುಪಯೋಗ ಆರೋಪದಡಿ ಎಫ್ಐಆರ್(FIR) ದಾಖಲಾಗಿದೆ. ಹೌದು, ಇತ್ತೀಚೆಗಷ್ಟೇ ಸೂರಜ್ ವಿರುದ್ದ ಅಸಹಜ ಲೈಂಗಿಕ ದೌರ್ಜನ್ಯ ಆರೋಪ ಹಿನ್ನಲೆ ಜೆಡಿಎಸ್ ಕಾರ್ಯಕರ್ತ ಠಾಣೆಗೆ ದೂರ ನೀಡಿದ್ದ. ಆದರೆ, ಆತ ಹಣಕ್ಕಾಗಿ ಅರೋಪಿಸಿ ಪೀಡಿಸಿದ್ದಾರೆ ಎಂದು ಸೂರಜ್ ರೇವಣ್ಣ ಆಪ್ತ ಶಿವಕುಮಾರ್, ಹೊಳೆನರಸೀಪುರ ನಗರ ಠಾಣೆಗೆ ದೂರು ನೀಡಿದ್ದರು.
ಇದೀಗ ಶಿವಕುಮಾರ್ ವಿರುದ್ಧವೇ ಅರಕಲಗೂಡು ತಾಲೂಕಿನ ಕೊಣನೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಆರೋಪಿ ಶಿವಕುಮಾರ್ ಶ್ರೀರಾಮ್ ಫೈನಾನ್ಸ್ ರಾಮನಾಥಪುರ ಶಾಖೆಯಲ್ಲಿ ಕೆಲಸ ಮಾಡುತ್ತಿದ್ದ. ಈ ವೇಳೆ ಆರು ಗ್ರಾಹಕರು ವಾಹನ ಸಾಲದ ವಂತಿಕೆ ಕಟ್ಟಲು ನೀಡಿದ್ದ 2,91,916 ರೂಪಾಯಿ ಹಣವನ್ನ ದುರ್ಬಳಕೆ ಮಾಡಿದ್ದ ಆರೋಪದಡಿ ಕೇಸ್ ದಾಖಲಾಗಿದ್ದು, ಈ ಕುರಿತು ಜೂ.21ರಂದೇ ಶಾಖೆಯ ಮ್ಯಾನೇಜರ್ ಕೇಶವಮೂರ್ತಿ ದೂರು ನೀಡಿದ್ದರು. ಇನ್ನು ಪ್ರಕರಣ ದಾಖಲಾಗುತ್ತಿದ್ದಂತೆ ಶಿವಕುಮಾರ್ ಎಸ್ಕೇಪ್ ಆಗಿದ್ದಾನೆ.
ಇದನ್ನೂ ಓದಿ:ಸೂರಜ್ ರೇವಣ್ಣ ಅಸಹಜ ಲೈಂಗಿಕ ದೌರ್ಜನ್ಯ ಕೇಸ್; ತನಿಖಾಧಿಕಾರಿಗಳ ನೇಮಕ, ಬಾಡಿ ವಾರಂಟ್ ಸಲ್ಲಿಕೆ
ನಿನ್ನೆ (ಸೋಮವಾರ) ಬೆಂಗಳೂರಿನ 42ನೇ ಎಸಿಎಂಎಂ (ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ) ಕೋರ್ಟ್, ‘ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿ ಆಗಿರುವ ಸೂರಜ್ ರೇವಣ್ಣ ಅವರನ್ನು ವಿಚಾರಣೆ ಮಾಡುವ ಸಲುವಾಗಿ ಹತ್ತು ದಿನ ಕಸ್ಟಡಿಗೆ ನೀಡುವಂತೆ ಸಿಐಡಿ ಅಧಿಕಾರಿಗಳು ಮನವಿ ಮಾಡಿದ್ದರು. ಆದರೆ, ಕೋರ್ಟ್, 10 ದಿನ ಬದಲಾಗಿ 8 ದಿನ ಸಿಐಡಿ ಕಸ್ಟಡಿಗೆ ನೀಡಿದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ